• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

17 ಟಿಎಂಸಿ ನೀರಿಗೆ ಬೇಡಿಕೆ ಇಟ್ಟಿದ್ದ ತಮಿಳುನಾಡು; ಬಾಕಿ ನೀರು ಚುಕ್ತಾ ಮಾಡುವಂತೆ ಪಟ್ಟು ಹಿಡಿದಿದ್ದ ನೆರೆರಾಜ್ಯ

P K Channakrishna by P K Channakrishna
November 23, 2023
in NATION, STATE
Reading Time: 1 min read
0
ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುತ್ತಿದೆ ಕಾಂಗ್ರೆಸ್

photo: Vishwanath Suvarna

922
VIEWS
FacebookTwitterWhatsuplinkedinEmail

ಕರ್ನಾಟಕಕ್ಕೆ ಮತ್ತೊಂದು ಶಾಕ್; ಡಿಸೆಂಬರ್ 31ರವರೆಗೆ ನಿತ್ಯ 3216 ಕ್ಯೂಸೆಕ್ಸ್ ನೀರು ಹರಿಸಲು CWRC ನಿರ್ದೇಶನ

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸರಣಿ ಆಘಾತವಾಗುತ್ತಿದ್ದು, ಇಂದು ಮತ್ತೊಂದು ಆಘಾತ ಆಗಿದೆ. ದೆಹಲಿಯಲ್ಲಿ ನೆರೆರಾಜ್ಯದ ಹಠವೇ ಗೆಲ್ಲುತ್ತಿದೆ, ಕರ್ನಾಟಕಕ್ಕೆ ಸರಣಿ ಸೋಲಾಗುತ್ತದೆ.

ಒಂದೆಡೆ; ನೈರುತ್ಯ ಮುಂಗಾರು, ಈಶಾನ್ಯ ಹಿಂಗಾರು ಮಳೆ ಕೈಕೊಟ್ಟು ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಆವರಿಸಿರುವುದರ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWRC)ಯು ತಮಿಳನಾಡಿಗೆ ನೀರು ಬಿಡುವಂತೆ ಸೂಚನೆ ನೀಡುವ ಮೂಲಕ ಕರ್ನಾಟಕಕ್ಕೆ ಮತ್ತೊಂದು ಶಾಕ್ ನೀಡಿದೆ.

ಈ ವರ್ಷ ನಡೆದ ಪ್ರತಿ ಸಭೆಯಲ್ಲೂ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ನೀಡುತ್ತಾ ಬಂದಿರುವ CWRC, ಇಂದು ನಡೆದ ಸಭೆಯಲ್ಲೂ ಅದನ್ನೇ ಮಾಡಿದೆ.

ಕಾವೇರಿ ನದಿಯಿಂದ ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ  ಪ್ರತಿ ದಿನ 3216 ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ  ಶಿಫರಸ್ಸು ಮಾಡಿದೆ.

ತಮಿಳುನಾಡಿನ ಬೇಡಿಕೆ

ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ನೀರು ಹಾಗೂ ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ನೀರು ಸೇರಿ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ಸಭೆಯಲ್ಲಿ ತಮಿಳುನಾಡು ಬೇಡಿಕೆ ಇಟ್ಟಿದೆ.

ನೀರು  ಬಿಡುಗಡೆ ಸಾಧ್ಯವಿಲ್ಲ

CWRC ಯ 90ನೇ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಈಗ ಮಳೆಯಾಗುತ್ತಿಲ್ಲ. ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿರುವುದರಿಂದ ಉತ್ತಮ ಮಳೆಯಾಗುವ ಸಾಧ್ಯತೆಗಳು ಇಲ್ಲ.

ಕಾವೇರಿ ನದಿಪಾತ್ರದ ನಾಲ್ಕು ಜಲಾಶಯಗಳಿಗೆ ಒಳಹರಿವು ಬಹತೇಕ ಸ್ಥಗಿತವಾಗಿದ್ದು, ಸಂಗ್ರಹವಾಗಿರುವ ನೀರು ಸಹ ಮುಂದಿನ ಮಳೆಗಾಲದವರೆಗೆ ಕುಡಿಯುವ ನೀರು, ಬೆಳೆಗಳಿಗೆ ಸಾಲುವುದಿಲ್ಲ. ಇಂತಹ  ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು  ಹರಿಸುವ ಸ್ಥಿತಿಯಲ್ಲಿ ನಾವಿಲ್ಲ ಎಂಬ ಕರ್ನಾಟಕದ ವಾದವನ್ನು CWRC ಪರಿಗಣಿಸಿಲ್ಲ.

ಕರ್ನಾಟಕವು CWRC ಮುಂದೆ  ರಾಜ್ಯದ ವಾಸ್ತವ ಸಂಗತಿಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದೆ. ಅಂದರೆ, ನವೆಂಬರ್ 22  ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವಿನ ಕೊರತೆಯು ಶೇ. 52.24ರಷ್ಟಿದೆ.

38 ದಿನ; ಪ್ರತಿ ದಿನ 3216 ಕ್ಯೂಸೆಕ್ ನೀರು ಹರಿಸಲು ಸೂಚನೆ

ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಅಕ್ಟೋಬರ್  ಒಂದರಿಂದ ತಮಿಳುನಾಡಿನಲ್ಲಿ ಮಳೆಯು ಸಾಮಾನ್ಯವಾಗಿದೆ. ಆದ್ದರಿಂದ ಈಶಾನ್ಯ ಹಿಂಗಾರು ಅವಧಿಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತು ಮೆಟ್ಟೂರು ಜಲಾಶಯದ ಕೆಳಗಿನ ಪ್ರದೇಶಗಳಲ್ಲಿ ತೃಪ್ತಿಕರ ಮಳೆಯ ಪರಿಸ್ಥಿತಿ ಲಭ್ಯವಿರುತ್ತದೆ ಎಂಬ ಸೂಚನೆಗಳಿವೆ.

ತಮಿಳುನಾಡಿನ ಕುರುವಾಯಿ ಬೆಳೆ ಸೆಪ್ಟೆಂಬರ್ ಅಂತ್ಯದ ವೇಳೆಗೆ ಕಟಾವಿಗೆ ಬಂದಿತ್ತು. ಈ ಬೆಳೆಗೆ ನೀರಿನ ಅವಶ್ಯಕತೆ ಇರುವುದಿಲ್ಲ. ಸಾಂಬಾ ಬೆಳೆ  ಕೂಡ ಕೊಯ್ಲು ಹಂತವನ್ನು ತಲುಪಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಕೊನೆಗೊಳ್ಳಲಿದೆ  ಎಂದು ಹೇಳಿದೆ.

ಕರ್ನಾಟಕದ 4 ಜಲಾಶಯಗಳಿಗೆ ಒಳಹರಿವು ಸ್ಥಗಿತಗೊಂಡಿದೆ. ಅಂದರೆ ನವೆಂಬರ್ 21ರಲ್ಲಿನ ಮಾಹಿತಿ ಪ್ರಕಾರ ಕರ್ನಾಟಕದ 4 ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹವು ನೀರಾವರಿ, ಕುಡಿಯುವ ಮತ್ತು ಇತರ ಅಗತ್ಯಗಳ ಅವಶ್ಯಕತೆಗಳನ್ನು ಪೂರೈಸಲು ಸಾಕಾಗುವುದಿಲ್ಲ ಎಂದು ತಿಳಿಸಿದೆ.

ಜಲಾನಯನ ಪ್ರದೇಶದಿಂದ  ಸ್ವಾಭಾವಿಕವಾಗಿ ಅನಿಯಮಿತವಾಗಿ ಲಭ್ಯವಾಗುವ ನೀರನ್ನು ಹೊರತುಪಡಿಸಿ ಬಿಳಿಗುಂಡ್ಲು ಜಲ ಮಾಪನ ಕೇಂದ್ರ ತಲುಪಲು ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಅಲ್ಲದೆ,  ಕರ್ನಾಟಕದ ಜಲಾಶಯದಿಂದ ಯಾವುದೇ  ಪ್ರಮಾಣದ ನೀರು ಬಿಡುಗಡೆಗೆ ನಿರ್ದೆಶನವನ್ನು ನೀಡದಂತೆ ಸಮಿತಿಯನ್ನು ಕೋರಿದೆ.

30 ದಿನಗಳ ಕಾಲ ಕರ್ನಾಟಕವು 5000 ಕ್ಯೂಸೆಕ್ ನೀರು ಬಿಡಬೇಕು

ಆದರೆ, ನೆರೆಯ ತಮಿಳುನಾಡು ಮುಂದಿನ 30 ದಿನಗಳ ಕಾಲ ಕರ್ನಾಟಕವು 5000 ಕ್ಯೂಸೆಕ್ ನೀರು ಬಿಡಬೇಕು ಎಂದು ಒತ್ತಾಯಿಸಿದೆ.

ಎರಡು ರಾಜ್ಯಗಳ ಮನವಿಯನ್ನು ಆಲಿಸಿದ ಸಿಡಬ್ಲ್ಯುಆರ್ ಸಿ ಅಂತಿಮವಾಗಿ, ನವೆಂಬರ್ ತಿಂಗಳ ಉಳಿದ ಅವಧಿಗೆ ಹಾಗೂ ಡಿಸೆಂಬರ್ ತಿಂಗಳ ಪೂರ್ಣ ಅವಧಿಗೆ ಕರ್ನಾಟಕವು, ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಸಿಡಬ್ಲ್ಯುಡಿಟಿ ಯ ಆದೇಶದ ಪ್ರಕಾರ ನಿಗದಿತ ಪ್ರಮಾಣದ ನೀರಿನ ಹರಿವನ್ನು ಖಚಿತಪಡಿಸಿಕೊಳ್ಳಬೇಕೆಂದು ಹೇಳಿದೆ. ಅಂದರೆ ನವೆಂಬರ್ 24 ರಿಂದ  ಡಿಸೆಂಬರ್ 31ರವರೆಗೆ (38 ದಿನಗಳು) ಪ್ರತಿ ದಿನ 3216 ಕ್ಯೂಸೆಕ್ಸ್ ನೀರು ಹರಿಸಲು  ಶಿಫಾರಸು ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Tags: Cauvery riverckcknewsnowcwrckarnatakatamilnaduwater dispute
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

Leave a Reply Cancel reply

Your email address will not be published. Required fields are marked *

Recommended

ಚಿತ್ರಾವತಿಗೆ ಬಾಗೀನ ಅರ್ಪಿಸಿದ ಜಿ.ವಿ.ಶ್ರೀರಾಮರೆಡ್ಡಿ

ಚಿತ್ರಾವತಿಗೆ ಬಾಗೀನ ಅರ್ಪಿಸಿದ ಜಿ.ವಿ.ಶ್ರೀರಾಮರೆಡ್ಡಿ

5 years ago
ಗುಡಿಬಂಡೆಯಲ್ಲಿ ಹುಲಿ ದಿನಾಚರಣೆ

ಗುಡಿಬಂಡೆಯಲ್ಲಿ ಹುಲಿ ದಿನಾಚರಣೆ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ