ಕಾನೂನು ದೊಡ್ಡದು ಎಂದ ಬಿಜೆಪಿ ರಾಜ್ಯಸಭೆ ಸದಸ್ಯ
ಬೆಂಗಳೂರು: ತಮ್ಮ ಕೊರಳಿನಲ್ಲಿದ್ದ ಹುಲಿ ಉಗುರಿನ ಪೆಂಡೆಂಟ್ ಅನ್ನು ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್ ಅವರು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಹೀಗೆಂದು ಅವರು ಎಕ್ಸ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
“ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ! ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ! ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ!ಪಾಚ್ಕೊಳಿ” ಎಂದು ಅವರು ಹೇಳಿದ್ದಾರೆ.
ತಮ್ಮ ವಿರುದ್ಧ ಕೆಲವರು ದುರುದ್ದೇಶಪೂರಿತವಾಗಿ ಪಿತೂರಿ ನಡೆಸಿದ್ದಾರೆ ಎಂದು ಹೇಳಿರುವ ಅವರು, ತಮ್ಮ ಬಗ್ಗೆ ತಲೆ ಕೆಡಿಸಿಕೊಂಡಿರುವವರಿಗೆ ಧನ್ಯವಾದ ಎಂದಿದ್ದಾರೆ ಅವರು.
“ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೆ ಇರುತ್ತಾರೆ! But remember one thing, ಒಳ್ಳೆ ಗುಣ ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರೂ, ಕಾಯಲು ಒಬ್ಬ ಬರುತ್ತಾನೆ. ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದು ಮಾಡಿ. ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶ! ಎಂದು ಅವರು ಮಾರ್ಮಿಕವಾಗಿ ತಿಳಿಸಿದ್ದಾರೆ.