• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ELECTION

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಿಂದ ಕುಕ್ಕರ್‌ ಸಮಾರಾಧನೆ

cknewsnow desk by cknewsnow desk
March 19, 2024
in ELECTION, ELECTION2024, NATION, STATE
Reading Time: 2 mins read
0
ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಿಂದ ಕುಕ್ಕರ್‌ ಸಮಾರಾಧನೆ
1k
VIEWS
FacebookTwitterWhatsuplinkedinEmail

ಅಕ್ರಮ ತಡೆಯಲು ಅರೆಸೇನಾ ಪಡೆ ನಿಯೋಜಿಸಲು ಆಯೋಗಕ್ಕೆ HDK ಆಗ್ರಹ

ಮಾಧ್ಯಮಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ; ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ & ಜಿ.ಪಂ. ಸಿಇಒ ವರ್ಗಾವಣೆಗೆ ಒತ್ತಾಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು.

ಬೆಂಗಳೂರಿನಲ್ಲಿ ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿ*ಗಳನ್ನು ನಿಯೋಜಿಸಬೇಕು ಎಂದು *ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಆಗ್ರಹಪಡಿಸಿದರು.

ಅಲ್ಲದೆ; ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಕೇಂದ್ರ ಆಯೋಗ ಏನು ಮಾಡುತ್ತಿದೆ?

ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎನ್ನುವುದು ಆಯೋಗಕ್ಕೆ ಗೊತ್ತಿಲ್ಲವೇ? ಆಯೋಗದ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ಭಾನುವಾರ ರಾತ್ರಿ ಈ ಕ್ಷೇತ್ರದಲ್ಲಿ ಏನು ನಡೆದಿದೆ ಎನ್ನುವುದನ್ನು ನೀವು ನೋಡಬೇಕು ಎಂದು ಆಯೋಗವನ್ನು ಒತ್ತಾಯ ಮಾಡಿದ ಕುಮಾರಸ್ವಾಮಿ ಅವರು; ಕಾಂಗ್ರೆಸ್‌ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್‌ʼಗಳ ಲೋಡ್‌ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

100 ನಿಮಿಷದಲ್ಲಿ ಕ್ರಮ ಎಂದಿರಿ, ಇಲ್ಲಿ 48 ಗಂಟೆ ಆಗಿದೆ!

ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ಮಿತಿಮೀರಿವೆ. ಕುಕ್ಕರ್ ಮತ್ತು ಹಣವನ್ನು ಅವ್ಯಾಹತವಾಗಿ ಹಂಚಲಾಗುತ್ತಿದೆ. ಮರಳವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯು ಮತದಾರರಿಗೆ ಹಂಚಲು ಇರಿಸಿದ್ದ ಕುಕ್ಕರ್ʼಗಳನ್ನು ಲೋಡ್ ಮಾಡಲಾಗಿದ್ದ ಎರಡು ಲಾರಿಗಳನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ. ಮಾಧ್ಯಮಗಳು ಕೂಡ ಅದನ್ನು ತೋರಿಸಿ ವರದಿ ಮಾಡಿವೆ. ದೇಶದಲ್ಲಿ ಇಂಥ ಅಕ್ರಮ ಎಲ್ಲೇ ನಡೆದರೂ ಅದರ ವಿಡಿಯೋ ಅಥವಾ ಫೋಟೋ ತೆಗೆದು ಕಳಿಸಿದರೆ ಕೇವಲ ನೂರು ನಿಮಿಷದಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಮ್ಮ ಮೂರು ಗಂಟೆ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದರು. ಈ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ 48 ಗಂಟೆ ಕಳೆದಿದೆ. ಇನ್ನೂ ಕ್ರಮ ಆಗಿಲ್ಲ ಯಾಕೆ? ಎಂದು ಕುಮಾರಸ್ವಾಮಿ ಅವರು ಆಯೋಗವನ್ನು ಪ್ರಶ್ನಿಸಿದರು. ಅಲ್ಲದೆ; ಕುಕ್ಕರ್ ಹಂಚಿಕೆಯ ದಾಖಲೆಯ ವಿಡಿಯೋ, ಫೋಟೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು ಅವರು.

ಈ ಬಗ್ಗೆ ತಹಸೀಲ್ದಾರ್ ಅವರಿಗೆ ದೂರು ಕೊಟ್ಟರೆ ಹೌದಾ..? ನನ್ನ ಗಮನಕ್ಕೆ ಬಂದೇ ಇಲ್ಲ ಎನ್ನುತ್ತಾರೆ. ವಾಣಿಜ್ಯ ತೆರಿಗೆ ಇಲಾಖೆಗೆ ಮಾಹಿತಿ ಕೊಟ್ಟರೆ ಜಿಲ್ಲಾಧಿಕಾರಿಗೆ ತಿಳಿಸುತ್ತೇವೆ ಎನ್ನುತ್ತಾರೆ. ಜಿಲ್ಲಾಧಿಕಾರಿ ಅವರನ್ನು ಪ್ರಶ್ನಿಸಿದರೆ ನಮ್ಮ ಗಮನಕ್ಕೆ ಬಂದಿಲ್ಲ, ಪರಿಶೀಲನೆ ನಡೆಸುತ್ತೇವೆ ಎಂದು ಹಾರಿಕೆಯ ಉತ್ತರ ಕೊಡುತ್ತಾರೆ. ಚುನಾವಣೆ ಎಂದರೆ ಇದೇನಾ? ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಆಯೋಗವು ಕ್ಷೇತ್ರದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಬೇಕು ಎಂದು ಅವರು ಆಗ್ರಹಿಸಿದರು.

ಮಾಧ್ಯಮಗಳ ಮೂಲಕ ಆಯೋಗಕ್ಕೆ ಮನವಿ ಒತ್ತಾಯ ಮಾಡುವುದಷ್ಟೇ ಅಲ್ಲ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣಾ ‌ಆಕ್ರಮಗಳ ಕುರಿತು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಡಿಕೆಶಿ ಮೇಲೆ ನೇರ ವಾಗ್ದಾಳಿ

ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್‌ ಡಿ.ಕೆ.ಶಿವಕುಮಾರ್. 2002ರ ಚುನಾವಣೆಯನ್ನು ನಿಮಗೆ ನೆನಪು ಮಾಡಿಕೊಡುತ್ತೇನೆ. ಮೈಸೂರು, ಶಿಡ್ಲಘಟ್ಟ, ದೇವನಹಳ್ಳಿ ಕಡೆಯಿಂದ ನೀವು ಜನರನ್ನು ಕರೆದುಕೊಂಡು ಬಂದು ಕಳ್ಳ ವೋಟು ಹಾಕಿಸಿದ್ದು ಮರೆತಿದ್ದೀರಾ? ಕಳ್ಳ ಮತ ಹಾಕಿಸಲು ಕರೆದುಕೊಂಡು ಬಂದಾಗ ರಾಜರಾಜೇಶ್ವರಿ ನಗರದ ಹೆಬ್ಬಾಗಿಲಲ್ಲಿ ನಾನು ನಿಮ್ಮವರನ್ನು ಚಡ್ಡಿಯಲ್ಲಿ ಕೂರಿಸಿದ್ದನ್ನು ಮರೆಯಬೇಡಿ. ನನಗೆ ಚುನಾವಣೆ ಮಾಡುವುದು ಬರುವುದಿಲ್ಲ ಎಂದುಕೊಳ್ಳಬೇಡಿ. ಫೀಲ್ಡಿಗೆ ಇಳಿದರೆ ನಿಮಗಿಂತ ಚೆನ್ನಾಗಿ ಚುನಾವಣೆ ಮಾಡಬಲ್ಲೆ. ಆಗ ನೀವು ಅಧಿಕಾರದಲ್ಲಿ ಇದ್ದಿರಿ. ದೇವೇಗೌಡರನ್ನು ಸೋಲಿಸಲು ಪ್ತಯತ್ನ ಮಾಡಿದಿರಿ. ಆಸ್ಪತ್ರೆಯಿಂದ ನಾನು ವಾಪಸ್‌ ಬರ್ತಿನಿ, ಅದುವರೆಗೂ ನಿಮ್ಮ ಆಟ ನಡೆಯಲಿ ನೋಡೋಣ ಎಂದ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ನೇರವಾಗಿಯೇ ಟಾಂಗ್‌ ಕೊಟ್ಟರು.

ನಿಮಗೆ ನಾಚಿಕೆ ಆಗಬೇಕು. ಐದು ಗ್ಯಾರಂಟಿ ಕೊಟ್ಟಿದ್ದೇವೆ ಎಂದು ದಿನವೂ ಹೇಳಿದ್ದೇ ಹೇಳಿದ್ದು. ಮಿಸ್ಟರ್ ಸಿದ್ದರಾಮಯ್ಯ.. ನಿಮ್ಮ ಎರಡು ಸಾವಿರ ರೂಪಾಯಿ ಸಾಮಾನ್ಯ ಜನರ ಜೀವ ಉಳಿಸುತ್ತಿದೆ ಎಂದಾದರೆ ಈಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಕ್ಕರ್ʼಗಳನ್ನು ಯಾಕೆ ಹಂಚಿಕೆ ಮಾಡುತ್ತಿದ್ದೀರಿ? ನಿಮ್ಮ ಪಕ್ಷಕ್ಕೆ, ನಿಮಗೆ ನಾಚಿಕೆ ಎನ್ನುವುದು ಏನಾದರೂ ಇದೆಯಾ? ಎಂದು ಮಾಜಿ ಮುಖ್ಯಮಂತ್ರಿಗಳು ತೀವ್ರ ಪ್ರಹಾರ ನಡೆಸಿದರು.


ಚುನಾವಣಾ ಆಯೋಗಕ್ಕೆ ನನ್ನ ನೇರ ಆಗ್ರಹ ಇಷ್ಟೇ. ಕೂಡಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆತಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ತಪ್ಪಿದರೆ ನಾನೇ ಕಾರ್ಯಕರ್ತರರಿಗೆ ಕರೆ ಕೊಡಬೇಕಾಗುತ್ತದೆ. ಕುಕ್ಕರ್ ಎಲ್ಲೆಲ್ಲಿ ಅಡಗಿಸಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಲ್ಲಿಗೆ ಹೋಗಿ ಬೆಂಕಿ ಹಚ್ಚಿ ಅಂತ ನಮ್ಮ ಕಾರ್ಯಕರ್ತರಿಗೆ ಕರೆ ಕೋಡಬೇಕಾಗುತ್ತದೆ. ಆಮೇಲೆ ಕಾರ್ಯಕರ್ತರ ಮೇಲೆ ಈ ಅಧಿಕಾರಿಗಳು ಕೇಸ್‌ ದಾಖಲಿಸಲಿ ನೋಡೋಣ.

ಹೆಚ್.ಡಿ.ಕುಮಾರಸ್ವಾಮಿ

ಒಣ ಅನುಕಂಪ ತೋರಿದ ಡಿಕೆಶಿಗೆ ತಿರುಗೇಟು

ಜೆಡಿಎಸ್‌-ಬಿಜೆಪಿ ಮೈತ್ರಿಯ ಬಗ್ಗೆ ಸೋಮವಾರ ನಮ್ಮ ಪಕ್ಷದ ಕೋರ್ ಕಮಿಟಿ ಸದಸ್ಯರು ವ್ಯಕ್ತಪಡಿಸಿದ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ. ನಮ್ಮ ಪಕ್ಷದಿಂದ 28 ಲೋಕಸಭೆ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಹೋಗಬೇಕು ಎಂದು ಹೇಳಿದ್ದೆವು. ಆ ಸಭೆಯಲ್ಲಿ ಪ್ರಮುಖವಾಗಿ ಏನೇನು ಚರ್ಚೆ ಆಗಿತ್ತು ಎಂಬುದನ್ನು ಮಾಧ್ಯಮಗಳ ಮೂಲಕ ಹೇಳಿದ್ದೇನೆ. ಅಂದ ಮಾತ್ರಕ್ಕೆ ನಮಗೆ ಬಿಜೆಪಿ ಮೇಲೆ ವಿಶ್ವಾಸ ಹೋಗಿದೆ ಅಂತ ಅಲ್ಲ. ಆರಂಭದಿಂದಲೂ ನಾವು 3 ಕ್ಷೇತ್ರಗಳನ್ನು ಕೇಳಿದ್ದೇವೆ. ಅದನ್ನು ಹೊರತುಪಡಿಸಿದರೆ ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ಕಂಡಿದ್ದಾರೆ. ಇದನ್ನೇ ಕಾಂಗ್ರೆಸ್‌ಪಕ್ಷದ ಸೋಕಾಲ್ಡ್‌ ಟ್ರಬಲ್‌ ಶೂಟರ್‌, ಹಿಂದೆ ನಮ್ಮ ಮೈತ್ರಿ ಸರಕಾರವನ್ನು ತೆಗೆದಿದ್ದವರು ನಮ್ಮ ಕಾರ್ಯಕರ್ತರ ಬಗ್ಗೆ ಅನುಕಂಪದ ಮಾತನ್ನಾಡಿದ್ದಾರೆ. ಯಾವನಿಗೆ ಬೇಕು ಇವರ ಅನುಕಂಪ? ನಮ್ಮ ಕಾರ್ಯಕರ್ತರಿಗೆ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಜೆಡಿಎಸ್‌-ಬಿಜೆಪಿ ಮೈತ್ರಿಗೆ ನೀವೇ ಕಾರಣ

ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ಜೆಡಿಎಸ್‌ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ನೀವು. ನಿಮ್ಮಿಂದಲೇ ಈ ಮೈತ್ರಿ ಆಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹೊಂದಾಣಿಕೆ ಮಾಡಿಕೊಳ್ಳೊದಕ್ಕೆ ಮೂಲ ಕಾರಣವೂ ನೀವೇ. ಹಿಂದೆ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರಕಾರ ರಚನೆ ಆದಾಗ ಈ ಸರಕಾರ ಐದು ವರ್ಷ ಇರಬೇಕು ಎಂದು ಹೇಳಿದ್ದಿರಿ. ಆದರೆ ಪಕ್ಕದಲ್ಲೇ ಕೂತು ಬಿಲ ಕೊರೆದಿರಿ. ಅಧಿಕಾರವನ್ನೂ, ಆ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷವನ್ನೇ ರಾಮನಗರದಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಿರಿ. ಆಗ ಮಂಡ್ಯದಲ್ಲಿ ದೋಖಾ ಮಾಡಿ ನಿಖಿಲ್‌ ಕುಮಾರಸ್ವಾಮಿಯನ್ನು ಸೋಲುವಂತೆ ಮಾಡಿದಿರಿ. ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಮ್ಮ ಕಾರ್ಯಕರ್ತರು ಇದನ್ನೇ ಮಾಡಿದ್ದಿದ್ದರೆ ಆತನೂ ಮನೆಯಲ್ಲಿ ಕೂರಬೇಕಿತ್ತು. ಮೈತ್ರಿಗೆ ನಾವು ಮೋಸ ಮಾಡಲಿಲ್ಲ. ಬಿಜೆಪಿ ಜತೆ 20 ತಿಂಗಳು ಸರಕಾರ ಮಾಡಿದ್ದರಿಂದ ನಾನು ಪಕ್ಷವನ್ನು ಉಳಿಸಿಕೊಂಡಿದ್ದೇನೆ. ಆದರೆ ನಿಮ್ಮ ಜತೆ 14 ತಿಂಗಳ ಮೈತ್ರಿಯಲ್ಲಿ ನಾವು ಸಾಕಷ್ಟು ಕಳೆದುಕೊಂಡಿದ್ದೇನೆ. ರಾಜಕೀಯವಾಗಿ ನೀವು ವಿಷ ಹಾಕಿ ನಮ್ಮನ್ನು ಕೊಂದಿದ್ದೀರಾ. ಹಂತ ಹಂತವಾಗಿ ನಮ್ಮನ್ನು ಕುಗ್ಗಿಸಿದ್ದೀರಾ. 14 ತಿಂಗಳು ನಿಮ್ಮ ಜತೆ ಸರಕಾರ ಮಾಡಿದ್ದು ನಾನು ತೆಗೆದುಕೊಂಡ ಅತ್ಯಂತ ಕೆಟ್ಟ ನಿರ್ಧಾರ. ದೇವೇಗೌಡರ 60 ವರ್ಷಗಳ ಸುಧೀರ್ಘ ರಾಜಕಾರಣಕ್ಕೆ ಕೊಳ್ಳಿ ಇಟ್ಟಿದ್ದೀರಾ. ನನ್ನ ಜತೆ ಇದ್ದವರನ್ನು ಖರೀದಿ ಮಾಡುತ್ತಿದ್ದೀರಾ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್‌ವಿರುದ್ಧ ಕಿಡಿಕಾರಿದರು.

ಬಿಜೆಪಿಯಲ್ಲಿ ನನಗೆ ಗೌರವ ಕೊಟ್ಟಿದ್ದಾರೆ. ಅವರು ನಿಮ್ಮ ಹಾಗೆ ನನ್ನ ಕುತ್ತಿಗೆ ಕೋಯ್ದಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ತೋಳ್ಬಲ, ಧನಬಲ, ಅಧಿಕಾರ ಬಲದಿಂದ ಮೆರೆಯಿತ್ತಿದ್ದೀರಿ. ನನ್ನ ಪಕ್ಷದ ಶಾಸಕರನ್ನು ಸೆಳೆಯೋದಕ್ಕೆ ನೀವು ಏನೆಲ್ಲ ಮಾಡಿದ್ದಿರಿ ಎನ್ನುವುದು ಗೊತ್ತಿದೆ ನನಗೆ. ಇವತ್ತಿಗೂ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದೀರಿ. ನೀವು ನಮ್ಮನ್ನು ಮುಗಿಸಲು ಹಂತ ಹಂತವಾಗಿ ಏನೆಲ್ಲಾ ಮಾಡುತ್ತಿದ್ದೀರಾ ಎನ್ನುವ ಮಾಹಿತಿ ನನಗೆ ಇದೆ. ಜನರೇ ನಿಮಗೆ ತಕ್ಕ ಶಾಸ್ತಿ ಮಾಡುವ ದಿನಗಳು ಹತ್ತಿರಕ್ಕೆ ಬಂದಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಕ್ಷೇತ್ರದಲ್ಲಿ ಕೂಡ ಒಂದು ಕೋಟಿ ರೂಪಾಯಿ ಸೀಜ್ ಆಗಿದೆ. ಈ ಹಣ ಅಡಿಕೆ ವ್ಯಾಪಾರದ್ದು ಎಂದು ಹೇಳಿಕೊಂಡಿದ್ದಾರೆ. ನಮ್ಮ ಮಂಡ್ಯ ಜಿಲ್ಲೆಯಲ್ಲಿ ಅಷ್ಟು ಹಣ ದುಡಿಯುವ ಅಡಿಕೆ ವ್ಯಾಪಾರಿಗಳಿದ್ದಾರಾ? ಎಂದು ನನಗೆ ಅಚ್ಚರಿ ಉಂಟಾಯಿತು. ಇದು ಕೂಡ ಕಾಂಗ್ರೆಸ್‌ಅಭ್ಯರ್ಥಿ ಹಣವೇ ಆಗಿದೆ. ಅಲ್ಲಿಯೂ ಕಾಂಗ್ರೆಸ್‌ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್‌, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್‌ಕುಮಾರಸ್ವಾಮಿ, ಹಿರಿಯ ಮುಖಂಡರಾದ ಗೊಟ್ಟಿಗೆರೆ ಮಂಜುನಾಥ್‌, ಎ.ಪಿ.ರಂಗನಾಥ್‌ಸೇರಿದಂತೆ ಪಕ್ಷದ ಹಲವಾರು ನಾಯಕರು ಹಾಜರಿದ್ದರು.

Tags: bengaluru ruralckcknewsnowdk sureshelection 2024hd kumaraswamyindiakarnatakaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಶಾಡೋ ಸಿಎಂ ಎಂದ ಮೋದಿಗೆ ಪ್ರತ್ಯುತ್ತರ; ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ ಎಂದ ಸಿಎಂ

ಶಾಡೋ ಸಿಎಂ ಎಂದ ಮೋದಿಗೆ ಪ್ರತ್ಯುತ್ತರ; ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ ಎಂದ ಸಿಎಂ

Leave a Reply Cancel reply

Your email address will not be published. Required fields are marked *

Recommended

ರಸಪ್ರಶ್ನೆ: ಗುಡಿಬಂಡೆ ಶಾಲೆಗಳ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ರಸಪ್ರಶ್ನೆ: ಗುಡಿಬಂಡೆ ಶಾಲೆಗಳ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

3 years ago
ಮಾ.೨ಕ್ಕೆ ಬಾಗೇಪಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ; ಸಮ್ಮೇಳನಾಧ್ಯಕ್ಷರಾಗಿ ಉದಯಕುಮಾರ್.ಎಸ್

ಮಾ.೨ಕ್ಕೆ ಬಾಗೇಪಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ; ಸಮ್ಮೇಳನಾಧ್ಯಕ್ಷರಾಗಿ ಉದಯಕುಮಾರ್.ಎಸ್

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ