• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

P K Channakrishna by P K Channakrishna
December 7, 2023
in NATION, STATE
Reading Time: 1 min read
0
2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
1.2k
VIEWS
FacebookTwitterWhatsuplinkedinEmail

ರೈತರ ನೆರವಿಗೆ ತಕ್ಷಣವೇ 10,000 ಕೋಟಿ ರೂ. ಬಿಡುಗಡೆಗೆ ಒತ್ತಾಯ

//ಪ್ರಮುಖ ಅಂಶಗಳು//
  • ಕೊಬರಿ ಖರೀದಿ ಕೇಂದ್ರ ಮರು ಆರಂಭಕ್ಕೆ ಆಗ್ರಹ
  • ಪ್ರಚಾರದ ಮೇಲೆ ಅಕ್ಕರೆ, ರೈತರ ಮೇಲೆ ಅಸಡ್ಡೆ
  • 140 ಕೋಟಿ ಬಿಡುಗಡೆ ಎಂದು ಪತ್ರ ಬರೆದಿದ್ದ ಸಚಿವರಿಗೆ ಟಾಂಗ್
  • ಸಿಎಂ, ಡಿಸಿಎಂ ಅವರಿಗೆ ಚಾಟಿ ಬೀಸಿದ ಹೆಚ್ಡಿಕೆ

ಸುವರ್ಣ ವಿಧಾನಸೌಧ/ ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಹಾಗೂ ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಸರಕಾರಕ್ಕೆ ಪ್ರಚಾರದ ಮೇಲೆ ಇರುವ ಹುಚ್ಚು ರೈತರ ಬಗ್ಗೆ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಸರಕಾರದ ಅಸಡ್ಡೆ, ನಿರ್ಲಕ್ಷ್ಯ ನನಗೆ ಅಚ್ಚರಿ, ಕಳವಳ ತಂದಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತದೆ. ಬೆಳೆನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರಕಾರ ಸಾಲಮನ್ನಾ ಮೂಲಕ ಸಹಾಯಕ್ಕೆ ಬರಬೇಕು ಎಂದು ಅವರು ಒತ್ತಾಯ ಮಾಡಿದರು.

2001ರಿಂದ ಇಲ್ಲಿಯ ತನಕ ರಾಜ್ಯದಲ್ಲಿ ಬರಗಾಲ ಎದುರಿಸಿದ್ದೇವೆ. ಭಾರೀ ಪ್ರವಾಹ ಸಮಸ್ಯೆಯನ್ನು ಎದುರಿಸಿದ್ದೇವೆ. ಹೊಸ ಸರಕಾರ ಕಾಂಗ್ರೆಸ್ ನಾಯಕತ್ವದಲ್ಲಿ ಬಂದಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ತರುವ ಭರದಲ್ಲಿ ಉಳಿದ ಕಾರ್ಯಗಳ ಕಡಗಣನೆ ಮಾಡಲಾಗಿದೆ. ಗ್ಯಾರಂಟಿಗಳ ಜಾರಿಗೆ ಹೆಚ್ಚು ಸಮಯ ಕೊಟ್ಟು ಆರ್ಥಿಕ ಹೊರೆ ಅವರೇ ತಂದು ಕೊಂಡಿದ್ದಾರೆ. ಮುಂಗಾರು ಪ್ರಾರಂಭ ಆಗಿದೆ ಅಂತ ರೈತರು ಬಿತ್ತನೆ ಮಾಡಿದ್ದರು. ನಂತರ ಮಳೆ ಕೈ ಕೊಟ್ಟಿದೆ. ಆಗಸ್ಟ್ ತಿಂಗಳಿನಿಂದಲೇ ಈ ವರ್ಷ ಬರಗಾಲದ ಛಾಯೆ ಮೂಡಿದೆ ಎಂದು ಅವರು ಇಡೀ ಬರದ ಚಿತ್ರಣವನ್ನು ಬಿಡಿಸಿಟ್ಟರು.

ಹಣ ಸಾಲದು ಎಂದ ಮಾಜಿ ಸಿಎಂ

ಜಿಲ್ಲಾಧಿಕಾರಿಗಳ ಪಿಡಿಓ ಅಕೌಂಟ್ ನಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 800 ಕೋಟಿ ರೂಪಾಯಿ ಇಡಲಾಗಿದೆ. ಕೇಂದ್ರ ಸರಕಾರಕ್ಕೆ ಬರಪೀಡಿತ 216 ತಾಲೂಕುಗಳ ನಷ್ಟದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಟ್ಟಿದೆ ಸರಕಾರ. ಸರಕಾರ ಕೊಟ್ಟಿರುವ ಅಂದಾಜಿನ ಪ್ರಕಾರ ರೈತರು ಅನುಭವಿಸಿರುವ ಬೆಳೆ ನಷ್ಟದ 10% ಬೆಳೆ ನಷ್ಟಕ್ಕೂ ಪರಿಹಾರ ಕೊಡಲು ಆಗುವುದಿಲ್ಲ. ಹೀಗಾಗಿ ರೈತರು ಸರಕಾರದಿಂದ ನೆರವು ಬಯಸುತ್ತಿದ್ದಾರೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇವರು ಹಣಕಾಸು ತಜ್ಞರು. ಸಾಕಷ್ಟು ಅನುಭವ ಇರುವವರು. ಹದಿನಾಲ್ಕು ಬಜೆಟ್ ಮಂಡಿಸಿರುವವರು ಎಂದು ಮಾತಿನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ ಅವರು; ಇನ್ನೊಬ್ಬರು ಇದ್ದಾರೆ. ‘ಬೈ ಬರ್ತ್ ಫಾರ್ಮರ್, ಬೈ ಪ್ರೊಫೆಷನ್ ಬಿಸ್ನೆಸ್ ಮ್ಯಾನ್, ಬೈ ಪ್ಯಾಷನ್ ಪೊಲಿಟಿಷಿಯನ್ ‘ ಎಂದು ಅನೇಕ ಬಾರಿ ಹೇಳಿದ್ದಾರೆ. ಇಷ್ಟೊಂದು ಅನುಭವ ಇರುವವರು ಇದ್ದರೂ ಹೀಗ್ಯಾಕೆ ಆಗುತ್ತಿದೆ ಎಂದು ಅವರು ಸಿಎಂ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಕೊಬರಿ ಖರೀದಿ ಕೇಂದ್ರ ಪುನಾರಂಭಕ್ಕೆ ಆಗ್ರಹ

ಕೊಬರಿ ಬೆಳೆಗಾರರ ಸಂಕಷ್ಟವನ್ನು ಸದನದಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟ ಕುಮಾರಸ್ವಾಮಿ ಅವರು; ರೈತರನ್ನು ಉಳಿಸಲು ಕೂಡಲೇ ಕೊಬರಿ ಖರೀದಿ ಕೇಂದ್ರಗಳನ್ನು ಮರು ಆರಂಭ ಮಾಡಬೇಕು ಎಂದು ಆಗ್ರಹಪಡಿಸಿದರು.ಕೊಬರಿ ಬೆಲೆ ಹಿಂದೆ ಕ್ವಿಂಟಾಲ್ ಗೆ 18,000 ರೂಪಾಯಿ ಬೆಲೆ ಇತ್ತು, ಈಗ 7,500 ರೂಪಾಯಿಗೆ ಬಂದಿದೆ, ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ, ನಾಫೆಡ್ ಗೆ ಎಷ್ಟ್ ಪತ್ರ ಬರೆದರೂ ಉಪಯೋಗ ಇಲ್ಲದಾಗಿದೆ. ಕೇಂದ್ರದ ಅಧಿಕಾರಿಗಳ ಜತೆ ಕೂಡ ಮಾತನಾಡಿದ್ದೇನೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹಿಂದೆ ಖರೀದಿ ಕೇಂದ್ರಗಳ ಮೂಲಕ ನಾಫೆಡ್ ಪ್ರತಿ ಕ್ವಿಂಟಲ್ ಗೆ 11,750 ರೂಪಾಯಿ ಕೊಟ್ಟು ಕೊಬರಿ ಖರೀದಿ ಮಾಡಿತ್ತು. ಅಂದಾಜು ಒಟ್ಟು 50,000 ಮೆಟ್ರಿಕ್ ಟನ್ ಕೊಬರಿ ಖರೀದಿಗೆ 580 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕೆಲ ದಿನಗಳ ನಂತರ ಖರೀದಿ ಕೇಂದ್ರಗಳು ಸ್ಥಗಿತವಾದವು. ಕೊಬರಿ ದರವೂ 7500 ರೂಪಾಯಿಗೆ ಕುಸಿಯಿತು. ನಾಫೆಡ್ ಅಂದು ಕ್ವಿಂಟಾಲ್ ಕೊಬರಿಯನ್ನು 11,750 ರೂಪಾಯಿಗೆ ಖರೀದಿ ಮಾಡಿದ್ದು, ಈಗ ಅದನ್ನು ಖಾಸಗಿ ಎಣ್ಣೆ ಕಂಪನಿಗಳಿಗೆ 7,500 ರೂಪಾಯಿಗೆ ಮಾರಾಟ ಮಾಡುತ್ತಿದೆ. ಅವರಿಗೆ 200 ಕೋಟಿ ನಷ್ಟ ಆಗುತ್ತಿದೆ, ಅದೇನು ದೊಡ್ಡ ವಿಷಯ ಅಲ್ಲ, ಭರಿಸಬಹುದು ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ನಾನು ಕೂಡ ತೆಂಗು ಬೆಳೆಗಾರ. ಸುಮಾರು ಒಂದೂವರೆ ಲಕ್ಷ ದಷ್ಟು ಕೊಬರಿಯನ್ನು ಒಂದೂವರೆ ವರ್ಷದಿಂದ ಮಾರಾಟ ಮಾಡಲಾಗದೆ ಹಾಗೆಯೇ ಇಟ್ಟಿದ್ದೇನೆ. ಬೆಳೆಗಾರನಿಗೆ ಎಷ್ಟು ಕಷ್ಟ ಇದೆ ಎಂದು ನನಗೆ ಸ್ವತಃ ಗೊತ್ತು. ಆದರೆ, ಸರಕಾರಗಳ ಚೌಕಾಸಿ ನೋಡಿದರೆ ಬಹಳ ನೋವಾಗುತ್ತದೆ. ಈ ಖರೀದಿ ಯಾವ ಲೆಕ್ಕ? ಇಷ್ಟು ಲಕ್ಷದ ಕೋಟಿ ಬಜೆಟ್ ಮಂಡನೆ ಮಾಡುತ್ತವೆ ಸರಕಾರಗಳು. ರೈತನಿಗೆ ಸಣ್ಣ ಪ್ರಮಾಣದ ಬೆಂಬಲ ಬೆಲೆ ನೀಡುವುದಕ್ಕೆ ಇಷ್ಟು ಮೀನಾಮೇಷ ಏಕೆ? ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

belagavi assembly session, suvarna vidhnasowdha, hd kumaraswamy, drought, karnataka, ck, cknewsnow, belagavi,

Tags: belagaviBelagavi assembly sessionckcknewsnowdroughthd kumaraswamykarnatakasuvarna vidhnasowdha
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ: ಪತಿಗೆ ಊಟ ಒಯ್ಯುವ ಸಮಯಕ್ಕೇ ಹೊಂಚು ಹಾಕಿ ಮನೆಯಲ್ಲಿ ಹಣ, ಚಿನ್ನ ದೋಚಿದ ಕಳ್ಳರು

ಗುಡಿಬಂಡೆ: ಪತಿಗೆ ಊಟ ಒಯ್ಯುವ ಸಮಯಕ್ಕೇ ಹೊಂಚು ಹಾಕಿ ಮನೆಯಲ್ಲಿ ಹಣ, ಚಿನ್ನ ದೋಚಿದ ಕಳ್ಳರು

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ