• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಲೋಡ್‌ ಶೆಡ್ಡಿಂಗ್ ಒಪ್ಪಿಕೊಂಡ ಸರಕಾರ

cknewsnow desk by cknewsnow desk
October 12, 2023
in STATE
Reading Time: 1 min read
0
ಲೋಡ್‌ ಶೆಡ್ಡಿಂಗ್ ಒಪ್ಪಿಕೊಂಡ ಸರಕಾರ
913
VIEWS
FacebookTwitterWhatsuplinkedinEmail

ರಾಜ್ಯದ ವಾಸ್ತವ ಚಿತ್ರಣ ಬಿಡಿಸಿಟ್ಟ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ತಾರಕಕ್ಕೇರಿದೆ. ಅದು ಜಟಿಲ ಸಮಸ್ಯೆಯಾಗಿ ಪರಿಣಮಿಸಿದ್ದು, ಸರಕಾರಕ್ಕೆ ಇನ್ನಿಲ್ಲದ ತಲೆನೋವಾಗಿ ಪರಿಣಮಿಸಿದೆ.

ವಿದ್ಯುತ್‌ ಕುರಿತ ರಾಜ್ಯದ ವಾಸ್ತವ ಚಿತ್ರಣವನ್ನು ಬಿಡಿಸಿಟ್ಟಿರುವ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ, ಮುಂಗಾರು ಮಳೆ ವೈಫಲ್ಯದಿಂದ ರಾಜ್ಯ ಒಂದೆಡೆ ಬರಕ್ಕೆ ಸಿಲುಕಿದ್ದರೆ, ಮತ್ತೊಂದೆಡೆ ವಿದ್ಯುತ್ ಉತ್ಪಾದನೆ ಕುಂಠಿತಗೊಂಡು ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದಿದ್ದಾರೆ.

ಸಮಸ್ಯೆ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಲೋಡ್‌ ಶೆಡ್ಡಿಂಗ್ ಉಂಟಾಗುತ್ತಿದೆ. ನಮ್ಮಲ್ಲಿರುವ ವಿದ್ಯುತ್ ಉತ್ಪಾದನೆಯನ್ನು ಇಡೀ ರಾಜ್ಯಕ್ಕೆ ಹಂಚುವ ಕಾರ್ಯ ನಡೆದಿದೆ. ಇದರಿಂದ ಕೆಲವೆಡೆ ವಿದ್ಯುತ್ ಅಭಾವ ಸೃಷ್ಟಿಯಾಗುತ್ತಿದೆ. ಜಲಾಶಯಗಳಲ್ಲಿ ನೀರಿನ ಕೊರತೆ, ಕೊಳವೆ ಬಾವಿಗಳಲ್ಲಿ ಅಂರ್ತಜಲ ಕುಸಿಯುತ್ತಿದೆ. ರೈತರು ತಮ್ಮ ಬೆಳೆ ಉಳಿಸಿಕೊಳ್ಳು ಕೃಷಿ ಪಂಪುಸೆಟ್ಟುಗಳಿಗೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸಮಸ್ಯೆಯ ಗಂಭೀರತೆ ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯುತ್ ಬಿಕ್ಕಟ್ಟು ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದಾರೆ. ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರು ಕೇಂದ್ರ ಸಚಿವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಲ್ಲಿದ್ದಲು ಪೂರೈಕೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ.

ಚಲುವರಾಯಸ್ವಾಮಿ, ಕೃಷಿ ಸಚಿವ

ಹೆಚ್ಚುವರಿ ವಿದ್ಯುತ್ ಹೊಂದಿರುವ ರಾಜ್ಯಗಳಿಂದ ಖರೀದಿಗೆ ಮಾತುಕತೆ ನಡೆದಿದೆ. ಪೂರ್ಣವಾಗಿ ಅಲ್ಲದಿದ್ದರೂ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆದಿದೆ ಎಂದರು.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಳೆಯಾಗಿದ್ದರೆ ವಿದ್ಯುತ್ ಸಮಸ್ಯೆ ಆಗುತ್ತಿರಲಿಲ್ಲ. ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ನಾವು ಈ ಸ್ಥಿತಿಗೆ ಬಂದಿದ್ದೆವೆ ಎಂದಿದ್ದಾರೆ ಅವರು.

ಸಿದ್ದರಾಮಯ್ಯ ಅವರ ಹಿಂದಿನ ಆಡಳಿತದಲ್ಲೂ ವಿದ್ಯುತ್ ಸಮಸ್ಯೆ ಎದುರಾಗಿತ್ತು. ಅಂದು 10-13 ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಲಾಗಿತ್ತು.
ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಲೋಡ್ಶೆಡ್ಡಿಂಗ್ ಜಾರಿ ಮಾಡುವ ಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ಬೀಕರ ಬರಗಾಲ ಎದುರಾಗಿದೆ. ನಮ್ಮ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ. ಬರಗಾಲ ಎದುರಾದಾಗ ವಿದ್ಯುತ್ ಉತ್ಪಾದನೆ ಕುಸಿಯುತ್ತದೆ. ಅಲ್ಲದೆ, ಪ್ರತಿ ವರ್ಷ ಶೇ.10-15ರಷ್ಟು ಬೇಡಿಕೆ ಹೆಚ್ಚುತ್ತದೆ ಎಂದು ಮಾಹಿತಿ ನೀಡಿದ್ದಾರೆ ಕೃಷಿ ಸಚಿವರು.

ಇದನ್ನು ಗಮನದಲ್ಲಿಟ್ಟುಕೊಂಡೇ ಹತ್ತು ಸಾವಿರ ಎಕರೆಯಲ್ಲಿ ಸೌರ ಮತ್ತು ಪವನಶಕ್ತಿ ವಿದ್ಯುತ್ ಉತ್ಪಾದನೆಗೆ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸುತ್ತಿದೆ ಎಂದರು.
ರೈತರಿಂದಲೂ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿದೆ. ಕೃಷಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಈಗಾಗಲೇ ನಮ್ಮ ಸಚಿವರು ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು ಅವರು.

ಮತ್ತೊಂದೆಡೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೈಗಾರಿಕಾ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಪ್ರಿಯಾಂಕ ಖರ್ಗೆ ಅವರು, ರಾಜ್ಯದಲ್ಲಿ ಎದುರಾಗಿರುವ ವಿದ್ಯುತ್ ಅಭಾವ ಕೈಗಾರಿಕಾ ಉತ್ಪಾದನೆಗಳ ಮೇಲೆ ಪರಿಣಾಮ ಬೀರದು ಎಂದಿದ್ದಾರೆ ಸಚಿವರು.

ಬೃಹತ್ ಕೈಗಾರಿಕೆಗಳು ತಮ್ಮ ಉದ್ದಿಮೆಗೆ ಅಗತ್ಯವಾದ ವಿದ್ಯುತ್ ಅನ್ನು ತಾವೇ ಉತ್ಪಾದಿಸಿಕೊಂಡು ಹೆಚ್ಚುವರಿ ವಿದ್ಯುತ್ ಅನ್ನು ವಿದ್ಯುತ್ ಕಂಪನಿಗಳಿಗೆ ಮಾರುತ್ತಿವೆ.
ಹೊಸದಾಗಿ ರಾಜ್ಯದಲ್ಲಿ ಬೃಹತ್ ಉದ್ದಿಮೆಗಳ ಸ್ಥಾಪನೆಗೆ ಮುಂದಾಗುತ್ತಿರುವ ಹೂಡಿಕೆದಾರರಿಗೆ ವಿದ್ಯುತ್ ಸಮಸ್ಯೆ ಉಂಟಾಗುವುದಿಲ್ಲ ಎಂದು ಅವರು ಅಭಯ ನೀಡಿದರು.

Tags: ckcknewsnowkarnatakaload sheddingpower cuts in karnatakapower problem
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

ಇಂದು ತಾಯಿ ಚಾಮುಂಡೇಶ್ವರಿ ದರ್ಶನ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ, ತಮಿಳುನಾಡು ಜಲ ಸಂಕಷ್ಟಕ್ಕೆ ಮೇಕೆದಾಟು ಒಂದೇ ಪರಿಹಾರ ಎಂದ ಸಿಎಂ

ಕರ್ನಾಟಕ, ತಮಿಳುನಾಡು ಜಲ ಸಂಕಷ್ಟಕ್ಕೆ ಮೇಕೆದಾಟು ಒಂದೇ ಪರಿಹಾರ ಎಂದ ಸಿಎಂ

3 years ago
ಕೋವಿಡ್ ಸೋಂಕು ಕಂಟ್ರೋಲ್‌ಗೆ ಬಂದ ನಂತರವೇ SSLC ಪರೀಕ್ಷೆ

ಕೋವಿಡ್ ಸೋಂಕು ಕಂಟ್ರೋಲ್‌ಗೆ ಬಂದ ನಂತರವೇ SSLC ಪರೀಕ್ಷೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ