• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕಾಂತರಾಜ್‌ ವರದಿ ಮೂಲ ಪ್ರತಿಯೇ ಕಣ್ಮರೆ!; ಆದರೂ ನ.24ಕ್ಕೆ ವರದಿ ಸ್ವೀಕರಿಸಲು ಸರಕಾರದ ತರಾತುರಿ

P K Channakrishna by P K Channakrishna
November 10, 2023
in NATION, POLITICS, STATE
Reading Time: 2 mins read
0
ಹೈವೋಲ್ಟೇಜ್ ಅಧಿವೇಶನ
945
VIEWS
FacebookTwitterWhatsuplinkedinEmail

ಮೂಲ ಪ್ರತಿ ಕಳುವಾಗಿದ್ದರೂ ವರದಿ ಸಲ್ಲಿಸಲು ತಯಾರಿ
ಒಕ್ಕಲಿಗ, ಲಿಂಗಾಯಿತರ ವಿರೋಧದ ನಡುವೆಯೂ ವರದಿ ಪರಿಷ್ಕೃತ

Reservation

ಬೆಂಗಳೂರು: ಕಾಂತರಾಜ್ ಅಧ್ಯಕ್ಷತೆಯಲ್ಲಿ ಸಿದ್ಧಪಡಿಸಲಾಗಿದ್ದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯ ಮೂಲ ಪ್ರತಿಯೇ ನಾಪತ್ತೆಯಾಗಿದೆ ಅಥವಾ ಕಳುವಾಗಿದೆ ಎಂಬ ವಿವಾದದ ನಡುವೆಯೇ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನವೆಂಬರ್ 24ರಂದು ಸರಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಆಯೋಗದ ವರದಿ ಸರಕಾರಕ್ಕೆ ಸಲ್ಲಿಕೆಯಾಗಲಿದೆ ಎಂಬ ಹಿನ್ನೆಲೆಯಲ್ಲಿ ಒಕ್ಕಲಿಗ ಹಾಗೂ ವೀರಶೈವ-ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿ, ಮರು ಸಮೀಕ್ಷೆಗೆ ಒತ್ತಾಯಿಸಿವೆ. ಆದರೆ, ಆಯೋಗವು ತರಾತುರಿಯಲ್ಲಿ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ.

ಮೇಲಾಗಿ, ಕಾಂಗ್ರೆಸ್‌ ಪಕ್ಷದ ಸರಕಾರವೇ ಆದಷ್ಟು ಬೇಗ ವರದಿ ಸ್ವೀಕಾರ ಮಾಡಲು ಉತ್ಸುಕವಾಗಿದೆ. ಕರ್ನಾಟಕದ ಪರಿಣಾಮಗಳನ್ನು ನೋಡಿಕೊಂಡು ದೇಶದ ವಿವಿಧ ರಾಜ್ಯಗಳಲ್ಲಿ ಇಂಥದ್ದೇ ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಪಕ್ಷ ಲೆಕ್ಕಾಚಾರ ಹಾಕಿಕೊಂಡಿದೆ.

ಕಳೆದ 2015ರಲ್ಲಿ ಆಯೋಗದ ವತಿಯಿಂದ ಕೈಗೊಳ್ಳಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯ ಸಹಿ ಇಲ್ಲ ಎಂದು ಹಾಲಿ ಅಧ್ಯಕ್ಷರು, 2021ರ ಅಕ್ಟೋಬರ್ 5ರಂದೇ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು.

2021ರ ಆಗಸ್ಟ್ 26ರಂದು ಆಯೋಗದ ಕಚೇರಿಯಲ್ಲಿ ಇರಿಸಲಾಗಿದ್ದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ್ದ ಅಂಕಿ-ಅಂಶಗಳು ಹಾಗೂ ಇತರೆ ವಿವರಗಳನ್ನು ಒಳಗೊಂಡ ಸೀಲ್ಡ್ ಬಾಕ್ಸ್‌ಗಳನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿ ಅವರ ಸಮ್ಮುಖದಲ್ಲಿ ಮಹಜರು ನಡೆಸಿ ತೆರೆಯಲಾಗಿತ್ತು.

ಆ ಸಂದರ್ಭದಲ್ಲಿ ಮುದ್ರಿತ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದೆ ಇರುವುದನ್ನು ಆಯೋಗ ಗಮನಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಮೂಲ ಪ್ರತಿ ಸೀಲ್ಡ್ ಬಾಕ್ಸ್‌ನಲ್ಲಿ ಲಭ್ಯವಿಲ್ಲದೆ ಇರುವುದರಿಂದ, ಹಸ್ತಪ್ರತಿಯನ್ನು ಕೂಡಲೇ ಆಯೋಗದ ಕಚೇರಿಗೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿತ್ತು.

ಸೂಚನೆಗೆ ಸಂಬಂಧಪಟ್ಟವರು ಉತ್ತರ ನೀಡಿದ್ದು, ಆ ಪತ್ರದ ಪ್ರತಿಯನ್ನೂ ಲಗತ್ತಿಸಿ, ಈ ವಿಚಾರವನ್ನು ಸರಕಾರದ ಗಮನಕ್ಕೆ ತರಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟಪಡಿಸುವಂತೆ ಕೋರಿದ್ದ ಪತ್ರ ಬಹಳ ತಡವಾಗಿ ಬಹಿರಂಗಗೊಂಡಿದೆ.

ಈ ಪತ್ರ ಬಹಿರಂಗವಾಗಿರುವುದು ಸರಕಾರಕ್ಕೆ ಹೊಸ ತಲೆನೋವಾಗುವ ಸಾಧ್ಯತೆ ಇದ್ದು, ಅದು 2021ರ ಅಕ್ಟೋಬರ್ 5ರಂದು ಆಯೋಗದ ಅಧ್ಯಕ್ಷರು ಬರೆದಿರುವ ಪತ್ರ. ಅದಕ್ಕೂ ತನಗೂ ಸಂಬಂಧ ಇಲ್ಲ ಎಂದು ಸರಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಸಾಧ್ಯತೆ ಇಲ್ಲದಿಲ್ಲ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿಯನ್ನು ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಅದಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ರಾಹುಲ್ ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕಾಂತರಾಜ್ ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಕೋರಿದ್ದರು.

ಮುಖ್ಯಮಂತ್ರಿ ಅವರ ಹೇಳಿಕೆ ಬೆನ್ನಲ್ಲೇ ಕಾಂತರಾಜ್ ವರದಿ ಬಗ್ಗೆ ಪರ ಮತ್ತು ವಿರೋಧ ಹೇಳಿಕೆಗಳು ವ್ಯಕ್ತವಾದವು. ಬರುವ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದ್ದು ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ವರದಿ ಬಗ್ಗೆ ಏನು ನಿರ್ಧಾರ ಕೈಗೊಳ್ಳುತ್ತಾರೋ ಕಾದು ನೋಡಬೇಕಿದೆ.

ಒಕ್ಕಲಿಗರು ಲಿಂಗಾಯಿತರ ತೀವ್ರ ವಿರೋಧ

ಕಾಂತರಾಜ್‌ ವರದಿಯನ್ನು ತಿರಸ್ಕರಿಸಬೇಕು ಎಂದು ಈಗಾಗಲೇ ಒಕ್ಕಲಿಗ, ವೀರಶೈವ ಲಿಂಗಾಯತ ಸಮುದಾಯಗಳು ರಾಜ್ಯ ಸರಕಾರವನ್ನು ಒತ್ತಾಯ ಮಾಡಿವೆ.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆ ಸೇರಿದ್ದ ಒಕ್ಕಲಿಗ ಮುಖಂಡರು, ಈ ವರದಿಯನ್ನು ಸಮುದಾಯ ಒಪ್ಪುವ ಪ್ರಶ್ನೆಯೇ ಇಲ್ಲ. ಈ ವರದಿಯಲ್ಲಿ ಬಹಳಷ್ಟು ದೋಷಗಳು ಇವೆ. ಹೀಗಾಗಿ ಮರು ಸಮೀಕ್ಷೆ ನಡೆಸಬೇಕು ಎಂದು ಒತ್ತಾಯ ಮಾಡಿದ್ದರು. ಇದೇ ಮಾತನ್ನು ಸ್ವಾಮೀಜಿ ಅವರೂ ಹೇಳಿದ್ದರು.

ಗುರುವಾರ ಬೆಂಗಳೂರಿನಲ್ಲಿ ಸಭೆ ಸೇರಿದ್ದ ವೀರಶೈವ ಸಭಾದ ಮುಖಂಡರು ಕೂಡ ಕಾಂತರಾಜ್‌ ವರದಿಯನ್ನು ಒಪ್ಪು ಪ್ರಶ್ನೆಯೇ ಇಲ್ಲ ಎಂದು ಸಾರಾಸಗಟಾಗಿ ತಿಳಿಸಿದ್ದಾರೆ.

ಕಾಂತರಾಜ್ ಅಧ್ಯಕ್ಷರಾಗಿದ್ದ ಹಿಂದುಳಿದ ವರ್ಗಗಳ ಆಯೋಗದ ವರದಿ ಅವೈಜ್ಞಾನಿಕವಾಗಿದೆ. ಅಲ್ಲದೆ, ಲೋಪ-ದೋಷಗಳಿಂದ ಕೂಡಿದ್ದು, ಅದನ್ನು ಸ್ವೀಕರಿಸಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭಾ ಇಂದಿಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಜಾತಿಗಣತಿ ಅಗತ್ಯವಿದ್ದರೆ ಮತ್ತೊಮೆ ಮನೆ ಮನೆಗೆ ಭೇಟಿ ವೈಜ್ಞಾನಿ ಸಮೀಕ್ಷೆ ನಡೆಸಿ ವರದಿ ಪಡೆದುಕೊಳ್ಳಬೇಕು. ನಾವು ಜಾತಿಗಣತಿ ವಿರೋಧಿಗಳಲ್ಲ. ಆದರೆ, ಸರ್ಮಪಕ ಹಾಗೂ ವಾಸ್ತವ ಸಂಗತಿಗಳಿಂದ ಕೂಡಿರಬೇಕು ಎಂದು ಸಮಿತಿ ಅಧ್ಯಕ್ಷ ಹಾಗೂ ಆಡಳಿತ ಪಕ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ನಾಲ್ಕು ಗೋಡೆಗಳ ನಡುವೆ ಕುಳಿತು ಸಿದ್ಧಪಡಿಸಿರುವ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಆಧಾರ್ ಕಾರ್ಡ್‌ಅನ್ನು ಆಧಾರವಾಗಿಟ್ಟುಕೊಂಡು ಮತ್ತೆ ಸಮೀಕ್ಷೆ ನಡೆಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಜಾತಿ ಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆಸಿಲ್ಲ. ಹಲವರ ಮನೆಗಳಿಗೆ ಭೇಟಿ ನೀಡದೆ, ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳಿವೆ. ಸಮೀಕ್ಷೆಯಲ್ಲಿ ವೀರಶೈವ-ಲಿಂಗಾಯಿತ ಸಮುದಾಯ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂಬ ಮಾಹಿತಿ ಇದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಸರ್ಕಾರ ಮತ್ತೊಮ್ಮೆ ಈ ಬಗ್ಗೆ ವಿವೇಚನಾಯುಕ್ತವಾಗಿ ಪರಾಮರ್ಶಿಸಿ ಮುಂದಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದರು.

Tags: assemblycasteckcknewsnowindiakantharaju reportkarnatakaobcsPoliticsreservation
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಹಾದೇವಪ್ಪ, ನಿಂಗೂ‌ ಕತ್ತಲು ಫ್ರೀ! ನಂಗೂ ಕತ್ತಲು ಫ್ರೀ!! ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ!!

ಮಹಾದೇವಪ್ಪ, ನಿಂಗೂ‌ ಕತ್ತಲು ಫ್ರೀ! ನಂಗೂ ಕತ್ತಲು ಫ್ರೀ!! ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ!!

Leave a Reply Cancel reply

Your email address will not be published. Required fields are marked *

Recommended

ಅಜಾತಶತ್ರು ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

ಅಜಾತಶತ್ರು ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

5 years ago
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ವೀಕ್ ಚೀಫ್‌ ಮಿನಿಸ್ಟರ್‌ಗೆ ಮಾತ್ರ ಬ್ಲಾಕ್‌ಮೇಲ್ ಮಾಡುತ್ತಾರೆ; ಬೇಕಿದ್ದರೆ ಯಡಿಯೂರಪ್ಪ ಕೇಸು ದಾಖಲು ಮಾಡಲಿ; ಹಾಲಿ ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ