• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ELECTION

Modi 3.O: ನಾಳೆ ಮಧ್ಯಾಹ್ನಕ್ಕೆಲ್ಲಾ ಖುಲ್ಲಂ ಖುಲ್ಲಾ ಫಲಿತಾಂಶ

cknewsnow desk by cknewsnow desk
June 3, 2024
in ELECTION, ELECTION2024, NATION, POLITICS, STATE
Reading Time: 1 min read
0
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ
934
VIEWS
FacebookTwitterWhatsuplinkedinEmail

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ರಾಜವಂಶಸ್ಥ ಯದುವೀರ ಒಡೆಯರ್, ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್ ಸೇರಿ‌ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಅದೃಷ್ಟ ಪರೀಕ್ಷೆಗೆ ಇಳಿದಿರುವ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಂಗಳವಾರ (ಜೂನ್ 4) ತೀರ್ಮಾನವಾಗಲಿದೆ.

ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ನಡೆದಿರುವ ಮತದಾನದ ಮತ ಎಣಿಕೆ ಕಾರ್ಯ ನಾಳೆ, ಅಂದರೆ; ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡು ಮಧ್ಯಾಹ್ನದ ವೇಳೆಗೆ ಮುಕ್ತಾಯವಾಗಿ ಫಲಿತಾಂಶ ಹೊರಬೀಳಲಿದೆ. ಇವಿಎಂ ಯಂತ್ರಗಳ ಬಳಕೆ ಕಾರಣಕ್ಕೆ ಫಲಿತಾಂಶ ಹೆಚ್ಚು ತಡವಾಗುವುದಿಲ್ಲ.

ಬೆಂಗಳೂರಲ್ಲಿ 3 ಕ್ಷೇತ್ರಗಳ ಮತ ಎಣಿಕೆ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂರು ಲೋಕಸಭೆ ಕ್ಷೇತ್ರಗಳ ಮತ ಎಣಿಕೆ ನಡೆದರೆ ಉಳಿದಂತೆ ಆಯಾ ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಎಣಿಕೆ ಕಾರ್ಯ ಏಕಕಾಲಕ್ಕೆ ಆರಂಭಗೊಳ್ಳಲಿದೆ.

ಸಂಬಂಧಪಟ್ಟ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಪ್ರತಿ ಕೇಂದ್ರದಲ್ಲೂ ಮೇಲ್ವಿಚಾರಣೆ

ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗ ನೇಮಿಸಿರುವ ವೀಕ್ಷಕರು ಪ್ರತಿ ಕೇಂದ್ರದಲ್ಲೂ ಮೇಲ್ವಿಚಾರಣೆ ನಡೆಸಲಿದ್ದಾರೆ.

ರಾಜ್ಯದ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಎನ್‌ಡಿಎ ಮೈತ್ರಿಕೂಟದಿಂದ ಬಿಜೆಪಿ 25 ಹಾಗೂ ಜೆಡಿಎಸ್ 3 ಕ್ಷೇತ್ರಗಳಲ್ಲಿ ತನ್ನ ಉಮೇದುವಾರರನ್ನು ನಿಲ್ಲಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಮೈಸೂರು-ಕೊಡಗು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರ್ಗಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭೆ ಕ್ಷೇತ್ರಗಳ ಫಲಿತಾಂಶ ಕುತೂಹಲ ಮೂಡಿಸಿವೆ.

ಕಾಂಗ್ರೆಸ್ ಮುಖಂಡರಿಗೆ ಪ್ರತಿಷ್ಠೆ

ಈ ನಾಲ್ಕರಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್ ಮುಖಂಡರಿಗೆ ಪ್ರತಿಷ್ಠೆಯಾಗಿದೆ. ಇನ್ನು ಕುಮಾರಸ್ವಾಮಿ ಅವರಿಗೆ ರಾಜಕೀಯ ಭವಿಷ್ಯ ನಿರ್ಧಾರದ ಕ್ಷಣವಾಗಲಿದೆ. ಪ್ರಸಕ್ತ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕೆಂದು ಕಾಂಗ್ರೆಸ್ 28ರ ಪೈಕಿ 20ರಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ಮಾಡಿಕೊಟ್ಟಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಳಿಯ ರಾಧಾಕೃಷ್ಣ ಅವರನ್ನು ಕಲಬುರ್ಗಿಯಿಂದ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಬೆಂಗಳೂರು ಗ್ರಾಮಾಂತರದಿಂದ, ಸಚಿವರಾದ ಹೆಚ್.ಸಿ.ಮಹಾದೇವಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ ಖಂಡ್ರೆ, ರಾಮಲಿಂಗಾ ರೆಡ್ಡಿ ಹಾಗೂ ಶಿವಾನಂದ ಪಾಟೀಲ್ ಅವರುಗಳ ಮಕ್ಕಳು ಇಲ್ಲವೇ ಪತ್ನಿಯರನ್ನು ಇದೇ ಮೊದಲ ಬಾರಿಗೆ ಕಣಕ್ಕಿಳಿಸಲಾಗಿದೆ.

ಕಣದಲ್ಲಿ ಬಿಜೆಪಿ ದಿಗ್ಗಜರು

ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಶಿವಮೊಗ್ಗದಿಂದಲೂ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಧಾರವಾಡ, ಭಗವಂತ ಖೂಬಾ ಬೀದರ್, ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಬೆಳಗಾವಿ, ಬಸವರಾಜ ಬೊಮ್ಮಾಯಿ ಹಾವೇರಿಯಿಂದ ಕಣದಲ್ಲಿದ್ದಾರೆ.

ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಚಿತ್ರದುರ್ಗ, ಬಿ.ಶ್ರೀರಾಮುಲು ಬಳ್ಳಾರಿಯಿಂದ ಕಣದಲ್ಲಿದ್ದಾರೆ.

ಪ್ರಮುಖ ರಾಜಕೀಯ ಪಕ್ಷಗಳ 56 ಅಭ್ಯರ್ಥಿಗಳೂ ಸೇರಿದಂತೆ ಒಟ್ಟಾರೆ 474 ಅಭ್ಯರ್ಥಿಗಳ ರಾಜಕೀಯ ಹಣೆಬರಹವನ್ನು ರಾಜ್ಯದ ಮತದಾರರು ಈಗಾಗಲೇ ಬರೆದಿದ್ದಾರೆ.

ಕುತೂಹಲ ಕೆರಳಿಸಿರುವ ಕೋಲಾರ, ಚಿಕ್ಕಬಳ್ಳಾಪುರ

ಬೆಂಗಳೂರು ನೆರೆ ಕ್ಷೇತ್ರಗಳಾದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳು ಬಹಳ ಕುತೂಹಲ ಕೆರಳಿಸಿವೆ. ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಹಾಗೂ ಕಾಂಗ್ರೆಸ್‌ಸಿನ ಕೆ.ವಿ.ಗೌತಮ್‌ ಅವರ ನಡುವೆ ಪೈಪೋಟಿ ಇದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಕಾಂಗ್ರೆಸ್ಸಿನ ರಕ್ಷಾ ರಾಮಯ್ಯ ಅವರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ. ಆದರೆ; ಇವೆರಡೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

Tags: bjpck cknewsnowCongressElectionjdsloksabha election 2024Modi 3.OnewsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತೆಲಂಗಾಣಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ವರ್ಗಾವಣೆಗೆ ಸಿದ್ದರಾಮಯ್ಯ ನೇರ ಹೊಣೆ!

ತೆಲಂಗಾಣಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ವರ್ಗಾವಣೆಗೆ ಸಿದ್ದರಾಮಯ್ಯ ನೇರ ಹೊಣೆ!

Leave a Reply Cancel reply

Your email address will not be published. Required fields are marked *

Recommended

ಮನೆಗಳಿಗೆ ಕೆರೆ ನೀರು!

ಮನೆಗಳಿಗೆ ಕೆರೆ ನೀರು!

4 years ago
ನವರಾತ್ರಿಗೆ ಕತ್ತಲೆಭಾಗ್ಯ ಖಾತರಿ; ಹೊಸ ವರ್ಷಕ್ಕೆ ಕಗ್ಗತ್ತಲೆಭಾಗ್ಯ!!

ನವರಾತ್ರಿಗೆ ಕತ್ತಲೆಭಾಗ್ಯ ಖಾತರಿ; ಹೊಸ ವರ್ಷಕ್ಕೆ ಕಗ್ಗತ್ತಲೆಭಾಗ್ಯ!!

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ