• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಖಾತೆ ಕಿರಿಕ್;‌ ಸಾರಿಗೆ ಕೊಟ್ಟರೆ ಸಂಪುಟದಿಂದಲೇ ಹೊರಕ್ಕೆ ಎಂದರಂತೆ ರಾಮಲಿಂಗಾರೆಡ್ಡಿ

cknewsnow desk by cknewsnow desk
May 27, 2023
in NATION, POLITICS, STATE
Reading Time: 2 mins read
0
ಖಾತೆ ಕಿರಿಕ್;‌ ಸಾರಿಗೆ ಕೊಟ್ಟರೆ ಸಂಪುಟದಿಂದಲೇ ಹೊರಕ್ಕೆ ಎಂದರಂತೆ ರಾಮಲಿಂಗಾರೆಡ್ಡಿ

ರಾಮಲಿಂಗಾರೆಡ್ಡಿ

1.2k
VIEWS
FacebookTwitterWhatsuplinkedinEmail

ವೈರಲ್‌ ಆಗಿರುವ ಪಟ್ಟಿಯಲ್ಲಿ ಸಿದ್ದು ಬೆಂಬಲಿಗರಿಗೆ ಬೆಣ್ಣೆ, ಡಿಕೆಶಿ ಗುಂಪಿಗೆ ಸುಣ್ಣ, ಮೂಲ ಕಾಂಗ್ರೆಸ್ಸಿಗೆ ಸೊನ್ನೆ

ಬೆಂಗಳೂರು: ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪಕ್ಷದಿಂದ ಹೊರ ನಡೆಯಲು ಸಜ್ಜಾಗಿದ್ದ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಈ ಬಾರಿಯೂ ಮುನಿಸಿಕೊಂಡಿದ್ದಾರೆ.

ಕಳೆದ ಡಿ.ಕೆ.ಶಿವಕುಮಾರ್‌ ಅವರ ಸಂಧಾನ ಫಲ ನೀಡಿ ಅವರು ಪಕ್ಷದಲ್ಲಿಯೇ ಉಳಿದುಕೊಂಡಿದ್ದರು. ಆಮೇಲೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ತಾವು ಹಿಂದೆ ನಿರ್ವಹಿಸಿದ್ದ ಸಾರಿಗೆ ಖಾತೆಯನ್ನೇ ಕೊಡುತ್ತಾರೆ ಎಂಬ ಮಾಹಿತಿ ಸಿಗುತ್ತಿದ್ದಂತೆ ಅವರು ಸಿಟ್ಟಾಗಿದ್ದಾರೆ.

ಈ ಹಿಂದೆ ಗೃಹ ಖಾತೆಯನ್ನೇ ನಿರ್ವಹಿಸಿದ್ದ ತಮಗೆ ಸಂಪೂರ್ಣ ನಷ್ಟದಲ್ಲಿರುವ ಸಾರಿಗೆ ಖಾತೆ ಕೊಟ್ಟರೆ ಸಂಪುಟಗಿರಿಯೇ ಬೇಡ. ಶಾಸಕನಾಗಿ ಇದ್ದುಬಿಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿದ್ದಾರೆ ಎನ್ನುವ ಮಾಹಿತಿ ಪಕ್ಷದಿಂದ ಬರುತ್ತಿದೆ.

ಅಖಿಲ ಭಾರತ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಸಹಿ ಮಾಡಿದ್ದಾರೆ ಎನ್ನಲಾದ ಪಟ್ಟಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆ ಪಟ್ಟು ವೈರಲ್‌ ಆಗಿದೆ.

ಆ ಪಟ್ಟಿ ಪ್ರಕಾರ ಡಿ.ಕೆ.ಶಿವಕುಮಾರ್‌ ಅವರ ಬಣಕ್ಕಿಂತ ಸಿದ್ದರಾಮಯ್ಯ ಅವರ ಗುಂಪು ಪೊಗದಸ್ತಾದ ಖಾತೆಗಳನ್ನು ಬಾಚಿಕೊಂಡಿದೆ. ಕೆ. ಜೆ ಜಾರ್ಜ್ ಅವರಿಗೆ ಇಂಧನ, ಎಂ.ಬಿ.ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ, ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ, ಕೃಷ್ಣ ಬೈರೇಗೌಡ ಅವರಿಗೆ ಕಂದಾಯ, ಚಲುವರಾಯ ಸ್ವಾಮಿಗೆ ಕೃಷಿ, ಹೆಚ್.ಸಿ.ಮಹಾದೇವಪ್ಪಗೆ ಸಮಾಜ ಕಲ್ಯಾಣ, ಕೆ.ಎನ್.ರಾಜಣ್ಣಗೆ ಸಹಕಾರ, ಬೈರತಿ ಸುರೇಶ್ ಅವರಿಗೆ ನಗರಾಭಿವೃದ್ಧಿ (ಬೆಂಗಳೂರು ಹೊರತುಪಡಿಸಿ)..

ಇಂಥ ಪ್ರಮುಖ, ಹೈಪ್ರೊಫೈಲ್‌ ಹಾಗೂ ಭರ್ಜರಿ ಅನುದಾನ ಇರುವ ಖಾತೆಗಳು ಸಿದ್ದರಾಮಯ್ಯ ಅವರ ಬೆಂಬಲಿಗರ ಹೆಸರುಗಳ ಪಕ್ಕದಲ್ಲಿವೆ.


ಡಾ.ಎಂ.ಸಿ.ಸುಧಾಕರ್‌ ಅವರಿಗೆ ಉನ್ನತ ಶಿಕ್ಷಣ?

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಂಪುಟಕ್ಕೆ ಸೇರ್ಪಡೆ ಆಗಿರುವ ಡಾ.ಎಂ.ಸಿ.ಸುಧಾಕರ್‌ ಅವರಿಗೆ ಮೊದಲು ವೈದ್ಯಕೀಯ ಶಿಕ್ಷಣ ಖಾತೆ ಎನ್ನುವ ಪಟ್ಟಿ ವೈರಲ್‌ ಆಗಿತ್ತು. ಸ್ವಲ್ಪ ಹೊತ್ತಿನಲ್ಲೇ ವೈರಲ್‌ ಆದ ಮತ್ತೊಂದು ಪಟ್ಟಿಯಲ್ಲಿ ಅವರಿಗೆ ಉನ್ನತ ಶಿಕ್ಷಣ ಖಾತೆ ಎಂದಿದೆ. ಮೂಲತಃ ವೈದ್ಯರಾದ ಸುಧಾಕರ್‌ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯನ್ನು ಕೊಡಬೇಕಿತ್ತು. ಹಿಂದೆ ಬಿಜೆಪಿ ಸರಕಾರದಲ್ಲಿ ಡಾ.ಕೆ.ಸುಧಾಕರ್‌ ಅವರಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳೆರಡನ್ನೂ ಕೊಡಲಾಗಿತ್ತು!!


ಇನ್ನು, ಡಿ.ಕೆ.ಶಿವಕುಮಾರ್‌ ಅವರ ಗುಂಪಿನ ವಿಷಯಕ್ಕೆ ಬಂದರೆ; ಸ್ವತಃ ಡಿಕೆಶಿ ಅವರಿಗೆ ಬೊಂಬಾಟ್‌ ಅನುದಾನವುಳ್ಳ ಜಲಸಂಪನ್ಮೂಲ ಹಾಗೂ ಕಾಮಧೇನು ಎಂದು ನಂಬಲಾಗಿರುವ ಬೆಂಗಳೂರು ಅಭಿವೃದ್ಧಿ ಖಾತೆಗಳನ್ನು ಹೆಸರಿಸಲಾಗಿದೆ. ಉಳಿದಂತೆ ಡಿ.ಸುಧಾಕರ್ ಅವರಿಗೆ ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಖಾತೆ,   ಲಕ್ಷ್ಮಿ ಹೆಬ್ಬಾಳ್ ಕರ್ ಅವರಿಗೆ ನಿರೀಕ್ಷೆಯಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕೊಡಲಾಗಿದೆಯಂತೆ. ತಮ್ಮ ಬೆಂಬಲಿಗರಿಗೆ ಸಿಕ್ಕಿರುವ ಖಾತೆಗಳ ಬಗ್ಗೆ ಸ್ವತಃ ಡಿಕೆಶಿ ಅವರಿಗೆ ಅಸಮಾಧಾನ ಇದೆ ಎನ್ನುವ ಮಾಹಿತಿ ಇದೆ.

ಪಟ್ಟಿ ರಾಜಭವನಕ್ಕೆ ಹೋಗುವ ಮುನ್ನವೇ ಅದು ಎಲ್ಲಡೆ ವೈರಲ್‌ ಆಗಿಬಿಟ್ಟಿದೆ. ಸಿದ್ಧರಾಮಯ್ಯ ಅವರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಇದೇ ರೀತಿ ಹಲವು ಸಚಿವರು ತಮಗೆ ಸಿಗುವ ಖಾತೆಯ ಸುಳಿವು ಸಿಗುತ್ತಿದ್ದಂತೆಯೇ ಅಸಮಾಧಾನಗೊಂಡಿದ್ದು, ಉದ್ದೇಶಪೂರ್ವಕವಾಗಿ ತಮ್ಮನ್ನು ಅವಮಾನಿಸುವ ಪ್ರಯತ್ನ ಉದ್ಬವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಮಗೆ ಸಾರಿಗೆ ಖಾತೆ ಕೊಡುವ ನಿರ್ಧಾರದ ಬಗ್ಗೆ ಕೆಂಡಾಮಂಡಲಗೊಂಡಿರುವ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ, ಇದು ತಮ್ಮನ್ನು ಅವಮಾನಿಸುವ ಯತ್ನ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಈ ಹಿಂದೆ ನಾಲ್ಕು ವರ್ಷಕ್ಕೂ ಹೆಚ್ಚು ಕಾಲ ತಾವು ಸಾರಿಗೆ ಸಚಿವರಾಗಿ ಕೆಲಸ ಮಾಡಿದ್ದು, ಈಗ ಅದೇ ಖಾತೆಯನ್ನು ಕೊಡುವ ಅಗತ್ಯವಿರಲಿಲ್ಲ. ಗೃಹ ಸಚಿವರಾಗಿ ಕೆಲಸ ಮಾಡಿರುವ ತಮಗೆ ಇನ್ನೂ ಮಹತ್ವದ ಖಾತೆ ನೀಡಬೇಕಿತ್ತು. ಆದರೆ ಸಾರಿಗೆ ಖಾತೆಯನ್ನೇ ಕೊಡಲು ಮುಂದಾಗಿ ತಮ್ಮನ್ನು ಅವಮಾನಿಸಲಾಗುತ್ತಿದೆ. ತಮಗಿಂತ ಕಿರಿಯರಿಗೆ ಮಹತ್ವದ ಖಾತೆಗಳನ್ನು ಕೊಟ್ಟು, ತಮಗೆ ಮಾತ್ರ ಹಿಂಬಡ್ತಿ ನೀಡುವ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಇದು ಸರಿಯಲ್ಲ. ಸಾರಿಗೆ ಖಾತೆಯನ್ನೇ ನನಗೆ ಅಂಟಿಸುವುದಾದರೆ ನನಗೆ ಸಚಿವ ಸಸ್ಥಾನವೇ ಬೇಡ. ತಕ್ಷಣವೇ ರಾಜೀನಾಮೆ ಕೊಟ್ಟು ಬಿಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅಸಮಾಧಾನ ತೋಡಿಕೊಂಡಿದ್ದಾರೆ.

ಖಾತೆ ಹಂಚಿಕೆಯ ವಿಷಯದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಹಲ ಸಚಿವರು ಅಸಮಾಧಾನ ವ್ಯಕ್ತಪಡಿಸತೊಡಗಿದ್ದು, ಸರಿಪಡಿಸದೆ ಹೋದರೆ ಸಿದ್ಧರಾಮಯ್ಯ ಅವರ ಸರ್ಕಾರಕ್ಕೆ ಮುಜುಗರ ಉಂಟಾಗುವುದು ಬಹುತೇಕ ಖಚಿತ. ಮುಖ್ಯವಾಗಿ ಮೂಲ ಕಾಂಗ್ರೆಸ್ಸಿಗರ ವಿಷಯದಲ್ಲಿ ತಾರತಮ್ಯ ಎಸಲಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುವ ಅಂಶ.

ನಕಲಿ ಪಟ್ಟಿ ಎಂದ ಕಾಂಗ್ರೆಸ್‌

ಜಾಲತಾಣಗಳಲ್ಲಿ ವೈರಲ್‌ ಆಗಿರುವ ಪಟ್ಟಿ ನಕಲಿ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಈ ಬಗ್ಗೆ ಪಕ್ಷದ ಅಧಿಕೃತ ಖಾತೆಯಿಂದ ಟ್ವೀಟ್‌ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.

ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.

ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

— Karnataka Congress (@INCKarnataka) May 27, 2023
Tags: ckcknewsnowCongressDK Shivakumarkarnatakakarnataka cabinetPoliticssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುಂದಿನ ತಿಂಗಳೇ 5 ಗ್ಯಾರಂಟಿ!

ಮುಂದಿನ ತಿಂಗಳೇ 5 ಗ್ಯಾರಂಟಿ!

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ