• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಖರ್ಗೆಯವರೇ.. ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ?

P K Channakrishna by P K Channakrishna
February 8, 2024
in NATION, POLITICS, STATE
Reading Time: 2 mins read
0
ಉತ್ತರ ಪ್ರದೇಶದ ರೈತರ ಧಾರುಣತೆ ಬಿಚ್ಚಿಟ್ಟ ಖರ್ಗೆ
955
VIEWS
FacebookTwitterWhatsuplinkedinEmail

ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೇರ ಪ್ರಶ್ನೆ ಕೇಳಿದ ಹೆಚ್.ಡಿ.ದೇವೇಗೌಡರು

ಮಾಜಿ ಪ್ರಧಾನಿಗಳು ಹೇಳಿದ್ದು

  • ಖರ್ಗೆ ಅವರನ್ನು ಸಿಎಂ ಮಾಡಲು ಕಾಂಗ್ರೆಸ್ ವರಿಷ್ಠರು ಒಪ್ಪಲಿಲ್ಲ
  • ನನ್ನ ಮಗನನ್ನು ಸಿಎಂ ಮಾಡಲು ನಾನು ಸುತರಾಂ ಒಪ್ಪಲಿಲ್ಲ
  • ನನ್ನ ಪಕ್ಷವನ್ನು ಕಾಂಗ್ರೆಸ್ ನವರು ಅಸ್ಥಿರಗೊಳಿಸಲು ಯತ್ನಿಸಿದ್ದಕ್ಕೆ ಬಿಜೆಪಿಗೆ ಬೆಂಬಲ ನೀಡಿದೆ
  • ಇದೇ ಸದನದಲ್ಲಿ ಮನಮೋಹನ್ ಸಿಂಗ್ ಕಣ್ಣೀರು ಹಾಕಿದರು
  • ಪ್ರಜಾಪ್ರಭುತ್ವ ಅಪಾಯದಲ್ಲಿ ಇಲ್ಲ, ಅದು ಭಾರತೀಯರ ಹೃದಯದಲ್ಲಿ ಇದೆ
  • ದೇವೇಗೌಡರ ಮಾತುಗಳನ್ನು ಸದನದಲ್ಲಿ ಹಾಜರಿದ್ದು ಮೌನವಾಗಿ ಆಲಿಸಿದ ಖರ್ಗೆ ಅವರು

ನವದೆಹಲಿ: ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ..” ಎಂದು ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತೀಕ್ಷ್ಣವಾಗಿ ಪ್ರಶ್ನೆ ಮಾಡಿದರು.

ತಮ್ಮ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಾಂಧವ್ಯದ ಬಗ್ಗೆ ಲಘುವಾಗಿ ಮಾತನಾಡಿದ ಖರ್ಗೆ ಅವರಿಗೆ ತಿರುಗೇಟು ನೀಡಿದ ಮಾಜಿ ಪ್ರಧಾನಿಗಳು; “ಖರ್ಗೆ ಅವರೇ.. ನೀವು ಪ್ರಧಾನಮಂತ್ರಿಯಾದರೆ, ನೀವು ಅಧ್ಯಕ್ಷರಾಗಿರುವ ಕಾಂಗ್ರೆಸ್ ಪಕ್ಷ ಮುಕ್ತವಾಗಿ ಬೆಂಬಲ ಕೊಡುತ್ತದೆಯೇ? ಆ ಬಗ್ಗೆ ಹೇಳಿ” ಎಂದು ಮಾಜಿ ಪ್ರಧಾನಿಗಳು ಕೇಳಿದರು.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ದೇವೇಗೌಡರು; ರಾಜ್ಯಸಭೆಯಲ್ಲಿ ಮೊದಲು ಮಾತನಾಡಿದ ಪ್ರಧಾನಿ ಮೋದಿಯವರು ಹಿಂದಿನ ಪ್ರಧಾನ ಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು; ಮನಮೋಹನ್ ಸಿಂಗ್ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಬಗ್ಗೆ ಪ್ರಧಾನಿ ಅವರು ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅದಕ್ಕಾಗಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ.ಒಳ್ಳೆಯ ಕೆಲಸಗಳನ್ನು ಮೆಚ್ಚಿಕೊಂಡು ಕೆಟ್ಟದ್ದನ್ನು ಟೀಕಿಸಬೇಕು ಎಂದು ಖರ್ಗೆ ಹೇಳಿದ್ದರು.

ಈ ಮಾತಿನ ಭರದಲ್ಲಿ ಮಾಜಿ ಪ್ರಧಾನಿಗಳ ಹೆಸರನ್ನು ಎಳೆದು ತಂದಿದ್ದ ಖರ್ಗೆ ಅವರು; ‘ಮೋದಿ ಮತ್ತು ದೇವೇಗೌಡರ ಪ್ರೇಮ ಸ್ವಲ್ಪ ತಡವಾಗಿದೆ ಮೂಡಿದೆ’ ಎಂದಿದ್ದರು. ಇದಕ್ಕೆ ದೇವೇಗೌಡರು ಉತ್ತರ ನೀಡಿದರು.ಸದನದಲ್ಲಿ ಖರ್ಗೆ ಅವರ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ ಮಾಜಿ ಪ್ರಧಾನಿಗಳು; ಮಲ್ಲಿಕಾರ್ಜುನ ಖರ್ಗೆ ಅವರು ಪ್ರಾಮಾಣಿಕ ವ್ಯಕ್ತಿ. ಡಾ.ಮನಮೋಹನ್ ಸಿಂಗ್ ಅವರು ಅಪ್ಪಟ ಪ್ರಾಮಾಣಿಕ ವ್ಯಕ್ತಿ, ಆದರೆ, ಕಾಂಗ್ರೆಸ್ ತನ್ನನ್ನು ತಾನೇ ದುರ್ಬಲಗೊಳಿಸಿಕೊಳ್ಳುತ್ತಿದೆ. ಖರ್ಗೆ ಅವರು ಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಏರಿದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ? ಎಂದು ದೇವೇಗೌಡರು ಟೀಕಾ ಪ್ರಹಾರ ನಡೆಸಿದರು.

ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಪೇಕ್ಷೆ ಆಗಿತ್ತು. ಅವರೇನು ನನ್ನ ಸ್ವಂತದವರು ಅಲ್ಲ, ನನ್ನ ಸ್ವಂತ ಮಗನೂ ಅಲ್ಲ. ಆದರೆ, ಅವರಿಗೆ ಅರ್ಹತೆ ಇದೆ. ಅವರು ಉನ್ನತ ಸ್ಥಾನಕ್ಕೆ ಬಂದರೆ ಕಾಂಗ್ರೆಸ್ ನಾಯಕರು ಸಹಿಸಿಕೊಳ್ಳುತ್ತಾರೆಯೇ? ಎಂದು ನೇರವಾಗಿ ಪ್ರಶ್ನಿಸಿದರು.

1991ರಲ್ಲಿ ನರಸಿಂಹ ರಾವ್ ಅವರು ಪ್ರಧಾನಿ ಆಗಿದ್ದರು, ಡಾ.ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ಈ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಅವರು ಏನೆಲ್ಲಾ ಮಾಡಿದ್ದಾರೆ ಎಂಬುದರ ಬಗ್ಗೆ ನಾನು ಸಾಕಷ್ಟು ಮಾತನಾಡಬಲ್ಲೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಪ್ರಧಾನಿಗಳು ಟಾಂಗ್ ಕೊಟ್ಟರು.

ಮನಮೋಹನ್ ಸಿಂಗ್ ಅವರು ದೇಶದ ಹಣಕಾಸು ಸಚಿವರಾಗಿದ್ದಾಗ ಈ ದೇಶದ ಆರ್ಥಿಕ ಸ್ಥಿತಿ ಹೇಗಿತ್ತು ಎನ್ನುವುದು ನನಗೆ ಗೊತ್ತಿದೆ.130 ಟನ್ ಬಂಗಾರವನ್ನು ಭಾರತ ಸರ್ಕಾರ ವಿದೇಶಿ ಬ್ಯಾಂಕುಗಳಲ್ಲಿ ಒತ್ತೆ ಇಟ್ಟಿತ್ತು. ಆ ಸಂದರ್ಭದಲ್ಲಿ ನರಸಿಂಹರಾವ್ ಅವರ ನೇತೃತ್ವದಲ್ಲಿ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಏನೆಲ್ಲಾ ಮಾಡಿದರು ಎನ್ನುವುದು ನನಗೆ ಬಹಳ ಚೆನ್ನಾಗಿ ಗೊತ್ತಿದೆ. ಅಂತಹ ಮನಮೋಹನ್ ಸಿಂಗ್ ಅವರು ಈ ಸದನದಲ್ಲಿ ಕಣ್ಣೀರು ಹಾಕಿದರು ಎಂದು ದೇವೇಗೌಡರು ಹೇಳಿದರು.

ಖರ್ಗೆಗೆ ಧನ್ಯವಾದ ಹೇಳಿದ ಮಾಜಿ ಪ್ರಧಾನಿ

ಹಿಂದೆ ರಾಜ್ಯಸಭೆ ಚುನಾವಣೆ ಪ್ರಸಂಗವನ್ನು ನೆನಪಿಸಿಕೊಂಡ ಮಾಜಿ ಪ್ರಧಾನಿಗಳು; “ಕಾಂಗ್ರೆಸ್ ಎರಡನೇ ಅಭ್ಯರ್ಥಿ ಹಾಕುವ ಪ್ರಯತ್ನ ಮಾಡಿತ್ತು. ಆದರೆ, ಖರ್ಗೆ ಅವರು ದೇವೇಗೌಡರು ಸೋಲಬಾರದು. ಒಂದು ವೇಳೆ ಹಾಗೆ ಆಗುವುದೇ ಆಗಿದ್ದರೆ ನಾನು ಚುನಾವಣೆ ಕಣದಲ್ಲಿಯೇ ಇರುವುದಿಲ್ಲ ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು. ಅದಕ್ಕಾಗಿ ನಾನು ಖರ್ಗೆ ಅವರಿಗೆ ಆಭಾರಿ ಆಗಿದ್ದೇನೆ. ಇಂತಹ ಖರ್ಗೆ ಅವರನ್ನು, ಅದರಲ್ಲೂ 30ರಿಂದ 40 ವರ್ಷ ಸ್ವಚ್ಚ ರಾಜಕೀಯ ಮಾಡಿರುವ ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಆಗಲು ನೀಡುತ್ತದೆಯೇ?” ಎಂದು ಅವರು ನೇರವಾಗಿ ಪ್ರಶ್ನಿಸಿದರು.

ನಿಮ್ಮ ಹೆಸರನ್ನು ಪ್ರಧಾನಿ ಹುದ್ದೆಗೆ ನಿಮ್ಮದೇ ಮೈತ್ರಿಕೂಟದ ಕೆಲ ನಾಯಕರು ಪ್ರಸ್ತಾಪ ಮಾಡಿದರು. ಆದರೆ, I.N.D.I.A. ಮೈತ್ರಿಕೂಟದ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಈ ವ್ಯಕ್ತಿ ಸಿಎಂ ಆಗಬೇಕು ಎಂದು ನಾನು ಬಯಸಿದೆ. ನನ್ನ ಮಗ ಕುಮಾರಸ್ವಾಮಿ ಅವರ ಬದಲಿಗೆ ಖರ್ಗೆ ಅವರೇ ಸಿಎಂ ಆಗಬೇಕು ಎಂದು ನಾನು ಹೇಳಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್, ಖರ್ಗೆ ಬೇಡ, ನಿಮ್ಮ ಮಗನೇ ಸಿಎಂ ಆಗಲಿ ಎಂದು ಪಟ್ಟು ಹಿಡಿದರು. ಗುಲಾಂ ನಬಿ ಆಜಾದ್ ಹಾಗೂ ರಾಜಸ್ತಾನದ ಅಂದಿನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಅಂದು ನನ್ನ ಮನೆಗೆ ಬಂದು ಹಠ ಹಿಡಿದರು. ನನ್ನ ಮಗನನ್ನು ಸಿಎಂ ಮಾಡುವುದು ನನಗೆ ಇಷ್ಟ ಇರಲಿಲ್ಲ. ಖರ್ಗೆ ಅವರೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿ ಅವರೇ ಅವರೇ ಸಿಎಂ ಆಗಬೇಕು ಎಂದರು. ಖರ್ಗೆ ಅವರು ಈ ಸದನದಲ್ಲಿಯೇ ಇದ್ದಾರೆ ಎಂದು ದೇವೇಗೌಡರು ಗಟ್ಟಿ ದನಿಯಲ್ಲಿ ಹೇಳಿದರು.

ಕುಮಾರಸ್ವಾಮಿ ಸರಕಾರ ತೆಗೆದಿದ್ದು ಖರ್ಗೆ ಅವರಲ್ಲ!

ಅವತ್ತು ಹದಿಮೂರು ತಿಂಗಳು ಸಿಎಂ ಆಗಿದ್ದ ಕುಮಾರಸ್ವಾಮಿ ಆಗಿದ್ದ ಖರ್ಗೆ ಅವರನ್ನು ಕೆಳಗೆ ಇಳಿಸಿದ್ದು ಯಾರು? ಆ ಕೆಲಸ ಮಾಡಿದ್ದು ಖರ್ಗೆ ಅವರಲ್ಲ. ಖರ್ಗೆ ಪ್ರಾಮಾಣಿಕ ವ್ಯಕ್ತಿ. ಆದರೆ, ಅದೇ ಪಕ್ಷದ ಕಾಂಗ್ರೆಸ್ ನಾಯಕರು ಸರ್ಕಾರವನ್ನು ತೆಗೆದರು ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ನಾನೆಂದೂ ಪಕ್ಷದಿಂದ ಪಕ್ಷವನ್ನು ಬದಲಿಸಿಲ್ಲ. ರಾಜಕೀಯ ನೈತಿಕತೆ ಕಳೆದುಕೊಂಡಿಲ್ಲ. ಆದರೆ, ಕಾಂಗ್ರೆಸ್ ನಾಯಕರು ನನ್ನ ಪಕ್ಷವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡಿದ್ದಾಗ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇನೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆ. ಆ ವ್ಯಕ್ತಿಗಳ ಹೆಸರುಗಳನ್ನು ನಾನು ಇಲ್ಲಿ ಪ್ರಸ್ತಾಪ ಮಾಡುವುದಿಲ್ಲ, ಏಕೆಂದರೆ ಅವರು ಈ ಸದನರ ಸದಸ್ಯರು ಅಲ್ಲ. ನನ್ನ ಮಿತಿ ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ಪ್ರಜಾಪ್ರಭುತ್ವ ಜನರ ಹೃದಯಲ್ಲಿದೆ

ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕೆಲವರು ಹೇಳುತ್ತಾರೆ. ಅದನ್ನು ನಾನು ಒಪ್ಪುವುದಿಲ್ಲ. ಏಕೆಂದರೆ, ಪ್ರಜಾಪ್ರಭುತ್ವ ಈ ದೇಶದ ಜನರ ಹೃದಯದಲ್ಲಿ ಇದೆ. ಈ ದೇಶದಲ್ಲಿ ಸರ್ವಾಧಿಕಾರ ಎನ್ನುವುದು ಬರಲು ಸಾಧ್ಯವೇ ಇಲ್ಲ ಎಂದು ಮಾಜಿ ಪ್ರಧಾನಿಗಳು ಸಂವಿಧಾನ ರಚಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿದರು.

ಮಾಜಿ ಪ್ರಧಾನಿಗಳ ಎಲ್ಲಾ ಮಾತುಗಳನ್ನು ಸದನದಲ್ಲಿಯೇ ಹಾಜರಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಮೌನವಾಗಿ ಆಲಿಸಿದರು.

Tags: bjpckcknewsnowCongresshd devegowdajdskarnatakamallikarjuna khargeManmohan Singhnarendra modiRajya Sabha
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮಕ್ಕೆ ಸಿಎಂಗೇ ಆಹ್ವಾನ ಇಲ್ಲ! ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ