• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ತೀವ್ರ ಬರಗಾಲ ಇದ್ದರೂ ಕೃಷಿ ಮನ್ನಾ ಮಾಡುವುದಿಲ್ಲ ಎಂದ ಸರಕಾರ

cknewsnow desk by cknewsnow desk
January 30, 2024
in NEWS IN USE, STATE
Reading Time: 1 min read
0
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

Photo from @ckphotographi

949
VIEWS
FacebookTwitterWhatsuplinkedinEmail

ಬಡ್ಡಿ, ಚಕ್ರಬಡ್ಡಿ ಮನ್ನಾ ಅವಕಾಶ ಫೆಬ್ರವರಿ ಅಂತ್ಯದವರೆಗೆ ಮಾತ್ರ

ಬೆಂಗಳೂರು: ತೀವ್ರ ಬರಗಾಲದಿಂದ ರೈತ ಸಂಕಷ್ಟದಲ್ಲಿದ್ದರೂ ಕೃಷಿ ಸಾಲ ಮನ್ನಾ ಅಸಾಧ್ಯ ಎಂದಿರುವ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು, ದೀರ್ಘಾವಧಿ ಸಾಲದ ಮೇಲಿನ ಬಡ್ಡಿ, ಚಕ್ರಬಡ್ಡಿ ಮನ್ನಾ ಮಾಡುವ ಕಾಲಾವಧಿ ವಿಸ್ತರಣೆ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಆಡಳಿತದಲ್ಲಿ ಸಾಲ ಮನ್ನಾ ಮಾಡಿದ 400 ಕೋಟಿ ರೂ. ಇನ್ನೂ ತೀರಿಸಲಾಗುತ್ತಿಲ್ಲ. ಅದೇ ಬಾಕಿ ಇರುವಾಗ ಹೊಸದಾಗಿ ಸಾಲ ಮನ್ನಾ ಮಾಡುವುದಾದರೂ ಹೇಗೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಬಡ್ಡಿ, ಚಕ್ರಬಡ್ಡಿ ಮನ್ನಾ ಅವಕಾಶ ಫೆಬ್ರವರಿ ಅಂತ್ಯದವರೆಗೆ

ರೈತನ ಸಂಕಷ್ಟದ ಅರಿವು ನಮಗೂ ಇದೆ. ಹಾಗೆಂದೇ ಸರಕಾರ ಬರ ಪರಿಹಾರ ಸೇರಿದಂತೆ ಇತರೆ ಯೋಜನೆಗಳನ್ನು ಹಮ್ಮಿಕೊಂಡಿದೆ. ಜತೆಗೆ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ದೀರ್ಘಾವಧಿ ಸಾಲವನ್ನು ಪೂರ್ಣವಾಗಿ ಪಾವತಿಸಿದರೆ ಅದರ ಮೇಲಿನ ಬಡ್ಡಿ ಹಾಗೂ ಚಕ್ರಬಡ್ಡಿ ಮನ್ನಾ ಮಾಡುವ ಅವಕಾಶ ಫೆಬ್ರವರಿ ಅಂತ್ಯದವರೆಗೆ ಇದ್ದು, ಇದನ್ನು ಬಳಸಿಕೊಳ್ಳಬಹುದು ಎಂದು ಸಚಿವರು ಹೇಳಿದ್ದಾರೆ.

ರೈತರು ಸೇರಿದಂತೆ ಸಹಕಾರಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಶಸ್ವಿನಿ ಯೋಜನೆ ಮರುಜಾರಿಗೆ ತರಲಾಗಿದೆ. ಕೇಂದ್ರದ ಆಯುಷ್ಮಾನ್ ಯೋಜನೆಯಡಿ ಹೇಗೆ ಚಿಕಿತ್ಸಾ ದರವನ್ನು ನಿಗದಿ ಪಡಿಸಲಾಗಿದೆಯೋ ಅದೇ ರೀತಿ ಯಶಸ್ವಿನಿ ಯೋಜನೆಗೂ ಅಳವಡಿಸಲಾಗಿದೆ.

ಚಿಕಿತ್ಸೆ ಪಡೆದ ಒಂದು ವಾರದೊಳಗೆ ಹಣ ಪಾವತಿ ಯಶಸ್ವಿನಿ ಯೋಜನೆಯಡಿ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಒಂದು ವಾರದೊಳಗೆ ಹಣ ಪಾವತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.

ಈ ಯೊಜನೆಯಡಿ ಹಿಂದೆ ಯಾವ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿದ್ದವೋ, ಆ ಆಸ್ಪತ್ರೆಗಳ ಜೊತೆಗೆ ಹೊಸ ಆಸ್ಪತ್ರೆಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.

ಈ ಹಿಂದೆ ಯಶಸ್ವಿನಿ ಯೋಜನೆಯನ್ನು ಸ್ಥಗಿತಗೊಳಿಸಿದ ನಂತರ ಖಾಸಗಿ ಆಸ್ಪತ್ರೆಗಳಿಗೆ ನೀಡಬೇಕಿರುವ ಹಣ 20 ರಿಂದ 30 ಕೋಟಿ ರೂ. ಹಣ ಬಾಕಿ ಉಳಿದಿದೆ. ಅಂತಹ ಆಸ್ಪತ್ರೆಗಳು ಮಾತ್ರ ಈ ಯೋಜನೆಯನ್ನು ಅಳವಡಿಸಿಕೊಳ್ಳುತ್ತಿಲ್ಲ. ಆದರೆ, ಈ ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಜನರಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಸಹಕಾರಿ ಬ್ಯಾಂಕ್‌ಗಳಲ್ಲಿ ಜನ ಠೇವಣಿ ಇಡುವುದಕ್ಕೂ ಮುನ್ನ ಆ ಸಂಸ್ಥೆಯ ಆಡಳಿತ ಮಂಡಳಿಯ ಆರ್ಥಿಕ ನಿಲುವುಗಳನ್ನು ಅರಿತುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ಆಡಳಿತ ಮಂಡಳಿಯ ಅವ್ಯವಹಾರದಿಂದ ಕೆಲವು ಬ್ಯಾಂಕ್‌ಗಳು ದಿವಾಳಿಯಾಗಿ ಠೇವಣಿ ಇಟ್ಟ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕೆಲವು ಬ್ಯಾಂಕ್‌ಗಳ ಪ್ರಕರಣ ಸಿಬಿಐ ಅಂಗಳದಲ್ಲಿದ್ದರೂ ತನಿಖೆ ಪೂರ್ಣಗೊಳ್ಳದೆ ಗ್ರಾಹಕರಿಗೆ ಪರಿಹಾರವೂ ದೊರೆತಿಲ್ಲ ಎಂದರು ಅವರು.

Tags: agriculture loanckcknewsnowcrop loankarnatakakn rajannaloannews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಉನ್ನತ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ

ಉನ್ನತ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ

Leave a Reply Cancel reply

Your email address will not be published. Required fields are marked *

Recommended

ಎಲೆಕ್ಷ್ರಿಕ್ ವಾಹನಗಳಿಗೆ ಉತ್ತೇಜಿಸಲು  ಶೀಘ್ರವೇ ಹೊಸ ಇಂಧನ ನೀತಿ; ಚಿಕ್ಕಬಳ್ಳಾಪುರ-ಹುಬ್ಬಳ್ಳಿಯಲ್ಲಿ ಲೀಥಿಯಂ ಬ್ಯಾಟರಿ ಘಟಕಗಳ ಸ್ಥಾಪನೆ ಎಂದ ಡಿಸಿಎಂ

ಎಲೆಕ್ಷ್ರಿಕ್ ವಾಹನಗಳಿಗೆ ಉತ್ತೇಜಿಸಲು ಶೀಘ್ರವೇ ಹೊಸ ಇಂಧನ ನೀತಿ; ಚಿಕ್ಕಬಳ್ಳಾಪುರ-ಹುಬ್ಬಳ್ಳಿಯಲ್ಲಿ ಲೀಥಿಯಂ ಬ್ಯಾಟರಿ ಘಟಕಗಳ ಸ್ಥಾಪನೆ ಎಂದ ಡಿಸಿಎಂ

6 years ago
ಸಂಸದ ಮುನಿಸ್ವಾಮಿ ಮೇಲೆ ದಬ್ಬಾಳಿಕೆ; ಮಾಜಿ ಸಚಿವ ಡಾ.ಕೆ.ಸುಧಾಕರ್‌ ಕಿಡಿ

ಸಂಸದ ಮುನಿಸ್ವಾಮಿ ಮೇಲೆ ದಬ್ಬಾಳಿಕೆ; ಮಾಜಿ ಸಚಿವ ಡಾ.ಕೆ.ಸುಧಾಕರ್‌ ಕಿಡಿ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ