ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ
ಸಿಎಂ, ಸಚಿವರ ವಾಯು ವಿಹಾರಕ್ಕೆ ವ್ಯಾಪಕ ಟೀಕೆ
ಬೆಂಗಳೂರು: ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಐಷಾರಾಮಿ ವಿಮಾನದಲ್ಲಿ ಮಾಡಿರುವ ರೀಲ್ಸ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ರಾಜ್ಯದ ಜನರು ಬರದ ಸಂಕಷ್ಟಕ್ಕೆ ಸಿಲುಕಿದ್ದರೆ ಜವಾಬ್ದಾರಿಯುತ ಸಚಿವರು ಮೋಜು ಮಸ್ತಿ ಮಾಡಿಕೊಂಡು ರೀಲ್ಸ್ ಮಾಡಿಕೊಂಡು ತಿರುಗುತ್ತಿರುವುದು ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿಪಕ್ಷ ಬಿಜೆಪಿ ಸಚಿವ ಜಮೀರ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಬರದ ನಡುವೆಯೂ ಸಚಿವರ ಜತೆ ಸಿಎಂ ಸಿದ್ದರಾಮಯ್ಯ, ಅವರ ರಾಜಕೀಯ ಕಾರ್ಯದರ್ಶಿ, ಸಚಿವರು ಮತ್ತಿತರೆ ಸಿಬ್ಬಂದಿ ಐಷಾರಾಮಿ ವಿಮಾನ ವಿಹಾರ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಗ್ಯಾರಂಟಿಗಳನ್ನು ಜಾರಿ ಮಾಡಿರುವ ಸರ್ಕಾರ ಆರ್ಥಿಕ ಕಷ್ಟ ಎದುರಿಸುತ್ತಿದೆ. ಯೋಜನೆಗಳು, ಶಾಸಕರಿಗೆ ಕೊಡಲು ಹಣ ಇಲ್ಲ. ಹೀಗಿದ್ದರೂ ಸಿಎಂ ಮತ್ತು ಸಚಿವರು ದುಬಾರಿ ವಾಯು ವಿಹಾರ ನಡೆಸುತ್ತಿರುವುದು ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನಿಸಿದೆ.
ಆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜಮೀರ್ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
— Vijayendra Yediyurappa (Modi Ka Parivar) (@BYVijayendra) December 22, 2023
ಜನರ ದುಡ್ಡು ಆಕಾಶದಲ್ಲಿ ಜಾತ್ರೆ".
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು… pic.twitter.com/Bx5VLq1hsB
“ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ”. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ.
ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.
Karnataka government does not have funds to pay our Farmers affected by drought. Neither does it have funds for development or to fulfill its guarantees.
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) December 22, 2023
But it has all the funds to fly the chief minister, his political secretary and housing minister in luxurious private jet.… pic.twitter.com/vkndZPQbpC
ಹಾಗೆಯೇ, ಬಿಜೆಪಿ ಹಿರಿಯ ನಾಯಕ ಸಿಟಿ ರವಿ ಕೂಡ ಜಮೀರ್ ರೀಲ್ಸ್ ಅನ್ನು ಕಟುವಾಗಿ ಟೀಕಿಸಿದ್ದಾರೆ.
ಬರದಿಂದ ಕಂಗೆಟ್ಟಿರುವ ರೈತರಿಗೆ ಪರಿಹಾರ ಕೊಡಲು ರಾಜ್ಯ ಸರಕಾರದಲ್ಲಿ ಹಣ ಇಲ್ಲ. ಅಭಿವೃದ್ಧಿ ಕೆಲಸಗಳು ಹಾಗೂ ತಾನೇ ಘೋಷಣೆ ಮಾಡಿರುವ ಗ್ಯಾರೆಂಟಿಗಳಿಗೆ ಕೊಡಲು ಹಣವಿಲ್ಲ.
ಆದರೆ, ಐಷಾರಾಮಿ ಖಾಸಗಿ ವಿಮಾನದಲ್ಲಿ ಮುಖ್ಯಮಂತ್ರಿ, ಸಚಿವರು, ರಾಜಕೀಯ ಕಾರ್ಯದರ್ಶಿಗಳನ್ನು ಹಾಗೂ ವಸತಿ ಸಚಿವರನ್ನು ಸುತ್ತಿಸಲು ಹಣವಿರುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಸಮಾಜವಾದಿ ಅಲ್ಲ, ಮಾಜಾವಾದಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.