• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಗನ್‌ಮ್ಯಾನ್‌ನಿಂದ ಶೂ ಹಾಕಿಸಿಕೊಂಡ ಸಚಿವ ಹೆಚ್‌.ಸಿ.ಮಹಾದೇವಪ್ಪ ಮೇಲೆ ಯತ್ನಾಳ್‌ ಪ್ರಹಾರ

cknewsnow desk by cknewsnow desk
November 9, 2023
in CKPLUS, CKPRESS, EDITORS'S PICKS, NATION, STATE, Video Gallery
Reading Time: 1 min read
0
966
VIEWS
FacebookTwitterWhatsuplinkedinEmail

ಸಚಿವರ ನಡೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ; ಆರೋಗ್ಯ ಸರಿ ಇಲ್ಲದಿದ್ದರೆ ವಿಶ್ರಾಂತಿ ಪಡೆಯಿರಿ ಎಂದ ಯತ್ನಾಳ್

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ.ಮಹಾದೇವಪ್ಪ ಅವರು ತಮ್ಮ ಗನ್‌ಮ್ಯಾನ್ ಕೈಯಿಂದ ಶೂ ಹಾಕಿಸಿಕೊಂಡಿರುವ ಘಟನೆ ರಾಜ್ಯದಲ್ಲಿ ತೀವ್ರ ಟೀಕೆಗೆ ಗುರಿ ಆಗಿದೆ. ಈ ಸಂಬಂಧ ವಿಡಿಯೋ ಒಂದು ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸಚಿವರು ಧಾರವಾಡ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಗೌರಿಶಂಕರ ಹಾಸ್ಟೆಲ್‌ ಪರಿಶೀಲನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಪರಿಶೀಲನೆ ಮುಗಿಸಿ ಹೊರ ಬಂದ ವೇಳೆ ಈ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

ಹಾಸ್ಟೆಲ್‌ನ ಅಡುಗೆ ಮನೆ ಪ್ರವೇಶ ಮಾಡುವ ಮುನ್ನ ಬಾಗಿಲಿನಲ್ಲಿಯೇ ತಮ್ಮ ಶೂ ಕಳಚಿ ಒಳಹೋಗಿದ್ದ ಸಚಿವರಿಗೆ, ಹೊರಬಂದ ಮೇಲೆ ಅವರ ಗನ್‌ ಮ್ಯಾನ್‌ ಒಬ್ಬರು ಶೂ ತೊಡಿಸಿದ್ದಾರೆ. ಇದನ್ನೇ ಅಲ್ಲಿದ್ದವರೊಬ್ಬರು ಮೊಬೈಲ್‌ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

https://www.youtube.com/watch?v=MneMSkXzasc

ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಸಚಿವ ಮಹಾದೇವಪ್ಪ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.

“ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ.

ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ.

ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ.

1/3

— Dr H C Mahadevappa(Buddha Basava Ambedkar Parivar) (@CMahadevappa) November 8, 2023

ಆದರೆ ಹಿಂದೆ Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿಗಳ ಬಳಿ ಕಾಲಿನ ಸಮಸ್ಯೆಯ ಹಿನ್ನಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ.

ಸಹಾಯಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ. ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಜಾಲತಾಣಗಳಲ್ಲಿ ಸಚಿವರ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಮತ್ತೊಂದೆ, ಬಿಜೆಪಿ ಶಾಸಕ ಬಸವಗೌಡ ಪಾಟೀಲ್‌ ಯತ್ನಾಳ್‌ ಅವರು ಸಚಿವರ ನಡೆಯನ್ನು ಖಂಡಿಸಿದ್ದಾರೆ.

“ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ. ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ? ವಿವಾದವಾಗಿದ್ದು ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ” ಎಂದು ಯತ್ನಾಳ್‌ ಅವರು ಕಟುವಾಗಿ ಟೀಕಿಸಿದ್ದಾರೆ.

ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ.

ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ?

ವಿವಾದವಾಗಿದ್ದು ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ. https://t.co/JAaYwE2U5Y

— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) November 8, 2023

ಇವರ ಟೀಕೆಗೆ ಪ್ರತ್ಯುತ್ತರ ಕೊಟ್ಟಿರುವ ಮಹಾದೇವಪ್ಪ ಅವರು; “ಯತ್ನಾಳ್ ಅವರೇ, ಮಾನವೀಯ ಸಹಾಯದ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ನಿಮ್ಮ ಈ ರೋಷಾವೇಷವನ್ನು, ನಿಮ್ಮ ಹೈಕಮಾಂಡ್ ಮುಂದೆ ರಾಜ್ಯಕ್ಕೊಬ್ಬ ವಿಪಕ್ಷೀಯ ನಾಯಕನ ಸ್ಥಾನವನ್ನು ಆರಿಸುವುದಕ್ಕಾಗಿ ಬಳಸಿಕೊಳ್ಳಿ. ಇಲ್ಲವೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಕೇಳುವುದಕ್ಕಾದರೂ ಬಳಸಿ. ಸುಮ್ಮನೇ ಕಾಲಹರಣ ಮಾಡಬೇಡಿ” ಎಂದು ತಿರುಗೇಟು ನೀಡಿದ್ದಾರೆ.

Tags: basanagouda patil yatnalbjpckcknewsnowcongress partyindiakarnatakaminister hc mahadevappashoe
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ಸಿದ್ದರಾಮಯ್ಯ ಕೊಟ್ಟ ಪಂಚ್’ಗೆ ಡಿಕೆಶಿ ಬಣ ವಿಲವಿಲ

ಕಾಂಗ್ರೆಸ್ ಸರಕಾರದ ಭವಿಷ್ಯವನ್ನು ಕಾಣದ ಶಕ್ತಿ ತೀರ್ಮಾನ ಮಾಡಲಿದೆ..

Leave a Reply Cancel reply

Your email address will not be published. Required fields are marked *

Recommended

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ: ರಾಹುಲ್‌ ಗಾಂಧಿ

3 years ago
1,000 ರೂ.ನತ್ತ ಎಲ್‌ಪಿಜಿ, ಮತ್ತೆ 25 ರೂ. ಏರಿಕೆ

1,000 ರೂ.ನತ್ತ ಎಲ್‌ಪಿಜಿ, ಮತ್ತೆ 25 ರೂ. ಏರಿಕೆ

5 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ