• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಕೋಲಾರದಲ್ಲಿ ಕೆ.ಸಿ ವ್ಯಾಲಿ ನೀರಿನ ಗುಣಮಟ್ಟ ಪರಿಶೀಲನೆ ಪ್ರಹಸನ

cknewsnow desk by cknewsnow desk
September 21, 2023
in KOLAR, STATE
Reading Time: 1 min read
0
ಕೋಲಾರದಲ್ಲಿ ಕೆ.ಸಿ ವ್ಯಾಲಿ ನೀರಿನ ಗುಣಮಟ್ಟ ಪರಿಶೀಲನೆ ಪ್ರಹಸನ
1.1k
VIEWS
FacebookTwitterWhatsuplinkedinEmail

ಸಚಿವರ ಸಮ್ಮುಖದಲ್ಲಿ ಐಐಎಸ್ಸ್ಸಿ, ಇಹೆಚ್ಇಆರ್ ವಿಜ್ಞಾನಿಗಳ ಪರಿಶೀಲನೆಗೆ ಗ್ರಾಮಸ್ಥರ ಅತೃಪ್ತಿ

ಕೋಲಾರ: ಬೆಂಗಳೂರಿನ ಕೊಳಚೆ ನೀರು ಮೂರನೇ ಹಂತದ ಶುದ್ಧೀಕರಣ ಆಗದೆಯೇ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಯುತ್ತಿರುವ ಬಗ್ಗೆ ಜನರ ಆಕ್ರೋಶ ಸ್ಫೋಟಗೊಳ್ಳುವ ಮುನ್ಸೂಚನೆ ಅರಿತ ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ಅವರು, ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಗ್ರಾಮಕ್ಕೆ ಭೇಟಿ ನೀಡಿ, ನೀರು ಶುದ್ಧವಾಗಿದೆ, ಆತಂಕ ಪಡಬೇಕಿಲ್ಲ ಎಂದು ಹೇಳುವ ವ್ಯರ್ಥ ಪ್ರಯತ್ನ ಮಾಡಿದರು.

ಕೆ.ಸಿ ವ್ಯಾಲಿ ನೀರಿನ ಗುಣಮಟ್ಟದ ಬಗ್ಗೆ ಇದ್ದಂತಹ ಜನರ ಅನುಮಾನಗಳನ್ನ ಬಗೆಹರಿಸಲು ಸಚಿವರು ಐಐಎಸ್ಸ್ಸಿ ಮತ್ತು ಇಹೆಚ್ಇಆರ್ ವಿಜ್ಞಾನಿಗಳನ್ನು ಜತೆಯಲ್ಲೇ ಬಂದು ಸ್ಥಳದಲ್ಲೇ ನೀರಿನ ಗುಣಮಟ್ಟ ಪರಿಶೀಲನೆ ನಡೆಸಿದರು. ಆದರೆ, ಜನರಿಗೆ ಅಲ್ಲಿ ಏನು ನಡೆಯುತ್ತಿದೆ ಎನ್ನುವ ಕರಾರುವಕ್ಕಾದ ಮಾಹಿತಿ ಸಿಗಲಿಲ್ಲ. ಅತ್ಯಂತ ಕನಿಷ್ಠ ಮಟ್ಟದ ತಾಂತ್ರಿಕ ಉಪಕರಣಗಳನ್ನು ತಂದು ಜನರ ಮುಂದೆ ಪ್ರದರ್ಶನ ನಡೆಸುವ ತಂತ್ರವಷ್ಟೇ ನಡೆಯಿತು.

ಕೆಸಿ ವ್ಯಾಲಿ ಸಂಸ್ಕರಿತ ನೀರಿನ ಬಗ್ಗೆ ಹಲವಾರು ಅನುಮಾನಗಳನ್ನ ಲಕ್ಷ್ಮಿ ಸಾಗರ ಗ್ರಾಮದ ಜನರು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಸಚಿವರು; ವಿಜ್ಞಾನಿಗಳು, ಮೀನುಗಾರಿಕಾ ಇಲಾಖೆ ಅಧಿಕಾರಿಗಳೂ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳನ್ನ ಒಳಗೊಂಡ ತಂಡದ ಮೂಲಕ ಪರಿಶೀಲನೆ ನಡೆಸಿದರು. ಆದರೆ, ವಿಧಾನ ಪರಿಷತ್‌ ಸದಸ್ಯ ಅನಿಲ್‌ ಕುಮಾರ್‌ ಒಬ್ಬರನ್ನು ಹೊರತುಪಡಿಸಿ ಆ ಭಾಗದ ಪ್ರಮುಖ ಜನಪ್ರತಿನಿಧಿಗಳಾಗಲಿ ಅಥವಾ ಆ ನೀರಿನ ಬಗ್ಗೆ ಗುರುತರ ಆಕ್ಷೇಪ ಎತ್ತಿದ್ದ ನೀರಾವರಿ ಹೋರಾಟಗಾರರಾಲಿ ಜತೆಯಲ್ಲಿ ಇರಲಿಲ್ಲ.

ಲಕ್ಷ್ಮಿ ಸಾಗರ ಗ್ರಾಮಕ್ಕೆ ತೆರಳಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಅವರು, ತಮ್ಮೊಂದಿಗೆ ಕರೆದೊಯ್ದಿದ್ದ ಐಐಎಸ್ಸ್ಸಿ ಮತ್ತು ಇಹೆಚ್ಇಆರ್ ವಿಜ್ಞಾನಿಗಳ ಮೂಲಕ ಸ್ಥಳದಲ್ಲೇ ನೀರಿನ ಗುಣಮಟ್ಟದ ಪರಿಶೀಲನೆ ನಡೆಸಿ ಫಲಿತಾಂಶವನ್ನು ತೋರಿಸಿದರು. ಇದು ಕಾಟಾಚಾರದ ಶಾಸ್ತ್ರವಾಗಿತ್ತಷ್ಟೇ.

ಕಾಲುವೆಗಳ ಮೇಲೆ ಫೆನ್ಸಿಂಗ್ ಮತ್ತು ಪ್ರೊಟೇಕ್ಷನ್ ನಿರ್ಮಾಣ


ಊರಿನ ನಡುವೆ ರಭಸವಾಗಿ ಹರಿದು ಹೋಗುತ್ತಿರುವ ಕಾಲುವೆಗಳ ಮೇಲೆ ಕಾಲುಸೇತುವೆಗಳನ್ನು ನಿರ್ಮಾಣ ಮಾಡಬೇಕು ಹಾಗೂ ಕಾಲುವೆಗಳ ಅಕ್ಕಪಕ್ಕದಲ್ಲಿ ಗಿಡಮರಗಳು ಬೆಳೆಯದಂತೆ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಿದರು. ಇದೇ ವೇಳೆ, ಕಾಲುವೆಗೆ ಮಕ್ಕಳು ಮತ್ತು ಜಾನುವಾರುಗಳು ಬೀಳದಂತೆ ತಡೆಯುವ ನಿಟ್ಟಿನಲ್ಲಿ ಫೆನ್ಸಿಂಗ್ ನಿರ್ಮಿಸಲೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀರಿನ ಗುಣಮಟ್ಟದ ಬಗ್ಗೆ ಅನುಮಾನ ಬೇಡ

ಕೆ.ಸಿ ವ್ಯಾಲಿಯಲ್ಲಿ ಹರಿಯುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರು ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳದ ದೃಷ್ಟಿಯಿಂದ ಮಾತ್ರ ಹರಿಸಲಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕೂಡಾ ನೀರಿನ ಗುಣಮಟ್ಟದ ಬಗ್ಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ನೀರಿನ ಗುಣಮಟ್ಟದ ಬಗ್ಗೆ ಯಾವುದೇ ಅನುಮಾನ ಬೇಡ. ಆದರೆ, ಈ ನೀರನ್ನು ನೇರವಾಗಿ ಕುಡಿಯಲು ಹಾಗೂ ವ್ಯವಸಾಯಕ್ಕೆ ಬಳಸಬಾರದು ಎಂದು ಸಚಿವರು ಗ್ರಾಮಸ್ಥರಿಗೆ ಸೂಚಿಸಿದರು.

ಕೆ.ಸಿ ವ್ಯಾಲಿಯ ವ್ಯಾಪ್ತಿಗೆ ಇನ್ನೂ ಹೆಚ್ಚಿನ ಕೆರೆಗಳ ಸೇರ್ಪಡೆ


ಕೆ.ಸಿ ವ್ಯಾಲಿ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಕೆರೆಗಳನ್ನು ಸೇರ್ಪಡಿಸಬೇಕು ಎನ್ನುವುದು ಜನಪ್ರತಿನಿಧಿಗಳು ಹಾಗೂ ರೈತರ ಆಶಯವಾಗಿದೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಬೆಂಗಳೂರು ಜಲಮಂಡಳಿಯ ವತಿಯಿಂದ ಸಂಸ್ಕರಣಾ ಘಟಕದ ಉನ್ನತೀಕರಣ ವಾಗುತ್ತಿದ್ದು ಇದರ ನಂತರ ಹೆಚ್ಚಿನ ಕೆರೆಗಳಿಗೆ ನೀರನ್ನ ಹರಿಸಲಾಗುವುದು ಎಂದು ಹೇಳಿದರು.

Tags: Boserajuck. cknewsnowhn valleykarnatakakc valleyminister for minor irrigationwater
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ