ಭಾರತ ವಿಶ್ವಗುರುವಾಗಿ ಹೊರಹೊಮ್ಮಲು ವಿವೇಕಾನಂದರ ವಿಚಾರಧಾರೆಯೇ ಮುಖ್ಯ ಕಾರಣ
by GS Bharath Gudibande
ಗುಡಿಬಂಡೆ: ಸ್ವಾಮಿ ವಿವೇಕಾನಂದರ ವಿಚಾರಗಳು ಭಾರತಕ್ಕೆ ಮಾತ್ರವಲ್ಲದೇ ಇಡೀ ಜಗತ್ತಿಗೇ ಸ್ಫೂರ್ತಿದಾಯಕ. ಭಾರತ ವಿಶ್ವಗುರುವಾಗಿ ಹೊರಹೊಮ್ಮಲು ವಿವೇಕಾನಂದರ ವಿಚಾರಧಾರೆಯೇ ಮುಖ್ಯ ಕಾರಣ. ಭಾರತದ ತತ್ವಾದರ್ಶಗಳನ್ನು ಎಲ್ಲಡೆ ಪ್ರಸಾರ ಮಾಡಿದರು ಎಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಹೇಳಿದ್ದಾರೆ.
ಗುಡಿಬಂಡೆ ತಾಲ್ಲೂಕು ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಗಾಂತಮ್ಮನಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನೋಟ್ ಬುಕ್ ಮತ್ತು ಇತರೆ ಲೇಖನ ಸಾಮಗ್ರಿಗಳು ವಿತರಣೆ ಹಾಗೂ ರಾಷ್ಟ್ರೀಯ ಯುವ ದಿನ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಬ್ಬಿಸುವ ಮಾತು. ಇಂತಹ ಹಲವು ನುಡಿಮುತ್ತುಗಳಿಂದ ವಿವೇಕಾನಂದರು ಯುವಜನರಲ್ಲಿ ಸ್ಫೂರ್ತಿಯ ಚಿಲುಮೆಯಾಗಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ. ಅವರ ನೆನಪಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು ಬಾಲೇನಹಳ್ಳಿ ರಮೇಶ್.
ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪ್ರಕಾಶ್ ರೆಡ್ಡಿ ಮಾತನಾಡಿ; ಜೀವನ ಎಂಬುದು ಕಠಿಣ ಸತ್ಯ. ಅದನ್ನು ಎದುರಿಸಿ. ನಿಮ್ಮ ಮಾರ್ಗದಲ್ಲಿ ಮುಂದುವರಿಯಿರಿ. ಅದು ಅಭೇದ್ಯವಾಗಿರಬಹುದು. ಆದರೆ ಆತ್ಮಅದಕ್ಕಿಂತ ಬಲಯುತವಾದುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ದವೇ ಗುರು ಹಾಗಾಗಿ ವಿದ್ಯಾರ್ಥಿಗಳು ಗುರುಗಳನ್ನು ಹೆಚ್ಚು ಗೌರವಿಸಬೇಕು, ಗುರುಗಳು ಇಲ್ಲದಿದ್ದರೆ ಜ್ಞಾನ ಹಾಗೂ ಸಾಧನೆ ಅಸಾಧ್ಯ.
ನವೀನ್ ರಾಜ್ ಕನ್ನಡಿಗ / ಅಧ್ಯಕ್ಷರು, ಕೆಪಿಸಿಸಿ ಸಾಮಾಜಿಕ ಜಾಲತಾಣ, ಗುಡಿಬಂಡೆ
ಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಲಕ್ಷ್ಮಿ ನಾರಾಯಣ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರಾಜಾರೆಡ್ಡಿ, ಬಾಬುರೆಡ್ಡಿ ಚಿನ್ನಹಳ್ಳಿ ರಮೇಶ್, ಗುಡಿಬಂಡೆ ಕೆಪಿಸಿಸಿ ಸಾಮಾಜಿಕ ಜಾಲತಾಣ ಅಧ್ಯಕ್ಷ ನವೀನ್ ರಾಜ್ ಕನ್ನಡಿಗ ಮತ್ತು ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು, ವಿಧ್ಯಾರ್ಥಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.