• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಹೆಚ್.ಡಿ.ಕುಮಾರಸ್ವಾಮಿ ಒತ್ತಾಸೆಯಿಂದ ಎಲ್ಲೋಡು ಕ್ಷೇತ್ರಕ್ಕೆ ನೀರಿನ ಸೌಲಭ್ಯ

P K Channakrishna by P K Channakrishna
September 16, 2023
in CHIKKABALLAPUR, CKPLUS, EDITORS'S PICKS, KOLAR, STATE
Reading Time: 2 mins read
0
ಹೆಚ್.ಡಿ.ಕುಮಾರಸ್ವಾಮಿ ಒತ್ತಾಸೆಯಿಂದ ಎಲ್ಲೋಡು ಕ್ಷೇತ್ರಕ್ಕೆ ನೀರಿನ ಸೌಲಭ್ಯ
1.4k
VIEWS
FacebookTwitterWhatsuplinkedinEmail

ಜೆಡಿಎಸ್‌ ಎಂಎಲ್ಸಿ ಇಂಚರ ಗೋವಿಂದರಾಜು ಅನುದಾನದಲ್ಲಿ ಕೊಳವೆಬಾವಿ
ಉಕ್ಕಿ ಹರಿದ ಜೀವಜಲ; ಸಂಘದ ಪ್ರಧಾನ ಕಾರ್ಯದರ್ಶಿಗೆ ಕರೆ ಮಾಡಿ ಸಂತಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿಗಳು

ಗುಡಿಬಂಡೆ/ಬೆಂಗಳೂರು: ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ತಾಲೂಕಿನ ಆದಿನಾರಾರಾಯಣ ಸ್ವಾಮಿ ಸನ್ನಿಧಿ ಎಲ್ಲೋಡಿನ ಆದಿನಾರಾಯಣ ಬೆಟ್ಟದ ತಪ್ಪಲಿನಲ್ಲಿ ಕಲ್ಯಾಣ ಮಂಟಪಕ್ಕೆ ಕುಡಿಯುವ ನೀರು ಒದಗಿಸುವ ಕಾರ್ಯ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಒತ್ತಾಸೆಯೊಂದಿಗೆ ಸಾಕಾರಗೊಂಡಿದೆ.

ಸುಮಾರು 3 ಲಕ್ಷ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ಕಲ್ಯಾಣ ಮಂಟಪದ ಸಮೀಪದ ಕೊಳವೆ ಬಾವಿಯನ್ನು ಕೊರೆಸಲಾಗಿದ್ದು, ಅದರಲ್ಲಿ ಸಮೃದ್ಧವಾಗಿ ನೀರು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಎಲ್ಲೋಡು ಗ್ರಾಮದ ಜನರು ಹಾಗೂ ಭಕ್ತ ಸಮೂಹ ಸಂತಸ ವ್ಯಕ್ತಪಡಿಸಿದ್ದಾರೆ.

ಕಳೆದ 2022 ನವೆಂಬರ್‌ 26ರಂದು ಪಂಚರತ್ನ ರಥಯಾತ್ರೆಯ ನಿಮಿತ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲೋಡು ಗ್ರಾಮದ ಕೂರ್ಮಗಿರಿಯ ಕ್ಷೇತ್ರದ ಶ್ರೀ ಲಕ್ಷ್ಮೀ ಆದಿನಾರಾಯಣ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದರು. ಪೂಜಾ ಕಾರ್ಯಕ್ರಮವು ಮುಗಿದ ಮೇಲೆ ದೇವಸ್ಥಾನಕ್ಕೆ ನೀರಿನ ಅವಶ್ಯಕತೆ ಇರುವುದರಿಂದ ಕೊಳವೆಬಾವಿಯನ್ನು ಕೊರೆಸಿ ಕೊಡುವಂತೆ ಬ್ರಾಹ್ಮಣರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯ ಪ್ರಕಾಶ್‌ ಹಾಗೂ ದೇಗುಲದ ಪ್ರಧಾನ ಅರ್ಚಕರಾದ ಜ್ವಾಲಾ ಪ್ರಸಾದ್ ಶರ್ಮ ಅವರು ಮನವಿ ಮಾಡಿದ್ದರು.

ಈ ಮನವಿಗೆ ಸಕಾರಾತ್ಮಕವಾಗಿ ಕೂಡಲೇ ಸ್ಪಂದಿಸಿದ ಕುಮಾರಸ್ವಾಮಿ ಅವರು, ಅಂದು ತಮ್ಮ ಜತೆಯಲ್ಲಿಯೇ ಹಾಜರಿದ್ದ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು ಅವರಿಗೆ, ತಮ್ಮ ಅನುದಾನದಲ್ಲಿ ಕೊಳವೆಬಾವಿ ಮಂಜೂರು ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಮಾಜಿ ಮುಖ್ಯಮಂತ್ರಿಗಳ ನಿರ್ದೇಶನದಂತೆ 2022 ಡಿಸೆಂಬರ್‌ 23ರಂದು ಬ್ರಾಹ್ಮಣ ಸೇವಾ ಸಂಘದ ಹೆಸರಿನಲ್ಲಿ ಮನವಿ ಪತ್ರ ಸಿದ್ಧಪಡಿಸಿ ಇಂಚರ ಗೋವಿಂದರಾಜು ಅವರಿಗೆ ಸಲ್ಲಿಸಲಾಗಿತ್ತು. ಅದರಂತೆ 2023 ಜನವರಿ 17ರಂದು ತಮ್ಮ ಅನುದಾನದಲ್ಲಿ 3 ಲಕ್ಷ ರೂ.ಗಳನ್ನು ಮಂಜೂರು ಮಾಡಿ ಕೊಳವೆಬಾವಿ ಕೊರೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದ್ದರು.

ಮಾಜಿ ಮುಖ್ಯಮಂತ್ರಿ ಶ್ರೀ @hd_kumaraswamy ಅವರ ಒತ್ತಾಸೆ, @JanataDal_S ಪಕ್ಷದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಇಂಚರ ಗೋವಿಂದರಾಜು ಅವರ ಅನುದಾನದಲ್ಲಿ ಶ್ರೀ ಎಲ್ಲೋಡು ಆದಿನಾರಾಯಣ ಸ್ವಾಮಿ ಕ್ಷೇತ್ರದ ಕಲ್ಯಾಣ ಮಂಟಪಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕೊಳವೆಬಾವಿ ಕೊರೆಸಲಾಗಿದ್ದು, ಸಮೃದ್ಧ ನೀರು ಸಿಕ್ಕಿದೆ. #ಎಲ್ಲೋಡು pic.twitter.com/Ag1gwvieZO

— cknewsnow.com (@cknewsnow) September 16, 2023

ಅಂತಿಮವಾಗಿ ಇದೇ ಸೆಪ್ಟೆಂಬರ್‌ 15ರಂದು ಬೆಟ್ಟದ ತಪ್ಪಲಿನಲ್ಲಿರುವ ಕಲ್ಯಾಣ ಮಂಟಪದ ಬಳಿ ಕೊಳವೆಬಾವಿ ಕೊರೆಸಲಾಗಿದ್ದು, ಸುಮಾರು 3.5ರಿಂದ 4 ಇಂಚು ನೀರು ಸಿಕ್ಕಿದೆ ಎಂದು ಬ್ರಾಹ್ಮಣರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯ ಪ್ರಕಾಶ್‌ ತಿಳಿಸಿದ್ದಾರೆ.

ಅಲ್ಲದೆ, ಕೊಳವೆಬಾವಿಯಲ್ಲಿ ನೀರು ಸಿಕ್ಕಿದಾಕ್ಷಣ ಈ ಮಾಹಿತಿಯನ್ನು ಮಾಜಿ ಮುಖ್ಯಮಂತ್ರಿಗಳ ಕಚೇರಿಗೆ ಅವರು ತಿಳಿಸಿದ್ದರು. ತಮ್ಮ ಗಮನಕ್ಕೆ ಈ ವಿಷಯ ಬಂದ ಕೂಡಲೇ ಸೂರ್ಯ ಪ್ರಕಾಶ್‌ ಅವರಿಗೆ ಮೊಬೈಲ್‌ ಕರೆ ಮಾಡಿದ ಕುಮಾರಸ್ವಾಮಿ ಅವರು, ಕೊಳವೆಬಾವಿಯಲ್ಲಿ ನೀರು ಸಿಕ್ಕಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು. ಅಲ್ಲದೆ, ತಾವು ಇನ್ನೊಮ್ಮೆ ಶ್ರೀ ಲಕ್ಷ್ಮೀ ಆದಿನಾರಾಯಣ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ದೈವ ದರ್ಶನ ಪಡೆಯುವುದಾಗಿ ತಿಳಿಸಿದರು.

ಹೆಚ್.ಡಿ.ಕುಮಾರಸ್ವಾಮಿ & ಇಂಚರ ಗೋವಿಂದರಾಜು

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಇಂಚರ ಗೋವಿಂದರಾಜು ಅವರ ಒತ್ತಾಸೆ, ನೆರವಿನಿಂದ ಕೊಳವೆಬಾವಿ ಕೊರೆಯಲಾಗಿದ್ದು, ಸಮೃದ್ಧವಾದ ನೀರು ಸಿಕ್ಕಿದೆ. ಇನ್ನು ಮುಂದೆ ಇಲ್ಲಿ ನೀರಿನ ಬವಣೆ ನೀಗಲಿದೆ. ಈ ಕಾರ್ಯ ನಮಗೆಲ್ಲರಿಗೂ, ಭಕ್ತರಿಗೆ ಬಹಳ ಸಂತಸ ಉಂಟು ಮಾಡಿದೆ.

ಸೂರ್ಯ ಪ್ರಕಾಶ್‌, ಶ್ರೀ ಲಕ್ಷ್ಮೀ ಆದಿನಾರಾಯಣ ಸ್ವಾಮಿ ಬ್ರಾಹ್ಮಣರ ಸೇವಾ ಸಂಘ
Tags: chikkaballapurackcknewsnowgouribidanurgudibandehd kumaraswamyinchara govindarajukolarsri Lakshmi Adinarayana temple
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೋಕಸಭೆ ಚುನಾವಣೆ; ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಗ್ಯಾರಂಟಿ

ಲೋಕಸಭೆ ಚುನಾವಣೆ; ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಗ್ಯಾರಂಟಿ

Leave a Reply Cancel reply

Your email address will not be published. Required fields are marked *

Recommended

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

2 years ago
ಬಾಗೇಪಲ್ಲಿಯಲ್ಲಿ ಭಾರತ್ ಬಂದ್ ಸಂಪೂರ್ಣ ಯಶಸ್ವಿ; ಜನಜೀವನ ಅಸ್ತವ್ಯಸ್ತ

ಬಾಗೇಪಲ್ಲಿಯಲ್ಲಿ ಭಾರತ್ ಬಂದ್ ಸಂಪೂರ್ಣ ಯಶಸ್ವಿ; ಜನಜೀವನ ಅಸ್ತವ್ಯಸ್ತ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ