• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಐದು ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ

cknewsnow desk by cknewsnow desk
May 30, 2023
in POLITICS, STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
928
VIEWS
FacebookTwitterWhatsuplinkedinEmail

ಗ್ಯಾರಂಟಿ ಬಗ್ಗೆ ಕೇಳಿದರೆ ಕೆಲ ಸಚಿವರು, ಶಾಸಕರನ್ನು ಛೂ ಬಿಡುತ್ತೀರಿ ಎಂದು ಕುಟುಕಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಭರವಸೆ ನೀಡಿದ್ದೀರಿ, ಗೆದ್ದು ಅಧಿಕಾರ ಹಿಡಿದಿದ್ದೀರಿ. ಐದು ಗ್ಯಾರಂಟಿ ಜಾರಿ ಮಾಡುವುದು ನಿಮ್ಮ ಜವಾಬ್ದಾರಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಟಿ ಬೀಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು; ನೆಪ ಹೇಳದೆ ಗ್ಯಾರಂಟಿಗಳನ್ನು ಜಾರಿ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ರಾಜ್ಯ ಕಾಂಗ್ರೆಸ್ ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ. ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ‘ಗ್ಯಾರಂಟಿ ಜಾಹೀರಾತು’ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ಅವರು ಹೇಳಿದ್ದಾರೆ.

ಅದು ಬಿಟ್ಟು ‘ಕೆಲ ಸಚಿವರು, ಶಾಸಕ’ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದಿದ್ದಾರೆ ಅಲ್ಲದೆ, ‘ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ’ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

Tags: ckcknewsnowCongressCongress manifestofive gauranteehd kumaraswamyjdsnews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಖಾತೆ ಕಿರಿಕ್;‌ ಸಾರಿಗೆ ಕೊಟ್ಟರೆ ಸಂಪುಟದಿಂದಲೇ ಹೊರಕ್ಕೆ ಎಂದರಂತೆ ರಾಮಲಿಂಗಾರೆಡ್ಡಿ

ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ: ಸಚಿವ ಡಾ.ಕೆ.ಸುಧಾಕರ್‌

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ: ಸಚಿವ ಡಾ.ಕೆ.ಸುಧಾಕರ್‌

4 years ago
ಜನವರಿ 1ರಿಂದಲೇ ವಿದ್ಯಾಗಮ ಪುನಾರಂಭ; ಸರ್ವ ಮುನ್ನೆಚ್ಚರಿಕೆಗಳೊಂದಿಗೆ ತಯಾರಿ ನಡೆಸಿದೆ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರದಿಂದ ಆದೇಶ

ಕಂಟ್ರೋಲ್‌ಗೆ ಬಾರದ ಕೋವಿಡ್‌ ಎರಡನೇ ಅಲೆ; ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಕ್ಟಿಕಲ್‌ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್‌ ಕುಮಾರ್‌ ಪ್ರಕಟಣೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ