• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
April 15, 2024
in ELECTION2024, NATION, POLITICS, STATE
Reading Time: 2 mins read
0
ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ  ವಿಷಾದಿಸುತ್ತೇನೆ ಎಂದ  ಹೆಚ್.ಡಿ.ಕುಮಾರಸ್ವಾಮಿ

Oplus_131072

966
VIEWS
FacebookTwitterWhatsuplinkedinEmail

ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಪಟ್ಟಿ ಕೊಟ್ಟ ಮಾಜಿ ಸಿಎಂ

  • ಹೇಮಮಾಲಿನಿಗೆ ಸುರ್ಜೆವಾಲ ಅಪಮಾನ
  • ಕಂಗನಾ ಗೌರವಕ್ಕೆ ಧಕ್ಕೆ ತಂದ ಕಾಂಗ್ರೆಸ್
  • ಆನಂದಿಸಿ ಎಂದಿದ್ದ ರಮೇಶ್ ಕುಮಾರ್ ಹೇಳಿಕೆ
  • ಹೆಣ್ಣು ಮಕ್ಕಳನ್ನು ಕಿಡ್ನಾಪ್ ಮಾಡಿ ಜಮೀನುಗಳಿಗೆ ಬೇಲಿ ಹಾಕಿದಾಗ ದುಃಖ ಆಗಲಿಲ್ಲವೇ?
  • 5 ಗ್ಯಾರಂಟಿಗಳು ಪಿಕ್ ಪಾಕೆಟ್ ಗ್ಯಾರಂಟಿಗಳು

ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಅಲ್ಲಿಗೆ ಗ್ಯಾರಂಟಿಗಳ ವಿಷಯ ಇಟ್ಟುಕೊಂಡು ರಾಜಕೀಯಕ್ಕೆ ಇಳಿದಿದ್ದ ಕಾಂಗ್ರೆಸ್ ಗೆ ಕುಮಾರಸ್ವಾಮಿ ಚೆಕ್ ಮೇಟ್ ಇಟ್ಟಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು.

ನಾಡಿನ ಜನರನ್ನು ಮರಳು ಮಾಡುತ್ತಿರುವ 5 ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ ಅವರು, ಅವು ಪಿಕ್ ಪಾಕೆಟ್ ಗ್ಯಾರಂಟಿಗಳು ಎಂದು ಟೀಕಿಸಿದರು.

ಅಳಬೇಡಪ್ಪ ಡಿ.ಕೆ.ಶಿವಕುಮಾರ್. ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನೀನು ದುಃಖ ಪಡಬೇಡಪ್ಪ. ನೀನು ಏನ್ ದುಃಖ ಪಟ್ಟಿದ್ದೀಯಾ ಎನ್ನುವುದನ್ನು ನೋಡಿದ್ದೇನೆ ಎಂದು ನೇರ ಡಿಕೆಶಿಯನ್ನು ತರಾಟೆಗೆ ತೆಗೆದುಕೊಂಡರು ಅವರು.

ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಹೇಳಿದರು ಅವರು.

ಜನರಿಂದ ಕಿತ್ತುಕೊಂಡ ಹಣವನ್ನೇ ಕಾಂಗ್ರೆಸ್ಸಿಗರು ಗ್ಯಾರಂಟಿ ಎಂದು ಕೊಡುತ್ತಿದೆ. ಈ ಗ್ಯಾರಂಟಿಗಳು ‘ಪಿಕ್ ಪಾಕೆಟ್ ಗ್ಯಾರಂಟಿಗಳು’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಲೋಕಸಭೆ ಕ್ಷೇತ್ರದ ತುರುವೇಕೆರೆಯಲ್ಲಿ ನಾನು ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೆ‌. ಆ ಸಭೆಯಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ. ಕುಮಾರಸ್ವಾಮಿ ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ಅವರು ಕ್ಷಮೆಗೆ ಅರ್ಹರಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. ವಾಯುವೆಗದಲ್ಲಿ ತಮ್ಮ ಶಾಸಕರು, ಮಾಜಿ ಶಾಸಕರು, ಮಹಿಳಾ ಘಟಕದವರ ಜತೆ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾ ಗಾಂಧಿ ಅವರು ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟರೆ ಅಷ್ಟು ದುಃಖಪಟ್ಟಿದ್ದು ಈ ದಿನವೇ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟರು.

ಹೆಣ್ಣು ಮಕ್ಕಳನ್ನು ಕಿಡ್ನಾಪ್ ಮಾಡಿ ಅವರ ಭೂಮಿಗೆ ಬೇಲಿ ಹಾಕಿದಾಗ ದುಃಖ ಆಗಲಿಲ್ಲವೇ?

ತಾಯಂದಿರ ಕಣ್ಣೀರು ಈ ವ್ಯಕ್ತಿಗೆ ಈಗ ಕಾಣುತ್ತಿದೆಯಾ? ನಾನು ಡಿ.ಕೆ.ಶಿವಕುಮಾರ್ ಗೆ ಕೇಳಲು ಬಯಸುತ್ತೇನೆ. ಕೆಲ ಹೆಣ್ಣು ಮಕ್ಕಳನ್ನು ಅಪಹರಣ (ಕಿಡ್ನಾಪ್) ಮಾಡಿ ಅವರ ಅಪ್ಪ ಅಮ್ಮನಿಂದ ಜಮೀನು ಬರೆಸಿಕೊಂಡಾಗ ನಿಮಗೆ ದುಃಖ ಆಗಲಿಲ್ಲವೇ.. ಪಾಪ.. ಇದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಗಂಡಂದಿರ ಜೇಬಿನಿಂದ ಪಿಕ್ ಪಾಕೇಟ್

ಸಿಎಂ ನನ್ನ ಸಂಸ್ಕೃತಿ ತೋರಿಸುತ್ತೆ ಎಂದು ಹೇಳಿಕೆ ನೀಡಿದ್ದಾರೆ. ನಿಮ್ಮ ಪಕ್ಷದ ಸಂಸ್ಕೃತಿಯ ಬಗ್ಗೆ ಹೇಳಬೇಕೆ? ನನ್ನ ಬಳಿ ಕಂತೆ ಕಂತೆ ಮಾಹಿತಿ ಇದೆ. ನಾಡಿನ ತಾಯಂದಿರಿಗೆ ನಾನು ಕೇಳುವುದು ಇಷ್ಟೇ.. ಇವರು ₹2000 ನಿಮಗೆ ಕೊಟ್ಟು ನಿಮ್ಮ ಯಜಮಾನರ ಜೇಬಿಂದ ₹5000 ಕೀಳುತ್ತಿದ್ದಾರೆ. ನಿಮ್ಮ ಗಂಡಂದಿರ ಜೇಬಿನಿಂದ ಪಿಕ್ ಪಾಕೇಟ್ ಮಾಡುತ್ತಿದ್ದಾರೆ. ಇದರಿಂದ ಎಚ್ಚರದಿಂದ ಇರಿ ಎಂದು ತಾಯಂದಿರಿಗೆ ಹೇಳಿದ್ದೇನೆ. ನಿಮಗೆ ಆರ್ಥಿಕ ಶಕ್ತಿ ಬರಬೇಕು ಎಂದು ಭಾಷಣ ಮಾಡಿದ್ದೇನೆ. 2006-07ರಲ್ಲಿ ಸಾರಾಯಿ ನಿಷೇಧ ಮಾಡಿದ್ದು ನಾನು. ಲಾಟರಿ ನಿಷೇಧ ಮಾಡಿದೆ. ನಿಷೇಧ ಮಾಡಬಾರದು ಎಂದು ನನಗೆ ಸಾವಿರಾರು ಕೋಟಿ ಹಣ ಆಮಿಷ ಒಡ್ಡಿದರು. ಅದನ್ನೆಲ್ಲ ಕಾಲಲ್ಲಿ ಒದ್ದು ಸಾರಾಯಿ ನಿಷೇಧ ಮಾಡಿದ್ದೆ. ಎಲ್ಲೇ ಹೋದರೂ ತಾಯಂದಿರು ನನ್ನ ಬಳಿ ಬಂದು ಸಾರಾಯಿ, ಲಾಟರಿ ನಿಷೇಧ ಮಾಡಿ ಎಂದು ಕಣ್ಣೀರು ಹಾಕುತ್ತಿದ್ದರು. ಅವರಿಗಾಗಿ ಬೊಕ್ಕಸಕ್ಕೆ ನಷ್ಟ ಆಗುತ್ತದೆ ಎಂದು ಗೊತ್ತಿದ್ದರೂ ರಿಸ್ಕ್ ತೆಗೆದುಕೊಂಡು ನಿಷೇಧ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ನವರಿಗೆ ನನ್ನ ಬಗ್ಗೆ ಮಾತಾಡುವುದಕ್ಕೆ ವಿಷಯ ಇಲ್ಲ. ಅದಕ್ಕೆ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಗೋ ಬ್ಯಾಕ್ ಆಟ ನಡೆಯಲ್ಲ

ಸಚಿವರು, ನಾಯಕರು, ಕಾಂಗ್ರೆಸ್ ಮಹಿಳಾ ಘಟಕದವರು ಮಂಡ್ಯದಲ್ಲಿ ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಪ್ರತಿಭಟನೆ ಮಾಡಿದ್ದಾರೆ. ಅಲ್ಲಿಗೆ ಬಂದ ಹೆಣ್ಣುಮಕ್ಕಳನ್ನು ಇಲ್ಲಿಗೆ ಯಾಕೆ ಬಂದಿದ್ದೀರಿ ಎಂದು ಕೇಳಿದರೆ, ಯಾಕೆ ಬಂದಿದ್ದೇವೆ ಎನ್ನುವುದು ಗೊತ್ತಿಲ್ಲ ಅಂತ ಹೇಳುತ್ತಾರೆ. ಆದರೆ ಆ ತಾಯಂದಿರಿಗೆ ತಮ್ಮ ಪಕ್ಷದ ನಾಯಕರೇ ಮಹಿಳೆಯರಿಗೆ ಮಾಡಿರುವ ಘೋರ ಅಪಮಾನದ ಬಗ್ಗೆ ಗೊತ್ತಿಲ್ಲ. ಇಂಥ ರಾಜಕೀಯ ಆಟಗಳಿಗೆ ನಾನೇನು ಹೆದರುವ ಆಸಾಮಿ ಅಲ್ಲ ಎಂದು ತಿರುಗೇಟು ಕೊಟ್ಟರು.

ಹೇಮಾಮಾಲಿನಿ, ಕಂಗನಾಗೆ ಅಪಮಾನ ಪ್ರಕರಣ ಪ್ರಸ್ತಾಪ

ಮಿಸ್ಟರ್ ಶಿವಕುಮಾರ್.. ನಿಮ್ಮ ಪಕ್ಷದ ಉಸ್ತುವಾರಿ ಇದ್ದಾರೆ ಅಲ್ಲವೆ? ಅ ಮನುಷ್ಯ ನಟಿ ಹಾಗೂ ಸಂಸದರಾದ ಹೇಮಮಾಲಿನಿ ಅವರ ಬಗ್ಗೆ ಏನು ಹೇಳಿಕೆ ಕೊಟ್ಟಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವೇ? ರಂದೀಪ್ ಸುರ್ಜೆವಾಲ ಅವರು ಹೇಮಾಮಾಲಿನಿ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ನಾನು ಇಲ್ಲಿ ಓದಿ ಹೇಳಲು ಆಗುವುದಿಲ್ಲ. ಅಷ್ಟು ಅಸಭ್ಯ, ಕೀಳು ಅಭಿರುಚಿಯಿಂದ ಕೂಡಿದೆ ಅವರ ಹೇಳಿಕೆ. ಶಿವಕುಮಾರ್.. ಮಹಿಳೆಯರಿಗೆ ಗೌರವ ಕೊಡುವ ರೀತಿ ಇದೇನಾ? ನೀವು ದೇಶದ ಮಹಿಳೆಯರನ್ನು ರಕ್ಷಣೆ ಮಾಡೋರು ಅಲ್ಲವೇ? ಎಂದು ಪ್ರಹಾರ ನಡೆಸಿದರು.

ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ನಟಿ ಕಂಗನಾ ರಣಾವತ್ ಬಗ್ಗೆ ಇವರ ಪಕ್ಷದ ವಕ್ತಾರರು ಸಾಮಾಜಿಕ ಜಾಲತಾಣದಲ್ಲಿ ಏನು ಬರೆದಿದ್ದರು? ಅಲ್ಲಿ ರೇಟ್ ಫಿಕ್ಸ್ ಮಾಡಿದಿರಿ ನೀವು. ಮಿಸ್ಟರ್ ಶಿವಕುಮಾರ್.. ಇದಕ್ಕೆ ಹೇಳಪ್ಪ ಉತ್ತರ. ನಿಮ್ಮ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಂಥ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಏನು ಹೇಳುತ್ತಾರೆ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ರಮೇಶ್ ಕುಮಾರ್ ‘ಆನಂದ ಪಡೆಯಿರಿ’ ಹೇಳಿಕೆ ಉಲ್ಲೇಖ

ರಮೇಶ್‌ ಕುಮಾರ್‌

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ವಿಧಾನಸಭೆ ಕಲಾಪದಲ್ಲಿ ಏನು ಹೇಳಿದ್ದರು ಎನ್ನುವುದು ನಿಮಗೆ ಗೊತ್ತಿರಬೇಕಲ್ಲವೇ ಶಿವಕುಮಾರ್? ಅವರು ಹೇಳಿದ್ದನ್ನು ಮರೆತಿದ್ದೀರಾ ಹೇಗೆ? ರಮೇಶ್ ಕುಮಾರ್‌ ಅವರು ಸದನದಲ್ಲಿ ಆನಂದ ಪಡೆಯಿರಿ ಅಂತ ಹೇಳಿದ್ದರು ಅಲ್ಲವಾ? ಅವರು ಯಾಕಾಗಿ ಈ ಮಾತು ಹೇಳಿದರು ಎನ್ನುವುದು ಗೊತ್ತಿರಬೇಕಲ್ಲವೇ ನಿಮಗೆ? ಇಂಥ ನಿಮ್ಮಿಂದ ನಾನು ಗೌರವ ಕೊಡುವುದನ್ನು ಕಲಿಯಬೇಕೇ ರಮೇಶ್ ಕುಮಾರ್ ಹೇಳಿಕೆ ಪ್ರಸ್ತಾಪಿಸಿ ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು ಮಾಜಿ ಮುಖ್ಯಮಂತ್ರಿಗಳು.

ಗಂಡಸ್ತನ ಹೇಳಿಕೆ ಗಮನಕ್ಕೆ ಬರಲಿಲ್ಲವೇ?

ಮದ್ದೂರಿ‌ನಲ್ಲಿ ನಿಮ್ಮ ಶಾಸಕರೊಬ್ಬರು ಗಂಡಸ್ತನ ಬಗ್ಗೆ ಹೇಳಿಕೆ ನೀಡಿದ್ದರು. ನಮ್ಮ ಪಕ್ಷದ ಮಾಜಿ ಶಾಸಕರನ್ನು ಅವಹೇಳನ ಮಾಡಿದ್ದರು. ನಿಮ್ಮ ಪದ ಬಳಕೆ ನಿಮ್ಮ ಗಮನಕ್ಕೆ ಬರಲಿಲ್ಲವೇ? ನಾನು ತಡೆಯದೇ ಇದ್ದಿದ್ದರೆ ಆ ವ್ಯಕ್ತಿಯ ಮನೆಗೆ ಜನರನ್ನು ನುಗ್ಗಿಸುತ್ತಿದ್ದರು. ಇತ್ತೀಚೆಗೆ ಶಾಮನೂರು ಶಿವಶಂಕರಪ್ಪ ಅವರು, ಮಹಿಳೆಯರು ಅಡುಗೆ ಮನೆಯಲ್ಲಿ ಇರಲು ಲಾಯಕ್ಕು ಎಂದು ಹೇಳಿದ್ದರಲ್ಲವೇ? ಇದೆಲ್ಲಾ ನಿಮ್ಮ ಗಮನಕ್ಕೆ ಬಂದಿಲ್ಲವೇ? ಯಾರಿಗೆ ಯಾವ ಶಿಕ್ಷೆ ಕೊಟ್ಟಿದ್ದೀಯಪ್ಪಾ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನನಗಿರುವುದು ಬಿಡದಿ ಜಮೀನು ಮಾತ್ರ

ಬೆಂಗಳೂರಿನ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿಗಳು; ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. ಸಿನಿಮಾದಲ್ಲಿ ದುಡಿದ ದುಡ್ಡಿನಲ್ಲಿ ಅದನ್ನು ಖರೀದಿ ಮಾಡಿದ್ದು ಎಂದು ಕುಟುಕಿದರು.

ರಾಜಕೀಯಕ್ಕೆ ಬರುವುದಕ್ಕೆ ಮೊದಲೇ ಈ ಜಾಮೀನು ಖರೀದಿ ಮಾಡಿದ್ದೇನೆ. ನಾನು ತೋಟದಲ್ಲಿ ರೆಸಾರ್ಟ್ ಮಾಡಿಲ್ಲ. ಬಂದು ನೋಡಪ್ಪ. ಕಲ್ಲಂಗಡಿ, ಬಾಳೆ, ಕೊಬ್ಬರಿ ಬೆಳೆದಿದ್ದೇನೆ. ಎಲ್ಲಾ ವಿಡಿಯೋ ಇದೆಯಪ್ಪ. ದೇವೇಗೌಡರು ವಿರೋಧ ಪಕ್ಷದಲ್ಲಿ ಇದ್ದಾಗಲೂ ನಿಕ್ಕರ್ ಹಾಕಿಕೊಂಡು ಶನಿವಾರ, ಭಾನುವಾರ ತೋಟದ ಕೆಲಸ ಮಾಡುತ್ತಿದ್ದರು ಎಂದರು.

ಡಿ.ಕೆ.ಶಿವಕುಮಾರ್ ಯಾವ ಕಷ್ಟಪಟ್ಟು ಆಸ್ತಿ ಸಂಪಾದನೆ ಮಾಡಿದ್ದಾರೆ? ಕಲ್ಲು ಬಂಡೆ ಕದ್ದು ವಿದೇಶಕ್ಕೆ ಸಾಗಿಸಿರೋದೇ ಅವರ ಕೆಲಸ. ಹೇಳಿದರೆ ಆ ವ್ಯಕ್ತಿಯ ಬಗ್ಗೆ ಕಂತೆ ಕಂತೆ ಹೇಳಬಹುದು. ಅವರಿಗೆ ನನ್ನದೇ ಆಪತ್ತು. ಅದಕ್ಕೆ ನನ್ನ ವಿರುದ್ದ ಮಾತಾಡ್ತಿದ್ದಾರೆ. 8 ಒಕ್ಕಲಿಗರಿಗೆ ಸೀಟು ಕೊಟ್ಟಿದ್ದೀನಿ ಅಂತಾರೆ. ಕೊಟ್ಟು ಏನ್ ಆಯ್ತು. ಸಿಎಂ ಆಗೋ ಅವಕಾಶ ಇದೆ, ಆಶೀರ್ವಾದ ಮಾಡಿ ಅಂದರು. ಈಗ ಒಂದು ಸಾರಿ ಪೇಪರು ಪೆನ್ನು ಕೊಟ್ಟು ತಮಿಳುನಾಡಿಗೆ ನೀರು ಹೋಗ್ತಿಲ್ಲವಾ? ಈಗ ಮತ್ತೆ ಪೆನ್ನು ಪೇಪರ್ ಕೊಡಬೇಕಾ? ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಮಹಿಳಾ ಆಯೋಗ ದೂರು ದಾಖಲು ಮಾಡಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ; ಮಹಿಳಾ ಆಯೋಗ ನೊಟೀಸ್ ಕೊಡಲಿ ಉತ್ತರ ಕೊಡ್ತೀನಿ ಎಂದು ಉತ್ತರಿಸಿದರು.

ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿ ಪಕ್ಷದ ಅನೇಕ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

Tags: ckcknewsnowCongrescongress guaranteedk brothersDK Shivakumarhd kumaraswamyjdsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಮೋದಿ ಸಭೆ ನಡೆದ ಮೈದಾನವನ್ನು ಸ್ವಚ್ಛಗೊಳಿಸಿದ ಯದುವೀರ್ ದಂಪತಿ!

ಮೋದಿ ಸಭೆ ನಡೆದ ಮೈದಾನವನ್ನು ಸ್ವಚ್ಛಗೊಳಿಸಿದ ಯದುವೀರ್ ದಂಪತಿ!

Leave a Reply Cancel reply

Your email address will not be published. Required fields are marked *

Recommended

ನಮ್ಮ ಚಾಚಾ‌ ನೆಹರು ಮಾಡಿದ ಮಿಸ್ಟೇಕುಗಳು; ಏಳು ದಶಕ ಕಳೆದರೂ ಮಾಯದ ಗಾಯಗಳು

ನಮ್ಮ ಚಾಚಾ‌ ನೆಹರು ಮಾಡಿದ ಮಿಸ್ಟೇಕುಗಳು; ಏಳು ದಶಕ ಕಳೆದರೂ ಮಾಯದ ಗಾಯಗಳು

6 years ago
ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು

ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ