• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು

cknewsnow desk by cknewsnow desk
January 26, 2024
in NATION, STATE
Reading Time: 1 min read
0
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು
925
VIEWS
FacebookTwitterWhatsuplinkedinEmail

ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರದಿಂದ ಶಿಫಾರಸು: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು

ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು ಗೌರವಿಸದೆ, ರಾಯಣ್ಣನ ದೇಶಪ್ರೇಮಕ್ಕಾಗಿ ಸ್ಮರಿಸಬೇಕು

ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು

ಬೆಂಗಳೂರು: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು.

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.

ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು.

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು. ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ವಿವರಿಸಿದರು.

ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: chief minister siddaramaiahckcknewsnowfreedom fighterhubli airportSangolli rayanna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಬಾಗೇಪಲ್ಲಿಯ S.N.ಸುಬ್ಬಾರೆಡ್ಡಿಗೆ ಬೀಜ ನಿಗಮ, ಬಂಗಾರಪೇಟೆಯ S.N.ನಾರಾಯಣಸ್ವಾಮಿಗೆ ನಗರ ಮೂಲಸೌಕರ್ಯ ಅಭಿವೃದ್ದಿ ನಿಗಮ; ಕೆಜಿಎಫ್‌ʼನ ರೂಪಕಲಾ ಅವರಿಗೆ ಕರಕುಶಲ ಅಭಿವೃದ್ಧಿ ನಿಗಮ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ