ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ
by GS Bharath Gudibande
ಗುಡಿಬಂಡೆ: ಒಂದೆಡೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದರೆ, ಮತ್ತೊಂದೆಡೆ ದ್ವಿತೀಯ ಪಿಯುಸಿ ಬುಧವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಎಂದಿನಂತೆ ಕಾಲೇಜಿನಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 18ನೇ ಸ್ಥಾನವನ್ನು ಪಡೆದರೆ, ಜಿಲ್ಲೆಯಲ್ಲಿ ಗುಡಿಬಂಡೆಯ ಏಕೈಕ ಸರಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ಮಾಡಿದೆ.
ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶದ ಜತೆಗೆ 13 ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಪ್ರಥಮ ಶ್ರೇಣಿಯನ್ನು ಪಡೆಯುವ ಮೂಲಕ ತಾಲೂಕಿನ ಏಕೈಕ ಸರಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿ ಈ ಬಾರಿ ಅತ್ಯುತ್ತಮ ಸಾಧನೆ ಮಾಡಿದೆ.
ವಿಭಾಗವಾರು ಫಲಿತಾಂಶ
ಕಲಾ ವಿಭಾಗದಲ್ಲಿ 33 ವಿದ್ಯಾರ್ಥಿಗಳಿಗೆ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 34 ವಿದ್ಯಾರ್ಥಿಗಳಿಗೆ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 19 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು 15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು. ಒಟ್ಟಾರೆ ಕಾಲೇಜು ಶೇ.53.ರಷ್ಟು ಫಲಿತಾಂಶವನ್ನು ಪಡೆದಿದೆ ಎಂದು ಪ್ರಾಂಶುಪಾಲ ರವೀಂದ್ರ ಮಾಹಿತಿ ನೀಡಿದ್ದಾರೆ.
ಕಾಲೇಜಿನಲ್ಲಿ ಸರಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಸರಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಕಾಲೇಜಿಗೆ ಟಾಪರ್ ಆಗಿರುವುದು ತುಂಬಾ ಖುಷಿಯಾಗಿದೆ, ಉಪನ್ಯಾಸಕರು ಪ್ರತಿಯೊಬ್ಬರಿಗೂ ಕಾಳಜಿ ವಹಿಸಿ ಪಾಠ ಪ್ರವಚನಗಳನ್ನು ನಡೆಸುತ್ತಾರೆ. ಖಾಸಗಿ ಕಾಲೇಜುಗಳಿಗೆ ಕಡೆಮೆ ಇಲ್ಲದಂತೆ ಕಲಿಕಾ ವಾತಾವರಣ ಇದ್ದು ಹೆಚ್ಚಿನ ವಿದ್ಯಾರ್ಥಿಗಳು ಸರಕಾರಿ ಶಾಲೆಗೆ ದಾಖಲಾದರೆ ನಿಮ್ಮ ಭವಿಷ್ಯವೂ ಉತ್ತಮವಾಗಿ ರೂಪುಗೊಳ್ಳುತ್ತದೆ.
ಸಾಜಿಯಾ.ಎಂ, ವಿದ್ಯಾರ್ಥಿನಿ, ವಿಜ್ಞಾನ ವಿಭಾಗ.
ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು