• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

15 ಕೋಟಿ ಕಿ.ಮೀ. ದೂರ ಇರುವ ಸೂರ್ಯನನ್ನು ಆದಿತ್ಯಾ L1 ಮುಟ್ಟುತ್ತಾ?

P K Channakrishna by P K Channakrishna
September 2, 2023
in NATION, SCIENCE, STATE, TECH, WORLD
Reading Time: 2 mins read
0
15 ಕೋಟಿ ಕಿ.ಮೀ. ದೂರ ಇರುವ ಸೂರ್ಯನನ್ನು ಆದಿತ್ಯಾ L1 ಮುಟ್ಟುತ್ತಾ?
951
VIEWS
FacebookTwitterWhatsuplinkedinEmail

ಜಿಜ್ಞಾಸೆಗಳಿಗೆ ಉತ್ತರ ಕೊಟ್ಟ ಇಸ್ರೋ

ಬೆಂಗಳೂರು/ಶ್ರೀಹರಿಕೋಟಾ: ಭೂಮಿಯಿಂದ 15 ಕೋಟಿ ಕಿ.ಮೀ.ಗಳಷ್ಟು ದೂರ ಇರುವ ಸೂರ್ಯನನ್ನು ಮುಟ್ಟಲು ಆದಿತ್ಯಾ ಎಲ್ 1 ನೌಕೆಗೆ ಸಾಧ್ಯವಾಗುತ್ತಾ? ಬೆಂಕಿ ಉಂಡೆಯಂತಿರುವ ಸೂರ್ಯನ ಕುರಿತಾಗಿ ಅಧ್ಯಯನ ಮಾಡಲು ಅದಕ್ಕೆ ಸಾಧ್ಯ ಇದೆಯಾ?

ಇಂತಹ ಹತ್ತಾರು ಜಿಜ್ಞಾಸೆಗಳು ಮತ್ತು ಪ್ರಶ್ನೆಗಳು ಸಾಮಾನ್ಯವಾಗಿ ಅನೇಕನ್ನು ಕಾಡುತ್ತಿವೆ. ಇಂಥ ಕೆಲ ಪ್ರಶ್ನೆಗಳಿಗೆ ಸ್ವತಃ ಇಸ್ರೋ ಉತ್ತರ ಕೊಟ್ಟಿದೆ.

ಆದಿತ್ಯ-L1 ನೌಕೆ ಸೂರ್ಯನ ಹತ್ತಿರಕ್ಕೇನೂ ಹೋಗುವುದಿಲ್ಲ. ಆದರೆ, ಅದು ಭೂಮಿಯಿಂದ ಸೂರ್ಯನಿಗೆ ಇರುವ ಒಟ್ಟಾರೆ ದೂರದ ಕೇವಲ ಶೇ.1 ರಷ್ಟು ದೂರವಷ್ಟೇ ಕ್ರಮಿಸಿ, ಸೂರ್ಯನ ಕುರಿತಾಗಿ ಅಧ್ಯಯನ ಮಾಡುತ್ತದೆ.

Aditya-L1 started generating the power.
The solar panels are deployed.

The first EarthBound firing to raise the orbit is scheduled for September 3, 2023, around 11:45 Hrs. IST pic.twitter.com/AObqoCUE8I

— ISRO (@isro) September 2, 2023

ಅಂದರೆ; ಇಸ್ರೋ ತಿಳಿಸಿರುವಂತೆ ನೌಕೆಯು ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿದ್ದು, (ಇದು ಭೂಮಿ-ಚಂದ್ರನ ಅಂತರದ ನಾಲ್ಕು ಪಟ್ಟು) ಸೂರ್ಯನನ್ನು ಗಮನಿಸಲಿದೆ.

ಹಾಗೆಯೇ; ಆದಿತ್ಯ L1 ಅನ್ನು L1 ಪಾಯಿಂಟ್‌ ನಲ್ಲೇ ಸ್ಥಿರೀಕರಿಸಲು ಕಾರಣಗಳನ್ನು ಇಸ್ರೋ ಕೊಟ್ಟಿದೆ. X ಸಾಮಾಜಿಕ ತಾಣದಲ್ಲಿ ಅದು ನೀಡಿರುವ ಮಾಹಿತಿಯಂತೆ; L1 ಪಾಯಿಂಟ್‌ ನಲ್ಲಿ ಭೂಮಿ, ಸೂರ್ಯನ ಗುರುತ್ವಾಕರ್ಷಣೆ ಪರಸ್ಪರ ಶೂನ್ಯ ಸ್ಥಿತಿಯಲ್ಲಿ ಇರುತ್ತದೆ. ಹೀಗಾಗಿ ಅಲ್ಲಿ ನೌಕೆ ಭೂಮಿಯನ್ನು ಸುತ್ತುವ ಅಗತ್ಯ ಇರುವುದಿಲ್ಲ. L1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ನೆಲೆ ನಿಲ್ಲಬಹುದು. ಈ ಮೂಲಕ ಆದಿತ್ಯ L1 ನೌಕೆಯು ಸೂರ್ಯನನ್ನು ನಿರಂತರವಾಗಿ ವೀಕ್ಷಿಸಲು ಅನುಕೂಲ ಇರುತ್ತದೆ.

ಇಸ್ರೋ ಕಳಿಸಿರುವ ನೌಕೆಯು ಸೂರ್ಯನ ಮೇಲ್ಮೈ, ಸೂರ್ಯನ ಕಿರಣಗಳು, ಸೂರ್ಯನ ತಾಪಮಾನ, ಸೌರಜ್ವಾಲೆ, ಸೂರ್ಯನ ಸುತ್ತಮುತ್ತಲಿನ ವಾತಾವರಣದ ಕುರಿತಾಗಿ ಅಧ್ಯಯನ ನಡೆಸುವುದು. ಅಲ್ಲಿನ ಎಲ್ಲಾ ಮಾಹಿತಿಯನ್ನು ಇಸ್ರೋಗೆ ರವಾನಿಸಲಿದೆ..

ಏನಿದು L1 ಪಾಯಿಂಟ್?

courtesy: Wikipedia


ಭೂಮಿ ಮತ್ತು ಸೂರ್ಯನ ನಡುವೆ 15 ಕೋಟಿ ಕಿ.ಮೀ. ದೂರವಿದೆ ಎಂದು ವಿಜ್ಞಾನಿಗಳು ಅಂದಾಜು ಮಾಡಿದ್ದಾರೆ. ಅಂದರೆ; ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿ L1 ಲ್ಯಾಗ್ರೇಂಜ್ ಬಿಂದುವಿದೆ. (ಲ್ಯಾಗ್ರೇಂಜ್ ಬಿಂದು ಎಂದರೆ ಎರಡು ಗ್ರಹಗಳ ನಡುವಿನ ಗುರುತ್ವಾಕರ್ಷಕ ಶಕ್ತಿ ಶೂನ್ಯವಾಗಿರುವ ಪ್ರದೇಶ) ಭೂಮಿ ಹಾಗೂ ಸೂರ್ಯನ ಗುರುತ್ವಾಕರ್ಷಣೆ ಪರಸ್ಪರ ಶೂನ್ಯವಾಗಿರುವ ಈ ಜಾಗವನ್ನು ಲ್ಯಾಗ್ರೇಂಜ್ ಬಿಂದು 1 ಇಲ್ಲವೇ L1 ಎನ್ನಲಾಗುವುದು. 

ಸೂರ್ಯನು ಸೌರಮಂಡಲದ ನಡುವೆ ಇರುವ ನಕ್ಷತ್ರ. ಭೂಮಿ ಸೇರಿದಂತೆ ಇನ್ನಿತರ ಗ್ರಹಗಳು ಸೂರ್ಯನನ್ನು ಪರಿಭ್ರಮಿಸುತ್ತವೆ. ಮಹತ್ವದ ಸಂಗತಿ ಎಂದರೆ ಸೂರ್ಯನೊಬ್ಬನೇ ಸೌರಮಂಡಲದ ಶೇ.99ರಷ್ಟು ದ್ರವ್ಯರಾಶಿಯನ್ನು ಹೊಂದಿದ್ದಾನೆ. ಸೂರ್ಯನ ಬೆಳಕು ದ್ಯುತಿಸಂಶ್ಲೇಷಣೆಯ ಮೂಲಕ ಭೂಮಿಯ ಬಹುತೇಕ ಎಲ್ಲಾ ಜೀವಿಗಳಿಗೂ ಆಧಾರವಾಗಿದ್ದು, ಭೂಮಿಯ ಹವಾಮಾನದ ಮೇಲೂ ಗಾಢ ಪ್ರಭಾವ ಬೀರುತ್ತದೆ. ಭೂಮಿಯಿಂದ 15 ಕೋಟಿ ಕಿ.ಮೀ.ಗಳಷ್ಟು ದೂರ ಇರುವ ಸೂರ್ಯನ ಮೇಲ್ಮೈಯಲ್ಲಿ 1.5 ಕೋಟಿ ಡಿಗ್ರಿ ಸೆಲ್ಸಿಯಸ್‌ನಷ್ಟು ಅತ್ಯಂತ ಗರಿಷ್ಠ ತಾಪಮಾನವಿದೆ. ಸುಮಾರು 4.6 ಶತಕೋಟಿ ವರ್ಷಗಳಷ್ಟು ಹಿಂದೆ ಸೂರ್ಯ ರೂಪುಗೊಂಡಿದ್ದಾನೆ ಎಂದು ಖಗೋಳ ವಿಜ್ಞಾನಿಗಳು ಅಂದಾಜು ಮಾಡಿದ್ದಾರೆ. ಹೈಡ್ರೋಜನ್‌ ಮತ್ತು ಹೀಲಿಯಂ ಅನಿಲಗಳಿಂದ ಕೂಡಿರುವ ಸೂರ್ಯ 5 ಶತಕೋಟಿ ವರ್ಷಗಳಿಗಿಂತಲೂ ಹೆಚ್ಚು ಸ್ಥಿರವಾಗಿ ಉಳಿಯುತ್ತಾನೆ ಎನ್ನಲಾಗಿದೆ.

ಸೂರ್ಯನು ಭೂಮಿಗೆ ಅತ್ಯಂತ ನಿಕಟದಲ್ಲಿರುವ ನಕ್ಷತ್ರ. ಹೀಗಾಗಿ ವಿಜ್ಞಾನಿಗಳು ಸೂರ್ಯನನ್ನು ಸಾಕಷ್ಟು ಆಳವಾಗಿ ಅಧ್ಯಯನ ಮಾಡಲು ಪ್ರಯತ್ನಿಸಿದ್ದಾರೆ. ಆದರೂ, ಸೂರ್ಯನ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಇನ್ನೂ ಉತ್ತರಗಳು ಸಿಕ್ಕಿಲ್ಲ. ಈಗ ಇಸ್ರೋ ಆ ನಿಟ್ಟಿನಲ್ಲಿ ದೊಡ್ಡ ಪ್ರಯತ್ನ ಆರಂಭ ಮಾಡಿದೆ.

ಅಂದಹಾಗೆ; ಶ್ರೀಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆ ಕೇಂದ್ರದಿಂದ ಆದಿತ್ಯ ಎಲ್-1 ನೌಕೆಯನ್ನು ಶನಿವಾರ ಪೂರ್ವಾಹ್ನ 11.50 ಗಂಟೆಗೆ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿತು. ಒಟ್ಟು 125 ದಿನಗಳ ಮಿಷನ್‌ ಇದಾಗಿದ್ದು, ಈಗಾಗಲೇ ನೌಕೆಯು ಬೇರ್ಪಟ್ಟು ನಿಖರ ಕಕ್ಷೆಗೆ ಸೇರಿಕೊಂಡಿದೆ.

PSLV-C57/Aditya-L1 Mission:

The launch of Aditya-L1 by PSLV-C57 is accomplished successfully.

The vehicle has placed the satellite precisely into its intended orbit.

India’s first solar observatory has begun its journey to the destination of Sun-Earth L1 point.

— ISRO (@isro) September 2, 2023
ಸೂರ್ಯನತ್ತ ಭಾರತ; ಜಗತ್ತನ್ನು ತುದಿಗಾಲ ಮೇಲೆ ನಿಲ್ಲಿಸಿದ ಇಸ್ರೋ
Tags: Bengaluruckcknewsnowindia space MissionisrokarnatakaPSLVC57AdityaL1MissionSciencetechnology
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
‌3ನೇ ಜನ್ಮ ಸಿಕ್ಕಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

‌3ನೇ ಜನ್ಮ ಸಿಕ್ಕಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

30 ವರ್ಷಗಳ ಹಿಂದೆ ದಿವಂಗತ ಶಂಕರ್‌ ನಾಗ್‌ ಕಂಡ ಕನಸು ನನಸು;  ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ರೋಪ್ ವೇ; ಒಂದು ವರ್ಷದಲ್ಲಿ ಯೋಜನೆ ಪೂರ್ಣ, ಆವಲಬೆಟ್ಟಕ್ಕೂ ರೋಪ್‌ ವೇ ಭಾಗ್ಯ

30 ವರ್ಷಗಳ ಹಿಂದೆ ದಿವಂಗತ ಶಂಕರ್‌ ನಾಗ್‌ ಕಂಡ ಕನಸು ನನಸು; ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ರೋಪ್ ವೇ; ಒಂದು ವರ್ಷದಲ್ಲಿ ಯೋಜನೆ ಪೂರ್ಣ, ಆವಲಬೆಟ್ಟಕ್ಕೂ ರೋಪ್‌ ವೇ ಭಾಗ್ಯ

4 years ago
ಕರ್ನಾಟಕ ಚುನಾವಣೆ ಬೆನ್ನಲ್ಲೇ 2,000 ನೋಟ್ ಬ್ಯಾನ್

ಕರ್ನಾಟಕ ಚುನಾವಣೆ ಬೆನ್ನಲ್ಲೇ 2,000 ನೋಟ್ ಬ್ಯಾನ್

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ