• About
  • Advertise
  • Careers
  • Contact
Monday, June 15, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕಲ್ಲು ಹೊಡೆದು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ?

cknewsnow desk by cknewsnow desk
February 2, 2024
in NATION, POLITICS, STATE
Reading Time: 1 min read
0
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!
918
VIEWS
FacebookTwitterWhatsuplinkedinEmail

ರಾಷ್ಟ್ರ ಇಬ್ಭಾಗ ಎಂದ ಡಿ.ಕೆ.ಸುರೇಶ್ʼಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ; ಭಾರತ್ ಜೋಡೋ ಯಾತ್ರೆ ಮಾಡಿ ದೇಶ ಇಬ್ಭಾಗ ಮಾಡಲು ಹೊರಟಿದ್ದಾರೆ ಎಂದು ಕಿಡಿ


ಬೆಂಗಳೂರು: ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು.
ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ಡಿ.ಕೆ.ಸುರೇಶ್ ಅವರು ದೇಶ ವಿಭಜನೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಭುದ್ಧತೆಯ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಯಾತ್ರೆ ಮಾಡಿದರು. ಈಗ ವಿಭಜನೆಯ ಮಾತನ್ನು ಆಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ? ಇವರು ನ್ಯಾಯ ದೊರಕಿಸಿಕೊಡುತ್ತಾರೆಯೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ದೇಶದ ಮೊದಲನೇ ಬಜೆಟ್ ಗಾತ್ರ 174 ಕೋಟಿ ರೂಪಾಯಿ. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ಕಾಲಕ್ರಮೇಣ ನಾವು ಹಣಕಾಸು ಆಯೋಗಗಳನ್ನು ರಚನೆ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ.
ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂದು ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬ ಮಾನದಂಡದ ಅಡಿಯಲ್ಲಿ ಹಣ ಹಂಚಿಕೆ ಆಗುತ್ತದೆ. ಈ ಪದ್ಧತಿಯನ್ನು ಕಾಂಗ್ರೆಸ್ ಸರ್ಕಾರದ ಕಾಲದಲ್ಲಿಯೇ ಆರಂಭ ಮಾಡಲಾಯಿತು. ಮೋದಿ ಬಂದು ಪ್ರಾರಂಭ ಮಾಡಿದ್ದಲ್ಲ ಇದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಶೋಷಿತರ ಹೆಸರಿನಲ್ಲಿ ಸಿಎಂ ಮಜಾ

ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ?
ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ. ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.

ಕಮೀಷನ್ ದಂಧೆ ಅವ್ಯಾಹತ

ಕಾಂಗ್ರೆಸ್ ಸರಕಾರದಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ ಎಂಬ ಕಾಂಗ್ರೆಸ್ ಮಾಜಿ ಸಚಿವ ಗಂಡಸಿ ಶಿವರಾಂ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಕಾಂಗ್ರೆಸ್ ನಲ್ಲಿ 50 ಪರ್ಸೆಂಟ್ ಇದೆ ಅಂತ ಅವರು ಹೇಳಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಮ್ಮ ಮಾರ್ಗದರ್ಶರು ಅಂತಿದ್ದರು. ಅವರೇ ಬಾಣಲಿಯಿಂದ ಬೆಂಕಿಗೆ ಬಿದ್ದ ಹಾಗಾಗಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದನ್ನೆಲ್ಲಾ ಕುಮಾರಸ್ವಾಮಿ ಪ್ರಶ್ನೆ ಮಾಡಿದರೆ ಅವರಿಗೆ ಅಸಹನೆ, ಮೆಂಟಲ್ ಬ್ಯಾಲೆನ್ಸ್ ತಪ್ಪಿದೆ ಅಂತಾರೆ.
ಪ್ರತಿನಿತ್ಯ ವರ್ಗಾವಣೆ ಮಾಡುವ ಕೆಲಸವೇ ಆಗಿದೆ. ಸಿದ್ದರಾಮಯ್ಯ ಮೋದಿ ಬಗ್ಗೆ ಕಮೆಂಟ್ ಮಾಡಿದ್ದಾರೆ. ಮೊದಲು ನಿಮ್ಮ ಸ್ಥಿತಿ ನೋಡಿಕೊಳ್ಳಿ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಕೇಂದ್ರ ಸರಕಾರದ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೆಸ್ ಸರಕಾರ; ಅದಕ್ಕೆ ಅಸಲಿ ಕಾರಣ ಏನು?
Tags: allocationbjpckcknewsnowCongressdevolutiondk sureshfederal systemhd kumaraswamyprotest againstseparate nationsiddaramaiahtax
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

SSLC ಪೂರ್ವಸಿದ್ಧತಾ ಪರೀಕ್ಷೆ ವೆಚ್ಚ: ವಿದ್ಯಾರ್ಥಿಗಳಿಂದಲೇ ವಸೂಲಿಗೆ ರಾಜ್ಯ ಕಾಂಗ್ರೆಸ್ ಸರಕಾರ ಆದೇಶ

Leave a Reply Cancel reply

Your email address will not be published. Required fields are marked *

Recommended

ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ

ಸಮಾಜಕ್ಕೆ ಕೆಡುಕುಂಟು ಮಾಡುವ ಸುದ್ದಿಗಳನ್ನು ಮಾಧ್ಯಮಗಳು ತೋರಿಸಲೇಬಾರದು: HDK

4 years ago
ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌, ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ