11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ; ಅಂದರೆ, ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ಪ್ರಕಟಣೆಯಲ್ಲಿ ಈವಿಷಯ ತಿಳಿಸಿದೆ.
ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನುಬುಧವಾರ ಪ್ರಕಟಿಸಲಾಗುತ್ತಿದೆ.
ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ಸುದ್ದಿಗೋಷ್ಠಿಯನ್ನು ಕರೆದಿದೆ. ಬೆಳಗ್ಗೆ 11 ಗಂಟೆಗೆ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.
ಫಲಿತಾಂಶವನ್ನು karresults.nic.in ವೆಬ್ಸೈಟ್ ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ನೋಡಬಹುದು.