ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ
by GS Bharath Gudibande
ಚಿಕ್ಕಬಳ್ಳಾಪುರ: ಜಿಲ್ಲೆಯ ಆರ್ಥಿಕ, ಸಾಮಾಜಿಕ ಸುಧಾರಣೆಗೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ ಸುಧಾಕರ್ ಅವರಿಗೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಯುವ ನಾಯಕರಾದ ಆರ್.ಮಿಥುನ್ ರೆಡ್ಡಿ ಅವರು ವಿಶೇಷ ಅಭಿನಂದನೆಗಳನ್ನು ತಿಳಿಸಿದರು.
ಕೇಂದ್ರದ ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಆರ್.ಮಿಥುನ್ ರೆಡ್ಡಿ ಅವರು, ಈ ಬಜೆಟ್ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್ ಆಗುದೆ ಎಂದು ಹೇಳಿದರು.
ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಭಾಗಗಳ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಇದರಿಂದಾಗಿ ಈ ಭಾಗದ ಆರ್ಥಿಕ ಸ್ಥಿತಿಯಲ್ಲಿ ಅಗಾಧ ಸುಧಾರಣೆ ಕಂಡುಬರಲಿದೆ. ಈ ಯೋಜನೆ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ ಸುಧಾಕರ್ ಅವರು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿ ಯೋಜನೆಯನ್ನು ಬಜೆಟ್‌ನಲ್ಲಿ ತಂದಿರುವುದಕ್ಕೆ ಅವರಿಗೆ ಅನಂತ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕೇಂದ್ರದ ವಿತ್ತಸಚಿವರಿಗೆ ಅಭಿನಂದನೆ
ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಯುವ ನಾಯಕರಾದ ಆರ್.ಮಿಥುನ್ ರೆಡ್ಡಿ ಅವರು ತಿಳಿಸಿದರು.
ಮೋದಿ ಅವರ ವಿಕಸಿತ ಭಾರತಕ್ಕೆ ಶಕ್ತಿ
ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ. 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ ಅನುದಾನ ನೀಡಿ 4 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಮಾನವ ಸಂಪನ್ಮೂಲ ಸದ್ಬಳಕೆಗೆ ಆದ್ಯತೆ ಕೊಡಲಾಗಿದೆ. ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಣ್ಣ, ಮಧ್ಯಮ ಗಾತ್ರದ ಕೈಗಾರಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉಪಕ್ರಮ ಈ ಬಜೆಟ್ ನಲ್ಲಿದೆ.
ಕೃಷಿಗೆ ಆದ್ಯತೆ, ಸಾಮಾಜಿಕ ನ್ಯಾಯ ಉತ್ಪಾದನೆ ಹಾಗೂ ಸೇವಾ ಕ್ಷೇತ್ರ, ನಗರಾಭಿವೃದ್ಧಿ, ಸಂಶೋಧನೆ, ಭವಿಷ್ಯದ ಸುಧಾರಣೆಗಳು, ಕೈಗಾರಿಕೆಗಳು ಸೇರಿದಂತೆ ವಿವಿಧ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು ಇದರಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ಸಿಗಲಿದೆ ಎಂದು ಆರ್.ಮಿಥುನ್ ರೆಡ್ಡಿ ಅವರು ತಿಳಿಸಿದರು.