• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಬಾಡೂಟವನ್ನು ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ ಕಾಂಗ್ರೆಸ್

cknewsnow desk by cknewsnow desk
April 10, 2024
in POLITICS, STATE
Reading Time: 1 min read
0
ಬಾಡೂಟವನ್ನು ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ ಕಾಂಗ್ರೆಸ್
922
VIEWS
FacebookTwitterWhatsuplinkedinEmail

ಹಿಂದೂ ಸಂಸ್ಕೃತಿ ಮೇಲೆ ಕಾಂಗ್ರೆಸ್ ಕಾಕದೃಷ್ಟಿ; ತಿರುಗೇಟು ಕೊಟ್ಟ ಜೆಡಿಎಸ್

ಬೆಂಗಳೂರು: ಯುಗಾದಿ ಹೊಸತೊಡಕು ಸಂಭ್ರಮಕ್ಕೆ ಅಡ್ಡಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಹಿಂದೂ ಸಂಸ್ಕೃತಿಯ ಮೇಲೆ ತನ್ನ ಕಾಕದೃಷ್ಟಿ ಬೀರಿದೆ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಪಕ್ಷವು; ಯುಗಾದಿ ಹಿಂದೂಗಳ ಹೊಸವರ್ಷ. ಯುಗಾದಿ ಹಿಂದೂಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಅಸ್ಮಿತೆ. ಈ ಹಬ್ಬದ ಮರುದಿನದ ಸಂಭ್ರಮ ಹೊಸತೊಡಕು ಆಚರಣೆ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಕಾಂಗ್ರೆಸ್ ಪಕ್ಷ ನಮ್ಮ ಸಂಪ್ರದಾಯ, ಸಂಸ್ಕೃತಿ, ಆಚರಣೆಯ ಮೇಲೆಯೂ ಕಾಕದೃಷ್ಟಿ ಬೀರಿದೆ. ಬಾಡೂಟವನ್ನು ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ ಎಂದು ಕಿಡಿಕಾರಿದೆ.

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ನಡೆಯುವಂತೆ ಕುಮಾರಸ್ವಾಮಿ ಅವರ ಮನೆಯಲ್ಲಿಯೂ ಹೊಸತೊಡಕು ಆಚರಣೆ ನಡೆಯುತ್ತಿದೆ. ಅದರಲ್ಲಿ ವಿಶೇಷವೇನೂ ಇಲ್ಲ. ಹೊಸತೊಡಕು ಊಟಕ್ಕೆ ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಸಹಪಾಠಿಗಳನ್ನು ಅವರು ಆಹ್ವಾನಿಸಿದ್ದಾರೆ. ಮಾಂಸದ ಅಡುಗೆ ಈ ದಿನದ ಸಾಮಾನ್ಯ ತಿನಿಸು. ಈ ಊಟಕ್ಕೂ ಕಾಂಗ್ರೆಸ್ ಕಲ್ಲು ಹಾಕಿ ವಿಕೃತಿ ಮೆರೆದಿದೆ ಎಂದು ಜೆಡಿಎಸ್ ಆರೋಪಿಸಿದೆ.

ಯುಗಾದಿ ಹಿಂದೂಗಳ ಹೊಸವರ್ಷ. ಯುಗಾದಿ ಹಿಂದೂಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಅಸ್ಮಿತೆ. ಈ ಹಬ್ಬದ ಮರುದಿನದ ಸಂಭ್ರಮ ಹೊಸತೊಡಕು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. @INCKarnataka ನಮ್ಮ ಸಂಪ್ರದಾಯ, ಸಂಸ್ಕೃತಿ, ಆಚರಣೆಯ ಮೇಲೆಯೂ 'ಕಾಕದೃಷ್ಟಿ' ಬೀರಿದೆ. ಬಾಡೂಟವನ್ನೂ ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ.1/4…

— Janata Dal Secular (@JanataDal_S) April 10, 2024

ಮತಕ್ಕಾಗಿ ಹಣ, ಹೆಂಡ, ಸೀರೆ, ಕುಕ್ಕರ್, ಪ್ರಿಜ್ಡ್, ಕೂಪನ್ ಹಂಚುವ ಸತ್ಸಂಪ್ರದಾಯ ಹೊಂದಿರುವ ಕಾಂಗ್ರೆಸ್ಸಿಗೆ, ಕಾವೇರಿ ಹೆಸರಿನಲ್ಲಿ ನಡೆಸಿದ ಮೇಕೆದಾಟು ಪಾದಯಾತ್ರೆಯಲ್ಲಿ ನದಿಯಂತೆ ಹರಿದ ಮಾಂಸ, ಮದ್ಯದ ಹೊಳೆಯನ್ನು ಕಾಣದವರು ಯಾರೂ ಇಲ್ಲ. ಆದರೆ, ಆ ಪಕ್ಷದ ಕಾಮಾಲೆ ಕಣ್ಣು ಹಿಂದೂಗಳ ಹಬ್ಬಗಳ ಮೇಲೆಯೇ ಬಿದ್ದಿದೆ. ಜಾತಿ, ಧರ್ಮಗಳ ತುಷ್ಟೀಕರಣ ಜಾಡ್ಯ ಕಾಂಗ್ರೆಸ್ ಪಕ್ಷವನ್ನು ಅಂಟಿಕೊಂಡಿದೆ ಎಂದು ಜೆಡಿಎಸ್ ದೂರಿದೆ.

ಕಾಂಗ್ರೆಸ್ ಸೋಲಿನ ಹತಾಶೆಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳನ್ನು ಟೀಕಿಸುವ ಬರದಲ್ಲಿ ನಮ್ಮ ಹಿಂದೂ ಸಂಪ್ರದಾಯದ ಬಗ್ಗೆ ಅವಹೇಳನ ಮಾಡಿದೆ. ಅದರ ಕೊಳಕುತನ ಅದರ ಟ್ವೀಟ್ ನಲ್ಲಿ ಎದ್ದು ಕಾಣುತ್ತಿದೆ. ನಿರಂತರವಾಗಿ ಹಿಂದೂ ವಿರೋಧಿ, ದ್ರೋಹಿ ಆಗಿರುವ ಕಾಂಗ್ರೆಸ್ ಪಕ್ಷಕ್ಕೆ ಹೊಸತೊಡಕುಗಿಂತ ಇಫ್ತಾರ್ ಕೂಟದಲ್ಲಿಯೇ ಹೆಚ್ಚು ಪ್ರೀತಿ. ಜನ್ಮದಾರಭ್ಯ ಬಂದಿದ್ದನ್ನು ನಾವಂತೂ ಅವಹೇಳನ ಮಾಡುವುದಿಲ್ಲ ಎಂದು ಪಕ್ಷ ಹೇಳಿದೆ.

ಕಾಂಗ್ರೆಸ್‌ ಹೇಳಿದ್ದೇನು?

ಜೆಡಿಎಸ್ ಪಕ್ಷದ ಹೆಡ್ಡಾಫೀಸ್‌ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ಚುನಾವಣಾ ಆಯೋಗ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ? ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಕಾಂಗ್ರೆಸ್‌ ಕೇಳಿತ್ತು.

ಜೆಡಿಎಸ್ ಪಕ್ಷದ ಹೆಡ್ಡಾಫೀಸ್‌ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ @ceo_karnataka ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ?

ಸೋಲಿನ ಭಯದಲ್ಲಿರುವ… pic.twitter.com/YKOk8zVFxn

— Karnataka Congress (@INCKarnataka) April 10, 2024
Tags: ckcknewsnowCongresselection 2024jdskarnatakaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪಕ್ಷ ವಿರೋಧಿಗಳಿಗೆ ಗೇಟ್‌ಪಾಸ್; ಕೊನೆಗೂ ಕಠಿಣ ನಿರ್ಧಾರಕ್ಕೆ ಬಂದ ಬಿಜೆಪಿ

ಪಕ್ಷ ವಿರೋಧಿಗಳಿಗೆ ಗೇಟ್‌ಪಾಸ್; ಕೊನೆಗೂ ಕಠಿಣ ನಿರ್ಧಾರಕ್ಕೆ ಬಂದ ಬಿಜೆಪಿ

Leave a Reply Cancel reply

Your email address will not be published. Required fields are marked *

Recommended

ಮುಳಬಾಗಲು ಪಟ್ಟಣದಲ್ಲಿ ಶಾಲೆ ಆಗಿರುವ ಡಿವಿಜಿ ಅವರ ಮನೆಗೆ ಕಾಯಕಲ್ಪ; ಎದುರಾಗಿದ್ದ ಅಡ್ಡಿಗಳನ್ನು ತಿಳಿಗೊಳಿಸಿದ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

ಮುಳಬಾಗಲು ಪಟ್ಟಣದಲ್ಲಿ ಶಾಲೆ ಆಗಿರುವ ಡಿವಿಜಿ ಅವರ ಮನೆಗೆ ಕಾಯಕಲ್ಪ; ಎದುರಾಗಿದ್ದ ಅಡ್ಡಿಗಳನ್ನು ತಿಳಿಗೊಳಿಸಿದ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

5 years ago
ಗುಡಿಬಂಡೆ ಬಂದ್

ಗುಡಿಬಂಡೆ ಬಂದ್

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ