ಕೋಲ್ಕತಾದಲ್ಲಿ ಮೆಟ್ರೋ ಜಲ ಸುರಂಗ ಮಾರ್ಗ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಕೋಲ್ಕತಾ: ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.
ಕೋಲ್ಕತಾ ಮೆಟ್ರೋ ಪೂರ್ವ-ಪಶ್ಚಿಮ ಕಾರಿಡಾರ್ ಹೌರಾಮೈದಾನ-ಎಸ್ಪ್ಲೇನೇಡ್ ವರೆಗಿನ ಮಾರ್ಗವನ್ನು ಉದ್ಘಾಟಿಸಿದ ಪ್ರಧಾನಿ, ನಂತರ ಮಕ್ಕಳದೊಂದಿಗೆ ಮೆಟ್ರೋದಲ್ಲಿ ಸಂಚಾರ ಮಾಡಿದರು.
ಇದೇ ವೇಳೆ ಮೋದಿ ದೇಶದ ವಿವಿಧ ಭಾಗಗಳಲ್ಲಿ ಒಟ್ಟು 15,400 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣವಾಗಲಿರುವ ಮೂಲಸೌಕರ್ಯ ಕಾಮಗಾರಿಗಳಿಗೂ ಚಾಲನೆ ನೀಡಿದರು.
ಕೋಲ್ಕತಾ ಹಾಗೂ ಹೌರಾ ನಗರವನ್ನು ಸಂಪರ್ಕಿಸುವ ಈ ಮೆಟ್ರೋ ರೈಲು ಪಶ್ಚಿಮ ಬಂಗಾಳದ ಬಹು ಮುಖ್ಯ ಯೋಜನೆ, ಹೂಗ್ಲಿ ನದಿಯು ಕೋಲ್ಕತಾ ಮತ್ತು ಹೌರಾ ಅವಳಿ ನಗರಗಳನ್ನು ಕ್ರಮವಾಗಿ ಪೂರ್ವ ಮತ್ತು ಪಶ್ಚಿಮ ದಂಡೆಗಳಲ್ಲಿ ಪ್ರತ್ಯೇಕಿಸುತ್ತದೆ.
ಈ ಎರಡು ನಗರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲು ಹೂಗ್ಲಿ ನದಿಯ ನೀರಿನೊಳಗಿನಿಂದ ಸಾಗಲಿರುವುದು ವಿಶೇಷ.
ರೈಲು ಮಾರ್ಗ 16.6 ಕಿಲೋಮೀಟರ್ ಉದ್ದವನ್ನು ಹೊಂದಿದ್ದು 6 ನಿಲ್ದಾಣಗಳಿವೆ ಇ ಈ ಪೈಕಿ 3 ನಿಲ್ದಾಣಗಳು ನೀರಿನ ಅಡಿಯಲ್ಲಿ ಮತ್ತು 3 ನಿಲ್ದಾಣಗಳು ನೆಲದ ಮೇಲೆ ನಿರ್ಮಾಣವಾಗಿದೆ.
4,965 ಕೋಟಿ ರೂ. ವೆಚ್ಚದಲ್ಲಿ 4.8 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣಗೊಂಡಿದೆ. ನೆಲಮಟ್ಟದಿಂದ 30 ಮೀಟರ್ ಅಡಿಯಲ್ಲಿ ನಿಲ್ದಾಣ ನಿರ್ಮಾಣವಾಗುವ ಮೂಲಕ ಹೌರಾ ಭಾರತದ ಆಳವಾದ ಮೆಟ್ರೋ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಈ ಕೋಲ್ಕತಾ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ ಯೋಜನೆಗೆ ಅಡಿಪಾಯವನ್ನು ಫೆಬ್ರವರಿ 2009 ರಲ್ಲೇ ಹಾಕಿದ್ದರೂ ಸುರಂಗದ ನಿರ್ಮಾಣ ಕಾರ್ಯ 2017 ರಲ್ಲಿ ಆರಂಭವಾಯಿತು.ಈ ಸುರಂಗದಲ್ಲಿ ಸಂಚಿರಿಸುವುದೇ ಒಂದು ಅದ್ಭುತ ಎಂದು ಬಣ್ಣಿಸಲಾಗುತ್ತಿದೆ.