• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

cknewsnow desk by cknewsnow desk
December 20, 2023
in COVID-19, STATE
Reading Time: 1 min read
0
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ
939
VIEWS
FacebookTwitterWhatsuplinkedinEmail

ನಾಳೆ ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ


ಬೆಂಗಳೂರು: ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಆದರೆ, ಈ ಸಾವು ಕೊರೋನಾ ರೂಪಾಂತರಿಯಿಂದ ಆದ ಸಾವಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 64 ವರ್ಷದ ವೃದ್ಧರೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆಯುತ್ತಿದ್ದಂತೆ ಸರಕಾರ ಎಚ್ಚೆತ್ತುಕೊಂಡು ಹಲವು ಕಠಿಣ ಕ್ರಮಕ್ಕೆ ಮುಂದಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ನಿವಾಸಿಗೆ ಕೊರೊನಾ ಜೊತೆ ಟಿಬಿ, ಬಿಪಿ ಸೇರಿದಂತೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ನಡುವೆ ಕೊರೊನಾ ಪಾಸಿಟಿವ್ ಕೂಡ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಧ್ಯಾಹ್ನ ಒಂದು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಇದರ ಮಧ್ಯೆ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ವಿಡಿಯೊ ಕಾನ್ಫರೆನ್ಸ್ ಮೂಲಕ ಕರ್ನಾಟಕದ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ರಾಜ್ಯದಲ್ಲಿನ ಕೊರೊನಾ ಸೋಂಕಿನ ಸ್ಥಿತಿಗತಿ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಕೇಂದ್ರ ಸಚಿವರ ಸಲಹೆ-ಸೂಚನೆ

ಎರಡನೇ ಬಾರಿಗೆ ಕೋವಿಡ್ ಲಸಿಕೆ ತೆಗೆದುಕೊಂಡ ನಂತರವೂ ಕರ್ನಾಟಕದಲ್ಲಿ ಸೋಂಕು ಹರಡುತ್ತಿರುವ ಬಗ್ಗೆ ಮಾಹಿತಿ ನೀಡಿ ಹಾಗೂ ಸೋಂಕು ಪತ್ತೆಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಹೆಚ್ಚು ಮಾಡಿ, ಸೋಂಕಿಗೆ ಒಳಗಾದವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಿ ಎಂದು ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.

ರಾಷ್ಟ್ರದ ಕೆಲ ಭಾಗಗಳಲ್ಲಿ ಹೊಸ ವೈರಾಣು ಕಾಣಿಸಿಕೊಂಡಿದೆ. ಇದೊಂದು ಕೋವಿಡ್-19 ನ ರೂಪಾಂತರ, ಭಯ-ಭೀತಿ ಬೇಡ. ಆದರೆ, ನಾವು ಎಚ್ಚರಿಕೆ ವಹಿಸಬೇಕಾಗಿದೆ ಎಂದಿದ್ದಾರೆ ಅವರು. ಗೋವಾ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚು ಕಂಡುಬಂದಿವೆ, ಆದ್ದರಿಂದ ಗಡಿಭಾಗದ ನೀವು, ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೆಚ್ಚು ಕೋವಿಡ್ ಪರೀಕ್ಷೆಗೆ ಆದೇಶ

ಕೇಂದ್ರ ಸಚಿವರೊಂದಿಗಿನ ವಿಡಿಯೊ ಸಂವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಪರೀಕ್ಷೆ ನಡೆಸುವಂತೆ ಆದೇಶಿಸಲಾಗಿದೆ ಎಂದಿದ್ದಾರೆ.

ಬರುವ ಶನಿವಾರದಿಂದ ಪ್ರತಿನಿತ್ಯ 5,000 ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಭಾರೀ ಸೋಂಕು ಕಂಡಾಗ ಶೇ.90ರಷ್ಟು ಮಂದಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆದುಕೊಂಡರು, ಈ ಬಾರಿ ನಾವು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದೇವೆ. ಸೋಂಕು ತಡೆಗೆ ಮುಂಜಾಗ್ರತಾ ಕ್ರಮಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಅವರು ನಾಳೆ ಉನ್ನತ ಮಟ್ಟದ ಸಭೆ ಕರೆದಿದ್ದು, ಅದರಲ್ಲಿ ಸಲಹಾ ಸಮಿತಿ ಸದಸ್ಯರು ಇರುತ್ತಾರೆ.

ಮೂರು ತಿಂಗಳಿಗೆ ಅಗತ್ಯ ಔಷಧ, ಆಮ್ಲಜನಕ ದಾಸ್ತಾನು

ಮುಂದಿನ ಮೂರು ತಿಂಗಳಿಗೆ ಅಗತ್ಯವಿರುವ ಔಷಧ ಮತ್ತು ಆಮ್ಲಜನಕವನ್ನು ಶೇಖರಣೆ ಮಾಡಲಾಗುವುದು, ನಗರದಲ್ಲಿ ಇದಕ್ಕಾಗಿ ಒಂದು ಆಸ್ಪತ್ರೆಯನ್ನು ಮೀಸಲಿಡಲಾಗುವುದು. ರಾಜ್ಯದಲ್ಲಿ ನಿನ್ನೆ ಸೋಂಕಿಗೆ ಮೃತಪಟ್ಟಿರುವ ವ್ಯಕ್ತಿಗೆ ಟಿಬಿ, ಅಸ್ತಮಾ, ಶ್ವಾಸಕೋಶದ ಸಮಸ್ಯೆಗಳಿತ್ತು, ಇವರಿಗೆ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ ಎಂದರು.

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

ಆರೋಗ್ಯ ಸಚಿವರು ಹೇಳಿದ್ದೇನು?

ಕೊರೊನಾ ವೈರಸ್​ನ ಜೆಎನ್​ 1 ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅದರಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಿದ್ದಾರೆ. ಸಭೆಯ ನಂತರ ವಿಕಾಸಸೌಧದಲ್ಲಿ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೃತ ವ್ಯಕ್ತಿಯ ಕುಟುಂಬದಲ್ಲಿ ಒಟ್ಟು 5 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ವೇಳೆ ಐವರಿಗೂ ನೆಗೆಟಿವ್‌ ಬಂದಿದೆ. ಸದ್ಯ ಐದು ಜನರು ಕೂಡ ಕ್ವಾರಂಟೈನ್ ನಲ್ಲಿ ಇದ್ದಾರೆ. ಮೃತಪಟ್ಟ ವ್ಯಕ್ತಿಯ ಜೆನೆಮಿಕ್ ಸೀಕ್ವೆನ್ಸ್ ರಿಪೋರ್ಟ್ ಗಾಗಿ ಬಿಬಿಎಂಪಿ ಕಾಯುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ದೇಶದಲ್ಲಿ ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಕರ್ನಾಟಕದಲ್ಲಿ ಕೋವಿಡ್​ ಸೋಂಕಿನಿಂದಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. ಜೆಎನ್ .1 ವೈರಸ್​​ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 ಜೆಎನ್.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್​ ಪತ್ತೆಯಾಗಿದೆ ಎಂದು ಸಚಿವರು ಹೇಳಿದರು.

Tags: ckcknewsnowcovid19death healthkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

Leave a Reply Cancel reply

Your email address will not be published. Required fields are marked *

Recommended

ELECTION 2021: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ I ತಮಿಳುನಾಡಿಲ್ಲಿ ಡಿಎಂಕೆ I ಕೇರಳದಲ್ಲಿ ಎಡರಂಗ I ಅಸೋಮ್‌ನಲ್ಲಿ ಬಿಜೆಪಿ I ಪುದುಚೆರಿಯಲ್ಲಿ ಎನ್.ಆರ್.‌ಕಾಂಗ್ರೆಸ್

ELECTION 2021: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ I ತಮಿಳುನಾಡಿಲ್ಲಿ ಡಿಎಂಕೆ I ಕೇರಳದಲ್ಲಿ ಎಡರಂಗ I ಅಸೋಮ್‌ನಲ್ಲಿ ಬಿಜೆಪಿ I ಪುದುಚೆರಿಯಲ್ಲಿ ಎನ್.ಆರ್.‌ಕಾಂಗ್ರೆಸ್

5 years ago
ಜೈವಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚು ಸಹಕಾರ: ನಿರ್ಮಲಾ ಸೀತಾರಾಮನ್

ಜೈವಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚು ಸಹಕಾರ: ನಿರ್ಮಲಾ ಸೀತಾರಾಮನ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ