• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

3 ವರ್ಷದಿಂದ ಒಂದೇ ಜಾಗದಲ್ಲಿ ಝಾಂಡ ಹೂಡಿರುವ ಅಧಿಕಾರಿ, ನೌಕರರ ವರ್ಗಾವಣೆ

P K Channakrishna by P K Channakrishna
February 24, 2024
in ELECTION2024, NATION, POLITICS
Reading Time: 2 mins read
0
ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

photo courtesy: Wikipedia

1k
VIEWS
FacebookTwitterWhatsuplinkedinEmail

ರಾಜ್ಯ ಸರಕಾರಕ್ಕೆ ತಾಕೀತು ಮಾಡಿದ ಕೇಂದ್ರ ಚುನಾವಣೆ ಆಯೋಗ

ಬೆಂಗಳೂರು: ಮೂರು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಒಂದೇ ಕಡೆ ಝಾಂಡ ಹೂಡಿರುವ ಸರಕಾರಿ ನೌಕರರು ಮತ್ತು ಅಧಿಕಾರಿಗಳನ್ನು ತಕ್ಷಣವೇ ವರ್ಗಾಯಿಸುವಂತೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಸರಕಾರ ಕ್ಕೆ ತಾತು ಮಾಡಿದೆ.

ಅಧಿಕಾರಿಗಳನ್ನು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಆಯಾ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ವರ್ಗಾವಣೆ ಮಾಡಬೇಕು. ಯಾವುದೇ ಕಾರಣಕ್ಕೂ ಅದೇ ಲೋಕಸಭೆ ವ್ಯಾಪ್ತಿಯಲ್ಲಿ ವರ್ಗ ಮಾಡುವ ಹಾಗಿಲ್ಲ ಎಂದು ಆಯೋಗ ಕಟ್ಟಾಜ್ಞೆ ಮಾಡಿದೆ.

ಕೆಲ ಸರಕಾಗಳು ನಮ್ಮ ಆದೇಶವನ್ನು ತಪ್ಪಾಗಿ ಅರ್ಥೈಸಿ ಕ್ಷೇತ್ರದ ವ್ಯಾಪ್ತಿಯ ಬೇರೆ ಸ್ಥಳಕ್ಕೆ ವರ್ಗಾವಣೆ ಇಲ್ಲವೇ ನಿಯೋಜನೆ ಮಾಡಿರುವುದು ತನ್ನ ಗಮನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ಇಂಥ ಕ್ರಮ ಸಮರ್ಥನೀಯವಲ್ಲ ಹಾಗೂ ಅಧಿಕಾರಿಗಳನ್ನು ಕ್ಷೇತ್ರದ ವ್ಯಾಪ್ತಿಯ ಹೊರಕ್ಕೆ ವರ್ಗ ಮಾಡಲೇಬೇಕು ಎಂದು ನಿರ್ದೇಶನ ನೀಡಿದೆ,

ರಾಜಕಾರಣಿಗಳೊಂದಿಗೆ ಒಡನಾಟ

ಮೂರು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಆಯಾ ಕ್ಷೇತ್ರದ ರಾಜಕಾರಣಿಗಳೊಂದಿಗೆ ಒಡನಾಟವಿರುತ್ತದೆ. ಆ ಅಧಿಕಾರಿಗಳ ಮೇಲೆ ಆಯಾ ಕ್ಷೇತ್ರದ ರಾಜಕಾರಣಿಗಳ ಪ್ರಭಾವ ಇರುತ್ತದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಇಂಥ ಅಧಿಕಾರಿಗಳನ್ನು ವರ್ಗ ಮಾಡುವಂತೆ ಆಯೋಗ ಆದೇಶ ನೀಡಿದೆ.

ಒಂದೇ ಜಾಗದಲ್ಲಿ ಝಾಂಡಾ ಹೂಡಿರುವ ಅಧಿಕಾರಿಗಳನ್ನು ಮೊದಲು ನಮ್ಮ ನಿಯಮಾವಳಿ ಪ್ರಕಾರ ವರ್ಗಾವಣೆ ಮಾಡಿ, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದಿರುವ ಆಯೋಗದ ಅಂಥ ಅಧಿಕಾರಿಗಳ ಪಟ್ಡಿಯೂ ಇದೆ. “ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಿಮ್ಮ ನೌಕರರು ಮತ್ತು ಅಧಿಕಾರಿಗಳನ್ನು ಎಲ್ಲಿಗಾದರೂ ವರ್ಗಾಯಿಸಿಕೊಳ್ಳಿ, ಆದರೆ, ಝಾಂಡಾ ಹೂಡಿರುವ ಅಧಿಕಾರಿಗಳು ಆ ಕ್ಷೇತ್ರದಲ್ಲೇ ಮುಂದುವರಿಯಬಾರದು” ಎಂದು ಆಯೋಗ ಸ್ಪಷ್ಟವಾಗಿ ತಿಳಿಸಿದೆ.

PN-15-_UpdatedDownload

ವರ್ಗಾವಣೆಗೆ ಆದೇಶ

ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಆಯೋಗದ ಸೂಚನೆಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳ ವರ್ಗಾವಣೆಗೆ ಆದೇಶ ನೀಡಲಾಗಿತ್ತು ಎಂಬುದನ್ನು ಆಯೋಗ ನೆನಪಿಸಿದೆ.

ರಾಜ್ಯ ಸರಕಾರಗಳು ಅಧಿಕಾರಿಗಳ ವರ್ಗಾವಣೆ ಸಂದರ್ಭದಲ್ಲಿ ಈ ಮೊದಲು ಅವರು ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಗೆ ಒಳಪಡುವ ಲೋಕಸಭೆ ಕ್ಷೇತ್ರದ ವ್ಯಾಪ್ತಿಯೊಳಗೇ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಮಾಡಿರುವ ನಿದರ್ಶನಗಳು ಚುನಾವಣಾ ಆಯೋಗದ ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಪ್ರಸಕ್ತ ಲೋಕಸಭೆ ಅವಧಿ ಮೇ ತಿಂಗಳ ಕೊನೆಯ ಭಾಗದಲ್ಲಿ ಮುಗಿಯುವುದರಿಂದ ಕೇಂದ್ರ ಚುನಾವಣಾ ಆಯೋಗ ಮುಂದಿನ ಲೋಕಸಭೆ ಅವಧಿಗೆ ಚುನಾವಣೆ ನಡೆಸಲು ಕಳೆದ ಆರು ತಿಂಗಳಿಂದ ಪೂರ್ವ ಸಿದ್ಧತೆ ನಡೆಸಿದೆ.

ಕಳೆದ ಮೂರು ತಿಂಗಳ ಹಿಂದೆಯೇ ರಾಜ್ಯ ಸರ್ಕಾರ ವರ್ಗಾವರ್ಗಿಗಳನ್ನು ಸ್ಥಗಿತಗೊಳಿಸಿತ್ತು, ಇದರ ನಡುವೆ ಆಯೋಗದ ಸೂಚನೆ ಮೇರೆಗೆ ಜಿಲ್ಲಾ ವರಿಷ್ಠರು ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಂಡು ಬಂದಿದೆ.

ಕೆಳಹಂತದ ಅಧಿಕಾರಿಗಳ ವರ್ಗಾವಣೆ

ಇದೀಗ ಬಂದಿರುವ ಆಯೋಗದ ಆದೇಶದಿಂದ ಕೆಳಹಂತದ ಬಹುತೇಕ ಅಧಿಕಾರಿಗಳು ವರ್ಗಾವಣೆಗೊಳ್ಳಲಿದ್ದಾರೆ. ರಾಜ್ಯ ಸರಕಾರ ಏಪ್ರಿಲ್ ತಿಂಗಳಲ್ಲಿ ಸಾರ್ವತ್ರಿಕ ವರ್ಗಾವರ್ಗಿ ಕೈಗೊಳ್ಳುತ್ತಿತ್ತು, ಆದರೆ ಈ ಬಾರಿ ಚುನಾವಣೆ ಇರುವುದರಿಂದ ಅದರ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ತನ್ನ ನೌಕರರನ್ನು ವರ್ಗಾವಣೆ ಮಾಡಿಕೊಳ್ಳಬೇಕಿದೆ.

Tags: 2024ckcknewsnowelection commission of indiagovernment officials transfersLok Sabha election
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿದ್ದರಾಮಯ್ಯ ಸರಕಾರದಿಂದ ಪರಿಸರ ಸಮಿತಿಗಳಿಗೆ ಅನರ್ಹರ ಶಿಫಾರಸು; ಕಾರಣ ಕೊಟ್ಟು ದಾಖಲೆಗಳ ಸಮೇತ ತಿರಸ್ಕರಿಸಿದ ಕೇಂದ್ರ

ಸಿದ್ದರಾಮಯ್ಯ ಸರಕಾರದಿಂದ ಪರಿಸರ ಸಮಿತಿಗಳಿಗೆ ಅನರ್ಹರ ಶಿಫಾರಸು; ಕಾರಣ ಕೊಟ್ಟು ದಾಖಲೆಗಳ ಸಮೇತ ತಿರಸ್ಕರಿಸಿದ ಕೇಂದ್ರ

Leave a Reply Cancel reply

Your email address will not be published. Required fields are marked *

Recommended

ಸರಕಾರಿ ಆಸ್ಪತ್ರೆಗಳಲ್ಲಿ ವಿಶ್ವ ದರ್ಜೆಯ ಸೇವೆ ಸಿಗುವಂತೆ ಕಾರ್ಯನಿರ್ವಹಿಸಿ; ನೂತನ ವೈದ್ಯರಿಗೆ ಗ್ರಾಮೀಣ ಸೇವೆಯ ಪಾಠ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೇರಳದಿಂದ ಬರುವವರಿಗೆ ವಾರ ಸಾಂಸ್ಥಿಕ ಕ್ವಾರಂಟೈನ್

5 years ago
15 ಕೋಟಿ ಕಿ.ಮೀ. ದೂರ ಇರುವ ಸೂರ್ಯನನ್ನು ಆದಿತ್ಯಾ L1 ಮುಟ್ಟುತ್ತಾ?

15 ಕೋಟಿ ಕಿ.ಮೀ. ದೂರ ಇರುವ ಸೂರ್ಯನನ್ನು ಆದಿತ್ಯಾ L1 ಮುಟ್ಟುತ್ತಾ?

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ