• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಕಾರ್ಗಿಲ್‌ ಕೆಚ್ಚಿಗೆ 24 ವರ್ಷ

cknewsnow desk by cknewsnow desk
July 28, 2023
in CKPLUS, GUEST COLUMN
Reading Time: 2 mins read
0
ಕಾರ್ಗಿಲ್‌ ಕೆಚ್ಚಿಗೆ 22 ವರ್ಷ
932
VIEWS
FacebookTwitterWhatsuplinkedinEmail

ಕಪಟಿ ಪಾಕಿಸ್ತಾನಕ್ಕೆ ಭಾರತೀಯ ಕಲಿಗಳ ತಿರುಗೇಟು

ಕಪಟಿ ಪಾಕಿಸ್ತಾನಕ್ಕೆ ಮರೆಯಲಾಗದ ಬುದ್ಧಿ ಕಲಿಸಿದ ಕಾರ್ಗಿಲ್‌ ಯುದ್ಧಕ್ಕೆ ಇಂದಿಗೆ 24 ವರ್ಷ. ಜಗತ್ತಿಗೆ ಭಾರತ ತನ್ನ ಶಕ್ತಿ ಏನೆಂಬುದನ್ನು ತೋರಿಸಿದ ಸಂದರ್ಭವದು. ಭಾರತೀಯರೆಲ್ಲರೂ ಹೆಮ್ಮಪಡುವ ಈ ದಿನದ ಬಗ್ಗೆ ದೇಶಪ್ರೇಮದಿಂದ ಬರೆದಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.‌

ಕಾರ್ಗಿಲ್‌ / Courtesy: Wikipedia

ಇಪ್ಪತ್ತೆರಡು ವರ್ಷಗಳ ಹಿಂದೆ ಭಯೋತ್ಪಾದಕರ ಕುಮ್ಮಕ್ಕಿನಿಂದ ಭಾರತವನ್ನೇ ಕಬಳಿಸಿ, ಬೆದರಿಸಲು ಹೊರಟಿದ್ದ ಪಾಕಿಸ್ತಾನದ ಸಂಚನ್ನು ವಿಫಲಗೊಳಿಸಿ ನಮ್ಮ ಭಾರತದ ಹೆಮ್ಮೆಯ ವೀರಪುತ್ರರ ತ್ಯಾಗ, ಬಲಿದಾನ ಜೊತೆಗೆ ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲ ರಕ್ಷಿಸಿದ ದಿನ ಇಂದು.

ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಜುಲೈ 26ನ್ನು ಕಾರ್ಗಿಲ್‌ ದಿವಸವನ್ನಾಗಿ ಮತ್ತು ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ನಮನ ಸಲ್ಲಿಸಲು ʼವಿಜಯ ದಿವಸʼವಾಗಿ ಆಚರಿಸಲಾಗುತ್ತದೆ.

ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲು ಆಗ ಭಾರತದ ಅಂದಿನ ಪ್ರಧಾನಿ ವಾಜಪೇಯಿ ಮುಂದಾಗುತ್ತಾರೆ. ಇದರ ಪ್ರತಿಫಲವೇ 1999ರ ಫೆಬ್ರುವರಿ 20ರಂದು ಪಾಪಿ ಪಾಕಿಸ್ತಾನದ ಜತೆಗೆ ಆದ ಲಾಹೋರ್ ಒಪ್ಪಂದ. ಈ ಒಪ್ಪಂದಕ್ಕಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಲಾಹೋರ್‌ಗೆ ಬಸ್‌ನಲ್ಲಿ ತೆರಳಿ ದೇಶದೊಳಗಿನ ವಿರೋಧ ಮತ್ತು ಒತ್ತಡವನ್ನೂ ಲೆಕ್ಕಿಸದೆ ಐತಿಹಾಸಿಕ ಒಪ್ಪಂದಕ್ಕಾಗಿ ದೃಢ ನಿರ್ಧಾರ ಕೈಗೊಂಡಿದ್ದರು.

ಅತ್ತ ಪಾಕಿಸ್ತಾನದಲ್ಲಿ ಸ್ನೇಹಹಸ್ತ ಚಾಚಿ ಲಾಹೋರ್‌ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದರೆ, ಇತ್ತ ಪಾಕಿಸ್ತಾನ ಸೇನೆ ಕಾರ್ಗಿಲ್ ಪ್ರದೇಶವನ್ನು ಅತಿಕ್ರಮಿಸಿಕೊಳ್ಳಲು ಸದ್ದಿಲ್ಲದೆ ಸಿದ್ಧತೆ ನಡೆಸುತ್ತಿತ್ತು. ಪಾಕಿಸ್ತಾನದ ಜತೆ ಸ್ನೇಹ ಸಾಧಿಸಿದ ಖುಷಿಯಲ್ಲಿ ವಾಜಪೇಯಿ ಅವರು ಭಾರತಕ್ಕೆ ವಾಪಸಾದರು. ಇದಾಗಿ ಮೂರು ತಿಂಗಳೂ ಪೂರ್ಣಗೊಂಡಿರಲಿಲ್ಲ. ಪಾಕಿಸ್ತಾನಿ ಸೈನಿಕರು ಕಾರ್ಗಿಲ್ ಪ್ರದೇಶವನ್ನು ಅತಿಕ್ರಮಿಸಿರುವ ವಿಚಾರ 1999ರ ಮೇ 3ರಂದು ಬೆಳಕಿಗೆ ಬಂತು. ಕೆಲ ಕುರಿಗಾಹಿಗಳು ನೀಡಿದ ಮಾಹಿತಿಯಿಂದ ಭಾರತೀಯ ಸೇನೆಗೆ ಅತಿಕ್ರಮಣದ ವಿಷಯ ತಿಳಿದಿತ್ತು. ನಂತರ ತನ್ನ ಭೂ ಪ್ರದೇಶವನ್ನು ಮರು ವಶಪಡಿಸಿಕೊಳ್ಳಲು ಭಾರತ ಪ್ರತಿತಂತ್ರ ಹೂಡಿತು. ʼಆಪರೇಷನ್ ವಿಜಯ್ʼ ಸೇನಾ ಕಾರ್ಯಾಚರಣೆ ನಡೆದು ಭಾರತ ವಿಜಯ ಸಾಧಿಸಿ ಜಗತ್ತಿಗೆ ಭಾರತದ ಸಂಯಮ ಮತ್ತು ಶಕ್ತಿಯನ್ನು ತೋರಿಸಿಕೊಟ್ಟಿತು.

ಪಾಕಿಸ್ತಾನದ ನಂಬಿಕೆ ದ್ರೋಹ

ಚಳಿಗಾಲದಲ್ಲಿ ಗಡಿ ನಿಯಂತ್ರಣ ರೇಖೆಯ ಆಯಾ ಕಡೆಗಳಲ್ಲಿರುವ ಕೆಲ ಮುಂಚೂಣಿ ಸೇನಾ ಶಿಬಿರಗಳನ್ನು ತ್ಯಜಿಸಿ ಗಸ್ತು ಚಟುವಟಿಕೆ ಕಡಿಮೆ ಮಾಡುವುದನ್ನು ಭಾರತ ಮತ್ತು ಪಾಕಿಸ್ತಾನ ಸೇನೆ ಹಿಂದಿನಿಂದಲೂ ಪಾಲಿಸುತ್ತಾ ಬಂದಿವೆ. ಚಳಿಯ ತೀವ್ರತೆ ಕಡಿಮೆಯಾದಂತೆಲ್ಲ ಆ ಮುಂಚೂಣಿ ಪ್ರದೇಶದಲ್ಲಿರುವ ಶಿಬಿರಗಳನ್ನು ಮತ್ತೆ ವಶಕ್ಕೆ ತೆಗೆದುಕೊಂಡು ಪಹರೆ ಚಟುವಟಿಕೆ ಆರಂಭಿಸಲಾಗುತ್ತದೆ. ಈ ಪರಿಸ್ಥಿತಿಯನ್ನೇ ಬಳಸಿಕೊಂಡ ಪಾಕಿಸ್ತಾನ ಸೇನೆ ʼಆಪರೇಷನ್ ಬಿದ್ರ್ʼ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಕೈಗೊಂಡಿತು. ಉಗ್ರಗಾಮಿಗಳಿಗೆ ತರಬೇತಿ ನೀಡಿ ಮುಂದೆ ಕಳುಹಿಸಲು ಪಾಕೀ ಸೈನ್ಯ ಹಾಗೂ ಐಎಸ್‌ಐ ಸೇರಿಕೊಂಡು ಯೋಜನೆಗಳನ್ನು ರೂಪಿಸಿದ್ದವು. ಯೋಜನೆಯಂತೆ ಭಾರತದ ಸೇನೆಯ ದಿಕ್ಕು ತಪ್ಪಿಸಲು ಪಾಕ್ ಆಕ್ರಮಿತ ಜಿಲ್ಲೆಗಳಾದ ಅಜೌರಿ, ಪೂಂಚ್, ಗಂದರ್‌ಬಾಲ್, ಅನಂತನಾಗ್‌ಗಳಲ್ಲಿ ಭಯೋತ್ಪಾದಕ ಕೃತ್ಯ ಮಿತಿ ಮೀರಿತು.

ಪಾಕಿಸ್ತಾನ ಸೇನೆ ಅತಿಕ್ರಮಣ ಮಾಡಲು ಕಾರ್ಗಿಲನ್ನೇ ಆಯ್ದುಕೊಂಡದ್ದಕ್ಕೆ ಕಾರಣವಿದೆ. ಕಾರ್ಗಿಲ್ ಪರ್ವತ ಶ್ರೇಣಿಗಳ ಮೇಲೆ ಅತಿಕ್ರಮಣ ನಡೆಸಿದರೆ ʼಎನ್‌ಎಚ್ 1ಡಿʼ ಮೇಲೆ ಹಿಡಿತ ಸಾಧಿಸಿ ಭಾರತೀಯ ಸೇನೆ ಲೇಹ್‌ ಜತೆ ಸಂಪರ್ಕ ಕಡಿದುಕೊಳ್ಳುವಂತೆ ಮಾಡಬಹುದು. ತನ್ಮೂಲಕ ಸಿಯಾಚಿನ್ ನೀರ್ಗಲ್ಲು ಪ್ರದೇಶದಿಂದ ಭಾರತೀಯ ಯೋಧರು ಕಾಲ್ಕೀಳುವಂತೆ ಮಾಡಬಹುದು. ಜತೆಗೆ ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಭಾರತದ ಮೇಲೆ ಒತ್ತಡ ಹೇರಬಹುದು ಎಂಬುದೇ ಅವರ ಲೆಕ್ಕಾಚಾರವಾಗಿತ್ತು. ಪಾಕಿಸ್ತಾನದ ಅಂದಿನ ಸೇನಾ ಮುಖ್ಯಸ್ಥ ಫರ್ವೇಜ್ ಮುಷರ್ರಫ್ ತಡಮಾಡಲಿಲ್ಲ. ʼಆಪರೇಷನ್ ಬಿದ್ರ್ʼಗೆ ಚಾಲನೆ ನೀಡಿದರು. ಶತ್ರುಗಳಿಗೆ ತಿಳಿಯುವ ಮುನ್ನ ಎತ್ತರದ ಗುಡ್ಡಗಳನ್ನು ವಶಪಡಿಸಿಕೊಳ್ಳುವುದೇ ಈ ಯೋಜನೆಯ ಗುರಿಯಾಗಿತ್ತು. ಮೇ 8ರ ಹೊತ್ತಿಗೆ ಪಾಕೀಗಳು ಗುಡ್ಡಗಳನ್ನು ಆಕ್ರಮಿಸಿ ಬಂಕರುಗಳಲ್ಲಿ ಕುಳಿತುಬಿಟ್ಟರು. ಇದನ್ನು ಕಂಡಂತಹ ಕುರಿಗಾಯಿಗಳು ಸೇನೆಗೆ ಸುದ್ದಿ ಮುಟ್ಟಿಸಿದರು. ಮರುದಿನವೇ ಸೇನೆಯ ಜಾಟ್ ರೆಜಿಮೆಂಟ್‌ನ ಕ್ಯಾಪ್ಟನ್ ಸೌರಭ್ ಕಾಲಿಯಾರನ್ನು ಕಳುಹಿಸಿತು.‌ 6 ಜನರ ತಂಡದೊಂದಿಗೆ ʼಬಜರಂಗ್ʼ ಪೋಸ್ಟಿನತ್ತ ಹೊರಟರು, ಶತ್ರುಗಳಿರುವುದು ಖಾತ್ರಿಯಾಗಿ ತಂಡ ಕದನಕ್ಕಿಳಿಯಿತು. ಶತ್ರುಗಳ ಸಂಖ್ಯೆಯನ್ನು ಅಂದಾಜಿಸಲು ಎಡವಿದ್ದ ತಂಡ ಸೆರೆ ಸಿಕ್ಕಿತು. ಅವರನ್ನು ಚಿತ್ರವಿಚಿತ್ರವಾಗಿ ಹಿಂಸಿಸಿ 22 ದಿನಗಳ ಸೆರೆಯ ನಂತರ ಕೊಲ್ಲಲಾಯಿತು.

ಮುಷರ್ರಫ್‌ ಮಾಸ್ಟರ್‌ ಮೈಂಡ್‌

ಭಾರತದ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಶಾಂತಿ ಮಂತ್ರದ ಪ್ರಸ್ತಾಪವನ್ನು ಧಿಕ್ಕರಿಸಿ, ಅಂದಿನ ಪಾಕಿಸ್ತಾನದ ಜನರಲ್‌ ಪರ್ವೇಜ್‌ ಮುಷರ್ರಫ್‌ ಕಾರ್ಗಿಲ್‌ ಯುದ್ಧ ಪ್ರಾರಂಭಕ್ಕೆ ಕಾರಣಕರ್ತರಾದರು. ಮುಷರ್ರಫ್‌ ಈ ಯುದ್ಧದ ʼಮಾಸ್ಟರ್‌ ಮೈಂಡ್‌ʼ ಎಂದು ನಂತರ ಗೊತ್ತಾಯಿತು. ಕಾಶ್ಮಿರದಲ್ಲಿ ಒಳನುಗ್ಗುವ ಯೋಜನೆಯನ್ನು ತುಂಬ ನಾಜೂಕಾಗಿ ಮುಷರ್ರಫ್‌ ಯೋಜಿಸಿದ್ದರು. ವಿಶೇಷ ಎಂದರೆ ಅಂದಿನ ಪಾಕ್‌ ಪ್ರಧಾನಿ ನವಾಜ್‌ ಷರೀಫ್‌ ಅವರಿಗೂ ಈ ಬಗ್ಗೆ ಮಾಹಿತಿ ಇರಲಿಲ್ಲ!

ಭಾರತದ ಆಪರೇಷನ್ ವಿಜಯ್

ವ್ಯವಸ್ಥಿತ ದಾಳಿ ಎಂದರಿತ ಸೇನೆ ಪ್ರಧಾನಿ, ರಕ್ಷಣಾ ಸಚಿವರು, ವಿದೇಶಾಂಗ ಸಚಿವರು, ಐಬಿ, ನಮ್ಮ ಗುಪ್ತಚರ ಇಲಾಖೆ ‘ರಾ’ ಮತ್ತು ಮೂರೂ ಸೇನೆಯ ಮುಖ್ಯಸ್ಥರುಗಳನ್ನು ಸೇರಿದ ಸಂದರ್ಭದಲ್ಲಿ ಭಾರತ ಸೇನೆಯ ಜನರಲ್ ಮಲಿಕ್ ಅವರು, “ಸೇನೆಯ ಮೂರೂ ವಿಭಾಗಗಳು ಜೊತೆಗೂಡಿ ದಾಳಿ ಮಾಡಿದರೆ ಮಾತ್ರ ಪರಿಹಾರ. ಅನುಮತಿ ಕೊಡಿ” ಎಂದು ಪ್ರಧಾನಿಗೆ ವಿನಂತಿ ಮಾಡಿದರು. ಅಟಲ್‌ ಅವರು ಅನುಮತಿಗೆ ಕ್ಷಣಮಾತ್ರವೂ ತಡ ಮಾಡಲಿಲ್ಲ. ಆಪರೇಷನ್ ವಿಜಯ್ ಆರಂಭವಾಯಿತು.

ಕಾರ್ಗಿಲ್ ಪರ್ವತ ಶ್ರೇಣಿಯ ಮೇಲ್ಭಾಗದ ಬಹುತೇಕ ಪ್ರದೇಶಗಳು ಪಾಕಿಸ್ತಾನ ಸೇನೆಯ ವಶದಲ್ಲಿದ್ದುದು ಭಾರತೀಯ ಸೇನೆಗೆ ಆರಂಭದಲ್ಲಿ ತುಸು ಹಿನ್ನಡೆಯಾಯಿತು. ದುರ್ಗಮ ಪ್ರದೇಶಗಳಾದುದರಿಂದ ಯುದ್ಧ ವಿಮಾನ, ಹೆಲಿಕಾಪ್ಟರ್‌ಗಳ ಮೂಲಕ ಮದ್ದುಗುಂಡು ಸಾಗಿಸುವುದು ಹಾಗೂ ಬಾಂಬ್ ದಾಳಿ ನಡೆಸುವುದು ಕಷ್ಟವಾಗಿತ್ತು. ಹಾಗೆಂದು ರಸ್ತೆ ಮೂಲಕ ಶಸ್ತ್ರಾಸ್ತ್ರ, ಮದ್ದುಗುಂಡು ಸಾಗಿಸಬೇಕಿದ್ದರೆ ʼಎನ್‌ಎಚ್ 1ಡಿʼಯನ್ನೇ ಬಳಸಬೇಕಿತ್ತು. ಕಾರ್ಗಿಲ್ ಪರ್ವತಗಳ ಮೇಲಿದ್ದ ಪಾಕಿಸ್ತಾನಿ ಸೈನಿಕರಿಗೆ ಈ ಹೆದ್ದಾರಿಯಲ್ಲಿನ ಪ್ರತಿಯೊಂದು ಚಲನವಲನವೂ ಸ್ಪಷ್ಟವಾಗಿ ಕಾಣಿಸುತ್ತಿತ್ತು. ಹೀಗಾಗಿ ಪಾಕಿಸ್ತಾನಿ ಸೈನಿಕರ ದಾಳಿಗೆ ತುತ್ತಾಗಿ ಅಪಾರ ಪ್ರಮಾಣದಲ್ಲಿ ಸಾವು–ನೋವು ಸಂಭವಿಸುವ ಆತಂಕ ಭಾರತೀಯ ಸೇನೆಗಿತ್ತು. ನಂತರ, ಹಿಮಾಚಲ ಪ್ರದೇಶದ ಮೂಲಕ ಲೇಹ್ ಅನ್ನು ಸಂಪರ್ಕಿಸುವ ರಸ್ತೆಯನ್ನು ಬಳಸಿ ಶಸ್ತ್ರಾಸ್ತ್ರ ಸಾಗಾಣೆ ಮಾಡಲಾಯಿತು. ಈ ಎಲ್ಲ ಅಡೆತಡೆಗಳು ಭಾರತೀಯ ಸೇನೆಯ ಕಾರ್ಯಾಚರಣೆಯನ್ನು ತುಸು ನಿಧಾನಗೊಳಿಸಿದವು.

ಶ್ರೀನಗರ–ಲೇಹ್ ನಡುವಣ ಹೆದ್ದಾರಿ ಮೇಲೆ ಹೇಗಾದರೂ ಹಿಡಿತ ಸಾಧಿಸುವುದು ಭಾರತೀಯ ಸೇನೆಯ ಪ್ರಮುಖ ಗುರಿಯಾಗಿತ್ತು. ಈ ಗುರಿಯನ್ನು ಸಾಧಿಸಿದರೆ, ನಂತರ ಪಾಕಿಸ್ತಾನಿ ಪಡೆಗಳನ್ನು ಹಿಮ್ಮೆಟ್ಟಿಸುವುದು ಸುಲಭವಾಗುತ್ತಿತ್ತು. ಹೀಗಾಗಿ ಟೈಗರ್‌ ಹಿಲ್ ಮತ್ತು ಡ್ರಾಸ್‌ನ ಟೊಲೊಲಿಂಗ್ ಮರು ವಶಪಡಿಸಿಕೊಳ್ಳಲು ಮೊದಲ ಆದ್ಯತೆ ನೀಡಲಾಯಿತು. ಇದರ ಬೆನ್ನಲ್ಲೇ ಬಟಾಲಿಕ್ ಮೇಲೆ ಗುರಿ ಇರಿಸಲಾಯಿತು.

ಯುದ್ಧ ಬಹಳ ಜೋರಾಗಿಯೇ ಶುರುವಾಯಿತು, ದಾಳಿ-ಪ್ರತಿದಾಳಿಗಳು ನಡೆದವು. ವಿಮಾನಗಳ ಹಾರಾಟ, ಹೆಲಿಕಾಪ್ಟರ್‌ಗಳ ಸದ್ದು, ಮದ್ದು-ಗುಂಡುಗಳ ಸಿಡಿತ, ರಾಷ್ಟ್ರಕ್ಕಾಗಿ ಪ್ರಾಣಕೊಡುವ ಸೈನಿಕನ ತುಡಿತ ಎಲ್ಲವೂ ನಡೆದಿತ್ತು.

ಮೊದಮೊದಲು ಸ್ವಲ್ಪ ನಷ್ಟ ಅನುಭವಿಸಿದ ಭಾರತೀಯ ಸೇನೆ, ಪಾಕಿಗಳನ್ನು ಬಗ್ಗುಬಡೆದು ತೋಲೋಲಿಂಗ್, ಟೈಗರ್ ಹಿಲ್, ಪಾಯಿಂಟ್ 5140, 4700, 5100, ಲೋನ್ ಹಿಲ್ ಮತ್ತು ಥ್ರೀ ಪಿಂಪಲ್ಸ್‌ಗಳನ್ನು ಸೇರಿದಂತೆ ಹಲವಾರು ಪ್ರದೇಶಗಳನ್ನು ಜುಲೈ 15ರ ಹೊತ್ತಿಗೆ ಅವರ ಕಪಿಮುಷ್ಠಿಯಿಂದ ವಶಪಡಿಸಿಕೊಂಡಿತು.

1999ರ ಮೇ 26ರಂದು ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸುವ ಮೂಲಕ ಕಾರ್ಯಾಚರಣೆಗೆ ನೆರವಾಯಿತು. ದುರದೃಷ್ಟವಶಾತ್, ಮೇ 28ರಂದು ವಾಯುಪಡೆಯ ʼಮಿಗ್ 17ʼ ವಿಮಾನವನ್ನು ಪಾಕಿಸ್ತಾನ ಹೊಡೆದುರುಳಿಸಿ ನಾಲ್ವರು ಯೋಧರು ಹುತಾತ್ಮರಾದರು. ಕೊನೆಗೂ 1999ರ ಜೂನ್ 9 ಮತ್ತು 13ರಂದು ಕ್ರಮವಾಗಿ ಬಟಾಲಿಕ್ ಹಾಗೂ ಟೊಲೊಲಿಂಗ್ ಪ್ರದೇಶವನ್ನು ಮರು ವಶಪಡಿಸಿಕೊಳ್ಳುವಲ್ಲಿ ಭಾರತೀಯ ಸೇನೆ ಯಶಸ್ವಿಯಾಯಿತು. ನಂತರ ಹೋರಾಟ ಸಂಪೂರ್ಣವಾಗಿ ಭಾರತದ ಪರ ವಾಲತೊಡಗಿತು. ಜುಲೈ 2ರಿಂದ ಕಾರ್ಗಿಲ್ ಬಳಿ ಭಾರೀ ಪ್ರತಿದಾಳಿ ಆರಂಭಿಸಿದ ಭಾರತೀಯ ಸೇನೆ, ಜುಲೈ 4ರಂದು ಟೈಗರ್‌ ಹಿಲ್‌ ಅನ್ನೂ ತೆಕ್ಕೆಗೆ ತೆಗೆದುಕೊಂಡಿತು. ಭಾರತೀಯ ಯೋಧರ ಪ್ರತಿದಾಳಿ ತಾಳಲಾರದ ಪಾಕಿಸ್ತಾನ ಸೇನೆ ಜುಲೈ 7ರ ವೇಳೆಗೆ ಡ್ರಾಸ್‌ನಿಂದಲೂ ಕಾಲ್ಕಿತ್ತಿತು. ಅಂತಿಮವಾಗಿ ಜುಲೈ 14ರಂದು ʼಆಪರೇಷನ್ ವಿಜಯ್ʼ ಯಶಸ್ವಿಯಾಗಿದೆ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಘೋಷಿಸಿದರು. ಜುಲೈ 26ರಂದು ಇಡೀ ಕಾರ್ಗಿಲ್ ಪ್ರದೇಶ ಮರಳಿ ಅಧಿಕೃತವಾಗಿ ಭಾರತದ ವಶವಾಯಿತು.

ಸುಮಾರು 527 ಯೋಧರ ಬಲಿದಾನದ ಬಳಿಕ 1999ರ ಜುಲೈ 26ಕ್ಕೆ ಕಾರ್ಯಾಚರಣೆ ನಿಲ್ಲಿಸಿ ʼಆಪರೇಷನ್ ವಿಜಯ್ʼನ ಸಂಭ್ರಮಾಚರಣೆಯಲ್ಲಿ ತೊಡಗಿತ್ತು. ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ಸಾಬೀತುಪಡಿಸಿತ್ತು. ಪಾಕಿಸ್ತಾನ ತೀವ್ರ ಮುಖಭಂಗಕ್ಕೆ ಒಳಗಾಗಿತ್ತು.

ಆಪರೇಷನ್‌ ಸೇಫ್‌ ಸಾಗರ್‌

ಭಾರತಕ್ಕೆ ಕಾರ್ಗಿಲ್‌ ಯುದ್ಧ ಒಂದು ಅಚ್ಚರಿಯಾಗಿದ್ದರೂ, ಎತ್ತರದ ಪ್ರದೇಶದ ಅನಾನುಕೂಲ ಇದ್ದರೂ ಶೆಲ್‌ ದಾಳಿ ಮುಖಾಂತರ ಭಾರತ ಸೇನೆ ಪಾಕಿಸ್ತಾನ ಬಂಕರ್‌ಗಳ ಮೇಲೆಯೇ ಕಣ್ಣಿಟ್ಟಿತ್ತು. ಪಾಕ್‌ ದಾಳಿಯನ್ನು ಹುಟ್ಟಡಗಿಸುವಲ್ಲಿ ಬೋಫೋ​ರ್‍ಸ್ ಫಿರಂಗಿಗಳು ಭಾರತಕ್ಕೆ ನೆರವಾಗಿದ್ದವು. ಪಾಕ್‌ನ ದುಷ್ಟತನಕ್ಕೆ ಸರಿಯಾದ ಬುದ್ಧಿ ಕಲಿಸಲು ʼಆಪರೇಷನ್‌ ಸೇಫ್‌ ಸಾಗರ್‌ʼ ಹೆಸರಿನಲ್ಲಿ ಭೂ ಸೇನೆಯೊಂದಿಗೆ ವಾಯುಪಡೆಯೂ ಕಾರಾರ‍ಯಚರಣೆ ಆರಂಭಿಸಿತು. ಈ ವೇಳೆ ವಾಯುಪಡೆಗೆ ಶಕ್ತಿಯಾಗಿದ್ದು ಮಿಗ್‌-27, ಮಿಗ್‌-29 ಯುದ್ಧ ವಿಮಾನ. ಇದರಿಂದಾಗಿ ಪಾಕ್‌ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತ ಯಶಸ್ವಿಯಾಯಿತು. 2ನೇ ವಿಶ್ವಯುದ್ಧದ ಬಳಿಕ ಅಪಾರ ಪ್ರಮಾಣದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಿದ ಮೊದಲ ಯುದ್ಧ ಇದು ಎಂಬ ಖ್ಯಾತಿ ಪಡೆಯಿತು.

ಪಾಕ್‌ನ ಉಸಿರುಗಟ್ಟಿಸಿದ ನೌಕಾಪಡೆ

ಪಾಕಿಸ್ತಾನದ ಬಂದರುಗಳಿಗೆ (ಮುಖ್ಯವಾಗಿ ಕರಾಚಿ ಬಂದರಿಗೆ) ತಡೆ ವಿಧಿಸುವ ಪ್ರಯತ್ನದ ಮೂಲಕ ಸರಬರಾಜು ಮಾರ್ಗಗಳನ್ನು ಕಡಿತಗೊಳಿಸಿ ಭಾರತೀಯ ನೌಕಾಪಡೆ ಕೂಡ ಯುದ್ಧ ಸಿದ್ಧತೆ ಮಾಡಿಕೊಂಡಿತು. ಬಳಿಕ, ಪೂರ್ಣ ಸ್ವರೂಪದ ಯುದ್ಧ ಭುಗಿಲೆದ್ದರೆ ಪಾಕಿಸ್ತಾನದಲ್ಲಿ ಕೇವಲ 6 ದಿನಗಳಿಗೆ ಸಾಕಾಗುವಷ್ಟು ಇಂಧನ ದಾಸ್ತಾನು ಉಳಿದುಕೊಂಡಿದೆಯೆಂದು ಆಗಿನ ಪ್ರಧಾನಮಂತ್ರಿ ನವಾಜ್‌ ಷರೀಫ್‌ ಬಹಿರಂಗಪಡಿಸಿದ್ದರು.

ಕಾರ್ಗಿಲ್ ಕದನವು ಹೆಚ್ಚಿನ ಸಂಖ್ಯೆಯ ಸಾವು–ನೋವಿಗೆ ಕಾರಣವಾಯಿತು. ಭಾರತದ ಕಡೆಯಿಂದ ಅಧಿಕೃತ ದಾಖಲೆಗಳ ಪ್ರಕಾರ, 527 ಮಂದಿ ಹುತಾತ್ಮರಾದರೆ 1,363 ಯೋಧರು ಗಾಯಗೊಂಡಿದ್ದರು. ಒಂದು ಯುದ್ಧವಿಮಾನ, ಹೆಲಿಕಾಪ್ಟರ್‌ ಅನ್ನು ಪಾಕಿಸ್ತಾನಿ ಸೈನಿಕರು ಹೊಡೆದುರುಳಿಸಿದ್ದರು. ಒಂದು ಯುದ್ಧ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡಿತ್ತು. ಪಾಕಿಸ್ತಾನದ ದಾಖಲೆಗಳ ಪ್ರಕಾರ ಅಲ್ಲಿನ 453 ಸೈನಿಕರು ಮೃತಪಟ್ಟಿದ್ದರು. ಆದರ ಈ ಲೆಕ್ಕಾಚಾರದ ಬಗ್ಗೆ ಹಲವು ಅನುಮಾನಗಳಿವೆ. 700ಕ್ಕೂ ಹೆಚ್ಚು ಪಾಕಿಸ್ತಾನೀಯರು ಯುದ್ಧದಲ್ಲಿ ಮೃತಪಟ್ಟಿದ್ದು 1,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭಾರತ ಪ್ರತಿಪಾದಿಸಿದೆ.

ಕ್ಯಾಪ್ಟನ್ ಸೌರಭ್ ಕಾಲಿಯಾ, ಕ್ಯಾಪ್ಟನ್ ವಿಕ್ರಂ ಬಾತ್ರಾ, ಗ್ರೇನೇಡಿಯರ್ ಯೋಗೇಂದರ್ ಸಿಂಗ್ ಯಾದವ್, ಕ್ಯಾಪ್ಟನ್ ಅಮೋಲ್ ಕಾಲಿಯಾ, ರಾಜೇಶ್ ಅಧಿಕಾರಿ, ಅಜಯ್ ಅಹುಜಾ, ಮೇಜರ್ ವಿವೇಕ್ ಗುಪ್ತಾ, ಕೆಂಗುರುಸೆ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ ಸೇರಿದಂತೆ ಸಾವಿರಾರು ಯೋಧರ ಸಾಹಸ ಮತ್ತು ತ್ಯಾಗದ ಪ್ರತೀಕವಾಗಿ ಗೆಲುವು ಪ್ರಾಪ್ತವಾಯಿತು.

ಇನ್ನು, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಸೇನಾ ಸಲಕರಣೆಗಳಿಗೆ ಹೆಚ್ಚಿನ ಬೇಡಿಕೆ ಉಂಟಾಯಿತು. ಯುದ್ಧ ನಡೆದ ವರ್ಷ ದೇಶದ ರಕ್ಷಣಾ ವೆಚ್ಚ 47,071 ಕೋಟಿ ರೂ. ಮುಟ್ಟಿತು. 1999–2000ನೇ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ವೆಚ್ಚವಾಗಿತ್ತು ಇಷ್ಟಾಗಿತ್ತು. ಕಾರ್ಗಿಲ್ ಯುದ್ಧದ ʼಆಪರೇಷನ್ ವಿಜಯ್ʼ ಕಾರ್ಯಾಚರಣೆಗೆ ದಿನವೊಂದಕ್ಕೆ ಮಾಡಲಾಗಿದ್ದ ಅಂದಾಜು ವೆಚ್ಚ 20 ಕೋಟಿ ರೂ. ಆಗಿತ್ತು, ಒಟ್ಟಾರೆ ʼಆಪರೇಷನ್ ವಿಜಯ್ʼ ಕಾರ್ಯಾಚರಣೆಯ ಅಂದಾಜು ವೆಚ್ಚ 1,800 ಕೋಟಿ ರೂಪಾಯಿ ಆಗಿತ್ತು.

ಕಾರ್ಗಿಲ್ ಯುದ್ಧವು ನಮ್ಮ ಸೈನಿಕರ ಸತ್ಯ, ಧರ್ಮ, ನಿಸ್ವಾರ್ಥ, ಕರ್ತವ್ಯ ಬದ್ಧತೆ, ತ್ಯಾಗ, ಶೌರ್ಯಗಳನ್ನು ಜಗತ್ತಿಗೆ ಮತ್ತೊಮ್ಮೆ ಸಾರಿತು. ಅಂತಹ ವೀರ ಯೋಧರಿಗೆ ಅಗಣಿತ ನಮನಗಳು.

***

ಡಾ.ಗುರುಪ್ರಸಾದ ಹವಲ್ದಾರ್
ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: 1999ckcknewsnowguest columnKargilKargil Warpakistanwar against terrorwar between india
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

by cknewsnow desk
February 28, 2024
0

ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್!; ಈ ಅಡ್ಡ ಕಸುಬಿಗೆ ಇದೆ 55 ವರ್ಷಗಳ ಇತಿಹಾಸ

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

Next Post
ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

Leave a Reply Cancel reply

Your email address will not be published. Required fields are marked *

Recommended

ಕಾಸಿಗಾಗಿ ಪೋಸ್ಟಿಂಗ್‌‌: ಕೋಲಾರ ಕೇಸಿನ ಮೇಲೆ ರಾಜಕೀಯ ಒತ್ತಡ; ದೂರೇ ಅದಲು ಬದಲು! ಧುತ್ತನೆದ್ದ 2ನೇ FIR!!

ಕಾಸಿಗಾಗಿ ಪೋಸ್ಟಿಂಗ್‌‌: ಕೋಲಾರ ಕೇಸಿನ ಮೇಲೆ ರಾಜಕೀಯ ಒತ್ತಡ; ದೂರೇ ಅದಲು ಬದಲು! ಧುತ್ತನೆದ್ದ 2ನೇ FIR!!

2 years ago
ಖಾತೆ ಕಿರಿಕ್;‌ ಸಾರಿಗೆ ಕೊಟ್ಟರೆ ಸಂಪುಟದಿಂದಲೇ ಹೊರಕ್ಕೆ ಎಂದರಂತೆ ರಾಮಲಿಂಗಾರೆಡ್ಡಿ

ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಇಲ್ಲ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ