• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ತಿರುಗಿಬಿದ್ದ ಒಕ್ಕಲಿಗರು

cknewsnow desk by cknewsnow desk
October 14, 2023
in STATE
Reading Time: 1 min read
0
ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ತಿರುಗಿಬಿದ್ದ ಒಕ್ಕಲಿಗರು
1k
VIEWS
FacebookTwitterWhatsuplinkedinEmail

ಭಗವಾನ್‌ ಮನೆ ಮುಂದೆ ಭಾರೀ ಪ್ರತಿಭಟನೆ

ಮೈಸೂರು: ಸದಾ ಒಂದಲ್ಲಾ ಒಂದು ವಿವಾದಕ್ಕೆ ಸಿಕ್ಕಿ ಸುದ್ದಿಯಾಗುವ ವಿಚಾರವಾದಿ ಪ್ರೊ.ಕೆ.ಎಸ್. ಭಗವಾನ್ ಅವರು ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದು, ಒಕ್ಕಲಿಗರು ಸಂಸ್ಕೃತಿ ಹೀನರು ಎಂದ ಅವರ ವಿರುದ್ಧ ಒಕ್ಕಲಿಗ ಸಮುದಾಯ ಬೀದಿಗೆ ಇಳಿದಿದೆ.

ರಾಜ್ಯದ ಒಕ್ಕಲಿಗ ಮುಖಂಡರು ಹಾಗೂ ಒಕ್ಕಲಿಗರ ಸಂಘ ಭಗವಾನ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದೆ.

ಇನ್ನೊಂದೆಡೆ, ಮೈಸೂರಿನಲ್ಲಿಂದು ಒಕ್ಕಲಿಗರು ಬೃಹತ್‌ ಪ್ರತಿಭಟನೆ ನಡೆಸಿ, ಭಗವಾನ್‌ ಮನೆಗೆ ನುಗ್ಗಲು ಯತ್ನಿಸಿದರು. ಮೈಸೂರಿನ ಕುವೆಂಪುನಗರದಲ್ಲಿರುವ ಭಗವಾನ್ ಮನೆಯ ಮುಂದೆ ಜಮಾಯಿಸಿದ ಒಕ್ಕಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರೊ.ಕೆ.ಎಸ್.ಭಗವಾನ್

ಭಗವಾನ್ ಯಾವ ಸಮುದಾಯಕ್ಕೆ ಹುಟ್ಟಿರುವುದು ಎಂಬುದನ್ನು ಹೇಳಲಿ‌ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮುಂಡರು, ಕೂಡಲೇ ಭಗವಾನ್‌ ಅವರನ್ನು ಬಂಧಿಸಬೇಕು ಎಂದು ಆಗ್ರಹಪಡಿಸಿದರು.

ಭಗವಾನ್‌ ಅನಗತ್ಯವಾಗಿ ಕುವೆಂಪು ಅವರನ್ನು ಎಳೆದು ತಂದು ಒಕ್ಕಲಿಗ ಸಮುದಾಯವನ್ನು ನಿಂದಿಸಿದ್ದಾರೆ. ನಮಗೆ ಸಂಸ್ಕೃತಿ ಇಲ್ಲಾ ಎಂದಿದ್ದಾರೆ, ಭಗವಾನ್ ಅವರಿಗೆ ಸಂಸ್ಕೃತಿ ಇದೆಯಾ? ಅವರೇ ಬಂದು ಸಂಸ್ಕೃತಿ ಪಾಠ ಹೇಳಲಿ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಭಗವಾನ್ ನಿವಾಸದ ಮುಂದೆ ಧರಣಿ ಕುಳಿತ ಪ್ರತಿಭಟನಾಕಾರರನು ಪೋಲೀಸರು ತಡೆದರು. ಆದರೆ ಪ್ರತಿಭಟನಾ ನಿರತರು ರಸ್ತೆಯಲ್ಲೇ ಕುಳಿತು ಭಗವಾನ್ ಗಡಿಪಾರು ಮಾಡುವಂತೆ ಆಗ್ರಹಿಸಿದರು. ಜತೆಗೆ ಭಗವಾನ್ ನಿವಾಸಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಅಡ್ಡಗಟ್ಟಿದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಗಿರೀಶ್ ಎಂಬುವರ ಮುಖಕ್ಕೆ ಪೆಟ್ಟು ಬಿದ್ದು ರಕ್ತ ಸುರಿದಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪರಿಸ್ಥಿತಿ ಬಿಗಡಾಯಿಸುತ್ತಿರುವುದನ್ನು ಅರಿತು ವಶಕ್ಕೆ ಪಡೆದಿದ್ದ ಎಲ್ಲರನ್ನೂ ಪೊಲೀಸ್ ವಾಹನದಿಂದ ಕೆಳಗೆ‌‌ ಇಳಿಸಲಾಯಿತು. ನಂತರ ರಸ್ತೆ ಮಧ್ಯೆ ಕುಳಿತು ನೂರಾರು ಮಂದಿ ಪ್ರತಿಭಟನೆ ಮುಂದುವರಿಸಿದರು. ಈ ನಡುವೆ ಪ್ರೊ.ಕೆ.ಎಸ್.ಭಗವಾನ್ ಮನೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ‌

ಶುಕ್ರವಾರ ಮಹಿಷ ಉತ್ಸವ ಕಾರ್ಯಕ್ರಮದ‌‌ ವೇಳೆ ಭಾಷಣ ಮಾಡಿದಾಗ ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಹೇಳಿ, ಬಳಿಕ ಇದನ್ನು ಹೇಳಿದ್ದು ಕುವೆಂಪು ಅವರು ನಾನು ಹೇಳುತ್ತಿರುವುದಲ್ಲ ಎಂದಿದ್ದರು. ಭಗವಾನ್ ಅವರ ಹೇಳಿಗೆ ಕಿಡಿ ಹೊತ್ತಿಸಿದ್ದು,ಅಹಿತಕರ ಘಟನೆ ನಡೆಯದಂತೆ ಸರ್ಪಗಾವಲು ಹಾಕಲಾಗಿದ್ದು
ಮನೆಯ ಪ್ರವೇಶ ದ್ವಾರದವರೆಗೂ ಬ್ಯಾರಿಕೇಡ್ ಗಳನ್ನ ಅಳವಡಿಸಲಾಗಿದೆ ಅಲ್ಲದೆ ರಾಜ್ಯ ಮೀಸಲು ಪಡೆ ಪೊಲೀಸರನ್ನೂ ನಿಯೋಜಿಸಲಾಗಿದೆ.

ಭಗವಾನ್‌ ಅರೆ ಹುಚ್ಚ

ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಹೇಳಿಕೆ ನೀಡಿರುವ ಭಗವಾನ್‌ ಅರೆ ಹುಚ್ಚ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಟೀಕಿಸಿದರು.

ಪದೇ ಪದೆ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದ ಶಾಂತಿಯನ್ನು ಕದಡುತ್ತಿದ್ದಾರೆ. ಅವರು ವಿವಾದಾಸ್ಪದ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಅವರು ಮೊದಲು ತಮ್ಮ ಹೇಳಿಕೆ ಹಿಂಪಡೆದು ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯ ಮಾಡಿದರು.

ಪ್ರೊ.ಭಗವಾನ್ ಸ್ವಲ್ಪ ಮೆಂಟಲ್ ಆಗಿದ್ದಾರೆ. ಆದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಬೇಕು. ಅವರು ಕೂಡ ಒಳ್ಳೆಯ ಕುಟುಂಬದಿಂದ ಬಂದವರು. ಯಾರನ್ನೋ ಮೆಚ್ಚಿಸಲು ಈ ರೀತಿಯಾಗಿ ಮಾತನಾಡುತ್ತಾರೆ. ಅವರ ಹೇಳಿಕೆಯನ್ನು ತೀವ್ರವಾಗಿ ನಾನು ಖಂಡಿಸುತ್ತೇನೆ. ಯಾವುದೇ ಸಮುದಾಯದ ಬಗ್ಗೆ ಯಾರು ಕೂಡ ವಿವಾದಾತ್ಮಕ ಹೇಳಿಕೆಯನ್ನು ನೀಡಬಾರದು ಎಂದು ಅವರು ಜಿ.ಟಿ.ದೇವೇಗೌಡರು ಹೇಳಿದ್ದಾರೆ.

ಭಗವಾನ್ ಬಂಧನಕ್ಕೆ ಆಗ್ರಹ

ಭಗವಾನ್‌ ಹೇಳಿಕೆಯನ್ನು ಮಾಜಿ ಡಿಸಿಎಂ ಡಾ.ಸಿಎನ್ ಅಶ್ವಥ್ ನಾರಾಯಣ ಖಂಡಿಸಿದ್ದಾರೆ.

ವಿಚಾರವಾದಿ ಭಗವಾನ್ ಏನನ್ನು ಹೇಳಲು ಪ್ರಯತ್ನ ಮಾಡುತ್ತಿದ್ದಾರೆ ಅಂತಾ ಅವರೇ ಹೇಳಬೇಕು. ಹಿಂದೂ ಧರ್ಮದ ವಿರುದ್ಧ ಪ್ರಚಾರ ಮಾಡಬೇಕಾ ಏನು ಅಂತಾ ಸ್ಪಷ್ಟಪಡಿಸಬೇಕು. ಮಹಿಷ ಏನು ಬೇರೆ ಸಂಸ್ಕೃತಿಯಾ? ಹಿಂದೂ ಸಂಸ್ಕೃತಿಯ ಒಂದು ಭಾಗ ಆಗಿರುವಂತಹದ್ದು. ಮಹಿಷ ದುಷ್ಟ ಶಕ್ತಿಯನ್ನು ಪೂಜಿಸುತ್ತೇವೆ ಎಂಬ ಮನಸ್ಥಿತಿ ಇರುವ ಭಗವಾನ್ ಅವರನ್ನು ಕೂಡಲೇ ಸರ್ಕಾರ ಬಂಧಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.

Tags: ckcknewsnowKS BhagwanMysuruMysuru Mahisha UtsavRationalistunculturedVokkaligas
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಂತಾಮಣಿ ನಗರಸಭೆ ಸದಸ್ಯ ಅಗ್ರಹಾರ ಮುರಳಿ ಮೇಲೆ ದಾಳಿ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಚಿಂತಾಮಣಿ ನಗರಸಭೆ ಸದಸ್ಯ ಅಗ್ರಹಾರ ಮುರಳಿ ಮೇಲೆ ದಾಳಿ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

Leave a Reply Cancel reply

Your email address will not be published. Required fields are marked *

Recommended

ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಮೇ 10-24: 14 ದಿನ ಕರ್ನಾಟಕ ಕಂಪ್ಲೀಟ್‌ ಲಾಕ್‌;‌ ಅಂತಾರಾಜ್ಯ & ಅಂತರ್‌ ಜಿಲ್ಲಾ ಗಡಿಗಳು ಸಂಪೂರ್ಣ ಬಂದ್‌, ಹಾಲು-ತರಕಾರಿ ತರಲಿಕ್ಕೂ ಬೈಕ್ ಬಳಸುವಂತಿಲ್ಲ!!

5 years ago
ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ

55 ಲಕ್ಷ ಬಡ ಕುಟುಂಬಗಳಿಗೆ ತಲಾ 25,000 ರೂ. ಧನ ಸಹಾಯಕ್ಕೆ ಎಚ್‌ಡಿಕೆ ಆಗ್ರಹ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ