• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರೈತರಿಗೆ ದೀಪಾವಳಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರಕಾರ: ಕೃಷಿ ಪಂಪ್‌ಸೆಟ್‌ ಹೊಸ ವಿದ್ಯುತ್ ಸಂಪರ್ಕದ ಸಬ್ಸಿಡಿಗೆ ಕತ್ತರಿ

P K Channakrishna by P K Channakrishna
November 9, 2023
in STATE
Reading Time: 1 min read
0
ರೈತರಿಗೆ ದೀಪಾವಳಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರಕಾರ: ಕೃಷಿ ಪಂಪ್‌ಸೆಟ್‌ ಹೊಸ ವಿದ್ಯುತ್ ಸಂಪರ್ಕದ ಸಬ್ಸಿಡಿಗೆ ಕತ್ತರಿ
994
VIEWS
FacebookTwitterWhatsuplinkedinEmail

ಇನ್ನುಮುಂದೆ ರೈತರು ಹೊಸ ಸಂಪರ್ಕ ಪಡೆಯಲು 24,000 ರೂ.ಗಳಿಗೆ ಬದಲು 2 ಲಕ್ಷ ರೂ. ಖರ್ಚು ಮಾಡಬೇಕು!!

ಬೆಂಗಳೂರು: ರಾಜ್ಯದ ಜನರಿಗೆ ಗೃಹಜ್ಯೋತಿ ಕೊಟ್ಟ ಸಿದ್ದರಾಮಯ್ಯ ಸರಕಾರ, ಈಗ ಕೃಷಿ ಪಂಪ್‌ಸೆಟ್‌ಗಳ ಹೊಸ ವಿದ್ಯುತ್ ಸಂಪರ್ಕಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿಗೇ ಕತ್ತರಿ ಹಾಕಿ, ರೈತರಿಗೆ ದೀಪಾವಳಿ ಶಾಕ್‌ ನೀಡಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಸರಕಾರ, ಅಕ್ಟೋಬರ್ 22 ನಂತರ ನೋಂದಾಯಿಸಲ್ಪಡುವ ಕೃಷಿ ಪಂಪ್‌ಸೆಟ್‌ಗಳಿಗೆ ಮೂಲ ಸೌಕರ್ಯವನ್ನು ರೈತರೇ ತಮ್ಮ ಸ್ವಂತ ವೆಚ್ಚದಲ್ಲಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದೆ.

ಸರಕಾರದ ಈ ನಿರ್ಧಾರದಿಂದ ರೈತರು ಹೊಸ ಸಂಪರ್ಕ ಪಡೆಯಲು ಇನ್ನುಮುಂದೆ ಎರಡು ಲಕ್ಷ ರೂ.ವರೆಗೂ ವೆಚ್ಚ ಮಾಡಬೇಕು. ಈ ಮೊದಲು 22ರಿಂದ 25 ಸಾವಿರ ರೂ.ಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳುತ್ತಿದ್ದರು. ಮಳೆ ಇಲ್ಲದೆ, ಬರಪರಿಸ್ಥಿತಿ ಒಂದೆಡೆಯಾದರೆ, ವಿದ್ಯುತ್ ಅಭಾವ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಶಾಕ್ ನೀಡಿದೆ.

ವಿದ್ಯುತ್ ಸರಬರಾಜು ಕಂಪನಿಗಳು 2015ರಿಂದ ಸರಕಾರ ಹೊರಡಿಸಿರುವ ಆದೇಶದವರೆಗೂ ಅಕ್ರಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಮೂಲಸೌಕರ್ಯ ಕಲ್ಪಿಸಲು ಪರ್ಯಾಯ ಮಾರ್ಗ ಹಿಡಿದಿದೆ.

ಬರ ಸಂಕಷ್ಟದಲ್ಲಿಯೂ ರೈತರಿಗೆ ಪೆಟ್ಟು ಕೊಟ್ಟ ಸರಕಾರ

ಅಕ್ರಮ ಸಂಪರ್ಕ ಹೊಂದಿರುವವರು ಸೋಲಾರ್ ವಿದ್ಯುತ್ ಬಳಕೆಗೆ ಆದ್ಯತೆ ನೀಡಬೇಕು. ಅಂಥವರಿಗೆ ಕೇಂದ್ರ ಸರಕಾರ ಶೇ.30ರಷ್ಟು ಹಾಗೂ ರಾಜ್ಯ ಸರಕಾರ ಶೇ.30ರಷ್ಟು ಸಬ್ಸಿಡಿ ನೀಡುತ್ತಿತ್ತು. ಇದೀಗ ರಾಜ್ಯ ಸರಕಾರ ಸಬ್ಸಿಡಿ ಪ್ರಮಾಣವನ್ನು ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಿದೆ. ಫಲಾನುಭವಿ ರೈತರು ಶೇ.20ರಷ್ಟು ಹಣ ಸಂದಾಯ ಮಾಡಿ ಸೌರ ವಿದ್ಯುತ್ ಸಂಪರ್ಕ ಪಡೆದು ಅಕ್ರಮ ವಿದ್ಯುತ್ ಸಂಪರ್ಕವನ್ನು ಸಕ್ರಮ ಮಾಡಿಕೊಳ್ಳಬಹುದಾಗಿದೆ.

ಆದರೆ, ಬರ ಮತ್ತು ವಿದ್ಯುತ್‌ ಕ್ಷಾಮ ತಾಂಡವವಾಡುತ್ತಿರುವ ಈ ಸಂದರ್ಭದಲ್ಲಿ ಸರಕಾರ ಏಕಾಎಕಿ ಸಬ್ಸಡಿಗೆ ಕೊಕ್ಕೆ ಹಾಕಿರುವುದು ರೈತ ಸಮುದಾಯದಲ್ಲಿ ತೀವ್ರ ತಳಮಳ ಉಂಟು ಮಾಡಿದೆ.

ಸೌರಶಕ್ತಿ ಅಳವಡಿಕೆಗೆ ಬಳಸಲು ಒತ್ತು

ವಿದ್ಯುತ್ ಸರಬರಾಜು ಕಂಪನಿಗಳು ಅಕ್ರಮ ಪಂಪ್‌ಸೆಟ್‌ಗಳಿಗೆ ಸಕ್ರಮಗೊಳಿಸಲು ಹೂಡುತ್ತಿದ್ದ ಬಂಡವಾಳವನ್ನು ಸೌರಶಕ್ತಿ ಅಳವಡಿಕೆಗೆ ಬಳಸಲು ಹೆಚ್ಚು ಒತ್ತು ನೀಡುವಂತೆ ಸರಕಾರ ನಿರ್ದೇಶಿಸಿದೆ.

ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ 200 ಯುನಿಟ್ ಬಳಕೆ ಮಾಡಿಕೊಳ್ಳುವ ಎಲ್ಲರ ಮನೆಗೂ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಐದು ಗ್ಯಾರಂಟಿಗಳಲ್ಲಿ ಇದನ್ನು ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ಎರಡು-ಮೂರು ತಿಂಗಳಲ್ಲೇ, ಪಕ್ಷ ಘೋಷಣೆ ಮಾಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಷ್ಠಾನಗೊಳಿಸಿದರು. ಆದರೆ, ಇದೇ ಕಾಲದಲ್ಲಿ ಹೆಚ್ಚು ವಿದ್ಯುತ್ ಬಳಕೆ ಮಾಡಿಕೊಳ್ಳುವವರಿಗೆ ದರವನ್ನು (ದುಬಾರಿ) ಹೆಚ್ಚಳ ಮಾಡಲಾಯಿತು.

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾದ್ದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿನಿತ್ಯ 3 ಪೇಸ್‌ನಲ್ಲಿ ನೀಡುತ್ತಿದ್ದ ವಿದ್ಯುತ್ ಅನ್ನು 5 ಗಂಟೆಗೆ ಇಳಿಸಲಾಗಿತ್ತು. ಮತ್ತೆ 7 ಗಂಟೆ ಕೊಡುವುದಾಗಿ ಘೋಷಿಸಿದ್ದಾರೆ. ಇನ್ನೊಂದೆಡೆ, 200 ಯುನಿಟ್ ಸ್ಲ್ಯಾಬ್‌ ಮೀರುವ ಗ್ರಾಹಕರಿಗೆ ಯುನಿಟ್‌ ಗೆ 7 ರೂ. ದರದಲ್ಲಿ ಬಿಲ್ಲಿಬ ಬರೆಯನ್ನೇ ಎಳೆಯಲಾಗುತ್ತಿದೆ. ಒಂದೆಡೆ, ರೈತರನ್ನು, ಮತ್ತೊಂದೆಡೆ ಮನೆಗಳ ಗ್ರಾಹಕರಿಗೆ ಸುಲಿಗೆ ಸೇವೆ ಮಾಡಲಾಗುತ್ತಿದೆ.

ಅನಧಿಕೃತ ಕೊಳವೆ ಬಾವಿ ಕೊರೆಯದಂತೆ ಮತ್ತೊಂದು ಆದೇಶ

7 ಗಂಟೆ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳಿದ ಬೆನ್ನಲ್ಲೇ ಕೃಷಿ ಪಂಪ್‌ಸೆಟ್‌ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಸಂಪೂರ್ಣ ರದ್ದು ಮಾಡಿರುವುದಲ್ಲದೆ, ಬೆಂಗಳೂರು ನಗರ ಸೇರಿದಂತೆ ಪ್ರಮುಖ ನಗರಗಳಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಯದಂತೆ ಮತ್ತೊಂದು ಆದೇಶವನ್ನು ಸರಕಾರ ಹೊರಡಿಸಿದೆ.

ಅಷ್ಟೇ ಅಲ್ಲ, ಇದರ ಹೊಣೆಗಾರಿಕೆಯನ್ನು ಕೆಲ ಅಧಿಕಾರಿಗಳಿಗೆ ವಹಿಸಿ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚಿಸಿದೆ. ಸದ್ಯಕ್ಕೆ ವಿದ್ಯುತ್ ಬೇಡಿಕೆ ಪ್ರಮಾಣ ಕಳೆದ ವರ್ಷಕ್ಕಿಂತ ದುಪ್ಪಟ್ಟಾಗಿದೆ. ಜತೆಗೆ, ವಿದ್ಯುತ್ ಉತ್ಪಾದನೆಯೂ ಕುಸಿತ ಕಂಡಿದೆ.

ಕೊರತೆ ನೀಗಿಸಿ ಮುಂಬರುವ ಲೋಕಸಭೆ ಚುನಾವಣೆ ಎದುರಿಸಲು ಉತ್ತರ ಪ್ರದೇಶ, ಪಂಜಾಬ್ ಸರಕಾರ ಹಾಗೂ ಖಾಸಗಿ ಕಂಪನಿಗಳಿಂದ 6000 ಮೆ.ವ್ಯಾ.ವಿದ್ಯುತ್ ಖರೀದಿಗೆ ಮುಂದಾಗಿದೆ. ಆದರೆ, ಇಂಧನ ಇಲಾಖೆಯ ಈ ಜನವಿರೋಧಿ ಕ್ರಮಗಳಿಗೆ ಪ್ರತಿಪಕ್ಷಗಳಿಂದಲೂ ಕಡು ವಿರೋಧ ವ್ಯಕ್ತವಾಗಿದೆ.

Tags: agricultureBengalurucancellation of subsidydroughtformerkarnatakakmskmskannadapowerpumpsetsolar powerstate
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ