• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

cknewsnow desk by cknewsnow desk
February 28, 2024
in CKPLUS, NATION, POLITICS, STATE
Reading Time: 1 min read
0
ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ
977
VIEWS
FacebookTwitterWhatsuplinkedinEmail

ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್!; ಈ ಅಡ್ಡ ಕಸುಬಿಗೆ ಇದೆ 55 ವರ್ಷಗಳ ಇತಿಹಾಸ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿದ ಬೆನ್ನಲ್ಲಿಯೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 55 ವರ್ಷಗಳ ಹಿಂದೆ ನೀಲಂ ಸಂಜೀವರೆಡ್ಡಿ ಅವರಿಗೆ ಆತ್ಮಸಾಕ್ಷಿ ಮತದ ಹೆಸರಿನಲ್ಲಿ ಎಸಗಿದ ವಂಚನೆಯನ್ನು ಮುನ್ನೆಲೆಗೆ ತಂದಿದ್ದಾರೆ.

ಈ ಮೂಲಕ ಕೈ ಪಕ್ಷಕ್ಕೆ ಗತಕಾಲದ ನೆನಪುಗಳನ್ನು ಮತ್ತೆ ಮತ್ತೆ ನೆನಪಾಗುವಂತೆ ಮಾಡಿ ಕುಟುಕುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿರುವ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಮಾಡಿಸಿದ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು; ಆತ್ಮಸಾಕ್ಷಿ ಮತದಿಂದ ಅಲ್ಲ, ಅಡ್ಡ ಮತದಾನದಿಂದ ಕಾಂಗ್ರೆಸ್ ಪಕ್ಷವು ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಇದು ಪ್ರಜಾಪ್ರಭುತ್ವ, ಸಂವಿಧಾನ ಎಂದೆಲ್ಲ ಭಜನೆ ಮಾಡುವ ಪಕ್ಷ ಮಾಡುವ ಕೆಲಸವೇ ಎಂದು ಕೇಳಿದ್ದಾರೆ.

ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ

ಆತ್ಮಸಾಕ್ಷಿ ಮತ ಎನ್ನುವ ಪದವನ್ನು ದೇಶದಲ್ಲಿ ಮೊದಲು ಹುಟ್ಟು ಹಾಕಿದ್ದೇ ಕಾಂಗ್ರೆಸ್. ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ ಎಂದೇ ಅರ್ಥ. 1969ರಲ್ಲಿ ಅಂದಿನ ಪ್ರಧಾನಿಗಳಾದ ಇಂದಿರಾಗಾಂಧಿ ಅವರು ತಮ್ಮ ಕೈಗೊಂಬೆ ರಾಷ್ಟ್ರಪತಿ ಬೇಕೆಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದ ನೀಲಂ ಸಂಜೀವರೆಡ್ಡಿ ಅವರ ವಿರುದ್ಧ ವಿ.ವಿ.ಗಿರಿ ಅವರನ್ನು ಕಣಕ್ಕೆ ಇಳಿಸಿ ಆತ್ಮಸಾಕ್ಷಿ ಮತ ಹಾಕುವಂತೆ ಕರೆ ನೀಡಿದ್ದರು. ಅಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ನೀಲಂ ಸಂಜೀವರೆಡ್ಡಿ ಅವರು ಆತ್ಮಸಾಕ್ಷಿ ಅಲಿಯಾಸ್ ಅಡ್ಡಮತಗಳಿಂದ ಸೋತರು. ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ಏನಿದು ನೀಲಂ ಸಂಜೀವರೆಡ್ಡಿ ಪ್ರಕರಣ?

ಅದು 1969ನೇ ಇಸವಿ. ಅಂದಿನ ಭಾರತದ ರಾಷ್ಟ್ರಪತಿ ಡಾ.ಜಾಕೀರ್ ಹುಸೇನ್‌ ಅವರ ನಿಧನದ ನಂತರ ನೀಲಂ ಸಂಜೀವರೆಡ್ಡಿ ಅವರನ್ನು ರಾಷ್ಟ್ರಪತಿ ಹುದ್ದೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಪಕ್ಷದ ಅಭ್ಯರ್ಥಿಯಾಗಿ ಸಂವಿಧಾನದ ಅತ್ಯುನ್ನತ ಹುದ್ದೆಗೆ ಸ್ಪರ್ಧಿಸುವಾಗ, ಸದ್ಯ ಇರುವ ಹುದ್ದೆಯ ಲಾಭ ಪಡೆಯಬಾರದೆಂಬ ನೈತಿಕ ನಿಲುವಿನಿಂದ ಅವರು ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆಗೆ ಮೊದಲೇ ರಾಜೀನಾಮೆ ನೀಡಿದ್ದರು. ಆದರೆ; ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಬ್ಬರ್‌ ಸ್ಟ್ಯಾಂಪ್‌ ರಾಷ್ಟ್ರಪತಿ ಬೇಕಾಗಿತ್ತು ಎನ್ನುವ ಕಾರಣಕ್ಕೆ ನೀಲಂ ಸಂಜೀವರೆಡ್ಡಿ ಪಕ್ಷದ ಅಧಿಕೃತ ಅಭ್ಯರ್ಥಿ ಆಗಿದ್ದರೂ ಇಂದಿರಾ ಗಾಂಧಿ ಅವರು ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ಹಾಕುವಂತೆ ಕೇಳುವ ಬದಲು ತಮ್ಮ ಆತ್ಮಸಾಕ್ಷಿಯ ಪ್ರಕಾರ ಮತದಾನ ಮಾಡಲು ಅವಕಾಶ ನೀಡುವ ನಿರ್ಧಾರ ತೆಗೆದುಕೊಂಡರು. ಇದರ ಗೂಡಾರ್ಥವೆಂದರೆ, ತಮ್ಮ ಮಾತು ಕೇಳದ ನೀಲಂ ಅವರ ವಿರುದ್ಧವಾಗಿ ಸ್ಪರ್ಧಿಸಿದ್ದ ವಿ.ವಿ.ಗಿರಿ ಅವರಿಗೆ ತಮ್ಮ ಬೆಂಬಲವನ್ನು ಸೂಚಿಸಿದ್ದರು. ಹೀಗಾಗಿ ಆ ಚುನಾವಣೆಯಲ್ಲಿ ನೀಲಂ ಸಂಜೀವ ರೆಡ್ಡಿ ಅವರು ಸೋತರು. ಇದರಿಂದ ಬೇಸತ್ತ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಿ ತಮ್ಮ ಸ್ವಗ್ರಾಮಕ್ಕೆ ಮರಳಿ ತಮ್ಮ ಪೂರ್ವಜರಿಂದ ನಡೆದುಕೊಂಡು ಬಂದಿದ್ದ ಕೃಷಿಯಲ್ಲಿ ತೊಡಗಿಕೊಂಡರು.

ಹೀಗೆ ಆತ್ಮಸಾಕ್ಷಿ ಮತ ಎಂಬ ಹೊಸ ಪರಿಕಲ್ಪನೆಯನ್ನು ಇಂದಿರಾ ಗಾಂಧಿ ಅವರು ಹುಟ್ಟು ಹಾಕಿದ್ದರು. ಆತ್ಮಸಾಕ್ಷಿಯ ಮತ ಎಂದರೆ; ಅಡ್ಡಮತ ಅಥವಾ ಆತ್ಮ ವಂಚನೆಯ ಮತ ಎನ್ನುವುದು ಪ್ರಚಲಿತಕ್ಕೆ ಬಂದಿದೆ. ಈ ಅಡ್ಡಮತದ ಬಲೆಗೆ ಲೋಕಸಭೆ, ವಿಧಾನಸಭೆಗಳಲ್ಲಿ ಈವರೆಗೆ ಅನೇಕ ಜನ ಪ್ರತಿನಿಧಿಗಳು ಬಿದ್ದಿದ್ದಾರೆ. ಕರ್ನಾಟಕದಲ್ಲಿ ಇದು ಬಹಳ ಜನಜನಿತವಾಗಿ ನಡೆದುಕೊಂಡು ಬಂದಿದೆ.

ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಇಬ್ಬರು ಶಾಸಕರು (ಗುಬ್ಬಿ ಶ್ರೀನಿವಾಸ್ ಹಾಗೂ ಶಿವಲಿಂಗೇಗೌಡ) ಕಾಂಗ್ರೆಸ್‌ ಪರವಾಗಿ ಅಡ್ಡಮತ ಹಾಕಿದ್ದರು. ಆಗಲೂ ಡಿ.ಕುಪೇಂದ್ರ ರೆಡ್ಡಿ ಅವರೇ ಸ್ಪರ್ಧೆ ಮಾಡಿದ್ದರು. 2016ರ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌, ತನ್ನ ಅಧಿಕೃತ ಅಭ್ಯರ್ಥಿ ಬಿ.ಎಂ.ಫಾರೂಕ್ ಅವರಿಗೆ ಮತ ಹಾಕುವಂತೆ ಶಾಸಕರಿಗೆ ವಿಪ್ ಜಾರಿ ಮಾಡಿತ್ತು. ಆಗ ಪಕ್ಷದ ಎಂಟು ಶಾಸಕರು ( ಜಮೀರ್ ಅಹಮ್ಮದ್ ಖಾನ್, ಚೆಲುವರಾಯ ಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ, ಅಖಂಡ ಶ್ರೀನಿವಾಸ ಮೂರ್ತಿ, ಕೆ.ಗೋಪಾಲಯ್ಯ, ಇಕ್ಬಾಲ್ ಅನ್ಸಾರಿ, ಭೀಮಾ ನಾಯಕ್, ಹೆಚ್.ಸಿ.ಬಾಲಕೃಷ್ಣ ) ಕಾಂಗ್ರೆಸ್‌ ಪಕ್ಷಕ್ಕೆ ಅಡ್ಡಮತ ಹಾಕಿ ಪಕ್ಷಕ್ಕೆ ಕೈಕೊಟ್ಟಿದ್ದರು.

ಒಟ್ಟಾರೆಯಾಗಿ ಅಡ್ಡಮತಕ್ಕೆ ಜನ್ಮ ನೀಡಿದ ಕಾಂಗ್ರೆಸ್‌ ಅದರಿಂದ ಅನೇಕ ಸಂದರ್ಭದಲ್ಲಿ ರಾಜಕೀಯ ಲಾಭ ಮಾಡಿಕೊಂಡಿದೆ.

ಈಗ ಸೋಮವಾರ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಾದ ಎಸ್.‌ಟಿ.ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಅವರು ಸ್ವಪಕ್ಷಕ್ಕೆ ಕೈಕೊಟ್ಟು ಕಾಂಗ್ರೆಸ್‌ ಪಕ್ಷದ ಪರವಾಗಿ ಅಡ್ಡಮತ ಚಲಾಯಿಸಿದ್ದಾರೆ.

Tags: ckcknewsnowCongressindira gandhikarnatakaNeelam Sanjeev ReddyPoliticsRajya Sabha electionvv giri
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜಾತಿಗಣತಿ ವರದಿ ಪರಿಶೀಲನೆಗೆ ಸಂಪುಟ ಉಪಸಮಿತಿ?; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ಎಲ್ಲರ ಚಿತ್ತ

ಜಾತಿಗಣತಿ ವರದಿ ಪರಿಶೀಲನೆಗೆ ಸಂಪುಟ ಉಪಸಮಿತಿ?; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ಎಲ್ಲರ ಚಿತ್ತ

Leave a Reply Cancel reply

Your email address will not be published. Required fields are marked *

Recommended

ಧೂಳ್ ಎಬ್ಬಿಸುತ್ತಿದೆ ಸಲಾರ್ ಟ್ರೇಲರ್

ಧೂಳ್ ಎಬ್ಬಿಸುತ್ತಿದೆ ಸಲಾರ್ ಟ್ರೇಲರ್

2 years ago
ಯೋಗ ಸಂತಸದ ಜೀವನ ಮಾರ್ಗ ತೋರುತ್ತದೆ, ಸಾಮೂಹಿಕ ಆರೋಗ್ಯದಲ್ಲಿ ಧನಾತ್ಮಕ ಪಾತ್ರ ವಹಿಸುತ್ತದೆ ಎಂದ ನರೇಂದ್ರ ಮೋದಿ

ರಾಯಭಾರಿ ಹಿಂದಕ್ಕೆ; ಭಾರತದ ಮುಂದಿನ ಹೆಜ್ಜೆ ಏನು?

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ