• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಚಿಕ್ಕಬಳ್ಳಾಪುರ, ಕೋಲಾರ: ವಿಷನೀರಿನ 3ನೇ ಹಂತದ ಶುದ್ಧೀಕರಣ; ಸಣ್ಣ ನೀರಾವರಿ ಸಚಿವರ ಹೊಸ ಪಠಣ!!

cknewsnow desk by cknewsnow desk
October 1, 2023
in NATION, STATE
Reading Time: 2 mins read
0
ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

ಚಿಕ್ಕಬಳ್ಳಾಪುರದ ಅಮಾನಿ ಗೋಪಾಲಕೃಷ್ಣ ಕೆರೆಯ ದುಃಸ್ಥಿತಿ.

982
VIEWS
FacebookTwitterWhatsuplinkedinEmail

ಸಭೆ ನಡೆಸಿದ ಸಚಿವ ಭೋಸರಾಜು: ಲೋಕಸಭೆ ಚುನಾವಣೆ ನಂತರ ಹೊಸ ವರಸೆ; ಅನುಮಾನಗಳಿಗೆ ಎಡೆಮಾಡಿಟ್ಟ ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿ ನಡೆ

ಬೆಂಗಳೂರು/ಚಿಕ್ಕಬಳ್ಳಾಪುರ/ಕೋಲಾರ: ಕೆ.ಸಿ.ವ್ಯಾಲಿ. ಹೆಚ್‌.ಎನ್‌.ವ್ಯಾಲಿ ಹೆಸರಿನಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಿಗೆ ಬೆಂಗಳೂರಿನ ವಿಷಕಾರಿ ಕೊಳಚೆ ನೀರು ಹರಿಸಿ ಎರಡೂ ಜಿಲ್ಲೆಗಳ ಜಲಮೂಲಗಳ ಸರ್ವನಾಶಕ್ಕೆ ಕಾರಣವಾಗಿರುವ ರಾಜ್ಯ ಸರಕಾರ ಇದೀಗ ಹೊಸ ವರಸೆ ಶುರುವಿಟ್ಟುಕೊಂಡಿದೆ.

ಲೋಕಸಭೆ ಚುನಾವಣೆ ಇನ್ನು ಕೆಲ ತಿಂಗಳಷ್ಟೇ ಬಾಕಿ ಇರುವಂತೆಯೇ ಮೂರನೇ ಹಂತದ ಶುದ್ಧೀಕರಣದ ಬಗ್ಗೆ ಸರಕಾರ ರಾಗ ತೆಗೆಯುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಕೋಲಾರದ ಲಕ್ಷ್ಮೀಸಾಗರ ಗ್ರಾಮಕ್ಕೆ ಭೇಟಿ ನೀಡಿದ್ದ ಸಣ್ಣ ನೀರಾವರಿ ಸಚಿವ ಭೋಸರಾಜು ಅವರು, ವಿಜ್ಞಾನಿಗಳ ಸಮ್ಮುಖದಲ್ಲಿ ನೀರನ್ನು ಪರೀಕ್ಷೆ ಮಾಡಿಸುವ ನಾಟಕವಾಡಿ ನೀರು ಶುದ್ಧವಾಗಿದೆ, ಗುಣಮಟ್ಟದಿಂದ ಕೂಡಿದೆ ಎಂದು ಸರ್ಟಿಫಿಕೇಟ್‌ ನೀಡಿದ್ದರು.

ಕೋಲಾರದಲ್ಲಿ ಕೆ.ಸಿ ವ್ಯಾಲಿ ನೀರಿನ ಗುಣಮಟ್ಟ ಪರಿಶೀಲನೆ ಪ್ರಹಸನ

ಆದರೆ, ಬೆಂಗಳೂರಿನಲ್ಲಿಂದು ಸಭೆ ನಡೆಸಿರುವ ಸಚಿವರು, ಮೂರನೇ ಹಂತದ ಶುದ್ಧೀಕರಣದ ಬಗ್ಗೆ ಮಾತನಾಡಿ, ಈ ಬಗ್ಗೆ ಜಲಸಂನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಜತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ತಮ್ಮ ಭಾಗದ ಜಲಮೂಲಗಳನ್ನು ನಾಶ ಮಾಡುತ್ತಿರುವ ಕೆ.ಸಿ.ವ್ಯಾಲಿ ಮತ್ತು ಹೆಚ್‌.ಎನ್‌.ವ್ಯಾಲಿಗಳ ಮೂಲಕ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೊಳಚೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಎರಡೂ ಜಿಲ್ಲೆಗಳ ಜನರು ಒತ್ತಾಯ ಮಾಡುತ್ತಿದ್ದಾರೆ. ಈಗಾಗಲೇ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿರುವ, ಇನ್ನೂ ನೆನೆಗುದಿಯಲ್ಲೇ ಬಿದ್ದಿರುವ ಎತ್ತಿನಹೊಳೆ ಯೋಜನೆಯಿಂದ ನೀರು ಕೋಡಿ ಎಂದು ಜನ ಕೇಳುತ್ತಿದ್ದಾರೆ. ಆದರೆ, ಎತ್ತಿನಹೊಳೆಯಲ್ಲಿ ನೀರು ಸಿಗದು, ಬಯಲುಸೀಮೆಗೆ ಹನಿನೀರೂ ಸಿಗದು ಎಂದು ಈಗಾಗಲೇ ಕೇಂದ್ರೀಯ ಜಲ ಆಯೋಗ ಸ್ಪಷ್ಟ ಮಾತುಗಳಲ್ಲಿ ಹೇಳಿದೆ.

ಸುಖಾಮುಮ್ಮನೆ ಜನಪ್ರತಿನಿಧಿಗಳನ್ನು ಕೂರಿಸಿಕೊಂಡು ಸಭೆಗಳನ್ನು ನಡೆಸುತ್ತಿರುವ ಸಣ್ಣ ನೀರಾವರಿ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ ಎಂದು ಎರಡೂ ಜಿಲ್ಲೆಗಳ ಜನರು ಪ್ರಶ್ನೆ ಮಾಡುತ್ತಿದ್ದಾರೆ.

ಸಣ್ಣ ನೀರಾವರಿ ಸಚಿವ ಭೋಸರಾಜು ಅವರ ಸಭೆ.

ಸಭೆಯಲ್ಲಿ ಸಚಿವರು ಹೇಳಿದ ಮಾತುಗಳು ಹೀಗಿವೆ;

ಕೆ.ಸಿ.ವ್ಯಾಲಿ ಏತ ನೀರಾವರಿ ಯೋಜನೆ ಹಾಗೂ ಹೆಚ್.ಎನ್ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಬೆಂಗಳೂರು ನಗರದ ತ್ಯಾಜ್ಯ ನೀರನ್ನು ಎರಡನೇ ಹಂತದ ಸಂಸ್ಕರಣೆ ಮಾಡಿ ಕೆರೆಗಳಿಗೆ ಹರಿಸಲಾಗುತ್ತಿದೆ. ನೀರಿನ ಸಂಸ್ಕರಣೆಯ ಕಾರ್ಯವನ್ನು ಬೆಂಗಳೂರು ಜಲಮಂಡಳಿ ಮಾಡುತ್ತಿದೆ. ಸಣ್ಣ ನೀರಾವರಿ ಇಲಾಖೆ ಈ ಸಂಸ್ಕರಿಸಿದ ನೀರನ್ನು ಯೋಜನೆ ವ್ಯಾಪ್ತಿಯ ಕೆರೆಗಳಿಗೆ ಹರಿಸುವ ಕಾರ್ಯ ನಿರ್ವಹಿಸುತ್ತಿದೆ. ಈ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಬೇಕು ಎನ್ನುವುದು ಆ ಭಾಗದ ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ.

ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯ ಉಸ್ತುವಾರಿಗಳಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಯಲ್ಲಿ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜನಪ್ರತಿನಿಧಿಗಳ ಸಭೆಯನ್ನು ಆಯೋಜಿಸುವಂತೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಸಲಹೆ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಣ್ಣ ನೀರಾವರಿ ಸಚಿವರು, ಸಭೆಯನ್ನು ಆಯೋಜಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಣ್ಣ ನೀರಾವರಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೆ.ಸಿ ವ್ಯಾಲಿ, ಹೆಚ್. ಎನ್ ವ್ಯಾಲಿಯಲ್ಲಿ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ಹರಿಸಲಾಗುತ್ತಿದೆ. ಈ ನೀರಿನ ಮೂರನೇ ಹಂತದ ಸಂಸ್ಕರಣೆ ಆ ಭಾಗದ ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಲಹೆಯ ಹಿನ್ನಲೆಯಲ್ಲಿ, ಸಭೆಯನ್ನು ಆಯೋಜಿಸುವುದಾಗಿ ಸಚಿವ ಎನ್.ಎಸ್.ಭೋಸರಾಜು ಭರವಸೆ ನೀಡಿದ್ದಾರೆ.

ಹೆಚ್.ಎನ್. ವ್ಯಾಲಿ ಏತ ನೀರಾವರಿ ಯೋಜನೆಯ ಅಡಿಯಲ್ಲಿ ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 65 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಪ್ರಗತಿಯಲ್ಲಿದೆ ಎಂದಿರುವ ಅವರು; ಬಾಗೇಪಲ್ಲಿ ಕ್ಷೇತ್ರದಲ್ಲಿ ಶುದ್ಧವಾಗಿರುವ ಜಲಮೂಲಗಳನ್ನು ಹಾಳು ಮಾಡುವ ಹುನ್ನಾರಕ್ಕೆ ಪರಿಹಾರ ಇದೆಯಾ? ಎನ್ನುವ ಬಗ್ಗೆ ಹೇಳಲಿಲ್ಲ.

ಬಾಗೇಪಲ್ಲಿ ಶಾಸಕರ ಅತ್ಯುತ್ಸಾಹ

ಚುನಾವಣೆಗೆ ಮುನ್ನ ಅತ್ಯುತ್ಸಾಹದಿಂದ ಬಾಗೇಪಲ್ಲಿ ಕ್ಷೇತ್ರಕ್ಕೆ ಬೆಂಗಳೂರು ಕೊಳಚೆ ನೀರು ಹರಿಸಲು ತರಾತುರಿಯಲ್ಲಿ ಹೆಜ್ಜೆ ಇರಿಸಿದ್ದ ಕ್ಷೇತ್ರದ ಶಾಸಕ ಎಸ್.‌ಎನ್.ಸುಬ್ಬಾರೆಡ್ಡಿ ಕೂಡ ಕೋಲಾರ, ಚಿಕ್ಕಬಳ್ಳಾಪುರ ಕೆರೆಗಳ ದುಃಸ್ಥಿತಿ ಬಗ್ಗೆ ಚಕಾರ ಎತ್ತುತ್ತಿಲ್ಲ. ಈಗಾಗಲೇ ಮಿಟ್ಟೇಮರಿ ಸಮೀಪದ ಹಲವಾರು ಕೆರೆಗಳಿಗೆ ಬೆಂಗಳೂರಿನ ಗಬ್ಬು ನೀರು ಹರಿಸಲು ದೊಡ್ಡ ದೊಡ್ಡ ಪೈಪುಗಳನ್ನು ತಂದು ಹಾಕಿದ್ದಾರೆ.

ಎಸ್.‌ಎನ್.ಸುಬ್ಬಾರೆಡ್ಡಿ

ಚಿಕ್ಕಬಳ್ಳಾಪುರದ ಕಂದವಾರ ಕೆರೆ, ಅವರು ಬಾಗೇಪಲ್ಲಿಗೆ ಸಾಗುವಾಗ ಹೆದ್ದಾರಿ ಪಕ್ಕದಲ್ಲಿಯೇ ಕಣ್ಣಿಗೆ ರಾಚುವ ಅಮಾನಿ ಗೋಪಾಲಕೃಷ್ಣ ಕೆರೆಯ ದುಸ್ಥಿತಿ ಬಾಗೇಪಲ್ಲಿ ಶಾಸಕರಿಗೆ ಕಾಣದಿರುವುದು ಅಚ್ಚರಿಯ ಸಂಗತಿಯೇ ಸರಿ. ಬೆಂಗಳೂರಿನ ಕೊಳಚೆ ನೀರಿನಿಂದ ಎರಡೂ ಜಿಲ್ಲೆಗಳ ಕೆರೆಗಳು ಸರ್ವನಾಶವಾಗಿ ಆ ನೀರಿನಲ್ಲಿ ಯುರೇನಿಯಂ ಅಂಶ ಪತ್ತೆ ಆಗಿದ್ದರೆ, ಬಾಗೇಪಲ್ಲಿ ಶಾಸಕರು ಇದೇ ಕೊಳಚೆ ನೀರನ್ನು ತಮ್ಮ ಕ್ಷೇತ್ರಕ್ಕೂ ಹರಿಸಲು ಅತ್ಯುತ್ಸಾಹ ತೋರಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಇದೆಲ್ಲ ಗೊತ್ತಿದ್ದರೂ, ಕೊಳಚೆ ನೀರಿನ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ನಿರ್ಲಕ್ಷ್ಯ ದೋರಣೆ ತಾಳಿರುವ ಸಣ್ಣ ನೀರಾವರಿ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಏತ ನೀರಾವರಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೊನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ. 38 ಕೆರೆಗಳಿಗೆ ನೀರು ತುಂಬಿಸುವ ಈ ಯೋಜನೆಯ ಮೊದಲ ಹಂತ ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬವಾಗುತ್ತಿದೆ. ತೀವ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ!

ತುಮಕೂರಿಗೂ ಇದೇ ನೀರು

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಎಂ.ಎಲ್.ಡಿ ನೀರನ್ನು ಮೊದಲನೇ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಟೆಂಡರ್ ಆಗಿದೆ. ಸರ್ವೇ ಕಾರ್ಯ ಮುಗಿದಿದ್ದು, ವಿನ್ಯಾಸ ತಯಾರಿಕಾ ಕಾರ್ಯ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಪ್ರಾರಂಭಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರು ಈ ನೀರಿನ ಹೊಡೆತಕ್ಕೆ ಸಿಕ್ಕಿದ್ದು, ತುಮಕೂರು ಜಿಲ್ಲೆಯ ಜನರೂ ಅಪಾಯಕ್ಕೆ ಸನಿಹದಲ್ಲಿ ಇದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?
Tags: Bengaluruchikkaballapurckhn valleykc valleykolarminister bhosarajuminor irrigationnewssewage water
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಾಸಕರ ಮನೆ ಗೋಡೆ ಕೆಡವಿದ ಅಧಿಕಾರಿಗಳು!

ಶಾಸಕರ ಮನೆ ಗೋಡೆ ಕೆಡವಿದ ಅಧಿಕಾರಿಗಳು!

Leave a Reply Cancel reply

Your email address will not be published. Required fields are marked *

Recommended

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಅಥವಾ ಶಾಲುಗಳನ್ನು ಧರಿಸುವಂತಿಲ್ಲ: ಹೈಕೋರ್ಟ್

4 years ago
ನಂದಿಬೆಟ್ಟದಲ್ಲಿ ಆಗಿದ್ದು ಮಿನಿ ಮೇಘಸ್ಫೋಟ!

ನಂದಿಬೆಟ್ಟದಲ್ಲಿ ಆಗಿದ್ದು ಮಿನಿ ಮೇಘಸ್ಫೋಟ!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ