• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

kochimul appointment scam: ಕೋಚಿಮುಲ್‌ ನೇಮಕಾತಿ ಕರ್ಮಕಾಂಡ

cknewsnow desk by cknewsnow desk
December 19, 2023
in NATION, STATE
Reading Time: 2 mins read
0
kochimul appointment scam: ಕೋಚಿಮುಲ್‌ ನೇಮಕಾತಿ ಕರ್ಮಕಾಂಡ
1.4k
VIEWS
FacebookTwitterWhatsuplinkedinEmail

ನೇಮಕಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಾ.ಕೆ.ಸುಧಾಕರ್‌ ಕಿಡಿ: ನೇಮಕಾತಿ ಪ್ರಕ್ರಿಯೆಯೇ ದೊಡ್ಡ ಹಗರಣ, ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹ

ಬಿಜೆಪಿ ನೀಡಿದ್ದ ಪ್ರತ್ಯೇಕ ಒಕ್ಕೂಟವನ್ನು ರದ್ದು ಮಾಡಿದ್ದ ಪಟ್ಟಭದ್ರ ಹಿತಾಸ್ತಿಗಳ ಬಣ್ಣ ಬಯಲು ಎಂದು ಗುಡುಗಿದ ಮಾಜಿ ಸಚಿವ

by GS Bharath Gudibande

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು, ಈ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಕಾಂಗ್ರೆಸ್‌ ಸರ್ಕಾರ ಇದರ ವಿರುದ್ಧ ತನಿಖೆಗೆ ಆದೇಶಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಡಾ.ಕೆ.ಸುಧಾಕರ್‌ ಅವರು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಡಾ.ಕೆ.ಸುಧಾಕರ್

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ರದ್ದು ಮಾಡಿದ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಬಣ್ಣ ಬಯಲಾಗಿದೆ.

1/9 pic.twitter.com/fZF1AziWlI

— Dr Sudhakar K (Modi ka Parivar) (@DrSudhakar_) December 19, 2023

ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭ್ಯರ್ಥಿಗಳ ಹೆಸರಿನ ಮುಂದೆ ಅವರನ್ನು ಶಿಫಾರಸ್ಸು ಮಾಡಿದ ವ್ಯಕ್ತಿಗಳ ಹೆಸರನ್ನು ಸಹ ನಮೂದಿಸಿರುವುದನ್ನು ಗಮನಿಸಿದರೆ ನೇಮಕಾತಿ ಎಷ್ಟು ಪಾರದರ್ಶಕವಾಗಿ ನಡೆದಿದೆ ಎಂದು ತಿಳಿಯುತ್ತದೆ.

ಈ ಇಡೀ ನೇಮಕಾತಿ ಪ್ರಕ್ರಿಯೆಯೇ ಒಂದು ದೊಡ್ಡ ಹಗರಣವೆಂದು ಮೇಲ್ನೋಟಕ್ಕೆ ಸ್ಪಷ್ಟವಾಗಿದ್ದು, ಪ್ರಾಮಾಣಿಕ ಹಾಗೂ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಈ ನೇಮಕಾತಿಯನ್ನು ಕೂಡಲೇ ರದ್ದುಪಡಿಸಿ, ನಿಷ್ಪಕ್ಷಪಾತ ತನಿಖೆಗೆ ಆದೇಶ ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಆಗ್ರಹಿಸುತ್ತೇನೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರದ್ದು ಮಾಡಿತು. ಜಿಲ್ಲೆ ರಚನೆಯಾದ 16 ವರ್ಷಗಳ ನಂತರ ಚಿಕ್ಕಬಳ್ಳಾಪುರಕ್ಕೆ ಒಂದು ಪ್ರತ್ಯೇಕ ಹಾಲು ಒಕ್ಕೂಟ ದಕ್ಕಿತೆಂದು ಸಂಭ್ರಮಿಸುವ ಮೊದಲೇ ಕಾಂಗ್ರೆಸ್ ಸರ್ಕಾರ ರೈತರ ಕನಸನ್ನು ನುಚ್ಚು ನೂರು ಮಾಡಿತು.

ರಾಜ್ಯದಲ್ಲಿ ಹಾಲು ಉತ್ಪಾದನೆ ಮಾಡುವ ಪ್ರಮುಖ ಜಿಲ್ಲೆಗಳಲ್ಲಿ ಚಿಕ್ಕಬಳ್ಳಾಪುರ ಮುಂಚೂಣಿಯಲ್ಲಿದ್ದು ಹೈನುಗಾರಿಕೆಯಿಂದಲೇ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ.

ಜಿಲ್ಲೆಯಲ್ಲಿ ಒಟ್ಟು ಸುಮಾರು 1.75 ಲಕ್ಷ ರಾಸುಗಳಿದ್ದು ಜಿಲ್ಲೆಯ ಐದು ತಾಲ್ಲೂಕುಗಳಿಂದ ಪ್ರತಿನಿತ್ಯ ಸುಮಾರು 3.5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ. 2 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಚಾಮರಾಜನಗರ ಹಾಗೂ 50,000 ಲೀಟರ್ ಹಾಲು ಉತ್ಪಾದಿಸುವ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಕೂಡ ಪ್ರತ್ಯೇಕ ಹಾಲು ಒಕ್ಕೂಟಗಳಿದ್ದರೂ ಚಿಕ್ಕಬಳ್ಳಾಪುರಕ್ಕೆ ಮಾತ್ರ ಪ್ರತ್ಯೇಕ ಒಕ್ಕೂಟ ನೀಡದೆ ಕಾಂಗ್ರೆಸ್ ಪಕ್ಷ ದಶಕಗಳಿಂದ ಜಿಲ್ಲೆಯ ರೈತರಿಗೆ, ಹೈನುಗಾರಿಕೆ ಉದ್ಯಮಕ್ಕೆ ಅನ್ಯಾಯ ಮಾಡುತ್ತಾ ಬಂದಿತ್ತು.

ಆಡಳಿತಾತ್ಮಕ ದೃಷ್ಟಿಯಿಂದ, ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆ.

ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಒಂದು ವರ್ಷದಿಂದ ನಡೆಯುತ್ತಿದ್ದ ಪ್ರತ್ಯೇಕ ಒಕ್ಕೂಟವನ್ನು ಧಿಡೀರನೆ ನಿಲ್ಲಿಸಿ, ಬಿಜೆಪಿ ಸರ್ಕಾರದ ಆದೇಶವನ್ನು ಏಕಾಏಕಿ ರದ್ದು ಮಾಡಿ ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸಕ್ಕೆ ಕೈ ಹಾಕಿತು.ಈ ನೇಮಕಾತಿ ಹಗರಣ ಗಮನಿಸಿದರೆ, ಪ್ರತ್ಯೇಕ ಒಕ್ಕೂಟವನ್ನು ವಿರೋಧಿಸುವ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ದುರುದ್ದೇಶ ಏನೆಂದು ಅರ್ಥವಾಗುತ್ತಿದೆ.

ಈ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಅಪಾರದರ್ಶಕವಾಗಿದ್ದು, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದ್ದರಿಂದ ಈ ನೇಮಕಾತಿಯನ್ನು ಈ ಕೂಡಲೇ ರದ್ದು ಮಾಡಿ ನಿಷ್ಪಕ್ಷಪಾತ ತನಿಖೆಗೆ ಆದೇಶ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

Tags: appointmentschikkaballapurackcknewsnowdr k sudhakarkmfkochimulkochimul scamkolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
kochimul appointment scam: ಕೋಚಿಮುಲ್‌ ನೇಮಕಾತಿ ಕರ್ಮಕಾಂಡ

#kochimul Appointment Scam : ಅರ್ಹರು ನ್ಯಾಯಾಲಯಕ್ಕೆ ಹೋಗುವ ಭೀತಿ: ರಾತ್ರಿ ಸಹಿ, ಬೆಳಗ್ಗೆ ಆದೇಶ! ತರಾತುರಿಯಲ್ಲಿ ನೇಮಕಾತಿ ಪತ್ರ ಕೊಟ್ಟ ಕೋಚಿಮುಲ್‌!!

Leave a Reply Cancel reply

Your email address will not be published. Required fields are marked *

Recommended

ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಆಯಿತು, ಈಗ ರಂಗದ ಮೇಲೆ ಎಸ್.ಎಲ್. ಭೈರಪ್ಪನವರ ಕಾದಂಬರಿ ‘ಪರ್ವ’; ಏಳೂವರೆ ಗಂಟೆ ನಾಟಕದಲ್ಲಿ 40ಕ್ಕೂ ಹೆಚ್ಚು ಕಲಾವಿದರು

ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಆಯಿತು, ಈಗ ರಂಗದ ಮೇಲೆ ಎಸ್.ಎಲ್. ಭೈರಪ್ಪನವರ ಕಾದಂಬರಿ ‘ಪರ್ವ’; ಏಳೂವರೆ ಗಂಟೆ ನಾಟಕದಲ್ಲಿ 40ಕ್ಕೂ ಹೆಚ್ಚು ಕಲಾವಿದರು

6 years ago
ಮೀಸಲು; ವಾಲ್ಮೀಕಿ ಜಯಂತಿಯಂದು ಸರಕಾರಕ್ಕೆ ನೇರ ಎಚ್ಚರಿಕೆ

ಮೀಸಲು; ವಾಲ್ಮೀಕಿ ಜಯಂತಿಯಂದು ಸರಕಾರಕ್ಕೆ ನೇರ ಎಚ್ಚರಿಕೆ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ