• About
  • Advertise
  • Careers
  • Contact
Wednesday, May 6, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಸಿಬಿಐಗೆ ಸವಾಲ್‌ ಹಾಕಿದ ಡಿಕೆಶಿ; ಜೈಲಿಗೆ ಹಾಕಲಿ, ನಾನು ಹೆದರಲ್ಲ ಎಂದ ಡಿಸಿಎಂ

cknewsnow desk by cknewsnow desk
January 1, 2024
in BUSINESS, NATION, POLITICS, STATE
Reading Time: 2 mins read
0
ಸಿಬಿಐಗೆ ಸವಾಲ್‌ ಹಾಕಿದ ಡಿಕೆಶಿ; ಜೈಲಿಗೆ ಹಾಕಲಿ, ನಾನು ಹೆದರಲ್ಲ ಎಂದ ಡಿಸಿಎಂ
960
VIEWS
FacebookTwitterWhatsuplinkedinEmail

ಕೇರಳದ ಜೈಹಿಂದ್‌ ಸುದ್ದಿವಾಹಿನಿಯಲ್ಲಿ ಹಣ ಹೂಡಿಕೆ ಪ್ರಕರಣ; ಯಾವುದೀ ಚಾನೆಲ್?‌ ಅದರ ಪೂರ್ವಾಪರ ಏನು?

ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸರಕಾರದ ಅನುಮತಿ ಇಲ್ಲದೆ, ಸಿಬಿಐ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಕರ್ನಾಟಕ ಸರಕಾರ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿದ್ದರೂ, ಹೂಡಿಕೆಗೆ ಸಂಬಂಧಿಸಿದಂತೆ ಶಿವಕುಮಾರ್ ಮತ್ತು ಮತ್ತವರ ಕುಟುಂಬ ವರ್ಗದವರ ವಿಚಾರಣೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಮುಂದುವರಿಸಿದೆ.

ಕೇರಳ ಮಲಯಾಳಿ ಚಾನೆಲ್‌ನಲ್ಲಿ ಹೂಡಿಕೆ

ಕೇರಳ ಮೂಲದ ʼಜೈಹಿಂದ್ʼ ಚಾನೆಲ್‌ನ ಜೈಹಿಂದ್‌ ಕಮ್ಯುನಿಕೇಷನ್ಸ್ ಪ್ರೈವೇಟ್‌ ಲಿಮಿಟೆಡ್‌ ನಲ್ಲಿ ಡಿಕೆಶಿ ಅವರು ಮಾಡಿರುವ ಹೂಡಿಕೆಯ ವಿವರವನ್ನು ಸಲ್ಲಿಸುವಂತೆ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್‌ ಮಾಲೀಕತ್ವದಲ್ಲಿ ಈ ಸಂಸ್ಥೆಯ ಮಾತೃಸಂಸ್ಥೆ ಭಾರತ್‌ ಬ್ರಾಡ್‌ʼಕಾಸ್ಟಿಂಗ್‌ ನೆಟ್‌ʼವರ್ಕ್‌ ಲಿಮಿಟೆಡ್.‌ 2007 ಆಗಸ್ಟ್‌ 17ರಂದು ವಾಹಿನಿಯನ್ನು ಸೋನಿಯಾ ಗಾಂಧಿ ಅವರು ಉದ್ಘಾಟನೆ ಮಾಡಿದ್ದರು.

ಡಿಕೆಶಿ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ನೋಟಿಸ್ ಜಾರಿಯಾಗಿದ್ದು, ಜನವರಿ 11ರಂದು ವಿಚಾರಣೆಗೆ ಹಾಜರಾಗುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರಿಗೆ ಆದೇಶಿಸಿದೆ. ಜನವರಿ 11ರಂದು ದಾಖಲೆಗಳ ಸಮೇತ ತನ್ನ ಮುಂದೆ ಹಾಜರಾಗಬೇಕು ಎಂದು ಸಿಬಿಐ ಸೂಚನೆ ನೀಡಿದೆ.

ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಅವರು ಚಾನೆಲ್‌ನಲ್ಲಿ ಮಾಡಿರುವ ಹೂಡಿಕೆಗೆ ಪ್ರತಿಯಾಗಿ ಪಡೆದಿರುವ ಲಾಭಾಂಶ, ಷೇರು ವಹಿವಾಟು, ಹೊಂದಿರುವ ಆಸ್ತಿ ವಿವರಗಳು, ಇದಕ್ಕೆ ಸಂಬಂಧಪಟ್ಟಂತೆ ಸಂಪರ್ಕದಲ್ಲಿರುವವರ ವಿವರಗಳನ್ನು ನೀಡುವಂತೆ ಸಿಬಿಐ ಸೂಚಿಸಿದೆ.‌ ಸಿಆರ್‌ ಪಿಸಿ ಸೆಕ್ಷನ್ 91ರ ಅಡಿಯಲ್ಲಿ ಚಾನೆಲ್‌ʼಗೆ ತನಿಖಾದಳ ನೊಟೀಸ್‌ ಜಾರಿ ಮಾಡಿದೆ.

ಸಿಬಿಐ ನೊಟೀಸ್‌ ನಮಗೆ ಸಿಕ್ಕಿದೆ. ಗಡುವಿನೊಳಗೆ ಎಲ್ಲಾ ದಾಖಲೆಗಳೊಂದಿಗೆ ಸಿಬಿಐ ಮುಂದೆ ಹಾಜರಾಗುತ್ತೇವೆ ಎಂದು ಶಿಜು ಅವರು ಕೇರಳ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಶಿಜು ಅವರು ಕೂಡ ಕೇರಳ ಕಾಂಗ್ರೆಸ್‌ ಪಕ್ಷದ ಪ್ರಭಾವೀ ನಾಯಕರಾಗಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಹಾಖುವ ಉದ್ದೇಶದಿಂದ ಸಿಬಿಐ ಈ ಪ್ರಕರಣದ ಬಗ್ಗೆ ಎಲ್ಲಿಲ್ಲದ ಉತ್ಸಾಹ ತೋರುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಬಿ.ಎಸ್.ಶಿಜು

ಬಿಜೆಪಿ ಸರಕಾರ ಸಿಬಿಐಗೆ ವಹಿಸಿತ್ತು

ಜೈಹಿಂದ್‌ ವಾಹಿನಿ ಹಾಗೂ ಅದರ ಮಾತೃಸಂಸ್ಥೆಯನ್ನು ಕೇರಳ ಮೂಲದ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದು, ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹಿಂದಿನ ಬಿಜೆಪಿ ಸರಕಾರ ಸಿಬಿಐಗೆ ವಹಿಸಿತ್ತು.

ಹಿಂದಿನ ಸರಕಾರ ಕಾನೂನು ರೀತ್ಯಾ ಈ ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ ಎಂಬ ಕಾರಣ ನೀಡಿ ಹಾಲಿ ಕಾಂಗ್ರೆಸ್‌ ಸರಕಾರ ಪ್ರಕರಣವನ್ನು ಹಿಂದಕ್ಕೆ ಪಡೆದಿತ್ತು. ಅದಕ್ಕಾಗಿ ಕ್ಯಾಬಿನೆಟ್‌ ನಿರ್ಧಾರ ಕೈಗೊಂಡಿತ್ತು.

ಬಲೆಗೆ ಕೆಡವಲು ಸಿಬಿಐ ಯತ್ನ

ಇದೀಗ ಸಿಬಿಐ, ಕೇರಳ ಕಂಪನಿಯ ಮೂಲಕ ಶಿವಕುಮಾರ್ ಅವರನ್ನು ಬಲೆಗೆ ಕೆಡವಲು ಯತ್ನಿಸುತ್ತಿದೆಯಾ ಎನ್ನುವ ಅನುಮಾನ ದಟ್ಟವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಅವರು; ನನ್ನ ಗಳಿಕೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ನೀಡಿದ್ದರೂ ಸಿಬಿಐ ಮತ್ತೆ ನೋಟಿಸ್ ಜಾರಿ ಮಾಡುತ್ತಿರುವುದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

ನನ್ನನ್ನು ಕೆಲ ಕಾಣದ ಕೈಗಳು ಈ ಷಡ್ಯಂತ್ರದ ಹಿಂದೆ ಇದ್ದು, ರಾಜಕೀಯವಾಗಿ ನನ್ನನ್ನು ಕಟ್ಟಿಹಾಕುವ ಪ್ರಯತ್ನ ನಡೆಸಿವೆ. ಸಿಬಿಐ ತನಿಖೆ ಪೂರ್ಣಗೊಳಿಸುವ ಹಂತದಲ್ಲಿದೆ ಎಂದುಕೊಂಡು ನನ್ನನ್ನು ವಿಚಾರಣೆಗೆ ಕರೆಸಬೇಕಿತ್ತು. ಈ ಹಂತದಲ್ಲಿ ದುರುದ್ದೇಶದ ರಾಜಕೀಯ ಮನಗಂಡು ಸಿಬಿಐ ತನಿಖೆಗೆ ನೀಡಿದ್ದ ಪ್ರಕರಣವನ್ನು ಕರ್ನಾಟಕ ಸರಕಾರ ಹಿಂದಕ್ಕೆ ಪಡೆದಿದೆ ಎಂದು ಅವರು ದೂರಿದ್ದಾರೆ.

ಸಿಬಿಐ ನೋಟಿಸ್ ಪ್ರಶ್ನಿಸಿದ್ದೇನೆ

ಇಷ್ಟಾದರೂ ನನ್ನನ್ನು ಸಿಬಿಐ ಕರೆಯುತ್ತಿದೆ. ಅವರ ನೋಟಿಸ್ ಅನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೇನೆ, ನಾನು ಹೋಗುತ್ತಿಲ್ಲ, ಅವರು ನನ್ನನ್ನು ಒಳಕ್ಕೆ ಹಾಕಿಕೊಳ್ಳಬೇಕು ಎಂದಿದ್ದರೆ ಹಾಕಿಕೊಳ್ಳಲಿ. ನಾನೇನು ಹೆದರುವುದಿಲ್ಲ, ನೋಡೋಣ, ಅವರೇನು ಮಾಡುತ್ತಾರೋ ಮಾಡಿಕೊಳ್ಳಲಿ ಎಂದು ಡಿಕೆಶಿ ಸವಾಲು ಹಾಕಿದ್ದಾರೆ.

ಅಕ್ರಮ ಆದಾಯ ಸಂಪಾದನೆ ಪ್ರಕರಣದಲ್ಲಿ ನನಗೆ ಕಿರುಕುಳ ಮುಂದುವರಿಸಿದ್ದಾರೆ. ಸರಕಾರ ಅನುಮತಿಯನ್ನು ಹಿಂದಕ್ಕೆ ಪಡೆದಿದ್ದರೂ ಸಿಬಿಐನವರು ಸಬ್ ರಿಜಿಸ್ಟ್ರಾರ್ ಕಚೇರಿ, ಸರಕಾರಿ ಕಚೇರಿ, ಸಹಕಾರಿ ಸೊಸೈಟಿ, ನಾನು ಅಧ್ಯಕ್ಷನಾಗಿರುವ ಸಂಸ್ಥೆ ಸೇರಿದಂತೆ ಅನೇಕರಿಗೆ ನೋಟಿಸ್ ಕೊಟ್ಟಿದ್ದಾರೆ. ಯಾವ ಲೆಕ್ಕಾಚಾರದ ಮೇಲೆ ಈ ನೋಟಿಸ್ ಕೊಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಉದ್ದೇಶ ಏನೆಂಬುದೂ ತಿಳಿದಿಲ್ಲ. ಆದರೆ ಮೇಲ್ನೋಟಕ್ಕೆ ಅವರು ನನಗೆ ಹಾಗೂ ಪಕ್ಷಕ್ಕೆ ತೊಂದರೆ ನೀಡಲು ದೊಡ್ಡ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಬಿಐ ತನಿಖೆಯನ್ನು ರಾಜ್ಯ ಸರಕಾರ ಲೋಕಾಯಕ್ತಕ್ಕೆ ಹಸ್ತಾಂತರ ಮಾಡಿದೆ, ಕರ್ನಾಟಕ ಸರಕಾರ ಸಿಬಿಐ ಪ್ರಕರಣವನ್ನು ಹಿಂಪಡೆದಿರುವುದನ್ನು ಹೈಕೋರ್ಟ್ ಒಪ್ಪಿದ್ದರೂ, ಸಿಬಿಐ ಯಾಕೆ ನೋಟಿಸ್ ನೀಡುತ್ತಿದೆ ಎಂಬುದು ಗೊತ್ತಿಲ್ಲ. ಅವರ ಬಳಿ ನನ್ನ ಎಲ್ಲಾ ದಾಖಲೆಗಳು ಇವೆ, ಲೋಕಾಯುಕ್ತಕ್ಕೆ ಪ್ರಕರಣ ಹಸ್ತಾಂತರವಾಗಿರುವ ಹಿನ್ನೆಲೆಯಲ್ಲಿ ಈ ಎಲ್ಲಾ ದಾಖಲೆಗಳನ್ನು ಸಿಬಿಐ ಲೋಕಾಯುಕ್ತಕ್ಕೆ ನೀಡಬೇಕಾಗಿದೆ ಎಂದಿದ್ದಾರೆ ಅವರು.

ನನ್ನ ಸಂಸ್ಥೆ, ಹೆಂಡತಿ, ಮಕ್ಕಳು, ಕುಟುಂಬ ಸದಸ್ಯರಿಗೆ ಕಿರುಕುಳ

ನನ್ನ ಸಂಸ್ಥೆ, ನನ್ನ ಹೆಂಡತಿ, ಮಕ್ಕಳು, ಕುಟುಂಬ ಸದಸ್ಯರು ಸೇರಿದಂತೆ ಹಲವರಿಂದ ಮಾಹಿತಿ ಕೇಳುತ್ತಿದ್ದಾರೆ. ಮೊದಲು ಈ ರೀತಿ ಮಾಡಿ ನಂತರ ಸಿಬಿಐ ನನಗೆ ನೋಟಿಸ್ ನೀಡುತ್ತಾರೆ. ಬಿಜೆಪಿಯವರು ನನ್ನನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮೊದಲೇ ಹೇಳಿಕೊಳ್ಳುತ್ತಿದ್ದರು. ಇದೀಗ ಅದು ಸಾಭೀತಾಗುವ ಸಮಯ ಬಂದಿದೆ ಎಂದಿರುವ ಡಿಕೆಶಿ; ಅವರ ಆಸೆಗಳನ್ನು ಈಡೇರಿಸಿಕೊಳ್ಳಲಿ, ನಾನು ಸಿದ್ಧನಿದ್ದೇನೆ. ಅಹಮದ್ ಪಟೇಲ್ ಬದುಕಿಲ್ಲ, ಆದರೂ ನನಗೆ ರಾಜಕೀಯ ಕಿರುಕುಳ ಕೊಡುವುದನ್ನು ಮುಂದುವರೆಸಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದು ನನಗೆ ಗೊತ್ತು. ಕಾನೂನು ಇದೆ, ನನ್ನ ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೂ ಸಂಕಷ್ಟ

ಈ ಹಿಂದೆ ಕಾಂಗ್ರೆಸ್‌ ಪಕ್ಷದ ಮಾಲೀಕತ್ವದಲ್ಲಿರುವ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಕೂಡ ಇಂಥದ್ದೇ ವಿವಾದಕ್ಕೆ ಗುರಿಯಾಗಿತ್ತು. ಈಗ ಜೈಹಿಂದ್‌ ಸಂಕಷ್ಟಕ್ಕೆ ಸಿಲುಕಿದೆ.

Tags: bs shijum keralaCBIckcknewsnowCongressDK Shivakumarjai hindkarnatakaMalayalam ChanelmediaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಹುಲ್ ಗಾಂಧಿ ಹೊಸವರ್ಷ ಸೆಲೆಬ್ರೇಟ್ ಮಾಡಿದ್ದು ಹೇಗೆ?

ರಾಹುಲ್ ಗಾಂಧಿ ಹೊಸವರ್ಷ ಸೆಲೆಬ್ರೇಟ್ ಮಾಡಿದ್ದು ಹೇಗೆ?

Leave a Reply Cancel reply

Your email address will not be published. Required fields are marked *

Recommended

ಸರಳ ಜಂಬೂ ಸವಾರಿ; ಅಭಿಮನ್ಯು ಹೊತ್ತ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ಚಾಮುಂಡೇಶ್ವರಿ ಅಮ್ಮನವರಿಗೆ ನಮಿಸಿದ ನಾಡಜನ

ಸರಳ ಜಂಬೂ ಸವಾರಿ; ಅಭಿಮನ್ಯು ಹೊತ್ತ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ಚಾಮುಂಡೇಶ್ವರಿ ಅಮ್ಮನವರಿಗೆ ನಮಿಸಿದ ನಾಡಜನ

6 years ago
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ತಾಂತ್ರಿಕ ಸಲಹಾ ಸಮಿತಿ 15 ಪುಟಗಳ ವರದಿ: ಲಾಕ್‌ಡೌನ್‌ ಬಗ್ಗೆ ನಾಳೆ ಸಂಪುಟ ನಿರ್ಧಾರ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ