• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

cknewsnow desk by cknewsnow desk
October 25, 2023
in POLITICS, STATE
Reading Time: 1 min read
0
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್
942
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಸಿದ್ದರಾಮಯ್ಯ‌ ಟೀಕೆ

ಮೈಸೂರು: ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಹೆಚ್.ಡಿ.ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಮುಖ್ಯ ಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೆ ಎಂದರು.

ತಪ್ಪುದಾರಿಗೆ ಎಳೆಯುತ್ತಿದ್ದಾರೆ

ಕುಮಾರಸ್ವಾಮಿ ಅವರ ಸರ್ಕಾರವನ್ನು ಸಿದ್ದರಾಮಯ್ಯ ಅವರೇ ಬೀಳಿಸಿದ್ದು, ಅದನ್ನು ಅವರು ಒಪ್ಪಿಕೊಳ್ಳಲಿ ಎಂದಿರುವ ಬಗ್ಗೆ ಮಾತನಾಡಿ ಅದನ್ನು ಅವರು ವಿಧಾನಮಂಡಲದ ವಿಶ್ವಾಸ ಮತಯಾಚನೆಯಾದ ಸಂದರ್ಭದಲ್ಲಿ ಉತ್ತರ ನೀಡಿದಾಗ ಈ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ರೆಕಾರ್ಡ್ ನಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ.ಈಗ ಬೇರೆ ತರ ಹೇಳುತ್ತಿದ್ದಾರೆ. ಹಾಗಾದರೆ ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಶಾಸಕರು, ಸಚಿವರನ್ನು ಭೇಟಿ ಮಾಡದೆ ಹೋಟೆಲಿನಲ್ಲಿ ಕುಳಿತಿದ್ದರು ಎಂದರು.

ಬಿಜೆಪಿ ಅವರಿಗಿಂತ ಹೆಚ್.ಡಿ.ಕುಮಾರಸ್ವಾಮಿ ಹೆಚ್ಚು ಹತಾಶರಾಗಿದ್ದಾರೆ

ಬಿಜೆಪಿ ಗಿಂತಲೂ ಕುಮಾರಸ್ವಾಮಿ ಅವರು ಹೆಚ್ಚು ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರಾಜಕೀಯವಾಗಿ ಹತಾಶರಾದವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು. ಬಿಜೆಪಿಗಿಂತ ಜಾಸ್ತಿ ಹತಾಶರಾಗಿರುವುದು ಕುಮಾರಸ್ವಾಮಿ. ಬಿಜೆಪಿ ಜೊತೆ ಸೇರದೇ ಹೋಗಿದ್ದಾರೆ ಒಂದು ಸ್ಥಾನವನ್ನೂ ಗೆಲ್ಲಲು ಆಗುತ್ತಿರಲಿಲ್ಲ. ಕುರುಡರು, ಹೆಳವರ ರೀತಿ ಒಬ್ಬರಿಗೊಬ್ಬರು ಅವಲಂಬಿತರಾಗಿದ್ದಾರೆ ಎಂದರು.

ಚುನಾವಣೆ ಪ್ರಯುಕ್ತ ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ

ಹೈ ಕಮಾಂಡಿಗೆ ದೂರು ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಂಚ ರಾಜ್ಯಗಳ ಚುನಾವಣೆ ಬಂದಿರುವುದರಿಂದ ನೆಪಮಾಡಿಕೊಂಡು ಸುಳ್ಳು ಹೇಳುತ್ತಾರೆ. ಇಂದಿನವರೆಗೆ ನಾವು ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ. ಅದಕ್ಕಾಗಿ ಯಾರ ಬಳಿಯೂ ಹಣ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ವಿದ್ಯುತ್ ಕ್ಷಾಮ ಕೃತಕ ಅಭಾವವಲ್ಲ

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುವುದು, ಎಲ್ಲಾ ಸಕ್ಕರೆ ಕಾರ್ಖಾನೆ ಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ಆಗುತ್ತದೆ. ಅದರಿಂದ ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳುವಂತೆ ಇದು ಕೃತಕವಾಗಿ ಆಗಿರುವ ಅಭಾವವಲ್ಲ. 2 ಬಾರಿ ಮುಖ್ಯಮಂತ್ರಿಯಾದವರು ಸತ್ಯ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ.

ಬೆಂಗಳೂರಿಗೆ ರಾಮನಗರ ಸೇರ್ಪಡೆ ಹೇಳಿಕೆ: ಡಿಸಿಎಂ ಜತೆ ಚರ್ಚೆ

ರಾಮನಗರವನ್ನು ಬೆಂಗಳೂರಿಗೆ ಸೇ ರ್ಪಡೆ ಮಾಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿಗಳು ಈ ಪ್ರಶ್ನೆಯನ್ನು ಅವರನ್ನೇ ಕೇಳಿ ಎಂದರು.ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ಬಿಜೆಪಿಗೆ ಮಾನ ಮರ್ಯಾದೆ ಇದೆಯೇ

ಬಿಜೆಪಿ ಎಟಿಎಂ ಸರ್ಕಾರ ಎಂದು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಸುಳ್ಳು ಆರೋಪ. ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25.ಕೋಟಿ ಚುನಾವಣೆಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ , ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದರು. ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. . ಬರದ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿ ಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.

30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳು

ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯ ಹಾಳು ಮಾಡಿದ್ದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ಈಗ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಚಿವರಾಗಬೇಕೆಂದು ಬಯಸುವುದರಲ್ಲಿ ತಪ್ಪಿಲ್ಲ.ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

ಜಾತಿಜನಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯ ನಂತರ ಅವರ ಮೇಲಿನ ವಿಪಕ್ಷಗಳ ಆರೋಪಗಳು ಹೆಚ್ಚಾಗಿದೆ ಎಂಬ ಬಗ್ಗೆ ಉತ್ತರಿಸಿ ರಾಜಕೀಯ ವಾಗಿ ಹತಾಶರಾಗಿಮಾತನಾಡುತ್ತಾರೆ. ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ ಎಂದರು.

Tags: ckcknewsnowhd kumaraswamykarnatakanewsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅರಣ್ಯಾಧಿಕಾರಿಗಳ ವಶಕ್ಕೆ ಪುತ್ರನ ಪೆಂಡೆಂಟ್‌ ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಅರಣ್ಯಾಧಿಕಾರಿಗಳ ವಶಕ್ಕೆ ಪುತ್ರನ ಪೆಂಡೆಂಟ್‌ ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡಿದರೂ ಸಂಬಳವಿಲ್ಲ

ಗುಡಿಬಂಡೆ ಪಟ್ಟಣ ಪಂಚಾಯತಿ; ಅಧ್ಯಕ್ಷ, ಉಪಾಧ್ಯಕ್ಷರು ಯಾರು?

5 years ago
ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ʼಗೆ ಸ್ವಾಯತ್ತತೆ

ಸರ್.ಎಂವಿ: ಕುಶಲತೆ ಮತ್ತು ನೈಪುಣ್ಯತೆಯ ವಿಕಾಸಪುರುಷ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ