ಎನ್’ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ
by GS Bharath Gudibande
ಬಾಗೇಪಲ್ಲಿ: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ನಮ್ಮ ಬೆಂಬಲ, ಬಿಜೆಪಿ – ಜೆಡಿಎಸ್ ಮೈತ್ರಿಯ ಎನ್’ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಯುವ ನಾಯಕ ಆರ್ ಮಿಥುನ್ ರೆಡ್ಡಿ ಅವರು ಘೋಷಿಸಿದರು.
ಶನಿವಾರ ಬಾಗೇಪಲ್ಲಿ ಪಟ್ಟಣದ ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿಯ ಗಡಿದಂ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ತಮ್ಮ ಬೆಂಬಲಿಗರು ಹಾಗೂ ಮುಖಂಡರ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಡಾ.ಕೆ ಸುಧಾಕರ್ ಅವರಿಗೆ ಅಭೂತಪೂರ್ವ ಬೆಂಬಲ ಸೂಚಿಸಿದರು.
ಬಾಗೇಪಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸುಧಾಕರ್ ಬೇಕು
ಮೋದಿ ಅವರನ್ನ ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ನೋಡಬೇಕು ಅವರ ಸೇವೆ ನಮ್ಮ ಭಾರತಕ್ಕೆ ಇನ್ನೂ ಹೆಚ್ಚು ಅವಶ್ಯಕತೆ ಇದೆ. ಡಾ.ಕೆ ಸುಧಾಕರ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿ ಹರಿಕಾರರು. ಸುಧಾಕರ್ ಅವರ ಸೇವೆ ನಮ್ಮ ಜಿಲ್ಲೆಗೆ ಹಾಗೂ ಬಾಗೇಪಲ್ಲಿ ಕ್ಷೇತ್ರಕ್ಕೆ ತುಂಬಾ ಅವಶ್ಯಕತೆ ಇದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್’ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಪರವಾಗಿ ನಾವೆಲ್ಲ ಒಟ್ಟಾಗಿ ಮತ ಕೇಳೋಣ, ಒಟ್ಟಾಗಿ ಅವರ ಗೆಲುವಿಗೆ ಶ್ರಮಿಸೋಣ ಬಾಗೇಪಲ್ಲಿ ಅಭಿವೃದ್ಧಿ ಆಗಬೇಕಾದರೆ ನಾವೆಲ್ಲ ಸುಧಾಕರ್ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ನನ್ನ ಕಾರ್ಯಕರ್ತರ ಕೈ ಬಿಡುವುದಿಲ್ಲ
ಕಳೆದ ವಿಧಾನಸಭೆ ಚುನಾವಣೆಗೆ ಹಗಲಿರುಳು ಕಷ್ಟ ಪಟ್ಟ ನನ್ನ ಅಣ್ಣತಮ್ಮಂದಿರಿಗೆ ನಾನು ಚಿರೃಋಣಿಯಾಗಿದ್ದೇನೆ. ನಾನು ನನ್ನ ಕಾರ್ಯಕರ್ತರ ಕೈ ಎಂದಿಗೂ ಬಿಡುವುದಿಲ್ಲ ಎಂದು ಹೇಳಿದರು.



ಸುಧಾಕರ್ ಗೆಲ್ಲಿಸುವುದೇ ಗುರಿ
ಡಾ.ಕೆ ಸುಧಾಕರ್ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ ಈ ನಿಟ್ಟಿನಲ್ಲಿ ಬಾಗೇಪಲ್ಲಿ ವಿಧಾಸಭಾ ಕ್ಷೇತ್ರದ ನಮ್ಮ ಮುಖಂಡರು, ಕಾರ್ಯಕರ್ತರ ಸಭೆಯನ್ನು ಮಾಡಿ ಒಮ್ಮತದ ತೀರ್ಮಾನ ಕೈಗೊಂಡಿದ್ದೇವೆ.
ಈ ವೇಳೆ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹರಿನಾಥ ರೆಡ್ಡಿ, ಲಕ್ಷ್ಮೀನಾರಾಯಣ, ರಾಜಾರೆಡ್ಡಿ, ಬಾಗೇಪಲ್ಲಿ ಪುರಸಭೆ ಸದಸ್ಯರಾದ ಆನಾ ಮೂರ್ತಿ, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಶಿವಾರೆಡ್ಡಿ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಹಾಗೂ ನಿವೃತ್ತ ಡಿವೈಎಸ್’ಪಿ ಕೋನಪ್ಪರೆಡ್ಡಿ, ಕಮ್ಮಗುಟ್ಟಹಳ್ಳಿ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಪೃಥ್ವಿ ರೆಡ್ಡಿ, ಭಜರಂಗದಳ ಜಿಲ್ಲಾ ಸಂಚಾಲಕ ಜಿ.ಎ ಅಮರೇಶ್, ಬಾಗೇಪಲ್ಲಿ ಪುರಸಭೆಯ ಮಾಜಿ ಉಪಾಧ್ಯಕ್ಷ ಭಾಸ್ಕರ್, ಗುಡಿಬಂಡೆ ಪಟ್ಟಣ ಪಂಚಾಯತಿ ಸದಸ್ಯರಾದ ಬಷೀರ್, ಜಗನ್, ನಿತೀನ್, ಮಾಜಿ ಅಧ್ಯಕ್ಷ ಅಪ್ಸರ ಭಾಷಾ, ಉಪಾಧ್ಯಕ್ಷ ರಾಜಣ್ಣ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಂಗಿರೆಡ್ಡಿ, ಚೇಳೂರು ಗ್ರಾಮ ಪಂಚಾಯತಿ ಸದಸ್ಯರಾದ ಸುಬ್ಬಿರೆಡ್ಡಿ, ಆನಂದ್, ಪ್ರಧಾನ ಕಾರ್ಯದರ್ಶಿ ಚಲುವಾದಿ ರಮೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
“
ಗುಡಿಬಂಡೆ, ಬಾಗೇಪಲ್ಲಿ, ಚೇಳೂರು ತಾಲ್ಲೂಕಿನ ಎಲ್ಲಾ ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ, ಮಾಜಿ ಸದಸ್ಯರು ಹಾಗೂ ನಮ್ಮ ಎಲ್ಲಾ ಕಾರ್ಯಕರ್ತರು ಒಂದಾಗಿ ಈ ಬಾರಿ ದೇಶಕ್ಕೆ ಮೋದಿ ಚಿಕ್ಕಬಳ್ಳಾಪುರಕ್ಕೆ ಡಾ.ಕೆ ಸುಧಾಕರ್ ಅವರ ಗೆಲುವಿಗೆ ಶ್ರಮಿಸಲು ತೀರ್ಮಾನಿಸಲಾಗಿದೆ.
ಆರ್.ಮಿಥುನ್ ರೆಡ್ಡಿ