• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಆರೇ ತಿಂಗಳಲ್ಲಿ ಮಾಧ್ಯಮ ಪ್ರಚಾರಕ್ಕೆ 140 ಕೋಟಿ ರೂ. ಖರ್ಚು ಮಾಡಿದ ಸಿದ್ದರಾಮಯ್ಯ ಸರಕಾರ

P K Channakrishna by P K Channakrishna
December 5, 2023
in NATION, NEWS & VIEWS, STATE
Reading Time: 2 mins read
0
ಮುಂದಿನ ತಿಂಗಳೇ 5 ಗ್ಯಾರಂಟಿ!
998
VIEWS
FacebookTwitterWhatsuplinkedinEmail

ಲೆಕ್ಕವನ್ನು ಬಯಲು ಮಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ; ಹಣ ಬಿಡುಗಡೆಗೆ ಸಿಎಂಗೆ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಆರು ತಿಂಗಳಲ್ಲಿ ಮಾಧ್ಯಮಗಳಿಗೆ ಜಾಹೀರಾತು ನೀಡಲು ಭರ್ತಿ 140 ಕೋಟಿ ರೂ. ಖರ್ಚು ಮಾಡಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪ್ರಕಟಿಸಿದ್ದ ಐದು ಗ್ಯಾರೆಂಟಿಗಳ ಅನುಷ್ಠಾನದ ಪ್ರಚಾರಕ್ಕಾಗಿ ಇದರಲ್ಲಿ ಹೆಚ್ಚಿನ ಹಣವನ್ನು ಜಾಹೀರಾತಿಗೆ ಬಳಕೆ ಮಾಡಲಾಗಿದೆ. ಇದರಲ್ಲಿ ಮುದ್ರಣ-ವಿದ್ಯುನ್ಮಾನ ಹಾಗೂ ಡಿಜಿಟಲ್ ಮಾಧ್ಯಮಗಳಿಗೆ ನೀಡಲಾಗಿದೆ.

ಕೋಟಿ-ಕೋಟಿ ಬೆಲೆಯ ದುಬಾರಿ ಕಾರುಗಳ ಖರೀದಿ

ಈ ಸಂಬಂಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಭಾರೀ ವಿವಾದಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಬಿಜೆಪಿ ಪಕ್ಷವು ಕೋಟಿ-ಕೋಟಿ ಮೌಲ್ಯದ ಕಾರುಗಳ ಖರೀದಿ, ಕಚೇರಿ, ಮನೆಗಳ ನವೀಕರಣಕ್ಕೆ ನೂರಾರು ಕೋಟಿ ರೂ. ದುಂದು ವೆಚ್ಚ ಮಾಡಿದ ನಂತರ ಈಗ ಮಾಧ್ಯಮ ಜಾಹೀರಾತುಗಳಿಗೆ 140 ಕೋಟಿ ರೂ. ವ್ಯಯಿಸಿರುವುದು ಯಾವ ಪುರುಷಾರ್ಥಕ್ಕೆ? ಎಂದು ಪ್ರಶ್ನಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಸರಣಿ ಟ್ವೀಟ್

ಚಲುವರಾಯ ಸ್ವಾಮಿ ಅವರ ಪತ್ರ ಬಹಿರಂಗಗೊಳ್ಳುತ್ತಿದ್ದಂತೆ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರಣಿ ಟ್ವೀಟ್ ಮಾಡಿ ಸರಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಆರ್ಥಿಕ ಸುಧಾರಣೆಗಳ ಹರಿಕಾರ, ಅತಿ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ಮುಖ್ಯಮಂತ್ರಿಗಳು ಈ ರೀತಿ ತೆರಿಗೆದಾರರ ಹಣವನ್ನು ಪೋಲು ಮಾಡಬಹುದೆ? ಎಂದು ಅವರು ಪ್ರಶ್ನಿಸಿದ್ದಾರೆ.

ರೈತರ ಬರ ಪರಿಹಾರಕ್ಕೆ ತಲಾ 2,000 ರೂ. ಕೊಟ್ಟು ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ 140 ಕೋಟಿ ರೂ. ಖರ್ಚು ಮಾಡಿದ ಜನದ್ರೋಹಿ ಸರಕಾರ ಎಂದು ಯತ್ನಾಳ್ ಕಿಡಿಕಾರಿದ್ದಾರೆ.

ಗ್ಯಾರಂಟಿಗಳಿಗೂ ಹಣವಿಲ್ಲದೆ ಬಾಕಿ

ರೈತರಿಗೂ ಬಾಕಿ, ನಿಮ್ಮ ಗ್ಯಾರೆಂಟಿಗಳಿಗೂ ಹಣವಿಲ್ಲದೆ ಬಾಕಿ, ಯೋಜನೆಗಳಿಗೂ ಬಾಕಿ, ಅಭಿವೃದ್ಧಿಗೂ ಬಾಕಿ, ಈಗ ಮಾಧ್ಯಮಗಳಿಗೂ ಬಾಕಿ. ರಾಜ್ಯವನ್ನು ಇನ್ನೆಷ್ಟು ಸಾಲದ ಸುಳಿಗೆ ಸಿಲುಕಿಸುವಿರೀ ಎಂದು ಯತ್ನಾಳ್, ಮುಖ್ಯಮಂತ್ರಿ ಹಾಗೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಟಿ, ಕೋಟಿ ಮೌಲ್ಯದ ಕಾರುಗಳ ಖರೀದಿ, ಆಫೀಸು/ಮನೆಗಳ ನವೀಕರಣಕ್ಕೆ ದುಂದು ವೆಚ್ಚ ಮಾಡಿದ ನಂತರ ಈಗ ಮಾಧ್ಯಮ ಜಾಹೀರಾತುಗಳಿಗೆ 140 ಕೋಟಿ ವ್ಯಯಿಸಿರುವುದು ಯಾವ ಪುರುಷಾರ್ಥಕ್ಕೆ ? 1 pic.twitter.com/Obv5KVlysY

— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) December 3, 2023

ರೈತರಿಗೆ ಬಾಕಿ, ನಿಮ್ಮ ಗ್ಯಾರಂಟಿಗಳಿಗೂ ಹಣವಿಲ್ಲದೆ ಬಾಕಿ, ಯೋಜನೆಗಳಿಗೂ ಬಾಕಿ, ಅಭಿವೃದ್ಧಿಗೂ ಬಾಕಿ, ಈಗ ಮಾಧ್ಯಮಗಳಿಗೂ ಬಾಕಿ.

ಇನ್ನೆಷ್ಟು ಸಾಲದ ಸುಳಿಯಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದೀರಿ? 3

— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) December 3, 2023

ಮಾಧ್ಯಮಗಳಿಗೆ ನೀಡಿರುವ ಜಾಹೀರಾತು ಹಣವನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ, ತಕ್ಷಣವೇ 140 ಕೋಟಿ ರೂ. ಬಿಡುಗಡೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಕೃಷಿ ಸಚಿವರು, ಇಷ್ಟು ಬೃಹತ್ ಮೊತ್ತದ ಬಾಕಿಯಿಂದಾಗಿ ಮಾಧ್ಯಮ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ನನ್ನ ಬಳಿ ನಿವೇದಿಸಿಕೊಂಡಿದ್ದಾರೆ ಎಂಬ ಅಂಶವನ್ನು ತಮ್ಮ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಬಾಕಿ ಹಣ ತುರ್ತಾಗಿ ಬಿಡುಗಡೆ ಮಾಡಿ

ಬಾಕಿ ಹಣವನ್ನು ತುರ್ತಾಗಿ ಬಿಡುಗಡೆ ಮಾಡಿಸಿಕೊಟ್ಟು ಮಾಧ್ಯಮ ಸಂಸ್ಥೆಗಳ ನೆರವಿಗೆ ನಿಲ್ಲುವಂತೆ ಚಲುವರಾಯ ಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣಾ ಪೂರ್ವದಲ್ಲೇ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ, ಗೃಹಲಕ್ಷ್ಯೀ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಜಾರಿ ಸಂದರ್ಭದಲ್ಲೇ ಹೆಚ್ಚು ಪ್ರಚಾರಕ್ಕಾಗಿ ಮಾಧ್ಯಮಗಳಲ್ಲಿ ಜಾಹೀರಾತಿಗೆ ಸರಕಾರ ದೊಡ್ಡ ಪ್ರಮಾಣದಲ್ಲಿ ಹಣ ಬಳಕೆ ಮಾಡಿಕೊಂಡಿದೆ. ಅದರಲ್ಲೂ ಗೃಹ ಲಕ್ಷ್ಮೀ ಯೋಜನೆಯ ಜಾಹೀರಾತಿಗಾಗಿಯೇ 32 ಕೋಟಿ ರೂ. ವೆಚ್ಚ ಮಾಡಿದೆ.

ಇದಲ್ಲದೆ, ಖಾಸಗಿ ಸಂಸ್ಥೆಗಳಿಂದ ಗ್ಯಾರಂಟಿಗಳ ಬಗ್ಗೆ ಸಮೀಕ್ಷೆ ಮಾಡಿಸಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದೆ. ಇದಲ್ಲದೆ, ಸರಕಾರದ ವಿರುದ್ಧ ಬರುವ ಸುಳ್ಳು ಸುದ್ದಿಗಳನ್ನು ತಡೆಯುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಗಿಟ್ಟಿಸಲು ʼದಿ ಪಾಲಸಿ ಫ್ರಂಟ್‌ʼ ಎನ್ನುವ ಸಂಸ್ಥೆ ಮೂಲಕ ೭.೨೦ ಕೋಟಿ ರೂ. ವೆಚ್ಚ ಮಾಡಲು ಮುಂದಾಗಿದೆ.

ಇದೆಲ್ಲವೂ ನೋಡಿದರೆ, ಸರಕಾರ ಪ್ರಚಾರದ ಗೀಳಿಗೆ ಬಿದ್ದಿರುವುದು ಸ್ಪಷ್ಟ. ಹೀಗಾಗಿ ಕೋಟ್ಯಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ನೇರವಾಗಿಯೇ ಹೇಳಬಹುದಾಗಿದೆ.

Tags: advertisementChaluvarayaswamyckcknewsnowfive guaranteesgruhalakshmikarnatakasiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹಾವುಗಳ ಆಪ್ತರಕ್ಷಕ

ಹಾವುಗಳ ಆಪ್ತರಕ್ಷಕ

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಬರಗೆಟ್ಟ ಹೊತ್ತಿನಲ್ಲಿ ಅಂಬರದ ಮೇಲೆ ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಕಾಂಗ್ರೆಸ್ ಸರಕಾರ

3 years ago
ಜಮೀರ್‌ಗೆ ಖಡಕ್‌ ವಾರ್ನಿಂಗ್‌! ಹೈಕಮಾಂಡ್‌ ಪಕ್ಷದ ನಿಷ್ಠರ ಪರ ಇರುತ್ತದೆ ಎಂದು ರಾಜ್ಯಕ್ಕೆ ಸಂದೇಶ ರವಾನಿಸಿದ ಸುರ್ಜೇವಾಲ

ಜಮೀರ್‌ಗೆ ಖಡಕ್‌ ವಾರ್ನಿಂಗ್‌! ಹೈಕಮಾಂಡ್‌ ಪಕ್ಷದ ನಿಷ್ಠರ ಪರ ಇರುತ್ತದೆ ಎಂದು ರಾಜ್ಯಕ್ಕೆ ಸಂದೇಶ ರವಾನಿಸಿದ ಸುರ್ಜೇವಾಲ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ