• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

cknewsnow desk by cknewsnow desk
March 21, 2024
in EDITORS'S PICKS, NATION, STATE
Reading Time: 1 min read
0
ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ
991
VIEWS
FacebookTwitterWhatsuplinkedinEmail

ಸತತ 4 ಗಂಟೆ ಕಾಲ ನಡೆದ ಶಸ್ತ್ರಚಿಕಿತ್ಸೆ; ತಂದೆ ಆರೋಗ್ಯವಾಗಿದ್ದಾರೆ ಎಂದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಅವರು ಆರೋಗ್ಯದಿಂದ ಇದ್ದಾರೆ.

ಪ್ರಖ್ಯಾತ ಹೃದ್ರೋಗ ತಜ್ಞ ಡಾ.ಸಾಯಿ ಸತೀಶ್‌, ಹಂಗೇರಿಯಿಂದ ಬಂದಿದ್ದ ತಜ್ಞ ವೈದ್ಯರಾದ ಡಾ.ಗೀಜಾ ಹಾಗೂ ರಾಜ್ಯದ ಸುಪ್ರಸಿದ್ಧ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಸತತ ನಾಲ್ಕು ಗಂಟೆಗಳ ಕಾಲ, ಅಂದರೆ; ಬೆಳಗ್ಗೆ 6.30ಯಿಂದ 10.30 ಗಂಟೆವರೆಗೂ ಶಸ್ತ್ರ ಚಿಕಿತ್ಸೆ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳ ಕಚೇರಿಯ ಮೂಲಗಳು ತಿಳಿವೆ.

ತಜ್ಞ ವೈದ್ಯರ ತಂಡ ಮೇಲ್ವಿಚಾರಣೆ

ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದು, ತೀವ್ರ ನಿಗಾ ಘಟಕದಿಂದ ನಾಡಿದ್ದು, ಶನಿವಾರ ವಾರ್ಡ್‌ಗೆ ಸ್ಥಳಾಂತರ ಮಾಡಲಾಗುತ್ತದೆ. ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರ ಕುಟುಂಬ ವರ್ಗದವರೂ ಇದ್ದಾರೆ. ಮಾರ್ಚ್ 24ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಅಂದೇ ಬೆಂಗಳೂರಿಗೆ ಕುಮಾರಸ್ವಾಮಿ ಹಿಂತಿರುಗಲಿದ್ದಾರೆ.

ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು.

ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ…

— Nikhil Kumar (@Nikhil_Kumar_k) March 21, 2024

ತಮ್ಮ ತಂದೆಯವರ ಆರೋಗ್ಯದ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ನಿಖಿಲ್‌ ಕುಮಾರಸ್ವಾಮಿ ಅವರು; ತಂದೆಯವರು ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು. ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ನಿಖಿಲ್‌ ಅವರು ತಿಳಿಸಿದ್ದಾರೆ.

ಡಾ.ಸಿ.ಎನ್.ಮಂಜುನಾಥ್‌ ಅವರು ಹೇಳಿದ್ದೇನು?

ಮಾಧ್ಯಮಗಳ ಜತೆ ಮಾತನಾಡಿದ ಡಾ.ಸಿ.ಎನ್.ಮಂಜುನಾಥ್‌ ಅವರು; ಕುಮಾರಸ್ವಾಮಿ ಅವರಿಗೆ ಈಗಾಗಲೇ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿ ಹೃದಯ ಕಪಾಟುಗಳ ಬದಲಾವಣೆ ಮಾಡಲಾಗಿದೆ. 2007 ಮತ್ತು 2017ರಲ್ಲಿ ಅವರಿಗೆ ಆಪರೇಷನ್‌ ಆಗಿತ್ತು. ಅದನ್ನು ನಮ್ಮ ವೈದ್ಯೆ ಭಾಷೆಯಲ್ಲಿ ಅಯೋಟಿಕ್‌ ವಾಲ್‌ ಎಂದು ಕರೆಯುತ್ತೇವೆ. ಅದು ಚಿಕ್ಕದಾಗಿತ್ತು. ತೆರೆದ ಹೃದಯದ ಶಸ್ತ್ರಚಿಕಿತ್ಸೆ ಇಲ್ಲದೆ ಆಂಜಿಯೋಗ್ರಾಂ ಟೆಕ್ನಿಕ್‌ ರೀತಿಯಲ್ಲಿಯೇ ಅತ್ಯಂತ ಯಶಸ್ವಿಯಾಗಿ ಅವರಿಗೆ ಹೃದಯ ಕವಾಟನ್ನು ಜೋಡಿಸಲಾಗಿದೆ. ಅವರು ಲವಲವಿಕೆಯಿಂದ ಇದ್ದಾರೆ. ಭಾನುವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿಲಿದ್ದಾರೆ.

ಈ ಟೆಕ್ನಿಕ್‌ ಇತ್ತೀಚೆಗೆ ಅಭಿವೃದ್ಧಿ ಹೊಂದಿದ್ದು ಆಗಿದೆ. ಸರ್ಜರಿ ಇಲ್ಲದೆ ಹೃದಯದ ಕವಾಟನ್ನು ಬದಲಿಸುವ ವಿಧಾನ. ಕಾಲಿನ ರಕ್ತನಾಳದ ಮೂಲಕ ಹೃದಯಕ್ಕೆ ಕವಾಟು ಜೋಡಿಸುವ ತಂತ್ರಜ್ಞಾನ. ಇದು ಅತ್ಯಂತ ಸೂಕ್ಷ್ಮವಾಗಿ, ಕರಾರುವಕ್ಕಾಗಿ ಅಂದಾಜಿಸಿ ಶಸ್ತ್ರಚಿಕಿತ್ಸೆ ಮಾಡಬೇಕು. ಅದೇ ರೀತಿಯಲ್ಲಿ ಡಾ.ಸಾಯಿ ಸತೀಶ್‌ ಅವರ ನೇತೃತ್ವದ ತಂಡ ನೆರವೇರಿಸಿದೆ. ಒಂದು ವೇಳೆ ಈ ಟೆಕ್ನಿಕ್‌ ಇಲ್ಲವಾಗಿದ್ದಿದ್ದರೆ ಮೂರನೇ ಬಾರಿಗೆ ಕುಮಾರಸ್ವಾಮಿ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಅದು ಬಹಳ ರಿಸ್ಕಿನದಾಗಿತ್ತು ಹಾಗೂ ಅದರಿಂದ ಅವರು ಗುಣಮುಖರಾಗುವುದಕ್ಕೆ ಬಹಳ ಸಮಯ ಬೇಕಾಗುತ್ತಿತ್ತು. ಅವರು ಭಾನುವಾರ ಆಸ್ಪತ್ರೆಯಿಂದ ಮನೆಗೆ ಬರಲಿದ್ದಾರೆ. ಒಂದೆರಡು ದಿನ ವಿಶ್ರಾಂತಿ ಪಡೆದ ಮೇಲೆ ಅವರು ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಬಹುದು ಎಂದು ಡಾ.ಸಿ.ಎನ್.ಮಂಜುನಾಥ್‌ ಅವರು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ನೇರ ಚುನಾವಣೆಗೆ

ಕುಮಾರಸ್ವಾಮಿ ಅವರ ಯಶಸ್ವಿ ಶಸ್ತ್ರ ಚಿಕಿತ್ಸೆ ನಂತರ ಆವರ ಆರೋಗ್ಯ ಸುಧಾರಿಸುತ್ತಿದ್ದಂತೆ, ಇತ್ತ ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಅವರು ಹೇಳಿಕೆಯೊಂದನ್ನು ನೀಡಿ, ಕುಮಾರಸ್ವಾಮಿ ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಕುಮಾರಣ್ಣನೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಇದರಲ್ಲಿ ಯಾವುದೇ ಅನುಮಾನ ಬೇಡ, ಅವರನ್ನು ಭಾರೀ ಅಂತರದಿಂದ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡುತ್ತೇವೆ ಎಂದಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ.

Tags: apolloChennaickcknewsnowhd kumaraswamyHealthheartheart surgeryjdsNikhil kumaraswamy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉತ್ತರ ಪ್ರದೇಶದ ರೈತರ ಧಾರುಣತೆ ಬಿಚ್ಚಿಟ್ಟ ಖರ್ಗೆ

ಕೇಂದ್ರವು ಮುಟ್ಟುಗೋಲು ಹಾಕಿಕೊಂಡಿರುವ ಕಾಂಗ್ರೆಸ್‌ ಪಕ್ಷದ ಹಣವೆಷ್ಟು?

Leave a Reply Cancel reply

Your email address will not be published. Required fields are marked *

Recommended

ಮುಂದಿನ ವರ್ಷದ ಹೊತ್ತಿಗೆ ಡಾ.ಅಶ್ವತ್ಥನಾರಾಯಣ ಇನ್ನೂ ಮೇಲ್ಮಟ್ಟಕ್ಕೆ ಹೋಗಿ ಬ್ಯುಸಿ ಆಗಿಬಿಡ್ತಾರೆ! ಅವರಿಗೆ ಟೈಮ್‌ ಸಿಗೋದು ಕಷ್ಟವಾಗುತ್ತೆ ಎಂದ ಡಿ.ವಿ.ಸದಾನಂದಗೌಡರು

ಮುಂದಿನ ವರ್ಷದ ಹೊತ್ತಿಗೆ ಡಾ.ಅಶ್ವತ್ಥನಾರಾಯಣ ಇನ್ನೂ ಮೇಲ್ಮಟ್ಟಕ್ಕೆ ಹೋಗಿ ಬ್ಯುಸಿ ಆಗಿಬಿಡ್ತಾರೆ! ಅವರಿಗೆ ಟೈಮ್‌ ಸಿಗೋದು ಕಷ್ಟವಾಗುತ್ತೆ ಎಂದ ಡಿ.ವಿ.ಸದಾನಂದಗೌಡರು

5 years ago
‌ರಾಜ್ಯದಲ್ಲಿ ಖಾಸಗಿ ಶಾಲೆ ಮತ್ತು ಪೋಷಕರ ನಡುವೆ ʼಫೀಸ್ ಫೈಟ್ʼ ಖಂಡಿತಾ ಒಳ್ಳೆಯದಲ್ಲ ಎಂದ ಸಚಿವ‌ ಎಸ್.ಸುರೇಶ್ ಕುಮಾರ್

‌ರಾಜ್ಯದಲ್ಲಿ ಖಾಸಗಿ ಶಾಲೆ ಮತ್ತು ಪೋಷಕರ ನಡುವೆ ʼಫೀಸ್ ಫೈಟ್ʼ ಖಂಡಿತಾ ಒಳ್ಳೆಯದಲ್ಲ ಎಂದ ಸಚಿವ‌ ಎಸ್.ಸುರೇಶ್ ಕುಮಾರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ