• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮೂಡಾದಲ್ಲಿ ಕುಮಾರಸ್ವಾಮಿಯದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ HDK

cknewsnow desk by cknewsnow desk
July 26, 2024
in NATION, POLITICS, STATE
Reading Time: 1 min read
0
ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ
913
VIEWS
FacebookTwitterWhatsuplinkedinEmail

ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ ಎಂದ ಕೇಂದ್ರ ಸಚಿವರು

  • ಡಿನೋಟಿಫಿಕೇಷನ್ ಮಾಡಿ ಎಂದು ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?
  • ಭೈರತಿ ಸುರೇಶ್‌ ಆರ್ಭಟ ನೋಡಿದೆ; ಅವರ ಬಂಡವಾಳ ಬಿಚ್ಚಿಟ್ಟರೆ ಬೇಕಾಷ್ಟಿದೆ!
  • ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ? ಇದು ಮುಗಿದ ಆಟ ಸಿದ್ದರಾಮಯ್ಯನವರೇ ಎಂದು ಕುಟುಕಿದ ಕೇಂದ್ರ ಸಚಿವರು

ನವದೆಹಲಿ: ಮೂಡಾದಲ್ಲಿ ತಮಗೂ ನಿವೇಶನವಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದಿದ್ದಾರೆ.

ನವದೆಹಲಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು; ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದಿದ್ದಾರೆ ಅವರಿಬ್ಬರು. ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

2006ರಲ್ಲಿಯೇ ನಾನು ಸಿಎಂ ಆಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದಿದ್ದರೆ ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು. ಆದರೆ, ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಈ ನಿವೇಶನದ ಬಗ್ಗೆ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ತನಿಖೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ತನಿಖೆಗಳು ನಡೆದು ಹೋಗಿವೆ. 500 ನಿವೇಶನಗಳನ್ನು ದೇವೇಗೌಡರು ಪಡೆದುಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಕೊನೆಗೆ ತನಿಖೆಯಲ್ಲಿ ಒಂದು ನಿವೇಶನವನ್ನಷ್ಟೇ ಪಡೆದುಕೊಂಡಿದ್ದಾರೆ ಎಂದು ಗೊತ್ತಾಯಿತು ಎಂದು ಸಚಿವರು ಮಾಹಿತಿ ನೀಡಿದರು.

2012ನೇ ಇಸವಿಯಲ್ಲಿ ನಾನು ಮೂಡಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೊಂದು ಪತ್ರವನ್ನೂ ಬರೆದಿದ್ದೆ. ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ. ಅಂಥ ಆಲೋಚನೆಯನ್ನೂ ಮಾಡಲಿಲ್ಲ. ನಾನೆಂದೂ ಸಿದ್ದರಾಮಯ್ಯ ಅವರಂತೆ ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್‌ ನೀಡಿದರು ಕುಮಾರಸ್ವಾಮಿ ಅವರು.

40 ವರ್ಷವೇ ಆಗಿದೆ, ನಿವೇಶನ ಕೊಟ್ಟಿಲ್ಲ

ಈ ನಿವೇಶನವನ್ನು ಅವರು ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ಇದು ನಿಜವಾದ ಪರಿಸ್ಥಿತಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಇವತ್ತು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರ್ಭಟ ನೋಡಿದೆ. ಈ ವ್ಯಕ್ತಿ ಯಾವ ಹಿನ್ನೆಲೆಯಿಂದ ಬಂದಿರುವುದು ಎನ್ನುವುದು ನನಗೆ ಗೊತ್ತಿದೆ. ಬೆಂಗಳೂರು ನಗರದಲ್ಲಿ ಈ ಮಹಾಶಯ ಏನೆಲ್ಲಾ, ಯಾವೆಲ್ಲಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ತೆಗೆದರೆ ಈ ವ್ಯಕ್ತಿಯ ಅಸಲಿ ಬಂಡವಾಳ ಗೊತ್ತಾಗುತ್ತದೆ. ಬೆಂಗಳೂರು ಸುತ್ತಮುತ್ತಾ ಮಾಡಿದ್ದಾರಲ್ಲ.. ಅದನ್ನಷ್ಟೇ ತೆಗೆದಿಟ್ಟರೆ ಸಾಕು ಎಂದು ಕುಮಾರಸ್ವಾಮಿ ಅವರು ಭೈರತಿ ಸುರೇಶ್‌ ಗೆ ತಿರುಗೇಟು ಕೊಟ್ಟರು.

ನನ್ನ ಹೆಸರಿನಲ್ಲಿರುವ ನಿವೇಶನವನ್ನು ಬೇಕಿದ್ದರೆ ನೀವೇ ನಿಮ್ಮ ಮಗನಿಗೋ ಅಥವಾ ನಿಮ್ಮ ಧರ್ಮಪತ್ನಿ ಹೆಸರಿಗೋ ಅಥವಾ ನಿಮ್ಮ ಪರಮಾಪ್ತ ಭೈರತಿ ಸುರೇಶ್ ಹೆಸರಿಗೋ ಇಲ್ಲವೇ ಯಾವುದಾದರೂ ಅನಾಥಾಶ್ರಮಕ್ಕೋ ಬರೆದುಕೊಟ್ಟುಬಿಡಿ. ನನಗೆ ಯಾವ ತಕರಾರೂ ಇಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟರು ಕುಮಾರಸ್ವಾಮಿ ಅವರು.

ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?

16/2 ಮಾಡಿದ ಮೇಲೆ ಪುನಾ ನಿವೇಶನವನ್ನು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಂಗಪ್ಪ ಎನ್ನುವ ವ್ಯಕ್ತಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ ಎಂದು ಸ್ವರ್ಗದಿಂದ ಇಳಿದುಬಂದು ನಿಮಗೆ ಅರ್ಜಿ ಕೊಟ್ಟಿದ್ದರಾ ಸಿದ್ದರಾಮಯ್ಯ ಅವರೇ? ನಿಂಗಪ್ಪ ಸತ್ತ ಮೇಲೆ ಡಿನೋಟಿಫಿಕೇಶನ್ ಮಾಡಲು ಅರ್ಜಿ ಸಲ್ಲಿಸಲಾಗಿದೆ. 2001, 2003ರಲ್ಲಿ‌ ಸಿಎಂ ಪತ್ನಿಗೆ ಮೈಸೂರಿನ ವಿಜಯನಗರದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. 2005ರಲ್ಲಿ ಕೃಷಿಭೂಮಿ ಎಂದಿದ್ದ ಭೂಮಿಯನ್ನು ಇವರು ಹೇಗೆ ಖರೀದಿ ಮಾಡಿದರು? ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ಮಾಡದೆಯೇ ಭೂ ಪರಿವರ್ತನೆ ಮಾಡಿಕೊಟ್ಟರು. ಅದು ಹೇಗೆ ಮಾಡಿಕೊಟ್ಟರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಆಗಲೂ ಈ ರಾಜ್ಯದ ಉಪ ಮುಖ್ಯಮಂತ್ರಿ ಆಗಿದ್ದರು. ಆಗ ಈ ಮಹಾನುಭಾವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಈ ಹಗರಣವನ್ನು ಬಯಲು ಮಾಡಿದ್ದು, ಎಲ್ಲಾ ದಾಖಲೆಗಳನ್ನು ಹೊರಗೆ ಬಿಟ್ಟಿದ್ದು ಮುಖ್ಯಮಂತ್ರಿ ಕುರ್ಚಿಯ ಟವೆಲ್ ಹಾಕಿದ ಮಹಾಶಯರು ಎಂದು ಯಾರ ಹೆಸರನ್ನೂ ಹೇಳದೆ ಕಾಂಗ್ರೆಸ್‌ ಪಕ್ಷದ ಒಳರಾಜಕೀಯದ ಬಗ್ಗೆ ಸ್ಫೋಟಕ ವಿಷಯವನ್ನು ಬಹಿರಂಗ ಮಾಡಿದರು ಅವರು.

ನಿಮ್ಮವರೇ ಕೊಟ್ಟ ದಾಖಲೆಗಳನ್ನು ವಿಪಕ್ಷಗಳು ಚರ್ಚೆ ಮಾಡತ್ತಿವೆ. ಸರಕಾರಿ ಭೂಮಿಯನ್ನು ನೀವೇ ಕಬಳಿಕೆ ಮಾಡಿ, ಈಗ 64 ಕೋಟಿ ಪರಿಹಾರ ಕೊಡಿ ಎಂದು ಯಾವ ನೈತಿಕತೆ ಮೇಲೆ ಕೇಳುತ್ತಿದ್ದೀರಿ ಸಿದ್ದರಾಮಯ್ಯನವರೇ..? ಇಂತಹ ಆರೋಪ ಹೊತ್ತು ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಅಯೋಗ್ಯ ಅಧಿಕಾರಿಗಳನ್ನು ಇಟ್ಟುಕೊಂಡವರನ್ನು ಏನೆಂದು ಕರೆಯಬೇಕು?

ವಾಲ್ಮಿಕಿ ಹಗರಣ ಸಿದ್ದರಾಮಯ್ಯ ಸರಕಾರದ ಮಾನವನ್ನು ಬೀದಿಯಲ್ಲಿ ಹರಾಜು ಹಾಕಿದೆ. ಹಗರಣ ನಡೆದಿರುವ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಹಾಗಾದರೆ ಹಗರಣದ ಜವಾಬ್ದಾರಿ ಯಾರು ಹೊರಬೇಕು? ಈ ಹಗರಣವನ್ನು ಮಾಡಿರುವವರು ಅಯೋಗ್ಯ ಅಧಿಕಾರಿಗಳು ಎಂದು ಹೇಳಿಕೆ ನೀಡಿದ್ದಾರೆ. ಅಂತಹ ಅಯೋಗ್ಯ ಅಧಿಕಾರಿಗಳನ್ನು ಇಟ್ಟುಕೊಂಡವರನ್ನು ಏನೆಂದು ಕರೆಯಬೇಕು ಎಂದು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಮೇಲೆ ಚಾಟಿ ಬೀಸಿದರು.

ಅಧಿಕಾರಿ ಕಲ್ಲೇಶರನ್ನು ಅಮಾನತು ಮಾಡಿದ್ದೀರಿ. ಅವರ ಕೈಯಲ್ಲಿ ಜಾರಿ ನಿರ್ದೇಶನಾಲಯದ ವಿರುದ್ಧ ಪೋಲಿಸರಿಗೆ ದೂರು ಕೊಡಿಸಿ ಎಫ್‌ ಐಆರ್‌ ಮಾಡಿಸಿದ್ದೀರಿ. ಅದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನಿಮಗೆ ಯಾರು ಈ ಐಡಿಯಾ ಕೊಟ್ಟರೋ ಗೊತ್ತಿಲ್ಲ, ಆದರೆ; ಅವರು ಸರಿಯಾದ ಐಡಿಯಾನಾದರೂ ನಿಮಗೆ ಕೊಡಬೇಕಿತ್ತು ಎಂದು ಸಿಎಂಗೆ ಕುಟುಕಿದರು ಕೇಂದ್ರ ಸಚಿವರು.

ಎಂಟು ಬಾರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇನೆ. ತೆರಿಗೆ ಪಾಲು, ರಾಜ್ಯದ ಹಣ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ಈ ಬಗ್ಗೆ ಕೇಂದ್ರ ಸರಕಾರ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದೀರಲ್ಲ ಸಿದ್ದರಾಮಯ್ಯನವರೇ.. ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ. ಇದು ಮುಗಿದ ಆಟ ಸಿದ್ದರಾಮಯ್ಯನವರೇ.. ಕಾಂಗ್ರೆಸ್ ನವರು ಮೈಸೂರಿಂದ ಬೆಂಗಳೂರಿಗಲ್ಲ, ದೆಹಲಿಗೆ ಪಾದಯಾತ್ರೆ ಬರಲಿ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ಮೂಡಾ ಹಗರಣದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಜಂಟಿಯಾಗಿ ಹೋರಾಟ ನಡೆಸಲಿವೆ. ಈ ಬಗ್ಗೆ ರೂಪುರೇಶೆ ಸಿದ್ಧ ಮಾಡಲು ಎನ್ ಡಿಎ ಸಭೆ ಕರೆದಿದ್ದೇವೆ. ಆ ಸಭೆಯಲ್ಲಿ ಮುಂದಿನ ಹೋರಾಟ ಮತ್ತು ಪಾದಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೆವೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಗೂ ಸಂಸದ ಮಲ್ಲೇಶ್ ಬಾಬು ಅವರು ಸಚಿವರ ಜತೆಯಲ್ಲಿ ಇದ್ದರು.

Tags: chife minister Siddaramaiahckcknewsnowhd kumaraswamykarnatakamudaMysuru
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

Leave a Reply Cancel reply

Your email address will not be published. Required fields are marked *

Recommended

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

2 years ago
ಗುಡಿಬಂಡೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗ

ಗುಡಿಬಂಡೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ