• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮೋದಿ 3ನೇ ಸಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ!

P K Channakrishna by P K Channakrishna
February 7, 2024
in NATION, POLITICS, STATE
Reading Time: 2 mins read
0
ಜ್ಞಾನ ಆರ್ಥಿಕತೆ ಮತ್ತು ಆತ್ಮನಿರ್ಭರತೆ; ನೂತನ ಶಿಕ್ಷಣ ನೀತಿಗೆ ಹೊಸ ಆಯಾಮ ಕೊಡಲು ಮೋದಿ ಹೆಜ್ಜೆ
951
VIEWS
FacebookTwitterWhatsuplinkedinEmail

ಬಸವರಾಜ ಬೊಮ್ಮಾಯಿ ಭವಿಷ್ಯ!, ರಾಜ್ಯ ಸರಕಾರ ಕಾಣೆಯಾಗಿದೆ; ಸಿಎಂ, ಸಚಿವರನ್ನು ಹುಡುಕಿಕೊಡಿ ಎಂದ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾದ ಒಂದೇ ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರಕಾರ ಇನ್ನೊಂದಿಲ್ಲ.‌ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ತ್ವ ಸಿದ್ದಾಂತವನ್ನು ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಅನ್ಯಾಯಕ್ಕೆ ಸಿದ್ದರಾಮಯ್ಯ ಅವರೇ ಕಾರಣ!

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ, ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌. ನಾಚಿಕೆಯಾಗಬೇಕು ಇವರಿಗೆ. ಯುಪಿಎ ಸರಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ ಎಂದು ಅವರು ಸವಾಲು ಹಾಕಿದರು.

ಯುಪಿಎ ಅವಧಿಯಲ್ಲಿ 82,000 ಕೋಟಿ ರೂ. ಮಾತ್ರ ಬಂದಿದೆ. ಮೋದಿ ಅವರ ಕಾಲದಲ್ಲಿ 2.82 ಲಕ್ಷ ಕೋಟಿ ರೂ. ಬಂದಿದೆ. ಎನ್ ಡಿಎ ಅವಧಿಯಲ್ಲಿ ಎರಡು ಲಕ್ಷ ಕೋಟಿ ರೂ. ಹೆಚ್ಚಿಗೆ ಬಂದಿದೆ. ರಾಜ್ಯಕ್ಕೆ ಅನ್ಯಾಯ ಮಾಡಿದವರು ಮನಮೋಹನ್ ಸಿಂಗ್ ಮತ್ತು ಸಿದ್ದರಾಮಯ್ಯ.

ಬಸವರಾಜ ಬೊಮ್ಮಾಯಿ

ಮೊದಲು ರಾಜ್ಯಗಳಿಗೆ ಅನುದಾನ ಶೇ.32% ಬರುತ್ತಿತ್ತು. ಮೋದಿ ಅವರು ಅದನ್ನು ಶೇ.42% ಹೆಚ್ಚಳ ಮಾಡಿದ್ದಾರೆ. ಹಣಕಾಸು ಆಯೋಗ ಕೇಂದ್ರ ಸರಕಾರಕ್ಕೂ ಸಂಬಂಧ ಇಲ್ಲ. ಅದು ಎಲ್ಲ ರಾಜ್ಯಗಳಿಗೂ ಭೇಟಿ ನೀಡಿ, ಬಡತನ, ಜಸಂಖ್ಯೆ ತಲಾದಾಯ ಎಲ್ಲವನ್ನು ಪರಿಗಣನೆ ಮಾಡುತ್ತದೆ. 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಭೇಟಿ ನೀಡಿದಾಗ ಸಿದ್ದರಾಮಯ್ಯ ಅವರ ಸರಕಾರ ಇತ್ತು. ಆಗ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ತಿಳಿಸಲು ವಿಫಲವಾಗಿದೆ. ರಾಜ್ಯದ ಪಾಲು ಶೇ 4.7 % ದಿಂದ ಶೇ 3.6% ಕ್ಕೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಅವರು ವಾಗ್ದಾಳಿ ನಡೆಸಿದರು.

ಮೋದಿ ಅವರ ಕಾಲದಲ್ಲಿ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 60 ಲಕ್ಷ ಜನರಿಗೆ ಆರೋಗ್ಯ ಸೌಲಭ್ಯ ಪಡೆದಿದ್ದಾರೆ. ಮುದ್ರಾ ಯೋಜನೆ ಅಡಿಯಲ್ಲಿ 60 ಲಕ್ಷ ರೂ. ಯುವಕರಿಗೆ ಬ್ಯಾಂಕ್ ಸಾಲ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಮೋದಿ ಸರಕಾರ ನೀಡಿದೆ. ಕಾಂಗ್ರೆಸ್ ‌ಕಾಲದಲ್ಲಿ 85 ಕಿ.ಮೀ. ರೈಲ್ವೆ ವಿದ್ಯುದೀಕರಣ ಆಗಿತ್ತು. ನಮ್ಮ ಅವಧಿಯಲ್ಲಿ 3500 ಕಿ.ಮೀ. ರೈಲ್ವೆ ವಿದ್ಯುದೀಕರಣ ಆಗಿದೆ. ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 65 ವರ್ಷದಲ್ಲಿ 6500 ಕೀ.ಮೀ ಅಭಿವೃದ್ಧಿ ಮಾಡಲಾಗಿತ್ತು. ನಮ್ಮ ಮೋದಿ ಅವರ ಅವಧಿಯಲ್ಲಿ 13,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಿದ್ದಾರೆ‌. ರಾಜ್ಯಕ್ಕೆ ಅನ್ಯಾಯ ಮಾಡಿದ್ದು ಮನಮೊಹನ್ ಸಿಂಗ್ ಸರಕಾರ ಎಂದು ಬೊಮ್ಮಾಯಿ ಆರೋಪ ಮಾಡಿದರು.

ಕೊವಿಡ್ ಸಮಯದಲ್ಲಿ ಮೋದಿ ಸರಕಾರದಲ್ಲಿ ರಾಜ್ಯಕ್ಕೆ 10 ಕೋಟಿ ಲಸಿಕೆ ನೀಡಿದ್ದಾರೆ. ಒಂದು ವೇಳೆ ಆ ಸಮಯದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಇದ್ದಿದ್ದರೆ ರಸ್ತೆಯಲ್ಲಿ ಹೆಣ ಬೀಳುತ್ತಿದ್ದವು ಎಂದು ಅವರು ಹೇಳಿದರು.

ಕೃಷ್ಣಾ3ನೇ ಹಂತದ ಯೊಜನೆಗೆ ನಾವು ಚಾಲನೆ ಕೊಟ್ಡಿದ್ದೇವೆ. ಅದನ್ನು ಸಿದ್ದರಾಮಯ್ಯ ಮುಂದುವರಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ‌. ಕೇಂದ್ರ ಸರಕಾರ ಭದ್ರಾ ಯೋಜನೆಗೆ ಬಜೆಟ್ʼನಲ್ಲಿ ಮೀಸಲಿಟ್ಟಿರುವ 5,300 ಕೋಟಿ ರೂ. ಹಣವನ್ನು ಪಡೆಯಲು ಸರಿಯಾದ ರೀತಿಯಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿಲ್ಲ. ಕಾವೇರಿ ಕೊಳ್ಳದ ಯೋಜನೆಗಳು ಸ್ಥಗಿತವಾಗಿವೆ. ನಾವು ಪ್ರವಾಹ ಬಂದಾಗ ನೇರವಾಗಿ ರೈತರ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿದ್ದೇವೆ. ಯಾವ ಸರಕಾರ ರೈತರು, ಮಹಿಳೆಯರು, ಬಡವರ ಕಷ್ಟಕ್ಕೆ ಸ್ಪಂದಿಸುವುದಿಲ್ಲವೋ ಅದು ಇದ್ದೂ ಸತ್ತಂತೆ. ಸಿದ್ದರಾಮಯ್ಯನವರೇ ನಿಮ್ಮ ಸರಕಾರದ ಇತರ ಇಲಾಖೆಗಳಲ್ಲಿ ಏನು ನಡೆಯುತ್ತಿದೆ ಎಂದು ನೋಡಿ, ಕೇವಲ ವರ್ಗಾವಣೆ ದಂಧೆ ಮಾಡಿಕೊಂಡು ತಿರುಗಾಡುತ್ತಿದ್ದೀರಾ ಎಂದು ಅವರು ಆರೋಪಿಸಿದರು.

ಖಜಾನೆ ತುಂಬಿದ್ದರೆ ಬರ ಪರಿಹಾರ ಕೊಡಿ

ಶಾಸಕರ ಅನುದಾನ ಕೂಡ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿಗೂ 25 ಕೋಟಿ ರೂ. ಹಣ ನೀಡುತ್ತೇವೆ ಎಂದು ಅವರಿಗೂ ಅನ್ಯಾಯ ಮಾಡುತ್ತಿದ್ದಾರೆ. ಖಜಾನೆ ತುಂಬಿದ್ದರೆ ರೈತರಿಗೆ ಬರ ಪರಿಹಾರ ಕೊಡಿ, ಕಲ್ಯಾಣ ಕರ್ನಾಟಕಕ್ಕೆ 3,000 ಕೋಟಿ ಬಿಡುಗಡೆ ಮಾಡಲು ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆದರೆ, ಅದನ್ನು ಬಿಡುಗಡೆ ಮಾಡಿಲ್ಲ.
ಮೋದಿಯವರು ರಾಜ್ಯಕ್ಕೆ ಸ್ಮಾರ್ಟ್ ಸಿಟಿ, ಹೈವೆ, ರೈಲ್ವೆ, ಕೈಗಾರಿಕೆಗಳನ್ನು ನೀಡಿದ್ದಾರೆ. ಮೋದಿಯವರು ಪ್ರಧಾನಿಯಾಗಿದ್ದಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು ಇವರ ಪುಣ್ಯ. ಮನಮೋಹನ್ ಸಿಂಗ್ ಸರಕಾರ ಇದ್ದಿದ್ದರೆ ನಿಮಗೆ ಚಿಪ್ ಕೊಡುತ್ತಿದ್ದರು ಎಂದರು ಅವರು.

ರಾಜೀನಾಮೆ ನೀಡಲಿ

ರಾಜ್ಯ ಖಜಾನೆ ಖಾಲಿ ಮಾಡಿ ಜನರಿಗೆ ಸುಳ್ಳು ಹೇಳಿ ದೆಹಲಿಗೆ ಶೋಕಿ‌ ಮಾಡಲು ಕಾಂಗ್ರೆಸ್ ನಾಯಕರು ಹೋಗಿದ್ದಾರೆ. ರಾಜ್ಯಕ್ಕೆ ಅನ್ಯಾಯ ಮಾಡಿರುವ ಕಾಂಗ್ರೆಸ್ ‌ಸರಕಾರ. ರಾಜಿನಾಮೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿ ಇರಲು ನೈತಿಕತೆ ಇಲ್ಲ. ಮಹಾತ್ಮಾ ಗಾಂಧಿ ಫೊಟೊ ಹಾಕಿಕೊಂಡು ಜಾಹಿರಾತು ನೀಡಿ ಗಾಂಧಿಗೂ ಅವಮಾನ ಮಾಡಿದ್ದಾರೆ ಎಂದು ಹೇಳಿದರು.

ಸಿಎಂ, ಮಂತ್ರಿಗಳನ್ನು ಹುಡುಕಿಕೊಡಿ

ವಿಧಾನಸೌಧ ಸಂಪೂರ್ಣ ಖಾಲಿಯಾಗಿದ್ದು, ಸರಕಾರ ಕಾಣೆಯಾಗಿದೆ. ಸಿಎಂ, ಮಂತ್ರಿಗಳನ್ನು ಹುಡುಕಿಕೊಡಿ ಎಂದು ವಾರೆಂಟ್ ಹೊರಡಿಸಬೇಕು ಎಂದು ಇದೇ ಬೊಮ್ಮಾಯಿ ಹೇಳಿದರು.

Tags: basavaraj bommayickcknewsnowCongresskarnatakanarendra modiPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

Next Post
ಕೇಂದ್ರ ಸರಕಾರದಿಂದ ಆರ್ಥಿಕ ದೌರ್ಜನ್ಯ; ದೇಶಕ್ಕೆ ಲೆಕ್ಕ ಕೊಟ್ಟ ಸಿದ್ದರಾಮಯ್ಯ

ಕೇಂದ್ರ ಸರಕಾರದಿಂದ ಆರ್ಥಿಕ ದೌರ್ಜನ್ಯ; ದೇಶಕ್ಕೆ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಎಲ್ಲ ಸರಕಾರಿ ಅಧಿಕಾರಿಗಳು & ಸಿಬ್ಬಂದಿಗೂ ಕೋವಿಡ್‌ ಲಸಿಕೆ ಕಡ್ಡಾಯ; ಎರಡನೇ ಅಲೆ ತಡೆಯಲು ಇದು ಸಹಾಯಕ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಇದೆಲ್ಲ ರಾಜಕೀಯ ಷಡ್ಯಂತ್ರ, ನಮ್ಮೆಲ್ಲರ ತೇಜೋವಧೆಗೆ ಮಾಧ್ಯಮಗಳ ಬಳಕೆ: ಡಾ.ಸುಧಾಕರ್‌ ಆರೋಪ; ಕೋರ್ಟ್‌ ಮೊರೆ ಹೋಗಿರುವ ವಲಸಿಗ ಸಚಿವರ ವಿರುದ್ಧ ಬಿಜೆಪಿಯಲ್ಲಿ ಅಸಮಾಧಾನ

6 years ago
150 ಐಟಿಐ ಉನ್ನತೀಕರಣ; ಟಾಟಾ ಟೆಕ್ನಾಲಜೀಸ್ ಸೇರಿ ಖಾಸಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿ

150 ಐಟಿಐ ಉನ್ನತೀಕರಣ; ಟಾಟಾ ಟೆಕ್ನಾಲಜೀಸ್ ಸೇರಿ ಖಾಸಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿ

6 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ