• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?

cknewsnow desk by cknewsnow desk
July 5, 2023
in POLITICS, STATE
Reading Time: 2 mins read
0
HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?
985
VIEWS
FacebookTwitterWhatsuplinkedinEmail

ಹೆಚ್ಚಿದ ಕುತೂಹಲ; ಕಾಂಗ್ರೆಸ್‌ ಪಾಳಯದಲ್ಲಿ ತಣಿಯದ ತಳಮಳ

  • ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ
  • ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ
  • ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ
  • ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ

ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸ್ಫೋಟಿಸುತ್ತಿರುವ ಸರಣಿ ಭ್ರಷ್ಟಾಚಾರದ ಬಾಂಬುಗಳು ಹಸ್ತಪಾಳಯದಲ್ಲಿ ತೀವ್ರ ತಳಮಳಕ್ಕೆ ಕಾರಣವಾಗಿದೆ.

ಅಲ್ಲದೆ, ಸಿದ್ದರಾಮಯ್ಯ ಸರಕಾರದ ʼಕಾಸಿಗಾಗಿ ಹುದ್ದೆʼ ಸಿಕ್ಕಿನಲ್ಲಿ ಸಿಲುಕಿಕೊಂಡಿರುವ ಸಚಿವರು ಯಾರು? ಹೆಚ್.ಡಿ.ಕುಮಾರಸ್ವಾಮಿ ಅವರು ತೋರಿಸಿದ ಪೆನ್‌ ಡ್ರೈವ್‌ ನಲ್ಲಿ ಯಾವ ಮಂತ್ರಿ ಹಗರಣ ಅಡಗಿದೆ ಎನ್ನುವ ಚರ್ಚೆ ದೊಡ್ಡ ಪ್ರಮಾಣದಲ್ಲಿ ಶುರುವಾಗಿದೆ. ಜತೆಗೆ; ಕುಮಾರಸ್ವಾಮಿ ಅವರು ಸಿಡಿಸಿದ ಬಾಂಬ್‌ ಇಂದು ವಿಧಾನಸೌಧದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿತ್ತು.

ಕುಮಾರಸ್ವಾಮಿ ಅವರು ಪೆನ್‌ ಡ್ರೈವ್‌ ಪ್ರದರ್ಶನ ಮಾಡುತ್ತಿದ್ದಂತೆಯೇ ಮಾಧ್ಯಮಗಳು ದೊಡ್ಡ ಪ್ರಮಾಣದಲ್ಲಿ ಬ್ರೇಕ್‌ ಮಾಡಿದವು. ಯಾವ ಮಂತ್ರಿ ಜಾತಕ ಅಡಗಿರಬಹುದು ಎಂದು ಲೆಕ್ಕಾಚಾರ ಹಾಕಿದವು. ಕೆಲವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಎಂದರೆ, ಇನ್ನೂ ಕೆಲವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಊಹೆ ಮಾಡಿದರು. ಮತ್ತೆ ಕೆಲವರು ಕೆ.ಎಚ್.ಮುನಿಯಪ್ಪ ಎಂದುಕೊಂಡರು.

ಕೆಲ ಮಾಧ್ಯಮಗಳಂತೂ ಪೆನ್‌ ಡ್ರೈವ್‌ ಬೆನ್ನತ್ತಿದವು. ಕುಮಾರಸ್ವಾಮಿ ಅವರನ್ನು ಪೆನ್‌ ಡ್ರೈವ್‌ ಕೊಡಿ ಎಂದು ಕೇಳಿದವು.

ಇಷ್ಟಕ್ಕೂ ಕುಮಾರಸ್ವಾಮಿ ಅವರು ಹೂಡಿದ ಬಾಣಗಳೇನು? ಅನ್ನುವುದಾದರೆ; ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಆರೋಪ ಮಾಡಿದರು.

ಈ ಸರಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಪೂರ್ಣವಾಗಿ ನಿರತವಾಗಿದೆ ಎಂದು ನೇರ ಆರೋಪ ಮಾಡಿದ ಅವರು, ಈ ಸರ್ಕಾರ ಸಂಪೂರ್ಣವಾಗಿ ಕಾಸಿಗಾಗಿ ಹುದ್ದೆ ದಂಧೆಯಲ್ಲಿ ತೊಡಗಿದೆ ಎಂದು ಹೇಳಿ ತಮ್ಮ ಬಳಿ ಮಹತ್ವದ ದಾಖಲೆ ಇದೆ ಎಂದು ಒಂದು ಪೆನ್ ಡ್ರೈವ್ ಪ್ರದರ್ಶಿಸಿದರು.

ವಿಧಾನಸೌಧದಲ್ಲಿ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸರಕಾರದ ವಿರುದ್ಧ ತೀವ್ರ ರೀತಿಯಲ್ಲಿ ಹರಿಹಾಯ್ದರು.

ಇಂಧನ‌ ಇಲಾಖೆಯಲ್ಲಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಸರ್ಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಒಂದು ಇದೆ ಎಂದು ಯಾರೊ ಹೇಳಿದರು. ಅದನ್ನು ‘ನಗದು ಅಭಿವೃದ್ಧಿ ‘ ಇಲಾಖೆ ಅಂತ ಯಾಕೆ ಕರೆಯಬಹುದು ಎಂದು ಅವರು ವಿವರಿಸಿದರು. ಅದು ನಿಜ ಆಗುತ್ತಿರುವ ರೀತಿಯಲ್ಲಿಯೇ ನಗರವನ್ನು ಅಭಿವೃದ್ಧಿ ಮಾದರಿ ರೆಡಿ ಮಾಡಿ ಇಟ್ಟುಕೊಂಡಿದ್ದಾರೆ. ಬೆಂಗಳೂರಿಗೆ ಒಬ್ಬರು, ಬೆಂಗಳೂರು ಹೊರಗೆ ಒಬ್ಬರು ‘ನಗದು ಅಭಿವೃದ್ಧಿ ‘ ಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ಅಭಿವೃದ್ಧಿ ಎಂದರೆ ನಗದು ಅಭಿವೃದ್ಧಿ ಮಾತ್ರ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದರು.

ನಿನ್ನೆ ಇಂಧನ ಇಲಾಖೆಯಲ್ಲಿ ಎರಡು ವರ್ಗಾವಣೆಗಳು ಆಗಿವೆ. ಆ ಎರಡು ಹುದ್ದೆಗಳನ್ನು ತಲಾ 10 ಕೋಟಿ ರೂಪಾಯಿಗೆ ಮಾರಿಕೊಳ್ಳಲಾಗಿದೆ. ಅಲ್ಲಿಗೆ ಬಂದು ಕೂತಿರುವ ಆ ಅಧಿಕಾರಿ ಒಂದು ದಿನಕ್ಕೆ 50 ಲಕ್ಷ ಕಮಿಷನ್ ಹೊಡೆಯುತ್ತಾನೆ ಎನ್ನುವ ಮಾಹಿತಿ ಸಿಕ್ಕಿದೆ. ಈ ಅಸಹ್ಯಕ್ಕೆ ಸರ್ಕಾರ ಏನು ಉತ್ತರ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಖಾರವಾಗಿ ಪ್ರಶ್ನಿಸಿದರು.

ಇದೇ ವೇಳೆ ಅವರು ಇಂಧನ ಇಲಾಖೆಯಲ್ಲಿ ವರ್ಗಾವಣೆ ಅದವರ ವರ್ಗಾವಣೆ ಪತ್ರಗಳನ್ನು ಮಾಧ್ಯಮಗಳಿಗೆ ನೀಡಿದರು.

ವೆಸ್ಟ್ ಎಂಡ್ ಎಂದ ಕಾಂಗ್ರೆಸ್ ಗೆ ಚಾಟಿ

ತಮ್ಮ ಬಗ್ಗೆ ಲಘುವಾಗಿ ಟೀಕೆ ಮಾಡಿರುವ ಕಾಂಗ್ರೆಸ್ ಬಗ್ಗೆ ತೀವ್ರವಾಗಿ ಹರಿಹಾಯ್ದ ಕುಮಾರಸ್ವಾಮಿ ಅವರು, KST ಟ್ಯಾಕ್ಸ್ ನಾನು ಇಟ್ಕೊಂಡಿಲ್ಲ. ಹಿಂದೆ ನಾನು ಕಾಂಗ್ರೆಸ್ ಪಕ್ಷದ ಮೈತ್ರಿ ಸರಕಾರ ರಚನೆ ಮಾಡಿದ್ದೆ. ಒಂದು ವೇಳೆ ವೆಸ್ಟೆಂಡ್ ಬಾಕಿ ಬಿಲ್ ಕಾಂಗ್ರೆಸ್ ಗೆ ಕಳಿಸಿದರಾ ಎನ್ನುವುದು ನನ್ನ ಅನುಮಾನ ಎಂದು ಕೈ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿಗಳು ಕಟುವಾಗಿ ಟಾಂಗ್ ಕೊಟ್ಟರು.

ನಾನೇನು ಬೀದಿಲಿ ಹೋಗೋದಾ? ಮುಖ್ಯಮಂತ್ರಿಯಾಗಿ ಬೀದಿಯಲ್ಲಿ ಇರಬೇಕಿತ್ತಾ? ಸ್ವಲ್ಪ ಹಣ ಖರ್ಚು ಮಾಡುವ ಯೋಗ್ಯತೆಯೂ ನನಗೆ ಇಲ್ವಾ? ತಾಜ್ ವೆಸ್ಟ್ ಎಂಡ್‌ನಲ್ಲಿ ಈಗಲೂ ರೂಂ ಇದೆ. ಇವರನ್ನು ಕೇಳಿ ನಾನು ರೂಂ ಮಾಡಬೇಕಾ? ಎಷ್ಟು ಗಂಟೆಗೆ ವಾಶ್‌ರೂಂಗೆ ಹೋಗಬೇಕು ಎಂದು ಕಾಂಗ್ರೆಸ್‌ನವರನ್ನ ಕೇಳಬೇಕಾ? ಬೇಕಿದ್ದರೆ ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಲಿ. ರಾಜಕೀಯಕ್ಕೆ ಬರುವ ಮುಂಚೆ ನನ್ನ ಎಷ್ಟಿತ್ತು ಆಸ್ತಿ? ಈಗ ಎಷ್ಟಿದೆ ಅಂತ ತನಿಖೆ ಮಾಡಲಿ ಎಂದು ಅವರು ಸವಾಲು ಹಾಕಿದರು.

ನಾನು ಬೇಸಾಯ ಮಾಡಿದವನು, ಸಿನಿಮಾ ಮಾಡಿದವನು. ಕೆಲವರಂತೆ ಟೆಂಟಿನಲ್ಲಿ ನೀಲಿಚಿತ್ರ ತೋರಿಸಿ ದುಡ್ಡು ಮಾಡಿದವನಲ್ಲ. ರೌಡಿಗಳಿಗೆ ಎಣ್ಣೆ ಸಪ್ಲೈ ಮಾಡಿಕೊಂಡು ಬಂದಿದ್ದೀನಾ? ನಾನು ಹೇಗೆ ಬೆಳೆದುಬಂದೆ ಎನ್ನುವ ಅರಿವು ನನಗೂ ಇದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದಾಖಲೆ ಜೇಬಿನಲ್ಲೇ ಇದೆ, ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ

ದಾಖಲೆಗಳ ಬಗ್ಗೆ ನನ್ನ ಬಳಿ ಹುಡುಗಾಟ ಆಡುವುದು ಬೇಡ. ದಾಖಲೆ ಇಲ್ಲದೆ ನಾನು ಮಾತನಾಡುವುದಿಲ್ಲ. ಕಳೆದ ಮೂರೂವರೆ ವರ್ಷ ಒಂದು ದಾಖಲೆಯನ್ನೂ ಬಿಡದೆ ಕಾಂಗ್ರೆಸ್ ಪಕ್ಷ ಗಾಳಿಯಲ್ಲಿ ಗುಂಡು ಹೊಡೆಯಿತು. ನಾನು ಹಾಗೆ ಮಾಡುವುದಿಲ್ಲ. ದಾಖಲೆ ಇರುವ ಪೆನ್ ಡ್ರೈವ್ ನನ್ನ ಜೇಬಿನಲ್ಲೆ ಇದೆ. ಸಮಯ ಬರಲಿ, ಬಿಡುಗಡೆ ಮಾಡ್ತೀನಿ ಎಂದು ಸ್ಪಷ್ಟ ಮಾತುಗಳಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

ನಮ್ಮಿಂದ ಬೆಳೆದವರು ನಮ್ಮ ಬಗ್ಗೆಯೇ ಮಾತನಾಡುತ್ತಾರೆ. ಮಾತನಾಡಲಿ, ಅದು ಅವರ ಗುಣ ತೋರಿಸುತ್ತದೆ. ಎಲ್ಲಕ್ಕೂ ಕಾಲವೇ ಉತ್ತರ ನೀಡುತ್ತದೆ. ನಿನ್ನೆ ಮಂಡ್ಯದಲ್ಲಿ ಒಂದು ವರ್ಗಾವಣೆ ಆಯ್ತಲ್ಲ, ತಪ್ಪು ಎಸಗಿ ಸೇವೆಯಿಂದ ಅಮಾನತು ಆದವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಂಡು ಪಟ್ಟ ಕಟ್ಟಿದ್ದಾರೆ. ಲಾಟರಿ ದಂಧೆ ನಡೆಸಿದವರನ್ನು ಆಚೆ ಕಳಿಸಿದವನು ನಾನು. ಇವರು ನನ್ನ ಬಗ್ಗೆ ಮಾತನಾಡುತ್ತಾರೆ ಎಂದು ಅವರು ಕಿಡಿಕಾರಿದರು.

ಮೈ ಕೈ ಪರಚಿಕೊಳ್ಳೋದು ಬೇಡ ಅಂತಾ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಾನೇಕೆ ಮೈ ಕೈ ಪರಚಿಕೊಳ್ಳಲಿ?ಸೋತಾಗಲೂ ಜನರ ಕಷ್ಟ ಸುಃಖ ಕೇಳಿದ್ದೇವೆ. ಅಧಿಕಾರ ಬಂದಾಗ ಹಿಗ್ಗಿಲ್ಲ, ಇಲ್ಲದಾಗ ಕುಗ್ಗಿಲ್ಲ . ಇವರಿಂದ ಕಲಿಯೋ ದರಿದ್ರ ನಂಗೆ ಬಂದಿಲ್ಲ ಎಂದು ಅವರು ಕಿಡಿಕಾರಿದರು.

ಟನಲ್ ಹೊಡಿಯೋಕೆ ಹೋಗಿ ಬೆಂಗಳೂರು ಸಮಾಧಿ ಮಾಡಿಬಿಟ್ಟಿರಾ?

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣ ಪ್ರಸ್ತಾಪ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಅವರು; ಟನಲ್ ಹೊಡಿಯೋಕೆ ಹೋಗಿ ಬೆಂಗಳೂರು ಸಮಾಧಿ ಮಾಡಿಬಿಟ್ಟಿರಾ, ಜೋಕೆ ಎಂದು ಎಚ್ಚರಿಸಿದರು.

ಬೆಂಗಳೂರು ಅಭಿವೃದ್ಧಿ ಮಾಡೋಕೆ ಹೋಗಿ ಈಗಾಗಲೇ ಸಮಾಧಿ ಮಾಡಿದ್ದೀರಿ. ಬೆಂಗಳೂರು ಅಭಿವೃದ್ಧಿಗೆ ಅತ್ಯುತ್ತಮ ಗುಣಮಟ್ಟದಲ್ಲಿ ತಾಂತ್ರಿಕವಾಗಿ, ಪ್ರಾಯೋಗಿಕವಾಗಿ ಕೆಲಸ ಮಾಡಿ. ಟನಲ್ ಮಾಡೋಕೆ ಹೋಗಿ ಇಡೀ ನಗರವನ್ನೇ ಸಮಾಧಿ ಮಾಡಬೇಡಿ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರು ಒಳ್ಳೆ ಮಾತು ಹೇಳಿದ್ದಾರೆ

ನಿನ್ನೆಯ ದಿನ ಯಡಿಯೂರಪ್ಪನವರು ನನ್ನ ಬಗ್ಗೆ ಒಂದೊಳ್ಳೆ ಮಾತು ಹೇಳಿದ್ದಾರೆ. ಅವರಿಗೆ ನಾನು ಕೃತಜ್ಞನಾಗಿದೇನೆ. ಜನಪರ ವಿಷಯಗಳಲ್ಲಿ ಪರಸ್ಪರ ಸಹಕಾರ ಮನೋಭಾವದಿಂದ ದನಿ ಎತ್ತುವುದು ತಪ್ಪಲ್ಲ. ರಾಜ್ಯದಲ್ಲಿ ಹೊಸ ಅಧ್ಯಾಯ ಶುರುವಾಗಬೇಕು. ನನಗೆ ಯಾರು ಸಹಕಾರ ಕೊಡ್ತಾರೊ ಅವರ ಬೆಂಬಲ ತೆಗೆದುಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: cash for postingckcknewsnowCMOCongresshd kumaraswamykarnatakapen drivesiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ಬೆಂಗಳೂರಿನ ಶಾಲೆಗಳಲ್ಲಿ ಕೊರೋನಾ ಸ್ಪೋಟ

ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟ ಜೆಡಿಎಸ್

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

6 years ago
ದೆವ್ವ ಆವರಿಸಿದೆ ಎಂದುಕೊಂಡು ಯುವಕ ಆತ್ಮಹತ್ಯೆ

ದೆವ್ವ ಆವರಿಸಿದೆ ಎಂದುಕೊಂಡು ಯುವಕ ಆತ್ಮಹತ್ಯೆ

3 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ