• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಜಾತಿ ಗಣತಿಯಿಂದ ಜಾತಿ ದ್ವೇಷ

cknewsnow desk by cknewsnow desk
October 8, 2023
in NATION, STATE
Reading Time: 1 min read
0
ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ
931
VIEWS
FacebookTwitterWhatsuplinkedinEmail

ಕಾಂತರಾಜು ವರದಿ ಬಗ್ಗೆ ಸಿದ್ದರಾಮಯ್ಯ ಒಮ್ಮೆಯೂ ಚರ್ಚೆ ಮಾಡಿಲ್ಲ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಮನಗರ: ಕಾಂಗ್ರೆಸ್ ನವರು ಒಂದು ಕಡೆ ಜಾತ್ಯತೀತ ಎನ್ನುತ್ತಾರೆ, ಇನ್ನೊಂದು ಕಡೆ ಜಾತಿ ಗಣತಿ ವರದಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಡದಿಯ ತಮ್ಮ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರಕಾರವು ರಾಜಕೀಯ ಮಾಡುತ್ತಿದೆ ಎಂದು ಕಿಡಿ ಕಾರಿದರು.

ಕಾಂತರಾಜು ಎಂಬುವವರಿಂದ ವರದಿ ಕೊಡಿಸಿದಿವಿ. ಕುಮಾರಸ್ವಾಮಿ ಅವರು ಒಪ್ಪಲಿಲ್ಲ ಎಂದು ಹಾಲಿ ಮುಖ್ಯಮಂತ್ರಿ ಹೇಳುತ್ತಾರೆ. ಆದರೆ, ಸದಸ್ಯ ಕಾರ್ಯದರ್ಶಿ ಸಹಿ ಇಲ್ಲದೆ ಆ ವರದಿಯನ್ನು ಸ್ವೀಕಾರ ಮಾಡುವುದು ಹೇಗೆ? ಎನ್ನುವ ಅರಿವು ಸಿಎಂ ಆದವರಿಗೆ ಇಲ್ಲ ಎಂದು ಅವರು ತಿರುಗೇಟು ನೀಡಿದರು.

ಮಾತೆತ್ತಿದರೆ ನನ್ನ ಕಡೆ ಬೆರಳು ತೋರಿಸುವ ಅವರು, ಆ ಸಂದರ್ಭದಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಒಮ್ಮೆಯಾದರೂ ಕಾಂತರಾಜು ವರದಿ ಬಗ್ಗೆ ಚರ್ಚೆ ಮಾಡಿದರಾ? ಇಲ್ಲ. ಪ್ರತಿ ಸಭೆಯಲ್ಲಿಯೂ ಟವೆಲ್ ಕೊಡವಿ ಎದ್ದು ಹೋಗುತ್ತಿದ್ದರು. ಒಮ್ಮೆಯೂ ಈ ಬಗ್ಗೆ ಸಿಎಂ ಆಗಿದ್ದ ನನ್ನ ಬಳಿ 14 ತಿಂಗಳಲ್ಲಿ ಒಮ್ಮೆಯೂ ಚರ್ಚೆ ನಡೆಸಲೇ ಇಲ್ಲ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಜಾತಿಗಣತಿ ಮುಖ್ಯವಲ್ಲ, ಎಲ್ಲ ಜಾತಿಯಲ್ಲಿರುವ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಪಾದಿಸಿದ ಅವರು; ಜಾತಿ ಎನ್ನುವ ಪದ ತೆಗೆದುಹಾಕಿ ಎಂದು ಹೇಳುತ್ತಾರೆ, ಜಾತ್ಯತೀತ ಸಮಾಜ ನಿರ್ಮಾಣ ಮಾಡೋಣ ಎಂದು ಭಾಷಣ ಬಿಗಿಯುತ್ತಾರೆ. ಅದರ ಅರ್ಥವೇನು? ಜಾತ್ಯತೀತ ಅಂದರೆ ಜಾತಿಯ ವ್ಯವಸ್ಥೆ ತೆಗೆದುಹಾಕಬೇಕು ಎಂದಲ್ಲವೇ? ಆದರೆ, ಕಾಂಗ್ರೆಸ್ ಪಕ್ಷಕ್ಕೆ ಜಾತಿ ವ್ಯವಸ್ಥೆ ಎನ್ನುವುದು ವೋಟ್ ಬ್ಯಾಂಕ್ ರಾಜಕೀಯಕ್ಕೆ ಇರುವ ಸಾಧನ ಎಂದು ಟೀಕಾಪ್ರಹಾರ ನಡೆಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಜಾತಿ ರಾಜಕೀಯ ಮಾಡಿಕೊಂಡೇ ಬರುತ್ತಿದೆ. ಇವರು ಜಾತಿಗಣತಿ ಮಾಡಿ ಏನು ಸಾಧನೆ ಮಾಡುತ್ತಾರೆ? ಅದರ ಉಪಯೋಗ ಏನು? ಸಮಾಜ ಹೊಡೆಯಲು ಜಾತಿ ಗಣತಿ ಮಾಡುತ್ತೀರೋ ಅಥವಾ ಜಾತಿ ಬದಿಗಿಟ್ಟು ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುತ್ತೀರೋ? ಮೊದಲು ಜನರಿಗೆ ಅದನ್ನು ತಿಳಿಸಿ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷದ ರಾಮನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು.

Tags: caste censusckcknewsnowCongresshd kumaraswamyjdskarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸರಕಾರದ ಪತನ ಖಚಿತ; ಅವರು ಮತ್ತೆ ತಿಹಾರ್ ಜೈಲಿಗೆ ಗ್ಯಾರಂಟಿ!

ಸರಕಾರದ ಪತನ ಖಚಿತ; ಅವರು ಮತ್ತೆ ತಿಹಾರ್ ಜೈಲಿಗೆ ಗ್ಯಾರಂಟಿ!

Leave a Reply Cancel reply

Your email address will not be published. Required fields are marked *

Recommended

ಸಿಂಗಾಪುರದ ಬದಲಿಗೆ ಚರಂಡಿಯಾದ ಚಿಕ್ಕಬಳ್ಳಾಪುರ!

ಸಿಂಗಾಪುರದ ಬದಲಿಗೆ ಚರಂಡಿಯಾದ ಚಿಕ್ಕಬಳ್ಳಾಪುರ!

4 years ago
ಒಬ್ಬ ಯಡಿಯೂರಪ್ಪ ಅಲ್ಲ, ನೂರು ಜನ ಯಡಿಯೂರಪ್ಪ ಬಂದರೂ ಬಿಜೆಪಿ ಉಳಿಸಲು ಸಾಧ್ಯವಿಲ್ಲ: ಟಗರು ಗುಟುರು

ಒಬ್ಬ ಯಡಿಯೂರಪ್ಪ ಅಲ್ಲ, ನೂರು ಜನ ಯಡಿಯೂರಪ್ಪ ಬಂದರೂ ಬಿಜೆಪಿ ಉಳಿಸಲು ಸಾಧ್ಯವಿಲ್ಲ: ಟಗರು ಗುಟುರು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ