• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಯಲ್ಲಿ ಕೊಚ್ಚಿ ಹೋಯಿತು ಕಾಂಗ್ರೆಸ್‌ ಗೆಲುವು

cknewsnow desk by cknewsnow desk
February 27, 2024
in NATION, POLITICS, STATE
Reading Time: 2 mins read
0
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಯಲ್ಲಿ ಕೊಚ್ಚಿ ಹೋಯಿತು ಕಾಂಗ್ರೆಸ್‌ ಗೆಲುವು
1.1k
VIEWS
FacebookTwitterWhatsuplinkedinEmail

ಕಾಂಗ್ರೆಸ್‌ಗೆ 3, ಬಿಜೆಪಿ 1, ಜೆಡಿಎಸ್‌ಗೆ ಸೋಲು; ಬಿಜೆಪಿ-ಜೆಡಿಎಸ್‌ ಪಕ್ಷಗಳಿಗೆ ಅಸ್ತ್ರವಾಯಿತು ಪಾಕಿಸ್ತಾನ್‌ ಜಿಂದಾಬಾದ್‌!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಸ್ಥಾನಗಳನ್ನು ಗೆದ್ದ ಜೋಶ್‌ʼನಲ್ಲಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಪಾಕಿಸ್ತಾನಾಘಾತವಾಗಿದೆ!

ರಾಜ್ಯಸಭೆಗೆ ಪುನರಾಯ್ಕೆಯಾದ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಬೆಂಬಲಿಗರು ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದ ಆವರಣದಲ್ಲಿಯೇ ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ.

ಈ ಘಟನೆಯ ಬಗ್ಗೆ ಇಡೀ ರಾಜ್ಯವೇ ತೀವ್ರ ಆಘಾತಕ್ಕೆ ಒಳಗಾಗಿದ್ದು, ವಿಜಯದಿಂದ ಬೀಗುತ್ತಿದ್ದ ಕಾಂಗ್ರೆಸ್‌ ತೀವ್ರ ಮುಜುಗರ ಉಂಟಾಗಿದೆ. ಅಲ್ಲದೆ, ಲೋಕಸಭೆ ಚುನಾವಣೆಗೆ ರಣೋತ್ಸಾಹದಲ್ಲಿದ್ದ ಕೈ ಪಾಳೆಯಕ್ಕೆ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಹೊಡೆತ ಕೊಡುವ ಆತಂಕ ಶುರುವಾಗಿದೆ.

ಇಂಥ ಪುಂಡ, ದೇಶದ್ರೋಹಿಗಳನ್ನು ವಿಧಾನಸೌಧಕ್ಕೆ ಕರೆದುಕೊಂಡು ಬಂದ ನಾಸೀರ್‌ ಹುಸೇನ್‌ ಬಗ್ಗೆ ಕಾಂಗ್ರೆಸ್‌ ಪಕ್ಷದೊಳಗೇ ಆಕ್ರೋಶ ವ್ಯಕ್ತವಾಗುತ್ತಿದ್ದು, ಜಯದ ಹೊಳೆಯಲ್ಲಿ ತೇಲಬೇಕಾಗಿದ್ದ ನಾಯಕರು ಮಾಧ್ಯಮಗಳಿಂದ ತಪ್ಪಿಸಿಕೊಂಡು ಓಡಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ.

ರಾಜ್ಯಸಭೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ನಿಷೇದಾಜ್ಞೆ ಜಾರಿಯಲ್ಲಿದ್ದ ವಿಧಾನಸೌಧದ ಆವರಣದಲ್ಲಿಯೇ ಸಂಭ್ರಮಕ್ಕೆ ಮುಂದಾದ ನಾಸೀರ್‌ ಹುಸೇನ್‌, ಅವರ ಹುಚ್ಚು ಬೆಂಬಲಿಗರು ಮೊದಲು, ನಾಸೀರ್‌ ಹುಸೇನ್‌ ಜಿಂದಾಬಾದ್ ಎಂದೂ, ನಂತರ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದರು. ಅಲ್ಲಿಯೇ ಇದ್ದ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮೆರಾಗಳಲ್ಲಿ ಈ ಘೋಷಣೆ, ಅದನ್ನು ಕೂಗಿದ ಕಿಡಿಗೇಡಿಗಳ ದೃಶ್ಯಗಳು ಸೆರೆಯಾಗಿವೆ. ಈ ದೃಶ್ಯಗಳು ಆ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದಂತೆಯೇ ಕಾಂಗ್ರೆಸ್‌ ನಾಯಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಂದೀಪ್‌ ಸುರ್ಜೇವಾಲ ನಾಸೀರ್‌ ಹುಸೇನ್‌ ಬೆಂಬಲಿಗರ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಸಿಕೆನ್ಯೂಸ್‌ ನೌ ಗೆ ಗೊತ್ತಾಗಿದೆ.

ಸನ್ಮಾನ್ಯ ಸಿಎಂ @siddaramaiah ಅವರೇ, ನಿಮ್ಮ @INCKarnataka ದ ನೂತನ ರಾಜ್ಯಸಭಾ ಸದಸ್ಯ @NasirHussainINC ಬೆಂಬಲಿಗರು ವಿಧಾನಸೌಧದ ಆವರಣದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ, ಇದು ಸತ್ಯವೇ..??

ಅದು ಸತ್ಯವೇ ಆಗಿದ್ದಲ್ಲಿ ಸಂಸದ ನಾಸೀರ್ ಹುಸೇನ್ ಬೆಂಬಲಿಗರು ಕೂಗಿದ ಘೋಷಣೆ ಬಗ್ಗೆ ತನಿಖೆ… pic.twitter.com/1eD27JEya1

— BJP Karnataka (@BJP4Karnataka) February 27, 2024

ಮತ್ತೊಂದೆಡೆ ಪಾಕಿಸ್ತಾನ್‌ ಜಿಂದಾಬಾದ್‌ ಗೋಷಣೆಗೆ ಜೆಡಿಎಸ್‌, ಬಿಜೆಪಿ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕರಾದ ಆರ್.‌ಅಶೋಕ್‌, ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ನಾಯಕರು ಕೆಂಡಾಮಂಡಲಗೊಂಡಿದ್ದಾರೆ.

ಕಾಂಗ್ರೆಸ್‌ಗೆ 3, ಬಿಜೆಪಿ 1, ಜೆಡಿಎಸ್‌ಗೆ ಸೋಲು

ಇನ್ನು, ಚುನಾವಣೆ ಫಲಿತಾಂಶಕ್ಕೆ ಬಂದರೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಜಯ್‌ ಮಕೇನ್‌, ನಾಸೀರ್‌ ಹುಸೇನ್‌, ಜಿ.ಸಿ.ಚಂದ್ರಶೇಖರ್ ಹಾಗೂ ಬಿಜೆಪಿ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಜಯ ಗಳಿಸಿದ್ದಾರೆ. ಆದರೆ, ಜೆಡಿಎಸ್‌ ಪಕ್ಷದಿಂದ ಎನ್‌ಡಿಎ ಅಭ್ಯರ್ಥುಯಾಗಿ ಕಣಕ್ಕೆ ಇಳಿದಿದ್ದ ಡಿ.ಕುಪೇಂದ್ರ ರೆಡ್ಡಿ ಸೋಲನಿಭವಿಸಿದ್ದಾರೆ.

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದರೆ, ಅದೇ ಪಕ್ಷದ ಮತ್ತೊಬ್ಬ ಶಾಸಕ, ಯಲ್ಲಾಪುರ ಕ್ಷೇತ್ರದ ಶಿವರಾಂ ಹೆಬ್ಬಾರ್ ಅವರು ಮತಗಟ್ಟೆಯಿಂದಲೇ ದೂರ ಉಳಿದು ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಲು ಪರೋಕ್ಷವಾಗಿ ಸಹಕರಿಸಿದರು.

ಉಳಿದಂತೆ ಪಕ್ಷೇತರರಾದ ಗಂಗಾವತಿಯ ಗಾಲಿ ಜನಾರ್ದನ ರೆಡ್ಡಿ, ಮೇಲುಕೋಟೆಯ ದರ್ಶನ್ ಪುಟ್ಟಣ್ಣಯ್ಯ, ಗೌರಿಬಿದನೂರಿನ ಪುಟ್ಟಸ್ವಾಮಿ ಗೌಡ, ಹರಪನಹಳ್ಳಿ ಕ್ಷೇತ್ರದ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

222 ಮತ ಚಲಾವಣೆ

ವಿಧಾನಸಭೆಯಲ್ಲಿ 223 ಸದಸ್ಯರ ಬಲ ಇದ್ದು, 222 ಮತಗಳಷ್ಟೇ ಚಲಾವಣೆಗೊಂಡವು. ಅದರಲ್ಲಿ ಕಾಂಗ್ರೆಸ್‌ನ ಅಜಯ್ ಮಾಕೆನ್ (47), ನಾಸೀರ್ ಹುಸೇನ್ (47) ಹಾಗೂ ಜಿ.ಸಿ. ಚಂದ್ರಶೇಖರ್ (45) ಮತಗಳನ್ನು ಪಡೆದು ರಾಜ್ಯಸಭೆ ಪ್ರವೇಶಿಸಿದರೆ, ಬಿಜೆಪಿಯ ನಾರಾಯಣಸಾ ಬಾಂಡಗೆ (47) ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು.

36 ಮತ ಪಡೆದಿರುವ ಕುಪೇಂದ್ರ ರೆಡ್ಡಿ ಪರಾಭವಗೊಂಡಿದ್ದು, ಅವರಿಗೆ ರಾಜ್ಯಸಭಾ ಚುನಾವಣೆಯಲ್ಲಿ ಇದು ಸತತ ಮೂರನೇ ಸೋಲಾಗಿದೆ. ಆಡಳಿತ ಪಕ್ಷದ ಕೆಲವು ಮತಗಳನ್ನು ಪಡೆದು ಐದನೇ ಅಭ್ಯರ್ಥಿಯನ್ನು ಗೆಲ್ಲಿಸುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ತಕ್ಕ ಉತ್ತರ ನೀಡಿದೆ.

ಕಾಂಗ್ರೆಸ್‌ಗೆ 139 ಮತ

ವಿಧಾನಸಭೆಯಲ್ಲಿ ಸಭಾಧ್ಯಕ್ಷರೂ ಸೇರಿ ಕಾಂಗ್ರೆಸ್ 134 ಸದಸ್ಯ ಬಲ ಹೊಂದಿದ್ದರೂ ಅವರಿಗೆ ಚುನಾವಣೆಯಲ್ಲಿ 139 ಮತಗಳು ಲಭ್ಯವಾಗಿವೆ.

ಸದನದಲ್ಲಿ 66 ಸಂಖ್ಯಾಬಲ ಹೊಂದಿರುವ ಬಿಜೆಪಿ ಎನ್‌ಡಿಎ ಕೂಟದ ಎರಡನೇ ಅಭ್ಯರ್ಥಿಯ ಗೆಲುವು ಸಾಧ್ಯವಿಲ್ಲ ಎಂಬ ಮಾಹಿತಿ ತಿಳಿಯುತ್ತಿದ್ದಂತೆ, ಕೊನೆ ಗಳಿಗೆಯಲ್ಲಿ ತಮ್ಮ ಅಭ್ಯರ್ಥಿಗೆ ನಿಗದಿಪಡಿಸಿದ್ದ 45 ಮತಗಳ ಬದಲು 47 ಮತಗಳನ್ನು ನೀಡಿತು, ಉಳಿದ 17 ಮತಗಳು ಜೆಡಿಎಸ್ ಅಭ್ಯರ್ಥಿಗೆ ಲಭಿಸಿತು.

ಬಿಜೆಪಿಯ ಹೆಚ್ಚುವರಿ 21 ಹಾಗೂ ತಮ್ಮ ಪಕ್ಷದ 19 ಮತಗಳು ಒಗ್ಗೂಡಿಸಿ, ಪಕ್ಷೇತರರು ಹಾಗೂ ಕಾಂಗ್ರೆಸ್‌ನ ಕೆಲವರಿಂದ ಅಡ್ಡ ಮತದಾನ ಮಾಡಿಸಿ ಜಯ ಗಳಿಸುವ ಇರಾದೆ ಕುಪೇಂದ್ರ ರೆಡ್ಡಿ ಅವರಿಗೆ ಕೈಗೂಡಲಿಲ್ಲ.

ಜೆಡಿಎಸ್‌ನ ಮೂರನೇ ಎರಡು ಭಾಗದಷ್ಟು ಶಾಸಕರನ್ನು ಸೆಳೆಯುತ್ತೇವೆ ಎಂದಿದ್ದ ಕಾಂಗ್ರೆಸ್‌ಗೆ ಆ ಪಕ್ಷದ ಒಂದೂ ಮತವನ್ನು ಪಡೆಯಲಾಗಲಿಲ್ಲ, ಆ ಪಕ್ಷದ ಶಾಸಕರೆಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಿದರು.

ಲೆಕ್ಕಾಚಾರ ಬುಡಮೇಲು

ಇನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಂಡು ಪಕ್ಷೇತರ 4 ಹಾಗೂ ಬಿಜೆಪಿಯ ಒಂದು ಮತ ಗಳಿಸಿ ಪ್ರತಿಪಕ್ಷಗಳ ಲೆಕ್ಕಾಚಾರವನ್ನೇ ಬುಡಮೇಲು ಮಾಡಿತು.

ಕೇಂದ್ರ ಬಿಜೆಪಿ ಬಲದಿಂದ ತಮ್ಮ ಸದಸ್ಯರ ಅಡ್ಡ ಮತದಾನದ ಆಗಬಹುದೆಂಬ ಭೀತಿಯಿಂದ ಕಾಂಗ್ರೆಸ್ ಮುಖಂಡರು ಕಳೆದ ಒಂದು ವಾರದಿಂದಲೇ ತಮ್ಮವರನ್ನು ಹಿಡಿದಿಟ್ಟುಕೊಳ್ಳುವ ಹಾಗೂ ಪಕ್ಷೇತರರು ಮತ್ತು ಬಿಜೆಪಿ ಮತಗಳನ್ನು ಸೆಳೆಯುವ ಕಾರ್ಯತಂತ್ರ ರೂಪಿಸಿದ್ದರು.

ಸ್ವತಃ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಕೆಲವು ಸಚಿವರು, ಬಿಜೆಪಿಯ ಹಾಗೂ ಜೆಡಿಎಸ್‌ನ ಕೆಲವು ಶಾಸಕರನ್ನು ಸೆಳೆಯಲು ತೆರೆಮರೆಯ ಪ್ರಯತ್ನ ಮಾಡಿದ್ದರು. ಬಿಜೆಪಿಯತ್ತ ಮುಖ ಮಾಡಿದ್ದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಕಡೆ ಗಳಿಗೆಯಲ್ಲಿ ತಮ್ಮೆಡೆಗೆ ಸೆಳೆದುಕೊಂಡ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಗೆಲುವಿಗೆ ನಿನ್ನೆಯೇ ಎಲ್ಲಾ ಲೆಕ್ಕಾಚಾರ, ಗುಣಾಕಾರ ಹಾಕಿತ್ತು.

ತಮ್ಮ ಸದಸ್ಯರನ್ನು ಒಗ್ಗಟ್ಟಿನಿಂದ ಇಟ್ಟುಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ನಾಯಕರು ನಿನ್ನೆಯೇ ಪಂಚತಾರಾ ಹೋಟೆಲ್ ಸೇರಿಕೊಂಡಿದ್ದರು. ಹೋಟೆಲ್‌ನಿಂದ ಇಂದು ನೇರವಾಗಿ ಮತಗಟ್ಟೆಗೆ ಧಾವಿಸಿದ ಕಾಂಗ್ರೆಸ್ ಶಾಸಕರು ತಮ್ಮ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು.

ಪಕ್ಷದ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ನಡೆಸಿದ ತಂತ್ರಗಾರಿಕೆ ಯಶಸ್ಸು ತಂದು ಕೊಟ್ಟಿದೆ.

Tags: bjpckcknewsnowCongressindiajdspakistanPoliticsRajya Sabha election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿ ಪುರಸಭೆ ನೀರಿನ ಟ್ಯಾಂಕರ್ ಡಿಕ್ಕಿ; ಗಂಭೀರವಾಗಿ ಗಾಯಗೊಂಡ ವೃದ್ಧರು ಬೆಂಗಳೂರು ಆಸ್ಪತ್ರೆಗೆ ದಾಖಲು

ಬಾಗೇಪಲ್ಲಿ ಪುರಸಭೆ ನೀರಿನ ಟ್ಯಾಂಕರ್ ಡಿಕ್ಕಿ; ಗಂಭೀರವಾಗಿ ಗಾಯಗೊಂಡ ವೃದ್ಧರು ಬೆಂಗಳೂರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Recommended

ಓಜೋನ್ ಹೊದಿಕೆ ಉಳಿಸಿಕೊಳ್ಳೋಣ

ಓಜೋನ್ ಹೊದಿಕೆ ಉಳಿಸಿಕೊಳ್ಳೋಣ

5 years ago
ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ

ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ