• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

cknewsnow desk by cknewsnow desk
December 21, 2023
in COVID-19, STATE
Reading Time: 1 min read
0
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು
920
VIEWS
FacebookTwitterWhatsuplinkedinEmail

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಉನ್ನತ ಮಟ್ಟದ ಸಭೆ ನಡೆಸಲಾಯಿತು.

ಕೋವಿಡ್‌ 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ JN.1 ಎಂಬ ಹೊಸ ತಳಿಯ ವೈರಸ್‌ ಪತ್ತೆಯಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ.

ಕರ್ನಾಟಕದಲ್ಲಿ ಪ್ರಸ್ತುತ 92 Active COVID Cases ವರದಿಯಾಗಿವೆ. ಕೇರಳದಲ್ಲಿ 2041, ತಮಿಳುನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 Active cases ಇವೆ. ರಾಜ್ಯದಲ್ಲಿರುವ ಒಟ್ಟು 92 Active COVID Case ಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.

ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (Home Isolation). 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 5000 ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 Rapid Antigen Test ಹಾಗೂ 3500 RTPCR ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು.

ಕರ್ನಾಟಕದಲ್ಲಿ ಡಿಸೆಂಬರ್‌ 15 ರಂದು ಒಂದು ಹಾಗೂ ಡಿಸೆಂಬರ್‌ 20 ರಂದು ಎರಡು ಸಾವುಗಳು ಸಂಭವಿಸಿವೆ. ಈ ಮೂರು ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ (Co-Morbidity) ಬಳಲುತ್ತಿದ್ದರು. ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್‌ 19 ಈಗ Pandemic ಆಗಿ ಉಳಿದಿಲ್ಲ. Endemic ಆಗಿದೆ.

ಸರ್ಕಾರವೂ ಸಹ ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ. ಮೃತರಾದವರು, Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್‌ ಸಿಕ್ವೆನ್ಸಿಂಗ್‌ ಮಾಡಲಾಗುತ್ತಿದೆ. ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅದರಂತೆ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು:

ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು. ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಇವು ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.

https://youtu.be/hDbGPwtcW_o

• ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.
• ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
• ಎಲ್ಲ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.
ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳು ಹಾಗೂ ರಾಜ್ಯದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು
• 60 ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್‌ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್‌ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರುವುದು.
• ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್‌ ಧರಿಸುವುದು.
• ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
• ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್‌ ಧರಿಸುವುದು ಉತ್ತಮ.
• ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು.
• ಭಾರತ ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದೆ.
• ರಾಜ್ಯವೂ ಕೇರಳ ಮತ್ತು ತಮಿಳು ನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
• ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20 ರಲ್ಲಿ 1 ಜ್ವರ (ILI) ದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ.

Tags: ckcknewsnowcmcoronacovid meetingcovid19Healthkarnatakasiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಧಾನಮಂಡಲ ಅಧಿವೇಶನ

Guarantee 5: ಡಿ.26ರಿಂದ ಯುವನಿಧಿ; ಪದವೀಧರರಿಗೆ ಮಾಸಿಕ ರೂ.3,000, ಡಿಪ್ಲೋಮಾದವರಿಗೆ ರೂ.1,500

Leave a Reply Cancel reply

Your email address will not be published. Required fields are marked *

Recommended

ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ

ಸಿಎಂ ಬೊಮ್ಮಾಯಿ ಅವರಿಗೆ ಕೋವಿಡ್‌ ಪಾಸಿಟೀವ್‌

4 years ago
ಬಾಗೇಪಲ್ಲಿಯಲ್ಲಿ ಆಜಾದಿ ಅಮೃತ ಮಹೋತ್ಸವದ ಸಂಭ್ರಮ

ಬಾಗೇಪಲ್ಲಿಯಲ್ಲಿ ಆಜಾದಿ ಅಮೃತ ಮಹೋತ್ಸವದ ಸಂಭ್ರಮ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ