• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಇಂದಿನಿಂದ ಎಲ್ಲಾ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ನೀರು

cknewsnow desk by cknewsnow desk
November 1, 2023
in STATE
Reading Time: 1 min read
0
ಇಂದಿನಿಂದ ಎಲ್ಲಾ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ನೀರು
917
VIEWS
FacebookTwitterWhatsuplinkedinEmail

ರಾಜ್ಯೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಹಿಂದಿನ ಬಿಜೆಪಿ ಸರಕಾರ 50 ನೇ ವರ್ಷಕ್ಕೆ ಇದನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ, ಹೀಗಾಗಿ ನಾವು ಆಚರಿಸುತ್ತಿದ್ದೇವೆ ಎಂದ ಸಿಎಂ

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ.

ದೇವರಾಜು ಅರಸು ಅವರು ಮೈಸೂರು… pic.twitter.com/bwPOmXN5wq

— CM of Karnataka (@CMofKarnataka) November 1, 2023

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು ಸಿಎಂ.

ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಅವರು ಉದಾಹರಿಸಿದರು.

ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ ಎಂದರು.

ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: ckcknewsnowfree powerFree power for schoolsGovernment shcoolskannadakarnatakaRajyotsava
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

Next Post
ಗುಡಿಬಂಡೆ; ಸಾಧಕರಿಗೆ ರಾಜ್ಯೋತ್ಸವ ಗೌರವ

ಗುಡಿಬಂಡೆ; ಸಾಧಕರಿಗೆ ರಾಜ್ಯೋತ್ಸವ ಗೌರವ

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದರೆ 5 ವರ್ಷ ಜೈಲು!  1,763 ವೈದ್ಯರನ್ನು   ನೇಮಿಸಲಾಗಿದೆ ಎಂದ  ಹೆಲ್ತ್‌ ಮಿನಿಸ್ಟರ್

ಆರೋಗ್ಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದರೆ 5 ವರ್ಷ ಜೈಲು! 1,763 ವೈದ್ಯರನ್ನು ನೇಮಿಸಲಾಗಿದೆ ಎಂದ ಹೆಲ್ತ್‌ ಮಿನಿಸ್ಟರ್

5 years ago
ಮನೋಹರ್‌ ಲೋಫರ್‌ ಎಂದಿದ್ದಕ್ಕೆ ಕಾರಣ ಕೊಟ್ಟ ರಮೇಶ್‌ ಗೌಡ

ಮನೋಹರ್‌ ಲೋಫರ್‌ ಎಂದಿದ್ದಕ್ಕೆ ಕಾರಣ ಕೊಟ್ಟ ರಮೇಶ್‌ ಗೌಡ

3 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ