• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ

P K Channakrishna by P K Channakrishna
November 10, 2023
in NATION, POLITICS, STATE
Reading Time: 2 mins read
0
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ
916
VIEWS
FacebookTwitterWhatsuplinkedinEmail

ಯಡಿಯೂರಪ್ಪ ಪುತ್ರನಿಗೆ ಒಲಿದ ಅದೃಷ್ಟ; ಶುಭ ಕೋರಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ತಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ವರಿಷ್ಠರು ನೇಮಕ ಮಾಡಿದ್ದಾರೆ.

ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅವಧಿಯು ಎರಡು ವರ್ಷಗಳ ಹಿಂದೆಯೇ ಪೂರ್ಣಗೊಂಡಿದ್ದರೂ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಅವರನ್ನು ಮುಂದುವರಿಸಲಾಗಿತ್ತು.

ರಾಜ್ಯ ಘಟಕದ ವಿವಿಧ ಪದಾಧಿಕಾರಿಯಾಗಿ ಚುನಾವಣಾ ಸಂದರ್ಭದಲ್ಲಿ ಸಕ್ರಿಯವಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿರುವ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಯಡಿಯೂರಪ್ಪ ಅವರು ವರಿಷ್ಠರಿಗೆ ಮನವಿ ಮಾಡಿದ್ದರು.

ಈ‌ ಸ್ಥಾನಕ್ಕಾಗಿ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಪ್ರಯತ್ನ ಮಾಡಿದ್ದರು. ಮುಂಬರುವ ಲೋಕಸಭಾ ಚುನಾವಣೆ, ಪಕ್ಷ ಸಂಘಟನೆ ಹಾಗೂ ಆಪರೇಷನ್ ಹಸ್ತಕ್ಕೆ ಕಡಿವಾಣ ಹಾಕಲು ವೀರಶೈವ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನವನ್ನು ಪಕ್ಷ ನೀಡಿದೆ.

BJP National President Shri @JPNadda has appointed Shri @BYVijayendra, MLA, as the State President of @BJP4Karnataka. pic.twitter.com/7JDgga79hL

— BJP (@BJP4India) November 10, 2023


ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಯಡಿಯೂರಪ್ಪ ಅವರ ವರ್ಚಸ್ಸು ಬಳಸಿಕೊಂಡು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬಹುದು ಎಂಬ ಉದ್ದೇಶ ವರಿಷ್ಟರಿಗೆ ಇದ್ದಂತಿದೆ.

47 ವರ್ಷದ ವಿಜಯೇಂದ್ರ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿ ಶಾಸಕರಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾದ ಹೀನಾಯ ಸೋಲು ಲೋಕಸಭಾ ಚುನಾವಣೆಯಲ್ಲಿ ಮರುಕಳಿಸಬಾರದು ಎಂಬ ಉದ್ದೇಶದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಮುಖದ ಹುಡುಕಾಟವನ್ನು ವರಿಷ್ಠರು ನಡೆಸಿದ್ದರು.

ವಿಜಯೇಂದ್ರ ಸಂತಸ

ಇದೇ ವೇಳೆ ವಿಜಯೇಂದ್ರ ಅವರು ತಮ್ಮನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

“ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರಿಗೆ, ಗೃಹ ಸಚಿವ ಅಮಿತ್‌ ಶಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.‌ಸಂತೋಷ್‌ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ” ಎಂದು ಅವರು ಹೇಳಿದ್ದಾರೆ.

ಶುಭ ಕೋರಿದ ಹೆಚ್‌ ಡಿಕೆ

ಬಿಜೆಪಿ ಮಿತ್ರಪಕ್ಷವಾದ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ವಿಜಯೇಂದ್ರ ಅವರಿಗೆ ಶುಭ ಕೋರಿದ್ದಾರೆ.

“ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಶ್ರೀ ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ತಂದೆಯ ಆಶೀರ್ವಾದ ಪಡೆದ ವಿಜಯೇಂದ್ರ

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಕಟಿಸುತ್ತಿದ್ದಂತೆ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು, ಸಿಹಿ ತಿನ್ನಿಸಿದರು.

Tags: BY Vijayendrackcknewsnowhd kumaraswamyjp naddaKarnataka bjp presidentnewsPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೈವೋಲ್ಟೇಜ್ ಅಧಿವೇಶನ

ಕಾಂತರಾಜ್‌ ವರದಿ ಮೂಲ ಪ್ರತಿಯೇ ಕಣ್ಮರೆ!; ಆದರೂ ನ.24ಕ್ಕೆ ವರದಿ ಸ್ವೀಕರಿಸಲು ಸರಕಾರದ ತರಾತುರಿ

Leave a Reply Cancel reply

Your email address will not be published. Required fields are marked *

Recommended

ಯೋಗ ಸಂತಸದ ಜೀವನ ಮಾರ್ಗ ತೋರುತ್ತದೆ, ಸಾಮೂಹಿಕ ಆರೋಗ್ಯದಲ್ಲಿ ಧನಾತ್ಮಕ ಪಾತ್ರ ವಹಿಸುತ್ತದೆ ಎಂದ ನರೇಂದ್ರ ಮೋದಿ

ಮೋದಿ ಸಂಪುಟದಲ್ಲಿ ರಾಜ್ಯಕ್ಕೆ ಎರಡಲ್ಲ, ಒಂದೇ ಕ್ಯಾಬಿನೇಟು, ನಾಲ್ಕು ಸ್ಟೇಟು: ಕನ್ನಡಿಗರಿಗೆ ಲಾಭವೆಷ್ಟು?

5 years ago
ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ