• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಿದ್ದರಾಮಯ್ಯ ಅಲ್ಲ ಐಶಾರಾಮಯ್ಯ!!

P K Channakrishna by P K Channakrishna
November 14, 2023
in POLITICS, STATE
Reading Time: 1 min read
0
ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ
925
VIEWS
FacebookTwitterWhatsuplinkedinEmail

ವಿತ್ತೀಯ ಹೊಣೆ ಕಾಯ್ದೆ ಉಲ್ಲಂಘಿಸಿದ ಸಿದ್ದರಾಮಯ್ಯ; ರೈತರ ಬಗ್ಗೆ ಕಾಳಜಿ ಇದ್ದರೆ ಕೃಷಿ ಸಾಲಮನ್ನಾ ಮಾಡಿ ಎಂದು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ಹೊಟ್ಟೆಯುರಿ ಎಂದು ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಸಿದ್ದರಾಮಯ್ಯ ಅವರನ್ನು ಐಶಾರಾಮಯ್ಯ ಎಂದು ಕುಟುಕಿದ್ದಾರೆ.

ಈ ಬಗ್ಗೆ ಎಕ್ಸ್‌ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್‌ ಮಾಡಿರುವ ಅವರು; ಸಿದ್ದರಾಮಯ್ಯ ಅವರು ಮಾಡಿದ್ದ ಪ್ರತಿ ಟೀಕೆಗೂ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯನವರೇ, ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ?
ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು. 5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? ಎಂದು ಪ್ರಶ್ನಿಸಿದ್ದಾರೆ.

ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ? ಸತ್ಯ ಹೇಳಿ. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು ಹೇಳುವುದೇ ಕೆಲಸವೇ? ಹಿಂದೆ ನೀವು ಮಾಡಿದ್ದೂ ಇದೇನಾ? ನಿಮ್ಮ ‘ಸಮಾಜವಾದಿ ಆತ್ಮಸಾಕ್ಷಿ’ ಹೀಗಂತ ಹೇಳುತ್ತಿದೆಯಾ? ಗ್ಯಾರಂಟಿಗಳನ್ನು ಕಾಂಗ್ರೆಸ್ ಮತದಾರರಿಗಷ್ಟೇ ತಂದಿದ್ದೀರಿ ಎಂದು ನಾನು ಹೇಳಿದ್ದೇನೆಯೇ? ಬಹುಶಃ ನಿಮಗೆ ಅಂಥ ಮನಃಸ್ಥಿತಿ ಇದ್ದರೂ ಇದ್ದೀತು ಎಂದು ಅವರು ಕಾಲೆಳೆದಿದ್ದಾರೆ.

ಸನ್ಮಾನ್ಯ @siddaramaiah ನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ?
ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023

ಸಿದ್ದಾಂತರಾಳ ಹೀಗೆಂದು ಅಪ್ಪಣೆ ಕೊಟ್ಟಿದೆಯಾ?

ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನೆ. ಹಾಗಾದರೆ, ಮಾಧ್ಯಮಗಳಿಗೆ ಸತ್ಯ ತಿಳಿಸುವುದೇ ಅಪರಾಧವೇ? ನಿಮ್ಮ ದರ್ಬಾರಿನಲ್ಲಿ ಮಾಧ್ಯಮಗೋಷ್ಠಿಯೂ ಮಹಾಪಾಪವೇ? ನಿಮ್ಮ ‘ಸಿದ್ದಾಂತರಾಳ’ ಹೀಗೆಂದು ಅಪ್ಪಣೆ ಕೊಟ್ಟಿದೆಯಾ? ಹಳ್ಳಿಗಳಿಗೆ ಹೋಗಿದ್ದೇನೆ, ಫಲಾನುಭವಿಗಳನ್ನು ಮಾತನಾಡಿಸಿದ್ದೇನೆ. ಸತ್ಯ ಹೇಳಿದ್ದೇನೆ. ಬನ್ನಿ, ನಿಮಗೂ ಸತ್ಯದರ್ಶನ ಮಾಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ ಕುಮಾರಸ್ವಾಮಿ.

ರೈತರ ಸಾಲಮನ್ನಾ ಮಾಡಲು ಆಗ್ರಹ

ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. YstTax, SstTax ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಇದೇ ನನ್ನ ಸವಾಲು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದ್ದಾರೆ.

ಇದ್ದಿದ್ದನ್ನು ಇದ್ದಂತೆ ಹೇಳಿದರೆ, ಅದನ್ನೇ ವಾಗ್ದಾಳಿ ಎಂದು ಅನುಕಂಪ ಗಿಟ್ಟಿಸಿಕೊಳ್ಳುವ ನಿಮ್ಮ ಬಗ್ಗೆ ಸಹಾನೂಭೂತಿ ಇದೆ. ಶಾಂತಿ, ದ್ವೇಷಾಸೂಯೆ, ಹತಾಶೆ ಬಗ್ಗೆ ದಯವಿಟ್ಟು ಮಾತನಾಡಬೇಡಿ. ನಿಮ್ಮ ಸಕಲಸದ್ಗುಣಗಳ ಬಗ್ಗೆ ನನಗಿಂತ ಮಲ್ಲಿಕಾರ್ಜುನ ಖರ್ಗೆ ಅವರೇ ಹೆಚ್ಚು ಬಲ್ಲರು. ಇನ್ನು; ಚುನಾವಣೆ ಸೋಲು ಎಂದಿದ್ದೀರಿ? ಇದು ನನಗೂ ಹೊಸದಲ್ಲ, ನಿಮಗೂ ಹೊಸದಲ್ಲ. ನಿಮ್ಮ ಹಳಹಳಿಕೆ ಅರ್ಥ ಮಾಡಿಕೊಳ್ಳಬಲ್ಲೆ. ವೈಫಲ್ಯಗಳನ್ನೇ ವಕ್ರೀಕರಿಸಿ ಅನುಕಂಪ ಗಿಟ್ಟಿಸುವ ಹಳೆಯ ಚಾಳಿ ಬಿಡಿ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಸಾಸಿವೆ ಕಾಳಿನಷ್ಟು ಶಿಷ್ಟಾಚಾರ ಗೊತ್ತಿಲ್ಲ, ಸಾಲುಸಾಲು ಸಮ್ಮಾನ ಬೇಕಂತೆ

ನನ್ನ ಹೆಸರು ಕೇಳಿದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಭಯ ಅನ್ನುತ್ತೀರಿ. ಪ್ರಧಾನಿ ಬಗ್ಗೆ ಮುಖ್ಯಮಂತ್ರಿ ಆಡುವ ಮಾತೇ ಇದು. ‘ಸಾಸಿವೆ ಕಾಳಿನಷ್ಟು ಶಿಷ್ಟಾಚಾರ ಗೊತ್ತಿಲ್ಲ. ಸಾಲುಸಾಲು ಸಮ್ಮಾನ ಬೇಕು’ ಎಂದನಂತೆ ಒಬ್ಬ. ಹಾಗಿದೆ ನಿಮ್ಮ ಧಿಮಾಕು. ಧಮ್ಮು, ತಾಕತ್ತು, ಗೈರತ್ತಿನಿಂದ ಕೆಲಸ ಆಗಲ್ಲ ಮುಖ್ಯಮಂತ್ರಿಗಳೇ? ಐದು ವರ್ಷ ಸಿಎಂ ಆಗಿದ್ದ ನಿಮಗೆ ಇಷ್ಟು ಸಾಮಾನ್ಯ ಜ್ಞಾನವೂ ಇಲ್ಲವೇ? ಕಾವೇರಿ ವಿಷಯದಲ್ಲಿಯೇ ನಿಮ್ಮ ದಮ್ಮು, ತಾಕತ್ತು ಮೂರಾಬಟ್ಟೆ ಆಯಿತಲ್ಲ. ತಮಿಳುನಾಡಿಗೆ ಈಗಲೂ ನೀರು ಹರಿಯುತ್ತಿದೆಯಲ್ಲ!! ಕಾಣುತ್ತಿಲ್ಲವೇ? ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ತಿರುಗೇಟು ನೀಡಿದ್ದಾರೆ.

“ಮಹಾದೇವಪ್ಪ ನಿಂಗೂ ಕತ್ತಲು ಫ್ರೀ! ನಂಗೂ ಕತ್ತಲು ಫ್ರೀ!! ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ!!” ಇದು ನಿಮ್ಮ ಗ್ಯಾರಂಟಿಗಳ ಸ್ಥಿತಿ. ಸುಳ್ಳೇಕೆ ಹೇಳುತ್ತೀರಿ? ಆ ಪದವಿಗಾದರೂ ಗೌರವ ಬೇಡವೇ? ಸೀಟಿನಲ್ಲಿ ಕೂತು ಸುಳ್ಳು ಹೇಳದಿರಿ. ಉಚಿತ, ಖಚಿತ ಎಂದವರು ನೀವು. ಇವು ಅಗ್ಗದ ಯೋಜನೆಗಳು ಎಂದು ನಾನು ಹೇಳಿದ್ದೂ ಹೌದು. ನಾನೇ ಏಕೆ, ನಿಮ್ಮ ಸಂಪುಟದ ಹಾಲಿ ಕ್ಯಾಬಿನೇಟ್ ಮಂತ್ರಿಯೊಬ್ಬರೇ, “ಎಲೆಕ್ಷನ್ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್ ಗಿಮಿಕ್, ಟ್ರಿಕ್ಸ್ ಮಾಡಲೇಬೇಕು” ಎಂದು ಹೇಳಿರಲಿಲ್ಲವೇ? ವೈರಲ್ ಆಗಿದ್ದ ಆ ವಿಡಿಯೋ ನಿಮ್ಮ ಮೊಬೈಲಿಗೂ ಬಂದಿರಬೇಕಲ್ಲವೇ?

ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಕರ್ನಾಟಕವನ್ನು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ (1-6-2023) ನಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ, ಪ್ರತೀವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಸೋಲು, ಗೆಲುವು ಜನಾಧೀನ. ಆ ಸತ್ಯ ನನಗೂ ಗೊತ್ತು, ನಿಮಗೂ ಗೊತ್ತು. ಆದರೆ, ಅರೆಬರೆ ಗ್ಯಾರಂಟಿಗಳಿಂದ ಲೋಕಸಭೆ ಗೆಲ್ಲುತ್ತೇವೆ ಎಂದು ಹೊರಟಿದ್ದೀರಿ. ಬನ್ನಿ ಅಖಾಡಕ್ಕೆ. ನಮ್ಮ ಸತ್ಯಕ್ಕೆ ಸೋಲೋ, ನಿಮ್ಮ ಸುಳ್ಳಿಗೆ ಗೆಲುವೋ.. ಎಂದು ನೋಡೋಣ. ‘ಸಾಲದ ಶೂಲ’, ‘ಆರ್ಥಿಕ ದಿವಾಳಿತನ’, ‘ಆರ್ಥಿಕ ಅಸ್ಥಿರತೆ-ಅದಕ್ಷತೆ’, ‘ಪರಾಧೀನ ಬದುಕು’, ‘ಕಮೀಷನ್‌ ಕಾಂಡ’ ; ಇವು ನಿಮ್ಮ ಸರಕಾರ ರಾಜ್ಯಕ್ಕೆ ಕೊಟ್ಟಿರುವ 5 ಹೊಸ ಗ್ಯಾರಂಟಿಗಳು! ಇನ್ನು, ರಾಜ್ಯದ ಭವಿಷ್ಯ, ಪ್ರತಿಷ್ಠೆ ಎಲ್ಲವೂ ದೈವಾಧೀನ!! ಎಂದು ಸಿಎಂಗೆ ಟಾಂಗ್‌ ನೀಡಿದ್ದಾರೆ.

Tags: ckcknewsnowhd kumaraswamyindiaishaaramaiahkarnatakanewsPoliticssiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಕಂಬದಿಂದ ವಿದ್ಯುತ್ ಸಂಪರ್ಕ: ಅಚಾತುರ್ಯಕ್ಕೆ ವಿಷಾದವಿದೆ, ದಂಡ ಕಟ್ಟುವೆ ಎಂದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ