• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

cknewsnow desk by cknewsnow desk
April 16, 2024
in EDITORS'S PICKS, ET CINEMA, NATION, POLITICS, STATE
Reading Time: 1 min read
0
ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS
953
VIEWS
FacebookTwitterWhatsuplinkedinEmail

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದು ಟೀಕಿಸಿದ್ದ ನಟ ಪ್ರಕಾಶ್‌ ರೈ ಅವರಿಗೆ ಜೆಡಿಎಸ್ ತಿರುಗೇಟು ಕೊಟ್ಟಿದೆ.

ರಂಗ ಚಟುವಟಿಕೆ ನಡೆಸಲು ಹೊಸದಾಗಿ ಅವರು ಸ್ಥಾಪನೆ ಮಾಡಿರುವ ನಿರ್ದಿಗಂತ ಸಂಸ್ಥೆಗೆ ಸರಕಾರ ಕೋಟ್ಯಂತರ ರೂಪಾಯಿ ಹಣ ನೀಡುತ್ತಿರುವುದನ್ನು ಉಲ್ಲೇಖಿಸಿ ಅವರಿಗೆ ಜೆಡಿಎಸ್ ಟಾಂಗ್ ನೀಡಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್‌ ರೈ ಉರುಫ್‌ ಪ್ರಕಾಶ್ ರಾಜ್ ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?‌ Just Asking.. ಅಷ್ಟೇ ಪ್ರಕಾಶ್‌ ರಾಜ್‌ ಅವರೇ.. ಎಂದು ಜೆಡಿಎಸ್ ಕಾಲೆಳೆದಿದೆ.

ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್‌ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ‘ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್‌ ರಾಜ್‌ ಅವರೇ.. ಎಂದು ಪಕ್ಷವು ಟಾಂಗ್ ಕೊಟ್ಟಿದೆ.

ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳಕಂಪನಿಗೆ ಕೋಟಿ ಕೋಟಿ ಸುರಿದಿರುವ ಕಾಂಗ್ರೆಸ್ ಸರಕಾರ, ನಿಮ್ಮ ನಿರ್ದಿಗಂತಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ? Just Asking.. ಅಷ್ಟೇ ಪ್ರಕಾಶ್‌ ರಾಜ್‌ ಅವರೇ.. ಎಂದು ನಟ ಪ್ರಕಾಶ್ ರೈ ಅವರಿಗೆ ಚಾಟಿ ಬೇಸಿದೆ ಜೆಡಿಎಸ್.

ಹಿಂದೂ ವಿರೋಧಿ ಎಂದ ಯತ್ನಾಳ್

ಪ್ರಕಾಶ್ ರೈ ಅವರ ನಿರ್ದಿಗಂತ ಸಂಸ್ಥೆಗೆ ಸರಕಾರ ಹಣ ಕೊಡುವ ಬಗ್ಗೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ರಂಗಭೂಮಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ರಾಜ್ಯದಲ್ಲಿ ರಂಗಾಯಣಗಳನ್ನು ಸ್ಥಾಪಿಸಿರುವಾಗ, ಕೇವಲ ಒಂದು ವರ್ಷದ ಹಿಂದೆ ಸ್ಥಾಪಿತವಾದ ‘ನಿರ್ದಿಂಗಿತ’ ಸಂಸ್ಥೆಗೆ ಈ ಚಟುವಟಿಕೆಗಳನ್ನು ನಡೆಸಲು ರತ್ನಗಂಬಳಿ ಹಾಸಿದ್ದೇಕೆ ? ಸರ್ಕಾರ ತಮ್ಮ ಸಂಸ್ಥೆಗಳನ್ನು ಬೆಳೆಸಲು, ಉತ್ತೇಜಿಸುವ ಬದಲಾಗಿ ತಮ್ಮ ಹೊಗಳುಭಟ್ಟರ ಸಂಸ್ಥೆಗೆ ನೀಡಿರುವುದು ಸರಿಯಾದ ಕ್ರಮವಲ್ಲ…ನೀನಾಸಂ, ಶಿವಸಂಚಾರ, ಎನ್ ಎಸ ಡಿ ಸೇರಿದಂತೆ ಅನೇಕ ರಂಗ ತಂಡಗಳು ಕ್ರಿಯಾಶೀಲರಾಗಿರುವಾಗ ಕೇವಲ ನಿರ್ದಿಂಗಿತ ಸಂಸ್ಥೆಗೆ ನೀಡಿರುವುದು ಖಂಡನೀಯ ಎಂದು ಹೇಳಿದ್ದಾರೆ ಅವರು.

ಹಿಂದುತ್ವ ವಿರೋಧಿ, ಧರ್ಮನಿಂದಕ ಪ್ರಕಾಶ್ ರಾಜ್ ಸಂಸ್ಥೆಗೆ ಈ ಜವಾಬ್ದಾರಿ ನೀಡಿರುವುದು ಹಾಗೂ ಸಾಂಸ್ಕೃತಿಕ ಚಟುವಟಿಕೆಗೆ ಮೀಸಲಾದ ಬಹುತೇಕ ಬಜೆಟ್ ಅನ್ನು ಇವರ ಸಂಸ್ಥೆಗೆ ಕಲ್ಪಿಸಿರುವುದು ಹಾಗೂ ಸರ್ಕಾರ ನಿಯಮಾವಳಿಗಳನ್ನು ಗಾಳಿಗೆದೂರಿರುವುದು ಸರ್ಕಾರ ಯಾರನ್ನು ಪೋಷಿಸುತ್ತಿದೆ ಎಂದು ತೋರಿಸುತ್ತದೆ ಯತ್ನಾಳ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: ActorElectionhd kumaraswamyjdsPoliticsPrakash raiPrakash raj
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

HDK v/s DKSHI: ಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್‌ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ; ಕಂತೆ ಕಂತೆ ದಾಖಲೆಗಳಿವೆ ಎಂದ ಮಾಜಿ ಸಿಎಂ

Leave a Reply Cancel reply

Your email address will not be published. Required fields are marked *

Recommended

REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

5 years ago
ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಕೋರ್ಟ್‌ಗೆ ಹೋಗುವುದೇ ಮಹಾ ಅಪರಾಧವಾದರೆ ಯಾರಿಗೂ ನ್ಯಾಯಾಂಗದ ಮೇಲೆ ನಂಬಿಕೆ ಇಲ್ಲವೇ?: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರಶ್ನೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ