• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ತಾಕತ್ ಇದ್ದರೆ ಕಾಂತರಾಜು ವರದಿ ಸ್ವೀಕರಿಸಿ; 2A ಮೀಸಲು ಸಿಂಹಪಾಲು ಯಾರ ಪಾಲು? ಬಹಿರಂಗ ಚರ್ಚೆಗೆ ಬನ್ನಿ ಎಂದು ಸಿಎಂಗೆ HDK ಸವಾಲು

cknewsnow desk by cknewsnow desk
January 30, 2024
in NATION, STATE
Reading Time: 1 min read
0
ತಾಕತ್ ಇದ್ದರೆ ಕಾಂತರಾಜು ವರದಿ ಸ್ವೀಕರಿಸಿ; 2A ಮೀಸಲು ಸಿಂಹಪಾಲು ಯಾರ ಪಾಲು? ಬಹಿರಂಗ ಚರ್ಚೆಗೆ ಬನ್ನಿ ಎಂದು ಸಿಎಂಗೆ HDK ಸವಾಲು
943
VIEWS
FacebookTwitterWhatsuplinkedinEmail

ಕಾಂತರಾಜು ವರದಿ ಸ್ವೀಕಾರಕ್ಕೆ ಯಾರು ಅಡ್ಡ ಇದ್ದಾರೆ ನಿಮಗೆ ಎಂದು ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು.

ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; 2ಎ ಮೀಸಲು ವ್ಯಾಪ್ತಿಯಲ್ಲಿ ಸುಮಾರು108 ಉಪ ಜಾತಿಗಳು ಇವೆ. ಆದರೆ, ಮೀಸಲಾತಿ ಸೌಲಭ್ಯದ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ, ಆಮೇಲೆ ಕಾಂತರಾಜು ವರದಿ, ಇನ್ನೊಂದು ವರದಿಯ ಬಗ್ಗೆ ಮಾತನಾಡಿ ಎಂದು ಸಿದ್ದರಾಮಯ್ಯ ಅವರಿಗೆ ಪಂಥಾಹ್ವಾನ ನೀಡಿದರು.

ಕಾಂತರಾಜು ವರದಿ ಹಿಡಿದುಕೊಂಡು ಪ್ರತಿದಿನ ಭಾಷಣ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಬೊಮ್ಮಾಯಿ, ಯಡಿಯೂರಪ್ಪ ಈ ವರದಿಯನ್ನು ಸ್ವೀಕಾರ ಮಾಡಲಿಲ್ಲ ಎಂದುಹೇಳಿಕೊಂಡು ತಿರುಗುತ್ತಿದ್ದಾರೆ. ಈಗ ನೀವು ಅಧಿಕಾರಕ್ಕೆ ಬಂದು ಒಂದು ವರ್ಷ ಆಯಿತು. ಯಾಕೆ ಆ ವರದಿಯನ್ನು ಸ್ವೀಕಾರ ಮಾಡಿ ಜಾರಿ ಮಾಡಲಿಲ್ಲ. ಯಾರು ಅಡ್ಡ ಇದಾರೆ ನಿಮಗೆ. ತಾಕತ್ತು ಇದ್ದರೆ ಆ ಕಾಂತರಾಜು ವರದಿ ಸ್ವೀಕರಿಸಿ ಜಾರಿ ಮಾಡಿ ಎಂದು ಕುಮಾರಸ್ವಾಮಿ ಅವರು ಸಿಎಂಗೆ ನೇರ ಸವಾಲು ಹಾಕಿದರು.

ಒಬ್ಬ ಕುರಿ ಕಾಯುವವನ ಮಗ ಸಿಎಂ ಆದ ಅಂತಾ ನನ್ನ ಮೇಲೆ ವಿಷ ಕಾರ್ತಾರೆ ಅಂತ ಅಳಲು ತೋಡಿಕೊಂಡಿದ್ದಾರೆ. ಕುರಿ ಕಾಯುವ ಮಗನನ್ನೇ ಅಂದು ದೇವೇಗೌಡರು ಆರ್ಥಿಕ ಸಚಿವರನ್ನಾಗಿ ಮಾಡಿದ್ದರು. ನಿಮ್ಮ ಇಷ್ಟು ವರ್ಷದ ರಾಜಕೀಯದಲ್ಲಿ ಎಷ್ಟು ಸಲ ಸಚಿವರಾದಿರಿ, ಮುಖ್ಯಮಂತ್ರಿ ಆದಿರಿ, ಉಪ ಮುಖ್ಯಮಂತ್ರಿ ಆದಿರಿ. ಜಾತಿವ್ಯವಸ್ಥೆ, ಶೋಷಣೆ ಅಂತ್ಯ ಮಾಡಲು ಅವಕಾಶ ಇತ್ತು ನಿಮಗೆ, ಯಾಕೆ ಮಾಡಲಿಲ್ಲ? ಎಂದು ಅವರು ಸಿದ್ದರಾಮಯ್ಯ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಇಂಥ ಸಮಾಜವನ್ನು ಒಡೆಯುವ ರಾಜಕಾರಣ ನಿಲ್ಲಿಸಿ. ಎಷ್ಟು ದಿನ ಅಧಿಕಾರದಲ್ಲಿ ಇರ್ತೀರಾ? ಕದ್ದುಮುಚ್ಚಿ ನಿಮ್ಮ ಹಾಗೆ ರಾಜಕೀಯ ಮಾಡೋನಲ್ಲ ನಾನು. ನೇರವಾಗಿಯೇ ನಾನು ಬಿಜೆಪಿ ಜತೆ ಕೈ ಜೋಡಿಸಿದ್ದೇನೆ. ನಿಮ್ಮ ಹಾಗೆ ಹೊಂದಾಣಿಕೆ ರಾಜಕಾರಣ ಮಾಡಲ್ಲ ನಾನು. ಜನಪರ ತೀರ್ಮಾನಗಳು ಇದ್ದರೆ ನಾವು ಕೂಡ ಬೆಂಬಲ ಕೊಡುತ್ತೇವೆ. ಕಮೀಷನ್ ಹೊಡೆಯುವುದು ನಿಲ್ಲಿಸಿ ಕೆಲಸ ಮಾಡಿ ಎಂದು ಅವರು ಸಿದ್ದರಾಮಯ್ಯ ಮೇಲೆ ಹರಿಹಾಯ್ದರು.

ಕಾಂಗ್ರೆಸ್ ನ್ನು ಕೋಣಕ್ಕೆ ಹೋಲಿಸಿದ ಹೆಚ್ಡಿಕೆ

ಕಾಂಗ್ರೆಸ್ ಪಕ್ಷದ ತೀವ್ರ ಟೀಕಾ ಪ್ರಹಾರ ನಡೆಸಿದ ಅವರು, ಒಂದು ಕುಡಿಯುವ ನೀರಿನ ಜಾಗಕ್ಕೆ ಹಸುವನ್ನು ಬಿಟ್ಟರೆ ಅದು ನೀರನ್ನೂ ಕುಡಿದು ಅದನ್ನು ಕಲಕದೇ ಹೋಗುತ್ತದೆ. ಆದರೆ, ಅದೇ ಜಾಗಕ್ಕೆ ಕೋಣವನ್ನು ಬಿಟ್ಟರೆ ನೀರನ್ನು ಕುಡಿದು ಬೇರೆ ಯಾರೂ ಕುಡಿಯದ ರೀತಿ ಆ ನೀರನ್ನು ರಾಡಿ ಎಬ್ಬಿಸಿ ಹೋಗುತ್ತದೆ. ಕಾಂಗ್ರೆಸ್ ಕೋಣದ ರೀತಿ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ನಿತೀಶ್ ಕುಮಾರ್ ಅವರು 9ನೇ ಸಲ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ತೆಗೆದುಕೊಂಡಿದ್ದಾರೆ. ಇದೊಂದು ದಾಖಲೆ. ಆದರೆ, ನನ್ನ ವಿಷಯದಲ್ಲಿ ಹಾಗೆ ಆಗಿಲ್ಲ. ನರೇಂದ್ರ ಮೋದಿ 2018ರಲ್ಲೆ ಹೇಳಿದ್ದರು. ಇವತ್ತು ಕಾಂಗ್ರೆಸ್ ಬಿಟ್ಟು ಬನ್ನಿ ನಾಳೆಯೇ ಮತ್ತೆ ನಮ್ಮ ಜತೆ ಸೇರಿ ಮುಖ್ಯಮಂತ್ರಿ ಆಗಿ ಪ್ರಮಾಣ ತೆಗೆದುಕೊಳ್ಳಿ ಎಂದರು. ನಾನು ಕೇಳಲಿಲ್ಲ. ಅಂದು ಅವರ ಮಾತು ಕೇಳಿದ್ದಿದ್ದರೆ ನಿತೀಶ್ ಕುಮಾರ್ ರೀತಿ ನಾನೂ ಮತ್ತೆ ಸಿಎಂ ಆಗ್ತಾ ಇದ್ದೆ. ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ನವರನ್ನು ನಂಬಿ ನಾನು ಆ ಅವಕಾಶ ಕಳೆದುಕೊಂಡೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಅರಸು ಬಗ್ಗೆ ಮೊಸಳೆ ಕಣ್ಣೀರು

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರಿಗೆ ಭಾರತರತ್ನ ಕೊಡಬೇಕು ಎಂದು ಉಪ ಮುಖ್ಯಮಂತ್ರಿ ಅವರು ಕೇಂದ್ರಕ್ಕೆ ಒತ್ತಾಯ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ತನ್ನ ಜೀವನವನ್ನೇ ಅರ್ಪಣೆ ಮಾಡಿದ ಅವರಿಗೆ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿತು. ಅವರ ಜೀವನವನ್ನು ಸಂಪೂರ್ಣವಾಗಿ ಹಾಳು ಮಾಡಿತು. ಈಗ ನೋಡಿದರೆ ಕಾಂಗ್ರೆಸ್ ನಾಯಕರು ಅರಸು ಅವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.

ಈಗ ಎಲ್ಲರೂ ಕಾಂಗ್ರೆಸ್ ಬಿಟ್ಟು ಹೋಗುತ್ತಿದ್ದಾರೆ. ನಿತೀಶ್ ಆಯಿತು, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಯಾರಿಗೂ ಆ ಪಕ್ಷದ ಸಹವಾಸ ಬೇಡವಾಗಿದೆ. ಇವರ ನಡವಳಿಕೆ ನೋಡಿ ಎಲ್ಲರೂ ಬೇಸತ್ತು ಒಬ್ಬೊಬ್ಬರಾಗಿ ಹೋಗ್ತಾ ಇದಾರೆ.

ಹೆಚ್.ಡಿ.ಕುಮಾರಸ್ವಾಮಿ

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರು, ಮಾಜಿ ಸಚಿವರಾದ ಅಲಕೊಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ, ಲೀಲಾದೇವಿ ಆರ್ ಪ್ರಸಾದ್, ಮಾಜಿ ಶಾಸಕರಾದ ಸುರೇಶ್ ಗೌಡ, ರಾಜಾ ವೆಂಕಟಪ್ಪ ನಾಯಕ, ತಿಮ್ಮರಾಯಪ್ಪ, ಹಿರಿಯ ನಾಯಕರಾದ ವೀರಭದ್ರಪ್ಪ ಹಾಲಹರವಿ, ಚಂದ್ರಶೇಖರ್, ದೊಡ್ಡನಗೌಡ ಪಾಟೀಲ್, ಪ್ರಸನ್ನ ಕುಮಾರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

Tags: ckcknewsnowhd kumaraswamykantaraju reportreservationsiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಯೋಧ್ಯೆ ವಿಷಯದಲ್ಲಿ ಮೋದಿ ರಾಜಕೀಯ ಮಾಡಿದ್ದಾರೆ ಎಂದಾರೆ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮಾಡಿದ್ದೇನು?

ಅಯೋಧ್ಯೆ ವಿಷಯದಲ್ಲಿ ಮೋದಿ ರಾಜಕೀಯ ಮಾಡಿದ್ದಾರೆ ಎಂದಾರೆ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮಾಡಿದ್ದೇನು?

Leave a Reply Cancel reply

Your email address will not be published. Required fields are marked *

Recommended

ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಅಮಿತ್ ಶಾ ಘೋಷಣೆ

ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಅಮಿತ್ ಶಾ ಘೋಷಣೆ

4 years ago
ಜೆಡಿಎಸ್ ಜನತಾ ಜಲಧಾರೆ ಆರಂಭ

ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡಲ್ಲ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ