ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ಸರ್ವೆ ಮಾಡಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಶಾಸಕರು
by GS Bharath Gudibande
ಗುಡಿಬಂಡೆ: ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್ ಮಾಡುತ್ತಿದ್ದ ತಾಲ್ಲೂಕಿನ ದಪ್ಪರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭತ್ತಲಹಳ್ಳಿ ಗ್ರಾಮದ ಸಮೀಪದ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾನೂನು ಬಾಹಿರವಾಗಿ ಬ್ಲಾಸ್ಟಿಂಗ್ ಮಾಡುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಮನೆಗಳು ಬಿರುಕು ಬಿಡುತ್ತಿವೆ. ಜನ ಜಾನುವಾರುಗಳ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಹಾಗೂ ಜಲಮೂಲಗಳು ಕಲುಷಿತ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು.
ಈ ಬಗ್ಗೆ ದಪ್ಪರ್ತಿ ಗ್ರಾಮ ಪಂಚಾಯತಿಯಿಂದಲೂ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ರಸ್ತೆಯಲ್ಲೇ ವೇಸ್ಟ್ ಡಂಪ್; ಶಾಸಕರು ಗರಂ
ಕಲ್ಲು ಗಣಿಗಾರಿಕೆ ಮಾಡುವವರು ಯದ್ವಾತದ್ವಾ ಬ್ಲಾಸ್ಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ, ಅದರಿಂದ ಹೊರಬರುವ ವೇಸ್ಟ್ ಅನ್ನು ರಸ್ತೆಯಲ್ಲಿಯೇ (ಡಂಪ್) ಮಾಡಿದ್ದಾರೆ. ಕಾನೂನು ಬಾಹಿರವಾಗಿ ಮಾಡುತ್ತಿರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ ಎಂದು ಶಾಸಕರು ಕಿಡಿಕಾರಿದರು.
ಇದರಿಂದ ರಸ್ತೆಯಲ್ಲಿ ಜನರು ಸಂಚಾರ ಮಾಡುವುದೇ ಕಷ್ಟವಾಗಿದೆ. ದಾರಿ ಅಪಾಯಕಾರಿಯಾಗಿ ಪರಿಣಮಿಸಿದೆ.
ಈ ಬಗ್ಗೆ ಸ್ಥಳೀಯ ಜನರು ಕೂಡ ಶಾಸಕರಿಗೆ ದೂರುಗಳ ಸರಮಾಲೆಯನ್ನೇ ಸಲ್ಲಿಸಿದರು.
ಸಮೀಕ್ಷೆ ನಡೆಸಿ ವರದಿ ನೀಡಿ
ಸ್ಥಳದಲ್ಲಿ ತಹಶೀಲ್ದಾರ್ ಅವರು ಇದ್ದಾರೆ ಈಗಾಗಲೇ ಅವರಿಗೆ ಸೂಚನೆ ನೀಡಿದ್ದೇನೆ. ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಸಮೀಕ್ಷೆ ಮಾಡಿ ಮಾಹಿತಿ ನೀಡುತ್ತಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಇಲ್ಲಿನ ಪರಿಸ್ಥಿತಿಯ ಬಗ್ಗೆ ಹೇಳಿದ್ದೇನೆ. ಅವರಿಗೂ ಸರ್ವೇ ಮಾಡಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳ ವರದಿಯ ಮೆರೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು ಶಾಸಕ ಸುಬ್ಬಾರೆಡ್ಡಿ ಅವರು.
ಕಲ್ಲುಗಣಿಗಾರಿಕೆ ಸ್ಥಗಿತಕ್ಕೆ ಮನವಿ
ಅಧಿಕಾರಿಗಳು ಸರಕಾರಿ ಆದೇಶವನ್ನು ಗಾಳಿಗೆ ತೂರಿ ಗ್ರಾಮದ ಪಕ್ಕದಲ್ಲೆ ಗಣಿಗಾರಿಕೆಗೆ ಅನುಮತಿ ನೀಡಿರುವುದು ಸರಿಯಲ್ಲ. ಕೂಡಲೇ ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಗಣಿಸಿ ಗಣಿಗಾರಿಕೆಗೆ ನೀಡಿರುವ ಅನುಮತಿ ರದ್ದುಪಡಿಸಬೇಕೆಂದು ಈ ಹಿಂದೆ ಹಲವು ಬಾರಿ ಅಧಿಕಾರಿಗಳಿಗೆ ಗ್ರಾಮಸ್ಥರು ಶಾಸಕರನ್ನು ಒತ್ತಾಯ ಮಾಡಿದ್ದಾರೆ.
ಈ ವೇಳೆ ತಹಶೀಲ್ದಾರ್ ಮನಿಶಾ ಮಹೇಶ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಪ್ಪರ್ತಿ ಗ್ರಾಮ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು ಸೇರಿದಂತೆ ಅಧಿಕಾರಿಗಳು ಶಾಸಕರ ಜತೆಯಲ್ಲಿದ್ದರು.
ಮಾಸದ ನೆನಪು, ಕಲಿಯದ ಪಾಠ
ಹಿರೇನಾಗವಲ್ಲಿ ಗ್ರಾಮದಲ್ಲಿ ಕಲ್ಲು ಗಣಿಯಲ್ಲಿ ಅಕ್ರಮ ಬ್ಲಾಸ್ಟಿಂಗ್ ಗೆ ಸಂಗ್ರಹ ಮಾಡಿ ಇರಿಸಲಾಗಿದ್ದ ಜಿಲಿಟಿನ್ ಕಡ್ಡಿಗಳು ಸ್ಪೋಟಗೊಂಡು ಆರು ಜನ ಕಾರ್ಮಿಕರು ಧಾರುಣ ಸಾವಿಗೆ ಗುರಿ ಆಗಿದ್ದರು.
ಈ ದುರಂತದಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಾಠ ಕಲಿಯುವ ಹಾಗೆ ಕಾಣುತ್ತಿಲ್ಲ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ